ಹೊಸ ಕರೋನವೈರಸ್ ರೂಪಾಂತರವಾದ B.F7 ನಿಂದ ಕೋವಿಡ್ ಪ್ರಕರಣಗಳಲ್ಲಿ ಜಾಗತಿಕವಾಗಿ ಉಲ್ಬಣಗೊಳ್ಳುತ್ತವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಕೆ ಸುಧಾಕರ್ ʼಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. “ಕರ್ನಾಟಕದ ಜನರಿಗೆ ಆದಷ್ಟು ಬೇಗ ಬೂಸ್ಟರ್ ಡೋಸ್ ತೆಗೆದುಕೊಳ್ಳುವಂತೆ ನಾನು ಮನವಿ ಮಾಡುತ್ತೇನೆ. ಜನರು ಮಾಸ್ಕ್ ಧರಿಸಿ ಓಡಾಡಬೇಕು. ವಿಶೇಷವಾಗಿ ಒಳಾಂಗಣ ಸ್ಥಳಗಳಲ್ಲಿ ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕು” ಎಂದು ಕೆ ಸುಧಾಕರ್ …
Read More »ಶಿಕ್ಷಕರಿಗೆ ಸಿಹಿ ಸುದ್ದಿ
ಬೆಂಗಳೂರು: ಜನವರಿಯಲ್ಲಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ಶೀಘ್ರವೇ ವೇಳಾಪಟ್ಟಿ ಪ್ರಕಟಿಸುವ ಸಾಧ್ಯತೆ ಇದೆ. ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆಯ ತಿದ್ದುಪಡಿಯನ್ನು ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ ಸಮ್ಮತಿಸಿದ್ದಾರೆ. ಮುಂದಿನ ತಿಂಗಳು ಜನವರಿ ಅಂತ್ಯದೊಳಗೆ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗಿದೆ. ಶಿಕ್ಷಕರ ಸ್ನೇಹಿ ವರ್ಗಾವಣೆ ನಿಯಮ ರೂಪಿಸಿ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ(ಶಿಕ್ಷಕರ ವರ್ಗಾವಣೆ …
Read More »ಟಾಲಿವುಡ್ನ ಮತ್ತೊಬ್ಬ ಹಿರಿಯ ನಟ ಚಲಪತಿ ರಾವ್ ನಿಧನ
ಟಾಲಿವುಡ್ನಲ್ಲಿ ಒಂದರ ಹಿಂದೊಂದರಂತೆ ದುರಂತ ನಡೆಯುತ್ತಿದೆ. ಇತ್ತೀಚೆಗೆ ಸೂಪರ್ ಸ್ಟಾರ್ ಕೃಷ್ಣ ನಿಧನರಾಗಿದ್ದರು. ಆ ನೋವಿನಿಂದ ಹೊರಬರುತ್ತಿದ್ದಂತೆ ಮೊನ್ನೆಯಷ್ಟೇ ಕೈಕಲಾ ಸತ್ಯನಾರಾಯಣ್ ಅವರ ಸಾವು ತೆಲುಗು ಮಂದಿಗೆ ಆಘಾತ ನೀಡಿತ್ತು. ನಿನ್ನೆಯಷ್ಟೇ ಸತ್ಯನಾರಾಯಣ್ ಅವರ ಅಂತ್ಯಸಂಸ್ಕಾರ ನೆರವೇರಿತ್ತು. ಇಂದು ಟಾಲಿವುಡ್ನ ಮತ್ತೊಬ್ಬ ಹಿರಿಯ ನಟ ಚಲಪತಿ ರಾವ್ ನಿಧನರಾಗಿದ್ದಾರೆ. ತೆಲುಗಿನ ಸುಮಾರು 600ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಚಲಪತಿ ರಾವ್ ಇಂದು ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 78 …
Read More »ಶೂಟಿಂಗ್ ಸೆಟ್ನಲ್ಲೇ ಆತ್ಮಹತ್ಯೆ ಮಾಡಿಕೊಂಡ ನಟಿ
ಮುಂಬೈ: ನಟಿಯೊಬ್ಬಳು ತನ್ನ ಶೂಟಿಂಗ್ ಸೆಟ್ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.ಮಹಾರಾಷ್ಟ್ರದ ಥಾಣೆ ಜಿಲ್ಲೆಯ ವಾಲಿವ್ ಎಂಬಲ್ಲಿನ ಶೂಟಿಂಗ್ ಸೆಟ್ನಲ್ಲಿ ಈ ಪ್ರಕರಣ ನಡೆದಿದೆ. ಕಿರುತೆರೆ ನಟಿ ತುನಿಷಾ ಶರ್ಮಾ (20) ಆತ್ಮಹತ್ಯೆ ಮಾಡಿಕೊಂಡಾಕೆ. ಈಕೆ ತಾನು ನಟಿಸುತ್ತಿದ್ದ ಕಿರುತೆರೆಯ ಶೂಟಿಂಗ್ ಸೆಟ್ನಲ್ಲೇ ನೇಣು ಹಾಕಿಕೊಂಡಿದ್ದಳು. ಸ್ಥಳದಲ್ಲಿದ್ದವರು ಕೂಡಲೇ ಈಕೆಯನ್ನು ಆಸ್ಪತ್ರೆಗೆ ಕರೆದೊಯ್ದರು, ಅದಾಗಲೇ ಆಕೆ ಮೃತಪಟ್ಟಿದ್ದಾಗಿ ವೈದ್ಯರು ಸ್ಪಷ್ಟಪಡಿಸಿದ್ದಾರೆ. ಘಟನೆಯಿಂದ ಸೆಟ್ನಲ್ಲಿದ್ದವರು ತೀವ್ರ ಆಘಾತಕ್ಕೆ ಒಳಗಾಗಿದ್ದು, ನಟಿಯ ಶವವನ್ನು …
Read More »ಕೊರೊನಾ ರೂಪಾಂತರಿ ವೈರಸ್ BF.7 ಬಹಳ ವೇಗವಾಗಿ ಹರಡುತ್ತಿದೆ : ಆರೋಗ್ಯ ಸಚಿವ ಡಾ.ಸುಧಾಕರ್
ತುಮಕೂರು: ಕೊರೊನಾ ರೂಪಾಂತರಿ ವೈರಸ್ BF.7 ಬಹಳ ವೇಗವಾಗಿ ಹರಡುತ್ತಿದ್ದು, ಶೀಘ್ರದಲ್ಲಿಯೇ ರಾಜ್ಯಕ್ಕೂ ಎಂಟ್ರಿ ಕೊಡಬಹುದು ಎಂಬ ಆತಂಕಕಾರಿ ಮಾಹಿತಿಯನ್ನು ಆರೋಗ್ಯ ಸಚಿವ ಡಾ.ಸುಧಾಕರ್ ನೀಡಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವರು, ಕೋವಿಡ್ ಹೊಸ ತಳಿ BF.7 ಪತ್ತೆಯಾಗಿದ್ದು, ಬಹಳ ವ್ಯಾಪಕವಾಗಿ ಹರಡುತ್ತಿದೆ.ಚೀನಾ ಸೇರಿದಂತೆ ಬೇರೆ ಬೇರೆ ದೇಶಗಳಲ್ಲಿ ಆತಂಕ ಸೃಷ್ಟಿ ಮಾಡಿದೆ. ಇನ್ನು 2-3 ತಿಂಗಳಲ್ಲಿ ಇಲ್ಲಿಗೂ ಎಂಟ್ರಿ ಕೊಡಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಮುಂಜಾಗೃತಾ ಕ್ರಮಗಳನ್ನು ವಹಿಸಿ …
Read More »
ಬಿಜೆಪಿ ಶಾಸಕನ ಕಾರು ಸೇತುವೆಯಿಂದ ಹಳ್ಳಕ್ಕೆ ಬಿದು ಎಲ್ಲರಿಗೆ ಗಾಯ
ಪುಣೆ : ಮಹಾರಾಷ್ಟ್ರದ ಬಿಜೆಪಿ ಶಾಸಕ ಜಯಕುಮಾರ್ ಗೋರ್ ಹಾಗೂ ಇತರ ಮೂವರು ಪ್ರಯಾಣಿಸುತ್ತಿದ್ದ ಪ್ರಯಾಣಿಸುತ್ತಿದ್ದ ಸ್ಪೋಟ್ರ್ಸ್ ಯುಟಿಲಿಟಿ ವೆಹಿಕಲ್ (ಎಸ್ಯುವಿ) ಫಾಲ್ತಾನ್ ಬಳಿಯ ಸೇತುವೆಯಿಂದ ಹಳ್ಳಕ್ಕೆ ಬಿದಿದ್ದು ಎಲ್ಲರೂ ಗಾಯಗೊಂಡಿದ್ದಾರೆ. ಶನಿವಾರ ನಸುಕಿನ ವೇಳೆ ಸತಾರಾ ಜಿಲ್ಲೆ ಲೋನಾಂಡ್-ಫಾಲ್ಟನ್ ರಸ್ತೆಯಿಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಸೇತುವೆಯಿಂದ ಕನಿಷ್ಠ 30 ಅಡಿ ಆಳದ ಹಳ್ಳಕ್ಕೆ ಬಿದ್ದಿದೆ. ಅಪಘಾತದಲ್ಲಿ ಶಾಸಕ ಗೋರ್, ಅವರ ಅಂಗರಕ್ಷಕ ಮತ್ತು ಚಾಲಕ ಗಾಯಗೊಂಡಿದ್ದಾರೆ. …
Read More »ರೈತ ಸಮುದಾಯಕ್ಕೆ ಸಿಎಂ ಮತ್ತೊಂದು ಸಿಹಿಸುದ್ದಿ
ಹಾವೇರಿ : ರೈತ ಸಮುದಾಯಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಮುಂದಿನ ತಿಂಗಳು ರೈತರಿಗೆ ಡೀಸೆಲ್ ಸಬ್ಸಿಡಿ ನೀಡಲು ಯೋಜನೆ ಜಾರಿಗೆ ತರಲಾಗುವುದು ಎಂದು ತಿಳಿಸಿದ್ದಾರೆ. ಸವಣೂರು ತಾಲ್ಲೂಕಿನ ಕಾರಡಗಿ ಶ್ರೀ ವೀರಭದ್ರೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಯಾತ್ರಿನಿವಾಸ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರೈತ ಶಕ್ತಿ ಡೀಸೆಲ್ ಯೋಜನೆಯನ್ನು ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯ ಮೂಲಕ …
Read More »ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು : ಸಿಎಂ
ಹುಬ್ಬಳ್ಳಿ: ‘ವಿದೇಶಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಹೊಸ ವರ್ಷಾಚರಣೆಗೆ ನೂತನ ಮಾರ್ಗಸೂಚಿಗಳನ್ನು ಹೊರಡಿಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಕಂದಾಯ ಸಚಿವ ಆರ್.ಅಶೋಕ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಭಾನುವಾರ ಸಭೆ ನಡೆಸಿ, ಮಾರ್ಗಸೂಚಿಗಳನ್ನು ಪ್ರಕಟಿಸಲಿದ್ದಾರೆ’ ಎಂದರು. ಬೂಸ್ಟರ್ ಡೋಸ್ ನೀಡಲು ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಶಿಬಿರ ಏರ್ಪಡಿಸಬೇಕು. ಆರೋಗ್ಯ ಪರಿಕರಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಂಡು, …
Read More »ಚಿಗರಿ ಬಸ್-ಬೈಕ್ ನಡುವೆ ಡಿಕ್ಕಿ- ಸವಾರರಿಬ್ಬರಿಗೆ ಗಂಭೀರ ಗಾಯ
ಧಾರವಾಡ : ಚಿಗರಿ ಬಸ್ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಧಾರವಾಡದ ಮಾಡರ್ನ್ ಹಾಲ್ ಮುಂಭಾಗದಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಇಬ್ಬರೂ ಬೈಕ್ ಸವಾರರಿಗೆ ಗಂಭೀರವಾದ ಪೆಟ್ಟಾಗಿ ತೀವ್ರ ರಕ್ತಸ್ರಾವವಾಗಿದೆ. ಗಾಯಗೊಂಡವರ ಹೆಸರು ವಿಳಾಸ ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಅವರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





