ಬೆಂಗಳೂರು: ಬನ್ನೇರುಘಟ್ಟ ಸಮೀಪದ ಹೊಮ್ಮದೇವನಹಳ್ಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಜೆರೊ ಕಾರು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಕಬಾಬ್ ಸೆಂಟರ್‌ಗೆ ನುಗ್ಗಿದೆ. ಕಳೆದ ತಿಂಗಳ 30ರಂದು ನಡೆದ ಘಟನೆಯಲ್ಲಿ ಬಿಸಿ ಎಣ್ಣೆ ಮೈಮೇಲೆ ಬಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಜೀನಾ ಬೇಗಂ ಚಲಾಯಿಸುತ್ತಿದ್ದ ಕಾರು ಅತಿವೇಗವಾಗಿ ಬಂದು ಬೈಕ್‌ಗಳಿಗೆ ಡಿಕ್ಕಿ ಹೊಡೆದು ಅಂಗಡಿಗೆ ನುಗ್ಗಿದೆ. ಈ ವೇಳೆ ಬಸವರಾಜ್, ಮುನಿಕೃಷ್ಣ ಮತ್ತು ಮಂಜೇಶ್ ಎಂಬುವರಿಗೆ ಸುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ …
Read More »ಬಾಗಲಕೋಟೆ: ಲಾಭದ ಆಮಿಷವೊಡ್ಡಿ ವೈದ್ಯರಿಬ್ಬರಿಗೆ ₹1.70 ಕೋಟಿ ವಂಚನೆ
ಬಾಗಲಕೋಟೆ: ಷೇರು ಮಾರುಕಟ್ಟೆ, ಐಪಿಒ ಹಾಗೂ ಬಿಟ್‌ಕಾಯಿನ್‌ನಲ್ಲಿ ಹೂಡಿಕೆ ಹೆಸರಿನಲ್ಲಿ ಇಳಕಲ್‌ನ ಮಕ್ಕಳ ವೈದ್ಯ ಹಾಗೂ ಜಮಖಂಡಿಯ ವೈದ್ಯರಿಗೆ ಒಟ್ಟು ₹1.70 ಕೋಟಿ ವಂಚಿಸಲಾಗಿದೆ. ವಾಟ್ಸ್‌ಆ್ಯಪ್ ಮತ್ತು ಟೆಲಿಗ್ರಾಂ ಗುಂಪುಗಳ ಮೂಲಕ ಹೆಚ್ಚಿನ ಲಾಭದ ಆಮಿಷವೊಡ್ಡಿ ಹಣ ವರ್ಗಾಯಿಸಿಕೊಂಡು ಮೋಸ ಮಾಡಲಾಗಿದೆ. ಇದಲ್ಲದೆ, ರಬಕವಿ-ಬನಹಟ್ಟಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೂಡಿಕೆ ಹೆಸರಿನಲ್ಲಿ ₹10.31 ಲಕ್ಷ ವಂಚಿಸಲಾಗಿದೆ. ವೆಬ್‌ಸೈಟ್ ಲಿಂಕ್ ಮೂಲಕ ಸಂಪರ್ಕಿಸಿ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿಕೊಂಡಿದ್ದಾರೆ. ನಗರದ …
Read More »ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ
ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಚೇರಿಯಲ್ಲಿ ಹಣ ಪಡೆಯುವಾಗ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ. ಇನ್ನೊಂದೆಡೆ, ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಉಪ ಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಸಿದ್ದಾರೆ. ಬೆಳಗಾವಿಯ ವಿವಿಧ ಸರ್ಕಾರಿ ಕಚೇರಿ ಹಾಗೂ ವಸತಿ ಶಾಲೆಗಳಿಗೆ ಭೇಟಿ ನೀಡಿ …
Read More »ಆನೇಕಲ್ ಗುಜರಿ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ: ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಭಸ್ಮ
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಣಿ ಸಮೀಪದ ಕುಂಬಾರನಹಳ್ಳಿಯ ಗುಜರಿ ಗೋದಾಮಿನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಪ್ಲಾಸ್ಟಿಕ್, ಕಾಗದ ಸೇರಿದಂತೆ ಅಪಾರ ಪ್ರಮಾಣದ ಗುಜರಿ ವಸ್ತುಗಳು ಸುಟ್ಟು ಭಸ್ಮವಾಗಿವೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿವೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಲವು ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ …
Read More »ರಾಜಧಾನಿಯಲ್ಲೇ, ಹಾಡಹಗಲೇ ಕಚೇರಿಗೆ ನುಗ್ಗಿದ ದುಷ್ಕರ್ಮಿ – ಯುವತಿಗೆ ಚಾಕು ತೋರಿಸಿ ಚಿನ್ನ ಸುಲಿಗೆಗೆ ಯತ್ನ!
ಬೆಂಗಳೂರು: ನಗರದ ದೊಮ್ಮಲೂರಿನ 100 ಅಡಿ ರಸ್ತೆಯ ಕಚೇರಿಗೆ ನುಗ್ಗಿದ ಪ್ರಭುರಾಜ್ ಎಂಬಾತ ಯುವತಿಯ ಕುತ್ತಿಗೆಗೆ ಚಾಕು ಹಿಡಿದು ಚಿನ್ನಾಭರಣ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಚಿನ್ನ ನೀಡದಿದ್ದರೆ ಕೊಲೆ ಮಾಡುವುದಾಗಿ ಬೆದರಿಸಿ, ಯುವತಿಯನ್ನು ಕಚೇರಿಯಿಂದ ಹೊರಗೆ ಎಳೆಯಲು ಯತ್ನಿಸಿದ್ದಾನೆ. ಯುವತಿಯ ಚೀರಾಟ ಕೇಳಿದ ಕಚೇರಿ ಸಿಬ್ಬಂದಿ ಹಾಗೂ ಸ್ಥಳೀಯರು ಧೈರ್ಯದಿಂದ ಆರೋಪಿಯನ್ನು ಸುತ್ತುವರಿದು ಹಿಡಿದಿದ್ದಾರೆ. ಬಳಿಕ ಆತನ ಕೈಯಲ್ಲಿದ್ದ ಚಾಕುವನ್ನು ಕಸಿದುಕೊಂಡಿದ್ದಾರೆ. ಆರೋಪಿಯನ್ನು ಇಂದಿರಾನಗರ ಪೊಲೀಸರಿಗೆ ಒಪ್ಪಿಸಲಾಗಿದ್ದು, ಪೊಲೀಸರು ಬಂಧಿಸಿ …
Read More »ಕಲಬುರಗಿ ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಮೇಲೆ ಮಾರಣಾಂತಿಕ ಹಲ್ಲೆ: ಮದ್ಯ ತರಲು, ಹಣ ನೀಡಲು ಕಿರುಕುಳ ಆರೋಪ
ಕಲಬುರಗಿ: ಹಾಸ್ಟೆಲ್‌ನಲ್ಲಿ ಮದ್ಯ ತಂದುಕೊಡುವಂತೆ ಹಾಗೂ 30 ಸಾವಿರ ರೂ. ನೀಡುವಂತೆ ಒತ್ತಾಯಿಸಿ ವಿದ್ಯಾರ್ಥಿಯ ಮೇಲೆ ಸಹವಿದ್ಯಾರ್ಥಿಗಳೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಕಲಬುರಗಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದಲ್ಲಿ ಈ ಘಟನೆ ನಡೆದಿದೆ. ಚಿತ್ತಾಪುರದ ಸುಮಿತ್ ಎಂಬ ವಿದ್ಯಾರ್ಥಿ ಹೆಚ್‌ಕೆಎಸ್ ಪಾಲಿಟೆಕ್ನಿಕ್‌ನಲ್ಲಿ ಡಿಪ್ಲೊಮಾ ಓದುತ್ತಿದ್ದ. ಹಣ ನೀಡಲು ನಿರಾಕರಿಸಿದ್ದಕ್ಕೆ ರೋಷನ್, ಶರಣು ಸೇರಿದಂತೆ ಐವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಮಗನ ಸ್ಥಿತಿ …
Read More »ನಕಲಿ ಔಷಧ ಜಾಲ ಪತ್ತೆ : ಬೆಂಗಳೂರಿನ 5 ಕಡೆ ‘ED’ ದಾಳಿ : ಆರೋಪಿ ವೀರೇಶ್ ಬ್ಯಾಂಕ್ ಖಾತೆ ಫ್ರೀಜ್!
ಬೆಂಗಳೂರು: ನಕಲಿ ಔಷಧಿ ತಯಾರಿಕೆ ಮತ್ತು ಮಾರಾಟ ಜಾಲದ ವಿರುದ್ಧ ಇಡಿ ಅಧಿಕಾರಿಗಳು ಬೆಂಗಳೂರು ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಯ 5 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರಮುಖ ಆರೋಪಿ ವೀರೇಶ್ ಕುಮಾರ್‌ನ ಬ್ಯಾಂಕ್ ಖಾತೆ ಫ್ರೀಜ್ ಮಾಡಿ, 9 ಲಕ್ಷ ರೂ. ಜಪ್ತಿ ಮಾಡಿದ್ದಾರೆ. ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ನಕಲಿ ಔಷಧಿಗಳನ್ನು ತಯಾರಿಸಿ, ಮರುಪ್ಯಾಕಿಂಗ್ ಮಾಡಲಾಗುತ್ತಿತ್ತು. ಸಾಮಾನ್ಯ ಔಷಧಿಗಳಿಗೆ ಫಿಜರ್ ಕಂಪನಿಯ ದುಬಾರಿ …
Read More »ಮದ್ದೂರಲ್ಲಿ ಗಲಾಟೆ ಬಿಡಿಸಲು ಹೋದವನ ಮೇಲೆ ಮಾರಕಾಸ್ತ್ರಗಳಿಂದ ದಾಳಿ: ಅಮಾಯಕ ಯುವಕ ಬಲಿ!
ಮದ್ದೂರು ಪಟ್ಟಣದ ಸಿದ್ಧಾರ್ಥ ನಗರದಲ್ಲಿ ಹಣದ ವಿಚಾರವಾಗಿ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದ ನಂದನ್ (25) ಎಂಬ ಯುವಕನನ್ನು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಲಾಗಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದೆ. ಕೆಲಸದ ಹಣದ ವಿಚಾರವಾಗಿ ರಘು ಮತ್ತು ಪ್ರಕಾಶ್ ನಡುವೆ ಗಲಾಟೆ ನಡೆದಿತ್ತು. ಇದನ್ನು ಬಿಡಿಸಲು ಹೋದ ನಂದನ್ ಮೇಲೆ ಆರೋಪಿಗಳು ತಿರುಗಿಬಿದ್ದಿದ್ದು, ಶಿವರಾಜು ಎಂಬಾತ ಡ್ರ್ಯಾಗನ್ ಮಾದರಿಯ ಮಾರಕಾಸ್ತ್ರದಿಂದ ಕುತ್ತಿಗೆಗೆ ಇರಿದಿದ್ದಾನೆ ಎನ್ನಲಾಗಿದೆ. ತೀವ್ರ ರಕ್ತಸ್ರಾವದಿಂದ ನಂದನ್ …
Read More »ಖಾಸಗಿ ಜಾಗದಲ್ಲಿ ರಸ್ತೆ ನಿರ್ಮಾಣ ಪ್ರಶ್ನಿಸಿದ್ದಕ್ಕೆ ಹಲ್ಲೆ-
ಬೆಂಗಳೂರು ಉತ್ತರ ತಾಲೂಕಿನ ಕಾಡಸೊಣ್ಣಪನಹಳ್ಳಿ ಗ್ರಾಮದಲ್ಲಿ ಖಾಸಗಿ ಜಮೀನಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದನ್ನು ಪ್ರಶ್ನಿಸಿದ ಕುಟುಂಬದವರ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ. ಮಾರುತಿ ಎಂಬುವರಿಗೆ ಸೇರಿದ ಜಮೀನಿನಲ್ಲಿ ನಗರಗಿರಿ ಟೌನ್‌ಶಿಪ್ ಯೋಜನೆಗಾಗಿ ಜೆಸಿಬಿ ಮೂಲಕ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿತ್ತು. ಇದನ್ನು ಪ್ರಶ್ನಿಸಿದ ಮಾರುತಿ ಹಾಗೂ ಅವರ ಕುಟುಂಬದ ಮಹಿಳೆಯರು, ವೃದ್ಧರು ಸೇರಿದಂತೆ ಹಲವರ ಮೇಲೆ ಗುಂಪು ಹಲ್ಲೆ ನಡೆಸಿದೆ. ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ನಿಮ್ಹಾನ್ಸ್ ಆಸ್ಪತ್ರೆಯಲ್ಲಿ …
Read More »ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!
ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಕಾರ್ಮಿಕರ ವಾಸ್ತವ್ಯಕ್ಕಾಗಿ ನಿರ್ಮಿಸಿದ್ದ 20ಕ್ಕೂ ಹೆಚ್ಚು ತಾತ್ಕಾಲಿಕ ಶೆಡ್‌ಗಳು ಸುಟ್ಟು ಭಸ್ಮವಾಗಿವೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಬೆಂಕಿ ಶೆಡ್‌ಗಳಿಗೆ ವ್ಯಾಪಿಸಿದ್ದು, ಒಳಗಿದ್ದ ದಿನಬಳಕೆಯ ವಸ್ತುಗಳು ಸುಟ್ಟುಹೋಗಿವೆ. ಘಟನೆಯ ವೇಳೆ ಬಹುತೇಕ ಕಾರ್ಮಿಕರು ಕೆಲಸಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಗಾಯಗಳು ಸಂಭವಿಸಿಲ್ಲ. ಮಾಹಿತಿ ತಿಳಿದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





