ವಿಜಯಪುರ: ನಿಲ್ಲಿಸಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾಗಿರುವ ಘಟನೆ ನಗರದ ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ (ಜು.18) ನಡೆದಿದೆ. ತಿಡಗುಂದಿಯ ದೇವದಾಸ್ ಜಾಧವ್ ಎಂಬುವವರಿಗೆ ಸೇರಿದ ಸ್ಕಾರ್ಪಿಯೋ ಕಾರು ಇದಾಗಿದ್ದು, ಮಾನಸ ಗಂಗೋತ್ರಿ ಶಾಲೆ ಎದುರು ನಿಲ್ಲಿಸಲಾಗಿತ್ತು. ಕಾರಿಗೆ ಬೆಂಕಿ ಬಿದ್ದ ವಿಷಯ ತಿಳಿದು ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟು ಹೊತ್ತಿಗಾಗಲೇ ಕಾರು ಸುಟ್ಟು ಭಸ್ಮವಾಗಿದೆ.
Read More »ತಲವಾರು ಹಿಡಿದು ಮೊಬೈಲ್ ಅಂಗಡಿಗೆ ನುಗ್ಗಿ ಆತಂಕ ಸೃಷ್ಟಿಸಿದ ಯುವಕ
ಮೂಡುಬಿದಿರೆ: ಬಸ್ ನಿಲ್ದಾಣದ ಮೊಬೈಲ್ ಅಂಗಡಿಗೆ ಶನಿವಾರ ಮಧ್ಯಾಹ್ನ ತಲವಾರು ಹಿಡಿದು ನುಗ್ಗಿದ ಯುವಕ ಗಲಾಟೆ ನಡೆಸಿ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿದ್ದಾನೆ. ಗ್ರಾಹಕರು ಅಂಗಡಿಯಲ್ಲಿದ್ದ ವೇಳೆ ತಲವಾರು ಝಳಪಿಸಿದ ಯುವಕನನ್ನು ಸ್ಥಳೀಯ ಯುವಕರು ಸಮಯಪ್ರಜ್ಞೆಯಿಂದ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರಂಭದಲ್ಲಿ ಪೆರಿಂಜೆಯವನು ಎಂದು ಹೇಳಿದ್ದ ಆತ, ಬಳಿಕ ಕೋಟೆಬಾಗಿಲಿನ ಸಂದೇಶ್ ಎಂಬಾತ ತಲವಾರು ನೀಡಿದ್ದಾನೆ ಎಂದು ಹೇಳಿರುವುದಾಗಿ ತಿಳಿದುಬಂದಿದೆ. ತಲವಾರು ಹಿಡಿದು ಅಂಗಡಿಗೆ ನುಗ್ಗಿ ಗಲಾಟೆ ನಡೆಸಿದ ದೃಶ್ಯ …
Read More »ಚಿನ್ನದ ಅಂಗಡಿ ಕಳವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಾಲೀಕನೇ ಕಳ್ಳ..!
ಬೆಳಗಾವಿ: ನಗರದ ರಾಮದೇವ ಗಲ್ಲಿಯ ‘ವಿ.ಪಿ. ವೇರ್ಣೇಕರ ಮತ್ತು ಸನ್ಸ್’ ಚಿನ್ನಾಭರಣ ಮಳಿಗೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣಕ್ಕೆ ತನಿಖೆಯಲ್ಲಿ ಅಚ್ಚರಿಯ ತಿರುವು ಸಿಕ್ಕಿದೆ. ಕಳ್ಳತನವಾಗಿದೆ ಎಂದು ದೂರು ನೀಡಿದ್ದ ಅಂಗಡಿ ಮಾಲೀಕ ಕೃಷ್ಣಾನಂದ ವಿಶ್ವನಾಥ ವೇರ್ಣೇಕರನೇ ಪ್ರಕರಣದ ಮಾಸ್ಟರ್ ಮೈಂಡ್ ಎಂಬುದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜುಲೈ 17ರಂದು ಕಳ್ಳತನದ ದೂರು ದಾಖಲಿಸಿದ್ದ ಕೃಷ್ಣಾನಂದನ ಹೇಳಿಕೆಯಲ್ಲಿ ಅನುಮಾನ ಕಂಡ ಖಡೇಬಜಾರ್ ಪೊಲೀಸರು ಸ್ಥಳ ಪರಿಶೀಲನೆ ಹಾಗೂ ತಾಂತ್ರಿಕ ಸಾಕ್ಷ್ಯಗಳನ್ನು …
Read More »ತಂದೆ ಕೊಂದ ಪಾಪಿ ಮಗನಿಗೆ ಜೀವಾವಧಿ ಶಿಕ್ಷೆ: ಕ್ಷುಲ್ಲಕ ಕಾರಣಕ್ಕೆ ಕಬ್ಬಿಣದ ರಾಡ್ʼನಿಂದ ಹೊಡೆದು ಹತ್ಯೆ!
ಬೆಂಗಳೂರು ರಾಜಾಜಿನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ತಂದೆಯನ್ನು ಕಬ್ಬಿಣದ ರಾಡ್ನಿಂದ ಹೊಡೆದು ಕೊಲೆ ಮಾಡಿದ ಮಗ ರಘುಗೆ ಸಿಸಿಹೆಚ್-68 ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹5,000 ದಂಡ ವಿಧಿಸಿದೆ. ಕಳೆದ ಜನವರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಸೆಕ್ಷನ್ 103 ಅಡಿ ಪ್ರಕರಣ ದಾಖಲಾಗಿತ್ತು. ತನಿಖೆ ಪೂರ್ಣಗೊಳಿಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಾಧಾರಗಳು ಹಾಗೂ ವಾದ-ಪ್ರತಿವಾದಗಳನ್ನು ಪರಿಗಣಿಸಿದ ನ್ಯಾಯಾಧೀಶ ಕೆ.ಎಸ್. ಭರತ್ಕುಮಾರ್ ಆರೋಪಿಯನ್ನು ದೋಷಿ …
Read More »ಹಾಸನದಲ್ಲಿ ಬೆಚ್ಚಿ ಬೀಳಿಸೋ ಘಟನೆ : ತಂದೆಯನ್ನು ಕೊಂದು ಮಗ ನೇಣಿಗೆ ಶರಣು.!
ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗೊರನಹಳ್ಳಿಯಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಗನೇ ತಂದೆಯನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ನಿವೃತ್ತ ಶಿಕ್ಷಕರಾಗಿದ್ದ ಚನ್ನಗೌಡ (76) ಅವರೇ ಮಗನಿಂದ ಕೊಲೆಯಾದ ದುರ್ದೈವಿ. ಇವರನ್ನು ಕೊಂದ ಮಗ ಬಿಂದುಕುಮಾರ್ (42) ಎಂಬಾತ ತದನಂತರ ತಾನೂ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ. ಮನೆಯಲ್ಲಿ ಆಸ್ತಿ ಹಂಚಿಕೆ ವಿಚಾರವಾಗಿ ಕಳೆದ …
Read More »ಪ್ರಿಯಕರನ ಜೊತೆ ಸೇರಿ ಡೆಡ್ಲಿ ಪ್ಲ್ಯಾನ್: ಪತಿಯ ಸಾವಿನ ಹಿಂದೆ ಬಯಲಾಯ್ತು ಶಾಕಿಂಗ್ ಸತ್ಯ
ಉತ್ತರ ಪ್ರದೇಶದ ಮೀರತ್ನಲ್ಲಿ ಹಾವಿನ ಕಡಿತದಿಂದ ಮೃತಪಟ್ಟಿದ್ದಾನೆ ಎಂದು ಭಾವಿಸಲಾಗಿದ್ದ ವ್ಯಕ್ತಿಯ ಸಾವಿನ ಪ್ರಕರಣವು ಪೊಲೀಸರ ತನಿಖೆಯಲ್ಲಿ ಕೊಲೆ ಎಂಬುದು ಬಹಿರಂಗವಾಗಿದೆ. ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹಾವಿನಿಂದ ಕಚ್ಚಿಸಿ ಹತ್ಯೆ ಮಾಡಿಸಿರುವ ಆರೋಪ ಕೇಳಿಬಂದಿದೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಹಿಳೆಗೆ ಶಾಲಾ ವಾಹನ ಚಾಲಕನೊಂದಿಗೆ ಅಕ್ರಮ ಸಂಬಂಧವಿದ್ದು, ಪತಿ ಅಡ್ಡಿಯಾಗಿದ್ದರಿಂದ ಕೊಲೆ ಸಂಚು ರೂಪಿಸಲಾಗಿತ್ತು. ಈ ಹಿಂದೆ ಎರಡು ಬಾರಿ ಯತ್ನಿಸಿ ವಿಫಲವಾದ ಆರೋಪಿಗಳು, ಮೂರನೇ …
Read More »ಅಣ್ಣಿಗೇರಿಯಲ್ಲಿ ಗೀಸರ್ ಸಿಲಿಂಡರ್ ಸ್ಫೋಟ: ಮೂವರಿಗೆ ಗಾಯ
ಹುಬ್ಬಳ್ಳಿ ಸಮೀಪದ ಧಾರವಾಡ ಜಿಲ್ಲೆಯ ಅಣ್ಣಿಗೇರಿ ಪಟ್ಟಣದ ಉದಯನಗರದಲ್ಲಿ ಗೀಸರ್ ಸಿಲಿಂಡರ್ ಸ್ಫೋಟಗೊಂಡು ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದಾರೆ. ಬೆಳಗಿನ ಜಾವ ನಡೆದ ಸ್ಫೋಟದಿಂದ ಮನೆಯಲ್ಲಿದ್ದ ಸಾಯಿರಾ ಬಾನು (54), ಅಬ್ಬಾಸ್ ಅಲಿ (29) ಹಾಗೂ ಹಸನ್ ಸಾಬ್ (26) ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೊದಲು ಗದಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನೆ ವೇಳೆ ಮನೆಯ ಮಾಲೀಕ ಅಲ್ಲಾ ಬಕ್ಷ್ ನಮಾಝ್ಗೆ …
Read More »ನೆಲಮಂಗಲದಲ್ಲಿ ನೈತಿಕ ಪೊಲೀಸ್ ಗಿರಿ! ಹಿಂದೂ ಯುವಕನ ಮೇಲೆ ಹಲ್ಲೆ; ಆತ್ಮಹತ್ಯೆಗೆ ಯತ್ನಿಸಿದ ಮುಸ್ಲಿಂ ಯುವತಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಲಕ್ಕೂರು ಗ್ರಾಮದಲ್ಲಿ ನೈತಿಕ ಪೊಲೀಸ್ಗಿರಿ ಪ್ರಕರಣ ಬೆಳಕಿಗೆ ಬಂದಿದೆ. ಮುಸ್ಲಿಂ ಯುವತಿ ಕೌಸರ್ ಬಾನು ಜೊತೆ ನಡೆದುಕೊಂಡು ಹೋಗುತ್ತಿದ್ದ ಯಶವಂತ್ ಎಂಬ ಹಿಂದೂ ಯುವಕನ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತಹರೀಕ್ ಪಾಷಾ, ಸೋಹೇಲ್ ಪಾಷಾ ಹಾಗೂ ಸಯ್ಯದ್ ಕರೀಂ ಎಂಬವರು ಯುವಕನನ್ನು ತಡೆದು ನಿಂದಿಸಿ ಹಲ್ಲೆ ನಡೆಸಿದ್ದು, ಅದರ ವಿಡಿಯೋವನ್ನು ಚಿತ್ರೀಕರಿಸಿ ವಾಟ್ಸಾಪ್ ಗುಂಪುಗಳಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. …
Read More »ಗುತ್ತಿಗೆದಾರನನ್ನು ಕಿಡ್ನ್ಯಾಪ್ ಮಾಡಿ 16 ಲಕ್ಷ ಹಣ, ಚಿನ್ನಾಭರಣದೊಂದಿಗೆ ಪರಾರಿಯಾದ ಗ್ಯಾಂಗ್
ಮೈಸೂರಿನ ಹೊರವಲಯದಲ್ಲಿ ಗುತ್ತಿಗೆದಾರ ರಾಮು ಅವರನ್ನು ನಾಲ್ವರ ತಂಡ ಅಪಹರಿಸಿ, ಕಣ್ಣಿಗೆ ಕಪ್ಪು ಪಟ್ಟಿ ಕಟ್ಟಿ ರಾತ್ರಿಯಿಡೀ ಕಾರಿನಲ್ಲಿ ಸುತ್ತಾಡಿಸಿ 16 ಲಕ್ಷ ರೂ. ನಗದು ಹಾಗೂ ಸುಮಾರು 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದುಷ್ಕರ್ಮಿಗಳು “ನಿನ್ನನ್ನು ಕೊಲ್ಲಲು 9 ಲಕ್ಷಕ್ಕೆ ಸುಫಾರಿ ನೀಡಲಾಗಿದೆ. ಬದುಕಬೇಕಾದರೆ 40 ಲಕ್ಷ ಕೊಡು” ಎಂದು ಬೆದರಿಕೆ ಹಾಕಿದ್ದಾರೆ. ಬಳಿಕ ರಾಮು ಅವರಿಂದ ಹೆಂಡತಿಗೆ ಕರೆ …
Read More »ಮೊಬೈಲ್ ನೀಡುವ ವಿಚಾರದಲ್ಲಿ ಜಗಳ, ಗೆಳೆಯನ ತಲೆ ಮೇಲೆ ಕಲ್ಲೆತ್ತಿ ಹಾಕಿ ಬರ್ಬರ ಹತ್ಯೆ
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಚಿಕ್ಕಬುದನೂರ ಗ್ರಾಮದ ಸಮೀಪದ ಲಕ್ಷ್ಮೀದೇವರ ಗುಡಿಯಲ್ಲಿ ಮೊಬೈಲ್ ವಾಪಸ್ ನೀಡುವ ವಿಚಾರಕ್ಕೆ ಸ್ನೇಹಿತರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಪಕೀರಪ್ಪ ಮಲ್ಲಪ್ಪ ಪಿಡ್ಡೆನ್ನವರ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರೋಪಿ ಮಲ್ಲಿಕಾರ್ಜುನ (25) ತನ್ನ ಮೊಬೈಲ್ ವಾಪಸ್ ಕೇಳಿದಾಗ, ಪಕೀರಪ್ಪ “ರಾತ್ರಿ ಕೊಡುತ್ತೇನೆ” ಎಂದಿದ್ದರಿಂದ ಕೋಪಗೊಂಡು ಗುಡಿಯಲ್ಲಿದ್ದ ಭಾರವಾದ ಕಲ್ಲನ್ನು ತಲೆಯ ಮೇಲೆ ಎಸೆದಿದ್ದಾನೆ. ತೀವ್ರ ಗಾಯಗೊಂಡ ಪಕೀರಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಾಹಿತಿ ತಿಳಿದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





