Breaking News

BigTv News

2 ಬಸ್ ಗಳ ನಡುವೆ  ಅಪಘಾತ : 3 ಜನ ಸಾವು, 10 ಜನರಿಗೆ ಗಾಯ

ನವದೆಹಲಿ: ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಭಾನುವಾರ ಬೆಳಿಗ್ಗೆ ಎರಡು ಬಸ್ ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ ಮೂವರು ಮೃತಪಟ್ಟು, ಇತರ ಹತ್ತು ಜನರು ಗಾಯಗೊಂಡಿದ್ದಾರೆ. ಅಪಘಾತದ ಬಗ್ಗೆ ಬೆಳಿಗ್ಗೆ 5.30ರ ಸುಮಾರಿಗೆ ಪಿಸಿಆರ್ ಕರೆ ಬಂದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಒಂದು ಬಸ್ ಉತ್ತರ ಪ್ರದೇಶದ ಪ್ರತಾಪಗಢದಿಂದ ದೆಹಲಿ ಕಡೆಗೆ ಹೋಗುತ್ತಿದ್ದರೆ, ಎರಡನೇ ಬಸ್ ಮಧ್ಯಪ್ರದೇಶದ ಶಿವಪುರಿಯಿಂದ ದೆಹಲಿಯ ಆನಂದ್ ವಿಹಾರ್ …

Read More »

ಜ. 1ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ : ಡಿಕೆಶಿ

ಬೆಳಗಾವಿ: ಜನವರಿ 1 ರೊಳಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನ ಪ್ರಕಟಿಸಲು ಸಿದ್ದಪಡಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಕ್ಷದ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮುನ್ನ ಪಕ್ಷದ ಆಧಾರ ಸ್ಥಂಭವಾಗಿರುವ ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಹಾಗೂ ವಿವಿಧ ಘಟಕಗಳ ಮುಖಂಡರ ಜೊತೆ ಚರ್ಚೆ ಮಾಡಿ ಅವರ ಅಭಿಪ್ರಾಯ ಪಡೆಯಲಾಗುವುದು. ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಧ್ವನಿ ಪಕ್ಷದ ಧ್ವನಿಯಾಗಬೇಕು ಎಂಬುದು …

Read More »

ಪಿಎಸ್‌ಐ ಗೀತಾಂಜಲಿ ಶಿಂಧೆ ಅಮಾನತು

ರಾಯಚೂರು: ಇತ್ತೀಚಿಗೆ ಹಲವು ಕಾರಣಕ್ಕಾಗಿ ಸುದ್ದಿಯಾಗಿದ್ದ ಸಿರಿವಾರ ಪೊಲೀಸ್ ಠಾಣೆ ಪಿಎಸ್‌ಐ ಗೀತಾಂಜಲಿ ಶಿಂಧೆ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಕೆಲ ದಿನಗಳ ಹಿಂದೆ ಯುವಕನೊಬ್ಬ ಪಿಎಸ್‌ಐ ಗೀತಾಂಜಲಿ ವಿರುದ್ಧ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ. ಅನಗತ್ಯವಾಗಿ ಠಾಣೆಗೆ ಕರೆಸಿ ಕಿರುಕುಳ ನೀಡುತ್ತಿದ್ದಾರೆ. ಪಿಎಸ್‌ಐ ಗೀತಾಂಜಲಿ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ. ಅಲ್ಲದೇ ಸಾರ್ವಜನಿಕರು ಕೂಡ ಗೀತಾಂಜಲಿ ವಿರುದ್ಧ ಹಲವು ಆರೋಪ …

Read More »

ನವನಗರ, ಸುತಗಟ್ಟಿಯಿಂದ ಚಿಗರಿ ಬಸ್ ಸಂಪರ್ಕ ಸಾರಿಗೆ ಆರಂಭ

ಹುಬ್ಬಳ್ಳಿ : ನವನಗರ ಹಾಗೂ ಸುತಗಟ್ಟಿ ಪ್ರಯಾಣಿಕರ ಅನುಕೂಲಕ್ಕಾಗಿ ಚಿಗರಿ ಬಸ್ ಸಂಪರ್ಕ ಸಾರಿಗೆಯನ್ನು ಆರಂಭಿಸಲಾಗಿದೆ. ನವನಗರದ ಕರ್ನಾಟಕ ಸರ್ಕಲ್ ದಿಂದ RTO ಚಿಗರಿ ಬಸ್ ಸ್ಟೇಶನ್ ವರಗೆ ಈ ಬಸ್ ಸಂಚರಿಸಲಿದೆ. ಈ ಬಸ್ಸಿನಲ್ಲಿ ಪ್ರಯಾಣಿಸುವವರು RTO ಚಿಗರಿ ಬಸ್ ಸ್ಟೇಶನ್ ಧಾರವಾಡ ಕಡೆಗೆ ಅಥವಾ ಹುಬ್ಬಳ್ಳಿ ಕಡೆಗೆ ಪ್ರಯಾಣಿಸಬಹುದಾಗಿದೆ. ಪ್ರಾಯೋಗಿಕವಾಗಿ ಮಾಸಿಕ ಸ್ಮಾರ್ಟ್ ಕಾರ್ಡ ಪಾಸ್ ಹೊಂದಿದವರು ಈ ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈಚೆಗೆ ನವನಗರದಲ್ಲಿ ನಡೆದ …

Read More »

ನಮ್ಮದು ಕಾಂಗ್ರೆಸ್ ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ : ಡಿಕೆಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಭ್ರಷ್ಟಾಚಾರ, ಮತಕಳವು ಪ್ರಕರಣವನ್ನು ವಿಷಯಾಂತರ ಮಾಡಲು ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣವನ್ನು ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು. ಕುಕ್ಕರ್ ಬ್ಲಾಸ್ಟ್ ವಿಚಾರದಲ್ಲಿ ನನ್ನ ಬಗ್ಗೆ ಯಾರು ಬೇಕಾದ್ರೂ, ಏನಾದ್ರು ಪ್ರಚಾರ ಮಾಡ್ಲಿ. ನಮ್ಮದು ಕಾಂಗ್ರೆಸ್ ಪಕ್ಷ, ಭಯೋತ್ಪಾದನೆಯನ್ನು ವಿರೋಧಿಸುತ್ತಾ ಬಂದಿರುವ ಪಕ್ಷ. ಅಧಿಕಾರದಲ್ಲಿ ಇದ್ದಾಗೆಲ್ಲಾ ದೇಶದಲ್ಲಿ ಭಯೋತ್ಪಾದನೆ ದಮನ ಮಾಡಿದ್ದೇವೆ. ಭಯೋತ್ಪಾದನೆ ನಿಯಂತ್ರಿಸಲಾಗದ ಸರ್ಕಾರ ವಜಾ ಮಾಡಿದ್ದೇವೆ. ಮಂಗಳೂರು ಭಯೋತ್ಪಾದಕ ದಾಳಿಯನ್ನು …

Read More »

ಎಂಇಎಸ್ ಪುಂಡರನ್ನು ಹದ್ದು ಬಸ್ತಿನಲ್ಲಿ ಇಟ್ಟುಕೊಳ್ಳುವದು ನಮಗೆ ಗೊತ್ತು ಸಿಎಂ ಬೊಮ್ಮಾಯಿ ಎಚ್ಚರಿಕೆ..!

ಹುಬ್ಬಳ್ಳಿ: ಬೆಳಗಾವಿ ಅಧಿವೇಶ ಸಮಯದಲ್ಲಿ ಎಂಇಎಸ್ ಪುಂಡಾಟಿಕೆ ಇದೇ ಮೊದಲಲ್ಲ. ಕಳೆದ 50 ವರ್ಷದಿಂದ ಎಂಇಎಸ್ ಪುಂಡಾಟ ಮಾಡುತ್ತಲೇ ಬಂದಿದೆ. ಅವರನ್ನು ಯಾವ ರೀತಿ ಹದ್ದು ಬಸ್ತಿನಲ್ಲಿ ಇಡಬೇಕು ನಮಗೆ ಗೊತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಹುಬ್ಬಳ್ಳಿಯ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆ ತಡೆಗಟ್ಟುವ ಕೆಲಸವನ್ನು ನಾವು ಮಾಡುತ್ತೇವೆ ಎಂದರು. ಡಿ.ಕೆ ಶಿವಕುಮಾರ್ ಕುಕ್ಕರ್ ಬಾಂಬ್ ವಿಚಾರವನ್ನು ಸಿದ್ದರಾಮಯ್ಯ ಸಮರ್ಥನೆ …

Read More »

ಇಂದು ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ : ಸಿಎಂ ಉದ್ಘಾಟನೆ

ಚಿತ್ರದುರ್ಗ : ಇದೇ ಮೊದಲ ಬಾರಿಗೆ ರಾಜ್ಯ ಮಟ್ಟದ ಒನಕೆ ಓಬವ್ವ ಜಯಂತಿ ಕಾರ್ಯಕ್ರಮ ಡಿ. 18 ಇಂದು ಮಧ್ಯಾಹ್ನ 01 ಗಂಟೆಗೆ ಚಿತ್ರದುರ್ಗದ ಮುರುಘರಾಜೇಂದ್ರ ಕ್ರೀಡಾಂಗಣ (ಸರ್ಕಾರಿ ವಿಜ್ಞಾನ ಕಾಲೇಜು ಮೈದಾನ) ದಲ್ಲಿ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಇದಕ್ಕಾಗಿ ಮೈದಾನದಲ್ಲಿ ಪೆಂಡಾಲ್, ವೇದಿಕೆ ನಿರ್ಮಾಣ ಸೇರಿದಂತೆ ಬಹುತೇಕ ಸಿದ್ಧತೆಗಳು ಅಂತಿಮ ಹಂತ ತಲುಪಿವೆ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ …

Read More »

ಅಮಿತಾಭ್ ಬಚ್ಚನ್ ಗೆ ಭಾರತ ರತ್ನ ಪ್ರಶಸ್ತಿ ನೀಡಿ ಎಂದು
ಮಮತಾ ಬ್ಯಾನರ್ಜಿ ಮನವಿ

ಬಾಲಿವುಡ್‌ನಲ್ಲಿ ನಟ ಅಮಿತಾಭ್ ಬಚ್ಚನ್ ಅವರ ಕಲಾಸೇವೆಯನ್ನ ಗುರುತಿಸಿ ಅವರಿಗೆ `ಭಾರತ ರತ್ನ ಪ್ರಶಸ್ತಿ’ ನೀಡಿ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.ಹಿಂದಿ ಚಿತ್ರರಂಗಕ್ಕೆ ಅಮಿತಾಭ್ ಅವರ ಕಲಾಸೇವೆಯ ಕೊಡುಗೆ ಅಪಾರ. ಪಾತ್ರಗಳೇ ಜೀವ ತುಂಬಿ ನಟಿಸುವ ಮಹಾನ್ ನಟನಿಗೆ ಭಾರತ ರತ್ನ ಪ್ರಶಸ್ತಿ ಕೊಡಬೇಕು ಎಂಬುದು ಕೆಲವು ವರ್ಷಗಳಿಂದ ಕೇಳಿ ಬರುತ್ತಿರುವ ಬಹುದೊಡ್ಡ ಬೇಡಿಕೆ. ಇದೀಗ ಮತ್ತೆಬಿಗ್ ಬಿ ಕಲಾಸೇವೆಯನ್ನ ಗುರುತಿಸಿ, ಭಾರತ ರತ್ನ …

Read More »

ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಗುವಾಹಟಿ: ಇನ್ನೆರಡು ತಿಂಗಳುಗಳಲ್ಲಿ ಚುನಾವಣೆ ಎದುರಿಸಲಿರುವ ಈಶಾನ್ಯ ರಾಜ್ಯಗಳಾದ ತ್ರಿಪುರಾ, ಮೇಘಾಲಯಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಈ ಭಾಗದಲ್ಲಿ 6,800 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಯೋಜನೆಗಳ ಉದ್ಘಾಟನೆ, ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿದ್ದಾರೆ. ಉದ್ಘಾಟನೆಯಾಲಿರುವ ಈ 6,800 ಕೋಟಿ ರೂಪಾಯಿಯ ಯೋಜನೆಗಳಲ್ಲಿ ವಸತಿ, ರಸ್ತೆ, ಕೃಷಿ, ದೂರಸಂಪರ್ಕ, ಐಟಿ, ಪ್ರವಾಸೋದ್ಯಮ ಮತ್ತು ಆತಿಥ್ಯ ಸೇರಿದಂತೆ ಹಲವು ಕ್ಷೇತ್ರಗಳು ಒಳಗೊಳ್ಳಲಿವೆ. ಪ್ರಧಾನಿ ಮೋದಿ …

Read More »

ಪುಡಿ ರೌಡಿಗಳ ಅಟ್ಟಹಾಸ : ವ್ಯಾಪಾರಿಗಳ ಮೇಲೆ ಹಲ್ಲೆಗೆ ಯತ್ನ

ಬೆಂಗಳೂರು: ಪುಡಿ ರೌಡಿಗಳ ಅಟ್ಟಹಾಸ ಮುಂದುವರೆದಿದೆ. ಹಫ್ತಾ ನೀಡದ ಕಾರಣ ವ್ಯಾಪಾರಿಯ ಮೇಲೆ ಲಾಂಗ್ ಬೀಸಿದ್ದಾರೆ. ಮೀನು ವ್ಯಾಪಾರಿ ಮೇಲೆ ಲಾಂಗ್ ಬೀಸಿ ಹಲ್ಲೆಗೆ ಯತ್ನಿಸಲಾಗಿದೆ. ಬಾಣಸವಾಡಿಯ ಜೈಭಾರತ್ ನಗರದಲ್ಲಿ ಘಟನೆ ನಡೆದಿದೆ. ಸುರೇಶ್ ಎಂಬಾತ ಹಫ್ತಾ ಕೇಳಿದ್ದು, ಕೊಡದ ಕಾರಣ ಲಾಂಗ್ ಬೀಸಿ ಆತನನ್ನು ಬೆದರಿಸಿ ಪುಡಿರೌಡಿಗಳು ಪುಂಡಾಟಿಕೆ ಮೆರೆದಿದ್ದಾರೆ. ನಿನ್ನೆ ರಾತ್ರಿ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನೆಯ ದೃಶ್ಯಗಳು ಸಿಸಿ ಟಿವಿ ಕ್ಯಾಮರಾದಲ್ಲಿ …

Read More »