ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗುಡಿಪಲ್ಲಿ ಮಂಡಲದಲ್ಲಿ ವಿವಾಹೇತರ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ಹತ್ಯೆ ಮಾಡಿಸಿದ ಆರೋಪ ಕೇಳಿಬಂದಿದೆ. ತಮಿಳುನಾಡಿನ ಸುಳಗಿರಿ ನಿವಾಸಿ ರಮೇಶ್ ಕೊಲೆಯಾದವರಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಪತ್ನಿ ಹಾಸಿನಿ, ಆಕೆಯ ಪ್ರಿಯಕರ ಯುಗಂಧರ್ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಮಲ್ಲೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳುವ ವೇಳೆ ಹಾಸಿನಿ ಉದ್ದೇಶಪೂರ್ವಕವಾಗಿ ಪರ್ಸ್ ಕೆಳಗೆ ಬೀಳಿಸಿದ್ದಳು. ಅದನ್ನು ಎತ್ತಲು ರಮೇಶ್ …
Read More »ಅಣ್ಣನ ಲವ್ ರಿಜೆಕ್ಟ್ ಮಾಡಿದ್ದಕ್ಕೆ ಯುವತಿಯನ್ನೇ ಕೊಂದ ತಮ್ಮ; ನಡುರಸ್ತೆಯಲ್ಲೇ ಸಹೋದರರ ಅಟ್ಯಾಕ್
ಬೆಂಗಳೂರು ಹೆಚ್ಎಎಲ್ ರಸ್ತೆಯ ಕೋಡಿಹಳ್ಳಿಯಲ್ಲಿ ನಡೆದ ಚಾಕು ಇರಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಾ ವಿದ್ಯಾರ್ಥಿನಿ ಅಮೃತಾ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಜುಲೈ 13ರಂದು ನಡೆದ ದಾಳಿಯ ಬಳಿಕ ಮೂರು ದಿನಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಜುಲೈ 15ರಂದು ಕೊನೆಯುಸಿರೆಳೆದರು. ಪ್ರಾಥಮಿಕ ಮಾಹಿತಿಯ ಪ್ರಕಾರ, ಅಮೃತಾ ಮತ್ತು ಧನುಷ್ ನಡುವೆ ಪ್ರೀತಿಯ ಸಂಬಂಧವಿತ್ತು. ಆದರೆ ಧನುಷ್ ಈಗಾಗಲೇ ಮದುವೆಯಾಗಿ ವಿಚ್ಛೇದನ ಪಡೆದಿದ್ದು, ಒಂದು ಮಗು ಇರುವ ವಿಚಾರವನ್ನು …
Read More »ಎಂಟನೇ ತರಗತಿ ಬಾಲಕಿ ಗರ್ಭಿಣಿ, ಆರೋಪಿಯ ಬಂಧನ
ಚಿಕ್ಕಬಳ್ಳಾಪುರ: ೧೩ ವರ್ಷದ ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿಯಾಗಿಸಿದ ವ್ಯಕ್ತಿಯನ್ನು ಬಂಧಿಸಿ, ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ. ಬಂಧಿತ ಶಿಡ್ಲಘಟ್ಟ ತಾಲೂಕಿನ ಚರಣ್ (೨೫) ಎಂಬುದಾಗಿ ಗುರುತಿಸಲಾಗಿದೆ. ೮ ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯು ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಈ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಪಾಲಕರು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದೇ ವೇಳೆ ತಪಾಸಣೆ ಕೈಗೊಂಡ ವೈದ್ಯರಿಗೆ ಬಾಲಕಿ ಗರ್ಭಿಣಿಯಾಗಿರುವುದು ಗೊತ್ತಾಗಿದೆ. ತಕ್ಷಣ ಶಿಡ್ಲಘಟ್ಟ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದಾರೆ. ಇದರಿಂದ …
Read More »ಪ್ರೊಬೇಷನರಿ ಪಿಎಸ್ಐ ವಿರುದ್ಧ ವರದಕ್ಷಿಣೆ ಕಿರುಕುಳ, ಕೊಲೆ ಯತ್ನ ಪ್ರಕರಣ: ಆರೋಪಿ ಬಂಧನ
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರೊಬೇಷನರಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೊರೆನಾಯ್ಕ್ ಪಿ.ಆರ್. ವಿರುದ್ಧ ವರದಕ್ಷಿಣೆ ಕಿರುಕುಳ ಹಾಗೂ ಕೊಲೆ ಯತ್ನದ ಆರೋಪದಡಿ ಪ್ರಕರಣ ದಾಖಲಾಗಿದೆ. ಮೊದಲ ಮದುವೆಯ ವಿಚಾರವನ್ನು ಮುಚ್ಚಿಟ್ಟು ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ದಾವಣಗೆರೆಯ ಯುವತಿ ಚಂದು ಅವರನ್ನು ವಿವಾಹವಾಗಿದ್ದ ಆರೋಪವೂ ಕೇಳಿಬಂದಿದೆ. ಮದುವೆಯ ಬಳಿಕ ಅರಳಿಹಳ್ಳಿಯಲ್ಲಿ ವಾಸವಿದ್ದ ದಂಪತಿಗಳ ನಡುವೆ ವರದಕ್ಷಿಣೆ ವಿಚಾರವಾಗಿ ಜಗಳಗಳು ನಡೆದಿದ್ದು, 10 ಲಕ್ಷ ರೂ. ತರುವಂತೆ ಪತ್ನಿಗೆ …
Read More »ಮರಳು ಅಕ್ರಮವಾಗಿ ಸಾಗಿಸುತ್ತಿದ್ದ ಪಿಕಪ್ ವಶ
ಬಂಟ್ವಾಳ: ಬುಟ್ಟಿಗಳ ಸಹಾಯದಿಂದ ಮರಳನ್ನು ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಡಿ ವಾಹನವನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿಕಪ್ ವಾಹನದಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯಂತೆ ಬಂಟ್ವಾಳ ಬಡಗಬೆಳ್ಳೂರು ಗ್ರಾಮದ ತರಾವು ಎಂಬಲ್ಲಿಗೆ ಪೊಲೀಸರು ದಾಳಿ ನಡೆಸಿದರು. ಆಗ ಮರಳು ತುಂಬಿಸಿಕೊಂಡು ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಗ್ರಾಮಾಂತರಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಂಗಳೂರಿನಲ್ಲಿ ಶಾಲಾ ವಿದ್ಯಾರ್ಥಿ ಆತ್ಮಹತ್ಯೆ ಕೇಸ್: ಶಾಲೆಯ ಸೆಕ್ರೆಟರಿ, ಪ್ರಿನ್ಸಿಪಾಲ್ ಹಾಗೂ ಶಿಕ್ಷಕರ ವಿರುದ್ಧ FIR ದಾಖಲು!
ಬೆಂಗಳೂರು ಜ್ಞಾನಭಾರತಿ ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಸೆಕ್ರೆಟರಿ, ಪ್ರಿನ್ಸಿಪಾಲ್ ಹಾಗೂ ಸಂಬಂಧಪಟ್ಟ ಶಿಕ್ಷಕರ ವಿರುದ್ಧ ಎಫ್ಐಆರ್ ದಾಖಲಾಗಿದೆ. ವಿದ್ಯಾರ್ಥಿಯ ತಂದೆ ಮಹೇಶ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ದೂರಿನ ಪ್ರಕಾರ, ಶಾಲಾ ಸಿಬ್ಬಂದಿ ವಿದ್ಯಾರ್ಥಿಯ ಮೇಲೆ ದೈಹಿಕ ಹಲ್ಲೆ ನಡೆಸಿ ಮಾನಸಿಕ ಕಿರುಕುಳ ನೀಡಿದ್ದು, ಇದರಿಂದ ಮನನೊಂದ ಬಾಲಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಗಾಯಗೊಂಡಿರುವ …
Read More »ತುಮಕೂರು: ಗಾಂಜಾ ಮಾರಾಟ; 6 ಮಂದಿ ಬಂಧನ
ಮೈಸೂರು ನಗರದ ತಿಲಕ್ ಪಾರ್ಕ್ ಠಾಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಗಾಂಜಾ ಹಾಗೂ ಇತರ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ 6 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ₹4 ಲಕ್ಷಕ್ಕೂ ಅಧಿಕ ಮೌಲ್ಯದ ಮಾದಕ ವಸ್ತುಗಳು ಹಾಗೂ ₹40 ಲಕ್ಷ ಮೌಲ್ಯದ ಕಾರನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ತಿಳಿಸಿದ್ದಾರೆ. ಬಂಧಿತರಲ್ಲಿ ಸತೀಶ್ (37), ಪ್ರಮೋದ್ ಕುಮಾರ್ (28), ದಿಶಾಂತ್ (21), ದರ್ಶನ್ (28), ಅಮೋಘ (21) …
Read More »ಕೊಡಗಿನಲ್ಲಿ ಅಮೆರಿಕ ಯುವತಿ ಅತ್ಯಾಚಾರ ಪ್ರಕರಣ: ಹೋಂ ಸ್ಟೇ ಮಾಲೀಕನ ಬಂಧನ ಅಕ್ರಮ; 5 ಲಕ್ಷ ಪರಿಹಾರ ಘೋಷಿಸಿದ ಹೈರ್ಕೋಟ್!
ಕೊಡಗಿನ ಹೋಂ ಸ್ಟೇಯಲ್ಲಿ ಅಮೆರಿಕ ಮೂಲದ ಯುವತಿಯ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲಾಗಿದ್ದ ಹೋಂ ಸ್ಟೇ ಮಾಲೀಕ ಪಾಳೆಕಂಡ ಪೊನ್ನಪ್ಪ ಅಲಿಯಾಸ್ ವಿಶಾಲ್ ಅವರ ಬಂಧನ ಅಕ್ರಮ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಜಸ್ಟಿಸ್ ಎಂ. ನಾಗಪ್ರಸನ್ನ ಅವರ ನ್ಯಾಯಪೀಠ ಸರ್ಕಾರ ನಾಲ್ಕು ವಾರಗಳಲ್ಲಿ ₹5 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಮಾಲೀಕ ತನ್ನ ಬಂಧನ ಕಾನೂನುಬಾಹಿರವಾಗಿದ್ದು, ಇದರಿಂದ ತನ್ನ ವ್ಯವಹಾರಕ್ಕೆ ಹಾನಿಯಾಗಿದೆ ಎಂದು ₹15 ಲಕ್ಷ ಪರಿಹಾರ …
Read More »13 ವರ್ಷದ ಬಾಲಕಿ ಗರ್ಭಿಣಿ: ಲೈಗಿಂಕ ದೌರ್ಜನ್ಯ ನಡೆಸಿದ ಯುವಕನ ಬಂಧನ
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಗ್ರಾಮವೊಂದರಲ್ಲಿ 13 ವರ್ಷದ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದ್ದು, ಸಂಬಂಧಿತ ಪ್ರಕರಣದಲ್ಲಿ ಅದೇ ಗ್ರಾಮದ 25 ವರ್ಷದ ಚರಣ್ ಬಿನ್ ಆನಂದ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಬಾಲಕಿ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವೇಳೆ ವೈದ್ಯಕೀಯ ಪರೀಕ್ಷೆಯಲ್ಲಿ ಗರ್ಭಿಣಿಯಾಗಿರುವುದು ತಿಳಿದುಬಂದಿದೆ. ಬಾಲಕಿ ಅಪ್ರಾಪ್ತ ವಯಸ್ಸಿನವಳಾಗಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ …
Read More »ನಿರುದ್ಯೋಗಿಗಳೇ ಇವರ ಟಾರ್ಗೆಟ್: MNC ಕಂಪನಿಯಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಾಂತರ ರೂ ವಂಚನೆ
ಬೆಂಗಳೂರು ವೈಟ್ಫೀಲ್ಡ್ನಲ್ಲಿ ನಕಲಿ ಕಂಪನಿ ಸ್ಥಾಪಿಸಿ, ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ನಿರುದ್ಯೋಗಿ ಯುವಕ-ಯುವತಿಯರಿಂದ ಪರೀಕ್ಷೆ ಹೆಸರಿನಲ್ಲಿ ತಲಾ ₹2,000 ರಿಂದ ₹3,000 ವಸೂಲಿ ಮಾಡುತ್ತಿದ್ದ ವಂಚನೆ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ಹಲವು ವರ್ಷಗಳಿಂದ ನೂರಾರು ಅಭ್ಯರ್ಥಿಗಳಿಗೆ ಮೋಸ ಮಾಡಿ ಲಕ್ಷಾಂತರ ರೂಪಾಯಿ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಪರೀಕ್ಷೆ ನಡೆಸಿದ ಬಳಿಕ ಫಲಿತಾಂಶ ತಿಳಿಸುವುದಾಗಿ ಹೇಳಿ ಅಭ್ಯರ್ಥಿಗಳನ್ನು ಕಳುಹಿಸುತ್ತಿದ್ದ ಆರೋಪಿಗಳು, ನಂತರ ಕರೆ ಮಾಡಿದವರಿಗೆ “ಆಯ್ಕೆಯಾಗಿಲ್ಲ” ಎಂದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





