ಮೈಸೂರು: ಇನ್ನು ಮೂರು ತಿಂಗಳ ಅವಧಿಯೊಳಗೆ ದೇಶದಲ್ಲಿ ಮತ್ತೆ ಕೊರೊನಾ ಉಲ್ಬಣವಾಗುವ ಸಾಧ್ಯತೆ ಇದೆ ಎಂದು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಎಚ್ಚರಿಕೆ ನೀಡಿದ್ದಾರೆ. ಮೈಸೂರು ತಾಲೂಕಿನ ಸುತ್ತೂರಿನಲ್ಲಿ ನಡೆದ ಶ್ರೀ ಆದಿಜಗದ್ಗುರು ಶಿವರಾತ್ರಿ ಶಿವಯೋಗಿಗಳವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಗಾಗಲೇ ಚೀನಾ, ಆಸ್ಟ್ರೇಲಿಯಾ, ಬ್ರೆಜಿಲ್ ಹಾಗೂ ಅಮೆರಿಕ ಇನ್ನಿತರ ದೇಶಗಳಲ್ಲಿ ಕೊರೊನಾ ರೋಗ ಹರಡುವಿಕೆ ಉಲ್ಬಣಗೊಂಡಿದ್ದು, ಮುಂಬರುವ ದಿನಗಳಲ್ಲಿ ನಮ್ಮಲ್ಲೂ ಸೋಂಕು …
Read More »ಐಸಿಐಸಿ ಬ್ಯಾಂಕ್ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದಾ ಕೊಚ್ಚರ್, ಪತ್ನಿ ಬಂಧನ
ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಸಿಐಸಿ ಬ್ಯಾಂಕ್ನ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್ ಮತ್ತು ಪತಿ ದೀಪಕ್ ಕೊಚ್ಚರ್ ಅವರನ್ನು ಸಿಬಿಐ ಬಂಧಿಸಿದೆ. ಐಸಿಐಸಿಐ ಬ್ಯಾಂಕ್ಗೆ ವಂಚನೆ ಮಾಡುವ ದೃಷ್ಟಿಯಿಂದ ಇತರರ ಜೊತೆ ಸೇರಿಕೊಂಡು ಖಾಸಗಿ ಕಂಪನಿಗಳಿಗೆ ಸಾಲ ಮಂಜೂರಾತಿ ಮಾಡಿದ್ದಾರೆ ಎನ್ನುವ ಆರೋಪ ಚಂದಾ ಕೊಚ್ಚರ್ ದಂಪತಿ ಮೇಲಿದೆ. 2012 ರಲ್ಲಿ ಐಸಿಐಸಿಐ ಬ್ಯಾಂಕ್ನಿಂದ ವಿಡಿಯೋಕಾನ್ ಗ್ರೂಪ್ 3,250 ಕೋಟಿ …
Read More »ಬಿಎಂಟಿಸಿ ,ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯ
ಬೆಂಗಳೂರು: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು, ಬೆಂಗಳೂರಿನಲ್ಲಿ ಕೊರೊನಾ ಆತಂಕ ಶುರುವಾಗಿದೆ.ಹೀಗಾಗಿ ಬಿಎಂಟಿಸಿ ,ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಇಂದಿನಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ ಹೆಚ್ಚಳವಾಗಿದ್ದು, ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಪ್ರಯಾಣಿಕರು, ಚಾಲಕ, ಕಂಡಾಕ್ಟರ್ ಮಾಸ್ಕ್ ಬಳಸುವುದು ಕಡ್ಡಾಯ ಮಾಡಿ ಇಲಾಖೆ ಆದೇಶ ಹೊರಡಿಸಿದೆ. ಬಿಎಂಟಿಸಿ …
Read More »ರೈತರಿಗೆ ಸಿಹಿ ಸುದ್ದಿ ನೀಡಿದ ಬಿ.ಸಿ. ಪಾಟೀಲ್
ಬೆಳಗಾವಿ: ಕೃಷಿ ಯಂತ್ರಧಾರೆ ಯೋಜನೆಯನ್ನು ರೈತ ಉತ್ಪಾದಕ ಸಂಸ್ಥೆಗಳಿಗೆ ವಹಿಸಲು ಚಿಂತನೆ ನಡಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನ ಪರಿಷತ್ ನಲ್ಲಿ ಮುನಿರಾಜುಗೌಡ ಪಿ.ಎಂ. ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಲವೆಡೆ ಕೃಷಿ ಯಂತ್ರಧಾರೆ ಕೇಂದ್ರಗಳನ್ನು ಸೂಕ್ತವಾಗಿ ನಿರ್ವಹಣೆ ಮಾಡದೆ ಇರುವುದು ಸರ್ಕಾರದ ಗಮನಕ್ಕೆ ಬಂದಿದೆ.2015-16ನೇ ಸಾಲಿನಲ್ಲಿ ಸ್ಥಾಪಿಸಿರುವ ಕೆಲವು ಕೃಷಿ ಯಂತ್ರಧಾರೆ ಕೇಂದ್ರಗಳ ಆರು ವರ್ಷಗಳ ಒಡಂಬಡಿಕೆ ಅವಧಿಯು ಮುಕ್ತಾಯವಾಗಿದೆ ಎಂದರು. ಸಂಬಂಧಪಟ್ಟ ಸೇವಾ …
Read More »ಶ್ರೀಕ್ಷೇತ್ರ ಯಲ್ಲಮ್ಮನ ದರ್ಶನ ಪಡೆದ ಸಿಎಂ
ಉಗರಗೋಳ(ಬೆಳಗಾವಿ ಜಿಲ್ಲೆ): ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಭೇಟಿ ನೀಡಿ, ಯಲ್ಲಮ್ಮ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ಮುಂಬರುವ ದಿನಗಳಲ್ಲಿ ಯಲ್ಲಮ್ಮನಗುಡ್ಡಕ್ಕೆ ಅಗತ್ಯ ಸೌಕರ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. ಯಲ್ಲಮ್ಮ ದೇವಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಸಯ್ಯ ಹಿರೇಮಠ, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಜೀರಗ್ಯಾಳ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಾನಿಂಗ ನಂದಗಾವಿ, ಬೈಲಹೊಂಗಲ ಉಪವಿಭಾಗಾಧಿಕಾರಿ ಶಶಿಧರ ಬಗಲಿ, ತಹಶೀಲ್ದಾರ್ ಜಿ.ಬಿ.ಜಕ್ಕನಗೌಡ್ರ, …
Read More »ಜ. 8ರಂದು ಗವಿಸಿದ್ದೇಶ್ವರ ಮಠದ ಮಹಾರಥೋತ್ಸವ
ಕೊಪ್ಪಳ: ಮುಂದಿನ ತಿಂಗಳು 8ರಂದು ಇಲ್ಲಿ ನಡೆಯಲಿರುವ ಪ್ರಸಿದ್ಧ ಗವಿಸಿದ್ದೇಶ್ವರ ಮಠದ ಮಹಾರಥೋತ್ಸವವನ್ನು ಈಶಾ ಫೌಂಡೇಷನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಉದ್ಘಾಟನೆ ಮಾಡುವುದು ಖಚಿತವಾಗಿದೆ. ವಾಸುದೇವ್ ಕಾರ್ಯಕ್ರಮಕ್ಕೆ ಬರಲಿದ್ದಾರೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಶುಕ್ರವಾರ ಮಠವೇ ಈ ಕುರಿತು ಪ್ರಕಟಣೆ ನೀಡಿದೆ. ಜಗ್ಗಿ ವಾಸುದೇವ್ 8ರಂದು ಸಂಜೆ 5.30ಕ್ಕೆ ಮಹಾರಥೋತ್ಸವಕ್ಕೆ ಚಾಲನೆ ನೀಡುವರು. ನಂತರ ಕೈಲಾಸ ಮಂಟಪದಲ್ಲಿ ಜರುಗುವ ಧಾರ್ಮಿಕ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಲಿದ್ದಾರೆ. …
Read More »
ರಾಜ್ಯದಲ್ಲಿ ಕೋವಿಡ್ ತಡೆಗಟ್ಟಲು ಕ್ರಮ ಕೈಗೊಳ್ಳುವುದಾಗಿ:
ಡಾ.ಸುಧಾಕರ್
ದೇವನಹಳ್ಳಿ: ಕೇಂದ್ರ ಸರ್ಕಾರದ ಸಲಹೆ, ಸೂಚನೆಗಳ ಮೇರೆಗೆ ರಾಜ್ಯದಲ್ಲಿ ಕೋವಿಡ್ ತಡೆಗಟ್ಟಲು ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಡಾ.ಸುಧಾಕರ್ ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸಾರ್ವಜನಿಕರು ಜನಜಂಗುಳಿ ಇರುವ ಸ್ಥಳಗಳು, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು, ಬೂಸ್ಟರ್ ಡೋಸ್ ತೆಗೆದುಕೊಂಡು ಸುರಕ್ಷಿತವಾಗಿರಬೇಕು. ಸಾರಿ (ಸೀವಿಯರ್ ಅಕ್ಯೂಟ್ ರೆಸ್ಪಿರೇಟರಿ ಇನ್ಫೆಕ್ಷನ್) ಲಕ್ಷಣಗಳಿದ್ದರೆ ಅಥವಾ ಶ್ವಾಸಕೋಶದ ಸಮಸ್ಯೆ, ಜ್ವರ ಇದ್ದರೆ ತಕ್ಷಣ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂದರು. ಸರ್ಕಾರ ಜನಪರ ಕ್ರಮಗಳನ್ನು …
Read More »ಡಿ.27ರಂದು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ : ಡಾ.ಕೆ.ಸುಧಾಕರ್
ಬೆಂಗಳೂರು : ಕೊರೋನಾ ಸೋಂಕು ಚಿಕಿತ್ಸಾ ವ್ಯವಸ್ಥೆಗಳ ಸುಸ್ಥಿತಿಯನ್ನು ಪರಿಶೀಲನೆ ನಡೆಸಲು ಕೇಂದ್ರ ಆರೋಗ್ಯ ಸಚಿವಾಲಯ ಸೂಚನೆ ನೀಡಿದ್ದು, ಡಿ.27ರಂದು ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಣಕು (ಮಾಕ್ಡ್ರಿಲ್) ಕಾರ್ಯಾಚರಣೆ ನಡೆಸಲಾಗುವುದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಕೇಂದ್ರ ಆರೋಗ್ಯ ಸಚಿವರ ವಿಡಿಯೋ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾತನಾಡಿದ ಅವರು, ‘ಒಂದು ವೇಳೆ ಸೋಂಕು ಹೆಚ್ಚಳವಾದರೆ ಚಿಕಿತ್ಸೆಗೆ ಎಲ್ಲಾ ತಯಾರಿ ಹೊಂದಿರಬೇಕು ಎಂದು ಕೇಂದ್ರ …
Read More »ಧಾರ್ಮಿಕ ಸ್ಥಳಗಳನ್ನು ತೆರವು ಮಾಡುತ್ತಿರುವುದು ನೋವಿನ ಸಂಗತಿ-ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ನಾಗರಿಕತೆ ಬೆಳೆಯುತ್ತಿದೆ. ಅವಶ್ಯಕತೆಯು ಹೆಚ್ಚಿದೆ. ಅಲ್ಲದೇ ರಸ್ತೆಗಳ ವಿಸ್ತೀರ್ಣವು ಹೆಚ್ಚಾಗುತ್ತಿರುವ ಕಾರಣ ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ಅನಿವಾರ್ಯವಾಗಿರುವ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ. ಇದೇ ರಸ್ತೆಯಲ್ಲಿಯೇ 13 ಧಾರ್ಮಿಕ ಸ್ಥಳಗಳನ್ನು ತೆರವು ಮಾಡಲಾಗಿದೆ. ದೇಗುಲಗಳನ್ನು ಹಾಗೂ ಮಸೀದಿ ಮತ್ತು ಧಾರ್ಮಿಕ ಸ್ಥಳಗಳನ್ನು ತೆರವು ಮಾಡುವುದು ನಿಜಕ್ಕೂ ನೋವಿನ ಸಂಗತಿಯಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಭೈರಿದೇವರಕೊಪ್ಪದ ದರ್ಗಾಕ್ಕೆ ಭೇಟಿ ನೀಡಿದ ವೇಳೆ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, …
Read More »ಕುಂದಗೋಳ ಗ್ರಾಮಕ್ಕೆ ಸಿದ್ದರಾಮಯ್ಯ ಭೇಟಿ
ಧಾರವಾಡ : ತಾಲೂಕಿನ ಕುಂದಗೋಳ ಗ್ರಾಮಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದರು. ದಾಸ ಶ್ರೇಷ್ಠ ಕನಕ ದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಸಂಶಿ ಗ್ರಾಮದಲ್ಲಿರುವ ಶ್ರೀ ಕರಿ ಸಿದ್ದೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿದರು. ಶಾಸಕರಾದ ಕುಸುಮಾ ಶಿವಳ್ಳಿ, ಮಾಜಿ ಶಾಸಕ ಕೋನರೆಡ್ಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪಾಟೀಲ್ ಹಾಜರಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





