ಹುಬ್ಬಳ್ಳಿ : ಜನಾರ್ದನ ರೆಡ್ಡಿ ಜೊತೆಗಿನ ಸ್ನೇಹ ಯಾವತ್ತೂ ಶಾಶ್ವತ. BJP ನನಗೆ ರಾಜಕೀಯ ಸ್ಥಾನ ಮಾನ ಕೊಟ್ಟಿದೆ. ಸ್ನೇಹವನ್ನೂ ಬಿಡಲ್ಲ, ರಾಜಕಾರಣವನ್ನೂ ಬಿಡಲ್ಲ. ಕೇಂದ್ರದ ನಾಯಕರ ಜತೆ ಈ ಬಗ್ಗೆ ಮಾತನಾಡಿದ್ದೇನೆ ಎಂದು ಜನಾರ್ಧನ ರೆಡ್ಡಿ ಹೊಸ ಪಕ್ಷ ಸ್ಥಾಪನೆ ವಿಚಾರ ಕುರಿತಂತೆ ಸಚಿವ ಬಿ.ಶ್ರೀರಾಮುಲು ಪ್ರತಿಕ್ರಿಯಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ BJP ಯಲ್ಲಿ ಗೌರವ, ಸ್ಥಾನಮಾನ ಸಿಕ್ಕಿದೆ . ಜನಾರ್ಧನ ರೆಡ್ಡಿ ಹೊಸ ಪಕ್ಷ …
Read More »2,000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು: ಬಿ.ಶ್ರೀರಾಮುಲು
ಬೆಳಗಾವಿ: ರಾಜ್ಯದ ವಿವಿಧ ರಸ್ತೆ ಸಾರಿಗೆ ಸಂಸ್ಥೆಗಳಲ್ಲಿ ಖಾಲಿ ಇರುವ ಚಾಲಕ ಹುದ್ದೆಗಳನ್ನು ಭರ್ತಿ ಮಾಡಲು ಶೀಘ್ರವೇ 2,000 ಚಾಲಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಚಾಲಕರಿಗೆ ಈವರೆಗೆ ತರಬೇತಿ ಅವಧಿಯಲ್ಲಿ ₹10 ಸಾವಿರ ನೀಡಲಾಗುತ್ತಿತ್ತು.ಆ ಮೊತ್ತವನ್ನು ₹20 ಸಾವಿರಕ್ಕೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು. ಕೋವಿಡ್ ಸಂದರ್ಭದಲ್ಲಿ ರಾಜ್ಯದ ಹಲವು …
Read More »ಭಾರತದಲ್ಲಿ BF.7 ರೂಪಾಂತರದ ಕನಿಷ್ಠ ಮೂರು ಪ್ರಕರಣಗಳು ವರದಿ : ಕೇಜ್ರಿವಾಲ್
ನವದೆಹಲಿ: ಭಾರತದಲ್ಲಿ ಒಮಿಕ್ರಾನ್ ಸಬ್ವೇರಿಯಂಟ್BF.7 ರೂಪಾಂತರದ ಕನಿಷ್ಠ ಮೂರು ಪ್ರಕರಣಗಳು ವರದಿಯಾದ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ಫುಲ್ ಅಲರ್ಟ್ ಆಗಿದೆ. ಹೊಸ ಉಪತಳಿ ಪತ್ತೆ ಬೆನ್ನಲ್ಲೇ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ ಉನ್ನತ ಅಧಿಕಾರಿಗಳೊಂದಿಗೆ ತುರ್ತು ಕೋವಿಡ್ ಪರಿಶೀಲನಾ ಸಭೆಯನ್ನು ನಡೆಸಲಿದ್ದಾರೆ. ಚೀನಾದಲ್ಲಿ ಸೃಷ್ಟಿಯಾಗಿರುವ ಕೋವಿಡ್-19 ಭೀತಿಯ ಹಿಂದೆಯೇ ಭಾರತವು ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ವಹಿಸುತ್ತಿದೆ. ಈ ಸಂಬಂಧ ಕೇಂದ್ರ ಆರೋಗ್ಯ …
Read More »5 ಜನ ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಪೊಲೀಸ್ ಇಲಾಖೆ ಅಧಿಕಾರಿಗಳ ವರ್ಗಾವಣೆ ಮುಂದುವರೆಸಿದ ಸರ್ಕಾರ 5 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಆರ್. ಚೇತನ್ -ಗುಪ್ತಚರ ಎಸ್.ಪಿ., ಸೀಮಾ ಲಾಟ್ಕರ್ -ಮೈಸೂರು ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ, ಶಿವಪ್ರಕಾಶ್ ದೇವರಾಜು -ಬೆಂಗಳೂರು ಅಪರಾಧ ವಿಭಾಗದ ಎಐಜಿಪಿ, ಎಂ.ಮುತ್ತರಾಜು -ಮೈಸೂರು ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ, ಬಾಬಾ ಸಾಬ್ ನೇಮಗೌಡ ಗದಗ ಎಸ್ಪಿಯಾಗಿ ವರ್ಗಾವಣೆಗೊಂಡಿದ್ದಾರೆ.
Read More »
ಉಪ ಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ : ಡಿ.ಕೆ. ಶಿವಕುಮಾರ್
ಬೆಳಗಾವಿ: ಉಪ ಕುಲಪತಿ ಹುದ್ದೆ 5 ಕೋಟಿಗೆ ಮಾರಾಟ ಆಗುತ್ತಿದೆ ಎಂದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ಆಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒತ್ತಾಯಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಉಪಕುಲಪತಿ ಹುದ್ದೆಗೆ ಲಂಚ ನೀಡಬೇಕು ಎಂದು ಹೇಳಿಕೆ ನೀಡಿರುವ ಬಿಜೆಪಿ ನಾಯಕರು ಬಹಳ ಅನುಭವ ಹೊಂದಿರುವ ವಿದ್ಯಾವಂತರು.ಉಪಕುಲಪತಿಗಳ ಹುದ್ದೆಗೆ 5 ಕೋಟಿ ರು. ನೀಡಬೇಕು ಎಂದು ಈ …
Read More »ಕೊರೋನಾ ಸೋಂಕು ಹೆಚ್ಚಳ ಪ್ರಧಾನಿ ಮಹತ್ವದ ಸಭೆ
ನವದೆಹಲಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚಳವಾದ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನ ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಹಿರಿಯ ಅಧಿಕಾರಿಗಳು, ತಜ್ಞರ ಜೊತೆಗೆ ಪ್ರಧಾನಿ ಚರ್ಚೆ ನಡೆಸಲಿದ್ದಾರೆ. ದೇಶದಲ್ಲಿ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜೊತೆಗೆ ಅವರು ಸಮಾಲೋಚನೆ ನಡೆಸಲಿದ್ದಾರೆ. ದೇಶದಲ್ಲಿ ಕೊರೋನಾ ವೈರಸ್ ಓಮಿಕ್ರಾನ್ ಉಪ ತಳಿ ಬಿಎಫ್.7 ಸೋಂಕಿನ ನಾಲ್ಕು ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ. ಚೀನಾ, ಜಪಾನ್ ಮೊದಲಾದ ದೇಶಗಳಲ್ಲಿ …
Read More »ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್. ಹೆಗಡೆ ಕುಂದರ್ಗಿ ನಿಧನ
ಯಲ್ಲಾಪುರ: ತಾಲ್ಲೂಕಿನ ಹಿರಿಯ ಸಾಮಾಜಿಕ, ಧಾರ್ಮಿಕ, ಸಹಕಾರಿ, ರಾಜಕೀಯ ಧುರೀಣ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎನ್.ಎಸ್. ಹೆಗಡೆ ಕುಂದರ್ಗಿ (90) ಅನಾರೋಗ್ಯದಿಂದ ಬುಧವಾರ ರಾತ್ರಿ ನಿಧನರಾದರು. ಅವರನ್ನು ಹುಬ್ಬಳ್ಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಬಳಿಕ ಮನೆಗೆ ಕರೆದುಕೊಂಡು ಬರಲಾಗಿತ್ತು. ಅವರಿಗೆ ಒಬ್ಬ ಪುತ್ರ, ಇಬ್ಬರು ಪುತ್ರಿಯರಿದ್ದಾರೆ. ತಾಲ್ಲೂಕಿನ ಕುಂದರ್ಗಿಯವರಾದ ಇವರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದರು. ಕುಂದರ್ಗಿಯ ಅಭಿವೃದ್ಧಿಗೆ ಮಹತ್ವದ ಪಾತ್ರ ವಹಿಸಿದ್ದರು. ವಿವಿಧ ಸಂಘ ಸಂಸ್ಥೆಗಳಿಂದ ಪ್ರಶಸ್ತಿ, ಗೌರವಗಳಿಗೆ ಭಾಜನರಾಗಿದ್ದರು. 5- 6 …
Read More »ಶೀಘ್ರವೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಶಾಲೆ ಕಾರ್ಯಾರಂಭ : ಬಸವರಾಜ ಬೊಮ್ಮಾಯಿ
ಬೆಳಗಾವಿ : ಶೀಘ್ರವೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ವಸತಿ ಸಾಲೆ ಕಾರ್ಯಾರಂಭ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ 221 ಕೋಟಿ ರೂ. ವೆಚ್ಚದಲ್ಲಿ ರಾಯಣ್ಣ ಸೈನಿಕ ಶಾಲೆ ನಿರ್ಮಿಸಲಾಗಿದ್ದು, ಈ ವರ್ಷವೇ ಆರಂಭವಾಗಲಿದೆ ನಂದಗಡದ ವೀರಭೂಮಿಯಲ್ಲಿ 75 ಕೋಟಿ ವೆಚ್ಚದಲ್ಲಿ ಮ್ಯೂಸಿಯಂ …
Read More »ಕೋವಿಡ್ ಕುರಿತು ಕೆಲವು ನಿಯಮಗಳು ಜಾರಿಗೆ : ಡಾ.ಕೆ.ಸುಧಾಕರ್
ಬೆಳಗಾವಿ, ; ಕೋವಿಡ್ನಲ್ಲಿ ಹೊಸ ರೂಪಾಂತರಿ ವೈರಸ್ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್ …
Read More »ಕೋವಿಡ್ ಕುರಿತು ಸಿಎಂ ಇಂದು ಮಹತ್ವದ ಸಭೆ
ಬೆಳಗಾವಿ: ಕೋವಿಡ್ ಹೆಚ್ಚುತ್ತಿರುವ ಬಗ್ಗೆ ರಾಜ್ಯ ಗಂಭೀರವಾಗಿ ತೆಗೆದುಕೊಂಡಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿನ ಬೆಳವಣಿಗೆಗಳು, ಕೇಂದ್ರ ಆರೋಗ್ಯ ಇಲಾಖೆಯ ಸೂಚನೆಗಳು, ಯಾವ ರೀತಿ ಪರೀಕ್ಷೆಗಳು ಹೆಚ್ಚಿಸಬೇಕು. ಜಿನೊಮೆಟಿಕ್ ಪರೀಕ್ಷೆ ಮಾಡುವ ಬಗ್ಗೆ, ಮುಂಜಾಗ್ರತಾ ಕ್ರಮಗಳ ಬಗ್ಗೆಯೂ ಸುದೀರ್ಘವಾದ ಕಾರ್ಯಕ್ರಮ ರೂಪಿಸಲು ಗುರುವಾರ ಸಭೆಯನ್ನು ಕರೆಯಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. ಹೀಗಾಗಿ ಇಂದು ಸಿಎಂ ಕರೆದಿರುವಂತ ಕೋವಿಡ್ ಕಂಟ್ರೋಲ್ ಸಭೆ ಮಹತ್ವ ಮೂಡಿಸಿದ್ದು, ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ ನಿಯಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





