Breaking News

BigTv News

ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆಯ ಸಿಂಚನವಾಗುತ್ತಿದೆ. ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ಪ್ರಬಲ ವಾಯುಭಾರ ಕುಸಿತವಾಗಿರುವುದರಿಂದ ಇಂದು ಕೂಡ ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಇಂದಿನಿಂದ ಡಿ. 29ರವರೆಗೆ ಕರ್ನಾಟಕದ ಹಲವೆಡೆ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಇಂದು (ಡಿ. 27) ಮತ್ತು ಡಿ. 28ರಂದು ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. …

Read More »

ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಭೂ ದೂರು ದಾಖಲು

ಕಲಬುರಗಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಭೂ ಕಬಳಿಕೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ. ಅಂಬೇಡ್ಕರ್ ಸ್ಮಾರಕ ಸಮಿತಿಗೆ ಮದುವೆ ಮಂಟಪ ನಿರ್ಮಿಸಲು ನೀಡಿದ 36,000 ಚದರ ಅಡಿ ಭೂಮಿಯನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಮುಖಂಡ ಮಣಿಕಾಂತ್ ರಾಥೋಡ್ ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಕಲಬುರಗಿ ಜಿಲ್ಲಾಡಳಿತ 1981ರಲ್ಲಿ ಈ ಭೂಮಿಯನ್ನು ಸಾರ್ವಜನಿಕ ಬಳಕೆಗೆ ನೀಡಿತ್ತು. ಆದರೆ, ಕಳೆದ ಕೆಲವು ವರ್ಷಗಳಿಂದ, ಮದುವೆ …

Read More »

ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ವ್ಯಕ್ತಿಗೆ ಕೊರೋನಾ ದೃಢ

ಶಿವಮೊಗ್ಗ: ಜರ್ಮನಿಯಿಂದ ಬೆಂಗಳೂರಿಗೆ ಬಂದಿದ್ದ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ದುಬೈನಿಂದ ಬೆಂಗಳೂರಿಗೆ ಬಂದಿಳಿದಿದ್ದ ಇವರನ್ನು RT-PCR ಟೆಸ್ಟ್ ಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕಿರುವುದು ಪತ್ತೆಯಾಗಿದ್ದು, ಸದ್ಯ ಕ್ವಾರಂಟೈನ್ ನಲ್ಲಿ ಇರಿಸಲಾಗಿದೆ.ಆದರೆ ಇದು ಕೊರೋನಾದ ಹೊಸ ರೂಪಾಂತರಿ ತಳಿ ಅಥವಾ BE.7 ಸೋಂಕೇ, ಅಲ್ಲವೇ ಎಂಬುದು ತಿಳಿದುಬಂದಿಲ್ಲ.

Read More »

ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್ ಕಡ್ಡಾಯ : ಆರ್.ಅಶೋಕ್

ಬೆಳಗಾವಿ: ರಾಜ್ಯದಲ್ಲಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಮುಂಜಾಗೃತಾ ಕ್ರಗಳನ್ನು ಕೈಗೊಂಡಿದ್ದು, ರಾಜ್ಯಾದ್ಯಂತ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಆರೋಗ್ಯ ಇಲಾಖೆ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದಿದ್ದರೆ ಸಧ್ಯಕ್ಕೆ ದಂಡ ವಿಧಿಸುವುದಿಲ್ಲ. ಆದರೆ, ಜನರ ಹಿತದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸಿ ಮಾಸ್ಕ್ ಧರಿಸುವುದು …

Read More »

ದ್ವಿಚಕ್ರ ವಾಹನಗಳನ್ನು ಟಾರ್ಗೆಟ್ : ಕಳ್ಳ ಅರೆಸ್ಟ್

ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. 22 ವರ್ಷದ ಸೂರ್ಯ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿಯು, ಮನೆ ಮುಂದೆ ನಿಲ್ಲಿಸಿದ ದ್ವಿಚಕ್ರ ವಾಹನಗಳನ್ನೇ ಟಾರ್ಗೆಟ್ ಮಾಡಿ ಕದ್ದು ಎಸ್ಕೇಪ್ ಆಗುತ್ತಿದ್ದ. ಈ ಸಂಬಂಧ ಗಾಡಿ ಕಳೆದುಕೊಂಡ ಸಂತ್ರಸ್ತರೊಬ್ಬರು ಸ್ಥಳೀಯ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದರು. ದೂರಿನ ಅನ್ವಯ ತನಿಖೆ …

Read More »

ಬೆಂಕಿ ಅವಘಡ : 4 ಕಾರ್ಮಿಕರು ಸಾವು

ವಿಶಾಖಪಟ್ಟಣಂ: ಪರವಾಡ ಲಾರಸ್ ಫಾರ್ಮಾ ಲ್ಯಾಬ್ಸ್ ಲಿಮಿಟೆಡ್ ಕಂಪನಿಯಲ್ಲಿ ಬೆಂಕಿ ಅವಘಡ ಸಂಭವಿಸಿ ನಾಲ್ವರು ಕಾರ್ಮಿಕರು ಮೃತಪಟ್ಟ ಘಟನೆ ಆಂಧ್ರದ ಅನಕಾಪಲ್ಲಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು, ಒಬ್ಬ ಕಾರ್ಮಿಕ ಗಂಭೀರ ಗಾಯಗೊಂಡಿದ್ದಾನೆ. ನಿರ್ವಹಣೆ ಕಾರ್ಯ ನಡೆಯುತ್ತಿರುವ ವೇಳೆ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ. ರಾಜ್ಯ ಕೈಗಾರಿಕಾ ಸಚಿವ ಅಮರನಾಥ್ ಈ ಬಗ್ಗೆ ಮಾತಾನಾಡಿ, ಘಟನೆಯಲ್ಲಿ ಗಂಭೀರ ಗಾಯಗೊಂಡ ಕಾರ್ಮಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ …

Read More »

ಕ್ಷುಲ್ಲಕ ಕಾರಣಕ್ಕೆ ಕುಡಕನಿಗೆ ಹಿಗ್ಗಾಮುಗ್ಗಾ ಥಳಿತ

ಹುಬ್ಬಳ್ಳಿ :ಕ್ಷುಲ್ಲಕ ಕಾರಣಕ್ಕೆ ಬಾರ ಮುಂದೆಯೇ ಕುಡಕನೊಬ್ಬನಿಗೆ ಬಾರ್ ಸಿಬ್ಬಂದಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹುಬ್ಬಳ್ಳಿಯ- ಗದಗ ರಸ್ತೆಯ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ. ಕ್ಷುಲಕ ಕಾರಣಕ್ಕೆ ಕುಡಿದ ಮತ್ತಿನಲ್ಲಿ ಇದ್ದ ಕುಡುಕನಿಗೆ ಬಾರ್ ಸಿಬ್ಬಂದಿಗಳು ಮನಸ್ಸು ಇಚ್ಚೆ ಥಳಸಿದ್ದು ಈಗ ಸಾಮಾಜಿಕ ಜಾಲತಾನದಲ್ಲಿ ವಿಡಿಯೋ ವೈರಲ್ ಆಗಿದೆ. ಚಿಲರೆ ಕಾಸ್ ವಿಷಯಕ್ಕೆ ಸಿಬ್ಬಂದಿ ಹಾಗೂ ವ್ಯಕ್ತಿಯ ನಡುವೆ ಮಾತಿನ ಚಕಮಕಿ ನಡೆದಿದೆ. ಆಗ ಮಾತಿಗೆ ಮಾತು ಬೆಳೆದು ಕುಡುಕನನ್ನು …

Read More »

ಚೀನಾ ಬಿಎಫ್ 7 ವೈರಸ್ ಗೆ ಹುಬ್ಬಳ್ಳಿಯಲ್ಲಿ ಹೈ ಅಲರ್ಟ್ : ರಾಮಲಿಂಗಪ್ಪ ಸೂಚನೆ

ಹುಬ್ಬಳ್ಳಿ: ಚೀನಾ ಬಿಎಫ್ 7 ವೈರಸ್ ಗೆ ಈಗಾಗಲ್ಲೆ ದೇಶದಲ್ಲೆ ಮುಂಜಾಗೃತೆ  ಕ್ರಮ ವಹಿಸಿದ್ದು, ಅದರಂತೆ ವಾಣಿಜ್ಯ ನಗರಿ  ಹುಬ್ಬಳ್ಳಿಯಲ್ಲಿಯೂ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಲವು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ ಎಂದುಕಿಮ್ಸ್ ನಿರ್ದೇಶಕ  ರಾಮಲಿಂಗಪ್ಪ ಹೇಳಿದರು. ನಗರದಲ್ಲಿ ಮಾದ್ಯಮದವರ ಜೊತೆ ಮಾತನಾಡಿದ ಅವರು, ಉತ್ತರ ಕರ್ನಾಟಕದ ಸಂಜೀವಿನಿಯಾಗಿರುವ ಕಿಮ್ಸ್ ಆಸ್ಪತ್ರೆಯಲ್ಲಿಯೂ ಸಹ  100 ಬೆಡ್ ಗಳನ್ನು ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.  ಧಾರವಾಡ ಜಿಲ್ಲೆಯಲ್ಲಿ ಈ ವರೆಗೂ ಯಾವುದೇ ಪ್ರಕರಣ …

Read More »

ಉಕ‌ ಅಭಿವೃದ್ಧಿಗೆ ಆಗ್ರಹಿಸಿ ಪ್ರತಿಭಟನೆ

ಹುಬ್ಬಳ್ಳಿ ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ಹಾಗೂ ಉತ್ತರ ಕರ್ನಾಟಕಕ್ಕೆ ಅಭಿವೃದ್ಧಿ ವಿಷಯದಲ್ಲಿ ತಾರತಮ್ಯ ಮಾಡುತ್ತಿರುವ ಸರ್ಕಾರದ ವಿರುದ್ಧ ಒಂದು ದಿನದ ಸಾಂಕೇತಿಕ ಧರಣಿಯನ್ನು ಉತ್ತರ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ವತಿಯಿಂದ ನಗರದ ಮಿನಿ ವಿಧಾನಸೌಧ ಬಳಿ ಹಮ್ಮಿಕೊಳ್ಳಲಾಯಿತು. ಇನ್ನೂ ಈ ಸಂದರ್ಭದಲ್ಲಿ ಮಾತನಾಡಿದ ಕರ್ನಾಟಕ ನವ ನಿರ್ಮಾಣ ವೇದಿಕೆಯ ರಾಜ್ಯಾಧ್ಯಕ್ಷ ಈರಪ್ಪ ಎಮ್ಮಿ, ಉತ್ತರ ಕರ್ನಾಟಕದ ಭಾಗದಲ್ಲಿ ಮೊದಲಿನಿಂದಲೂ ಸರ್ಕಾರ ಮಹಾದಾಯಿ ವಿಷಯದಲ್ಲಿ ತಾರತಮ್ಯ ಮಾಡಿದೆ. …

Read More »

ನ್ಯಾಶನಲ್ ವಾಲಿಬಾಲ್ ಚಾಂಪಿಯನ್‌ ಶಿಪ್ ಗೆ ಧಾರವಾಡ
ಕ್ರೀಡಾಪಟುಗಳು ಆಯ್ಕೆ

ಹುಬ್ಬಳ್ಳಿ: ದೆಹಲಿಯಲ್ಲಿ ಜನೆವರಿ 3ರಿಂದ 8ರವರೆಗೆ ನಡೆಯಲಿರುವ 44ನೇ ಸಬ್ ಜೂನಿಯರ್ ನ್ಯಾಶನಲ್ ವಾಲಿಬಾಲ್ ಚಾಂಪಿಯನ್‌ ಶಿಪ್ ಗೆ ಧಾರವಾಡ ಜಿಲ್ಲೆಯಿಂದ ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಹುಬ್ಬಳ್ಳಿಯ ಬ್ಯಾಹಟ್ಟಿ ಶಾಲಾ ಮೈದಾನದಲ್ಲಿ ರಾಜ್ಯ ಬಾಲಕ-ಬಾಲಕಿಯರ ವಾಲಿಬಾಲ್ ತಂಡಕ್ಕೆ ಆಟಗಾರರ ಆಯ್ಕೆ ಮಾಡುವ ಪ್ರಕ್ರಿಯೆ ನಡೆಯಿತು. ಸಬ್ ಜೂನಿಯರ್ ನ್ಯಾಶನಲ್ ವಾಲಿಬಾಲ್ ಚಾಂಪಿಯನ್ಸ್ ಶಿಪ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಕರ್ನಾಟಕ ವಾಲಿಬಾಲ್ ಸಂಸ್ಥೆ ಅಡಹಾಕ್ ಸಮಿತಿ ಸದಸ್ಯ ಎಂ.ಎಂ. ಗುಡಿ ನೇತೃತ್ವದಲ್ಲಿ ನೂರಾರು …

Read More »