ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ, ರಾತ್ರಿ ಆಕಸ್ಮಿಕವಾಗಿ ಬೆಂಕಿ ತಗಲು ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ನಡೆದಿದೆ. ಶಿವಪ್ಪ ಯಾವಗಲ್ ಎನ್ನುವ ರೈತನಿಗೆ ಸೇರಿದ ಬಣವೆಗಳಾಗಿದ್ದು, ಜಾನುವಾರುಗಳಿಗೆ ಸಂಗ್ರಹಣೆ ಮಾಡಿಲಾಗಿತ್ತು ಎನ್ನಲಾಗಿದೆ. ಅಗ್ನಿ ಶಾಮದ ದಳದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದ್ದು, ರೋಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಕಂಡು ಬಂದಿದೆ.
Read More »ಪರಿಶಿಷ್ಟ ಜನಾಂಗದಿಂದ ಸಿಎಂ ಬೊಮ್ಮಾಯಿಗೆ ಅಭಿನಂದನಾ ಸಮಾವೇಶ
ಹುಬ್ಬಳ್ಳಿ: ನಾಳೆ ಕರ್ನಾಟಕದ ಇತಿಹಾಸದಲ್ಲಿ ಒಂದು ಸುವರ್ಣಾಕ್ಷರದಲ್ಲಿ ಬರೆದಿಡೋ ದಿನ, ಒಳಮೀಸಲಾತಿಯನ್ನು ಬಸವರಾಜ ಬೊಮ್ಮಾಯಿ ಅನುಷ್ಠಾನಕ್ಕೆ ತಂದಿದ್ದಾರೆ. ಇದು ಐತಿಹಾಸಿಕ ನಿರ್ಧಾರ. ನಾಳೆ ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ದಲಿತ ಸಮುದಾಯವನ್ನು ವೋಟ್ ಬ್ಯಾಂಕ್ ಮಾಡಿಕೊಂಡಿತ್ತು. ಐದು ವರ್ಷಕ್ಕೊಮ್ಮೆ ಅವರನ್ನ ಬಾವಿಯಿಂದ ಹೊರಗೆ ತಗೆದು ವೋಟ್ ಹಾಕಿಸಿಕೊಂಡು ಮತ್ತೆ ಬಾವಿಯೊಳಗೆ ತಳುತ್ತಿದ್ದರೆಂದು ಸಚಿವ ಸಿಸಿ ಪಾಟೀಲ್ ಹೇಳಿದರು. ನಗರದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಸಮಾಜಕ್ಕೆ ನ್ಯಾಯ …
Read More »ಚುನಾವಣಾ ನಿಯಮಗಳ ಬಗ್ಗೆ ಮಾಹಿತಿ ನೀಡಿದ ಚುನಾವಣಾ ಅಧಿಕಾರಿ ಡಾ.ಗೋಪಾಲಕೃಷ್ಣ
ಹುಬ್ಬಳ್ಳಿ: ಈಗಾಗಲೇ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ಏಪ್ರಿಲ್ 13 ರಂದು ನಾಮ ಪತ್ರ ಸಲ್ಲಿಕೆ ದಿನ ಆರಂಭ, ಏಪ್ರಿಲ್ 20 ಕೊನೆಯ ದಿನಾಂಕವಾಗಿದೆ. ನಾಮ ಪತ್ರ ಪರಿಶೀಲನೆ ಏಪ್ರಿಲ್ 21 ಕ್ಕೆ. ನಾಮ ಪತ್ರ ಹಿಂಪಡೆಯುವ ಕೊನೆಯ ದಿನಾಂಕ ಏಪ್ರಿಲ್ 24. ಇವುಗಳು ಚುನಾವಣೆಯ ನಿಯಮಗಳು ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಚುನಾವಣಾ ಅಧಿಕಾರಿ ಹು-ಧಾ ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ …
Read More »ಮನೆಯೊಂದರ ಗೇಟ್ ಬಿದ್ದು 7 ಬಾಲಕನ ಸಾವು
ಹುಬ್ಬಳ್ಳಿ: ಪ್ರಗತಿ ಹಂತದಲ್ಲಿದ್ದ ಮನೆಯೊಂದರ ಗೇಟ್ ಬಿದ್ದು ಬಾಲಕನೋರ್ವ ಸಾವನ್ನಪ್ಪಿದ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಮಂಟೂರ ರಸ್ತೆಯ ಗಣೇಶ್ ಕಾಲೋನಿಯಲ್ಲಿ ಘಟನೆ ನಡರದಿದ್ದು, ೭ ವರ್ಷದ ಬಾಲಕ ಎಂದು ತಿಳಿದು ಬಂದಿದ್ದು, ಹೆಸರು ಹಾಗೂ ಮಾಹಿತಿ ತಿಳಿದು ಬಂದಿಲ್ಲ. ಪ್ರಗತಿಹಂತದಲ್ಲಿದ್ದ ಮನೆಯೊಂದರ ಬಳಿಯಲ್ಲಿ ಬಾಲಕ ಆಟವಾಡುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ನಡೆದಿದ್ದು, ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಬಾಲಕ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
Read More »ಉಚಿತವಾದ ಹಾಸ್ಪೈಸ್ ಪ್ಯಾಲಿಯೆಟಿಸ್ ಕೇಂದ್ರ ಪ್ರಾರಂಭ
ಹುಬ್ಬಳ್ಳಿ: ಮಜೇಥಿಯಾ ಫೌಂಡೇಶನ್ ಹಾಗೂ ಕೆಸಿಟಿಆರ್’ಐ ಸಹಯೋಗದೊಂದಿಗೆ ಇಲ್ಲಿನ ನವನಗರದ ಕ್ಯಾನ್ಸರ್ ಆಸ್ಪತ್ರೆ ಆವರಣದಲ್ಲಿ ಉಚಿತವಾದ ಹಾಸ್ಪೈಸ್ – ಪ್ಯಾಲಿಯೆಟಿಸ್ ಕೇಂದ್ರ ಪ್ರಾರಂಭಿಸಲಾಗಿದ್ದು, ಇದರಲ್ಲಿನ ರಮಿಲಾ ಪ್ರಶಾಂತಿ ಮಂದಿರ ಉದ್ಘಾಟನೆ ಸಮಾರಂಭವನ್ನು ಏ.6 ರಂದು ಬೆಳಿಗ್ಗೆ 10.30 ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಹಾಸ್ಪೈಸ್ ಕೇಂದ್ರದ ವ್ಯವಸ್ಥಾಪಕ ಸಮಿತಿಯ ಟ್ರಸ್ಟಿಗಳಾದ ಡಾ.ಕೆ.ರಮೇಶ ಬಾಬು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಿನ ಉದ್ಘಾಟನೆ ಕಾರ್ಯಕ್ರಮಕ್ಕೆ ಕೊಪ್ಪಳದ ಸಂಸ್ಥಾನ ಗವಿಮಠದ ಅಭಿನವ ಗವಿಸಿದ್ದೇಶ್ವರ …
Read More »ಬಾಲಕನ ಮರ್ಡರ್ ಸ್ಟೋರಿ ಬಿಚ್ಚಿಟ್ಟ ಡಿಸಿಪಿ
ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಾಲಕನ ಕೊಲೆ ಪ್ರಕರಣದ ತನಿಖೆ ನಡೆಸಿದ್ದು, ಆರೋಪಿ ರವಿ ವೆಂಕಟೇಶ ಬಳ್ಳಾರಿ ಎಂಬುವವನನ್ನು ವಶಕ್ಕೆ ಪಡೆದಿದ್ದೇವೆ. ಆ ಬಾಲಕ ಆರೋಪಿಗೆ ಮಾಮಾ, ಮಾಮಾ ಎಂದುಕೊಂಡಿದ್ದ ಅಂತಹ ಬಾಲಕನನ್ನೇ ಆರೋಪಿ ಕೊಲೆ ಮಾಡಿದ್ದಾನೆ ಎಂದು ಡಿಸಿಪಿ ರಾಜೀವ.ಎಂ ಹೇಳಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಯನ್ನು ಬಂಧಿಸಿದ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬಾಲಕನ ಶವ …
Read More »ಸಚಿವ ವಿನಯ ಕುಲಕರ್ಣಿ ಸ್ಪರ್ಧಿಸುವಂತೆ ಪಕ್ಷದ ಕಾರ್ಯಕರ್ತರಂದ ಮತ್ತು ಅಭಿಮಾನಿಗಳಿಂದ ಧರಣಿ
ಧಾರವಾಡ: ಬಾರಾಕೋಟ್ರಿಯಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರ ಮನೆಯ ಮುಂದೆ ಧಾರವಾಡ – 71 ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ, ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು, ಮುಖಂಡರು ಧರಣಿ ನಡೆಸಿದರು. ಧಾರವಾಡ ಕ್ಷೇತ್ರದ ಜೊತೆ ಶಿಗ್ಗಾಂವಿ ಕ್ಷೇತ್ರದ ಲ್ಲಿ ಸ್ಪರ್ಧೆ ಕುರಿತು ಚರ್ಚೆ ನಡೆಯುತ್ತಿದೆ. ಇದರಿಂದ ಕಾರ್ಯಕರ್ತರಲ್ಲಿ ಗೊಂದಲ ಉಂಟಾಗುತ್ತಿದೆ. ಧಾರವಾಡ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಅಭಿವೃದ್ದಿ ಕೈಕೊಂಡಿದ್ದಾರೆ. …
Read More »ಬೇಸಿಗೆ ಶಿಬಿರ ಉದ್ಘಾಟನಾ ಕಾರ್ಯಕ್ರಮ
ಲಕ್ಷ್ಮೇಶ್ವರ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಲಕ್ಷ್ಮೇಶ್ವರ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಾರ್ಯಾಲಯ ಶಿರಟ್ಟಿ ಎಸ್ ಎಸ್ ಕೂಡ್ಲ ಮಠ ಮಾಧ್ಯಮಿಕ ಶಾಲೆ ಶಿಗ್ಲಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಬೇಸಿಗೆ ಶಿಬಿರ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪಾಧ್ಯಕ್ಷರಾದ ವೀರಣ್ಣ ಎಚ್ ಪವಾಡದ್ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು ಮುಖ್ಯ ಅತಿಥಿಗಳಾಗಿ ಹಾಗೂ ಶಿಬಿರದ ಸಂಪುನ್ಮೂಲ ವ್ಯಕ್ತಿಗಳಾಗಿ ಕಾರ್ಯದರ್ಶಿಗಳಾದ ಶ್ರೀ ಕೆ ಆರ್ ಲಮಾಣಿ, ಶ್ರೀ …
Read More »ಕೆಎಲ್ ಇ ಘಟಿಕೋತ್ಸವ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಚಿನ್ನ ಹಾಗೂ ಬೆಳ್ಳಿ ಪದಕ
ಹುಬ್ಬಳ್ಳಿ: ಕೆಎಲ್ ಇ ತಾಂತ್ರಿಕ ವಿಶ್ವವಿದ್ಯಾಲಯದ ಘಟಕೋತ್ಸವ ಸಮಾರಂಭಕ್ಕೆ ವಿವಿಯ ಕುಲಪತಿ, ಅಧ್ಯಕ್ಷ ಪ್ರಭಾಕರ ಕೋರೆ, ಉಪಕುಲಪತಿ ಡಾ.ಅಶೋಕ ಶೆಟ್ಟರ್ ಸೇರಿದಂತೆ ಹಲವು ಗಣ್ಯರು ಚಾಲನೆ ನೀಡಿದರು. ಸಂಸ್ಥೆಯ ಪ್ರಭಾಕರ ಕೋರೆ ಒಳಾಂಗಣ ಕ್ರೀಡಾಂಗಣದಲ್ಲಿಂದು ಹಮ್ಮಿಕೊಳ್ಳಲಾಗಿದ್ದ ಘಟಿಕೋತ್ಸವದಲ್ಲಿ 1619 ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪದವಿ ವಿತರಿಸಲಾಯಿತು. ಇನ್ನು ಮೊದಲ ಹಾಗೂ ಎರಡನೇ ರ್ಯಾಂಕ್ ಪಡೆದ 35 ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಈ ವೇಳೆ ಚಿನ್ನ ಹಾಗೂ ಬೆಳ್ಳಿ ಪದಕ …
Read More »ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ, ನಿವೃತ್ತರ ಸೇವಾ ಸುಸ್ಮರಣೆ ಸಮಾರಂಭ
ಧಾರವಾಡ: ಪೊಲೀಸ್ ಇಲಾಖೆಯು ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆಯ ಕವಾಯತು ಮೈದಾನದಲ್ಲಿ ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ ಆಯೋಜಿಸಿದ್ದ ನಿವೃತ್ತರ ಸೇವಾ ಸುಸ್ಮರಣೆ ಮತ್ತು ಗೌರವ ಸಮರ್ಪಣಾ ಸಮಾರಂಭದ ಮುಖ್ಯ ಅತಿಥಿಗಳಾಗಿ ನಿವೃತ್ತ ಮಹಿಳಾ ಪೊಲೀಸ ಅಧಿಕಾರಿ ಎಲ್. ಎಸ್. ಮುಗಳಗೇರ ಅವರು ಮಾತನಾಡಿದರು. ಪೊಲೀಸ್ ಧ್ವಜ ದಿನಾಚರಣೆ ನಿಮಿತ್ತ, ನಿವೃತ್ತರ ಸೇವಾ ಸುಸ್ಮರಣೆ ಒಂದು ಶಪಥವಿದ್ದಂತೆ. ಅದನ್ನು ಪಾಲಿಸಿ, ಕೆಲಸ ಮಾಡುವಾಗ ಅಧೀನ ಅಧಿಕಾರಿ, ಸಿಬ್ಬಂದಿಗಳಿಂದ ಆಗುವ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





