Breaking News

BigTv News

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನೂ 2 ದಿನ ಭಾರೀ ಮಳೆಯಾಗಲಿದ್ದು, 10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ,ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. …

Read More »

ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ದರಾಮಯ್ಯ ಭರ್ಜರಿ ಸಿದ್ಧತೆ

ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚುನಾವಣೆಗೆ ಭರ್ಜರಿ ಸಿದ್ಧತೆ ಕೈಗೊಂಡಿದ್ದು, ರಾಜ್ಯದ 224 ಕ್ಷೇತ್ರಗಳಲ್ಲಿ ಬಸ್ ಯಾತ್ರೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ. ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಯಶಸ್ಸಿನ ಬೆನ್ನಲ್ಲೇ ಸಿದ್ದರಾಮಯ್ಯ ಅವರು ರಥಯಾತ್ರೆಗೆ ಪ್ಲ್ಯಾನ್ ನಡೆಸಿದ್ದಾರೆ ಎನ್ನಲಾಗಿದ್ದು, ಇದಕ್ಕಾಗಿ ವಿಶೇಷ ವಾಹನವೂ ತಯಾರಾಗುತ್ತಿದೆ. ರಥಯಾತ್ರೆ ಮೂಲಕ ಸಿದ್ದರಾಮಯ್ಯ ಅವರು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಸಂಚಾರ ಮಾಡಿ ಈ …

Read More »

ಆಟೋ ಚಾಲಕರಲ್ಲಿಯೂ ಅಡಗಿದೆ ಪ್ರಾಮಾಣಿಕತೆ…!

ಹುಬ್ಬಳ್ಳಿ: ಆಟೋ ಚಾಲಕರು ಎಂದರೇ ಸ್ವಲ್ಪ ದೂರ ಸಂಚಾರ ಮಾಡಲು ಸಾಕಷ್ಟು ದುಡ್ಡು ಕೇಳುತ್ತಾರೆ ಎಂಬುವಂತ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿ ಬರುವುದು ಸಹಜ. ಆದರೆ ಖಾಕಿ ತೊಟ್ಟು ಆಟೋ ಚಾಲನೆ ಮಾಡುವ ಚಾಲಕರಲ್ಲಿಯೂ ಒಬ್ಬ ಸಹೃದಯಿ ಸೇವಕ ಇರುತ್ತಾನೆ ಎಂಬುವಂತ ಮಾತು ಅಕ್ಷರಶಃ ಸತ್ಯ. ಚೆನ್ನಮ್ಮ ವೃತ್ತದಿಂದ ಆಟೋ ಹತ್ತಿದ ಪ್ರಯಾಣಿಕರು ಅರವಿಂದನಗರದಲ್ಲಿ ಇಳಿಯುವಾಗ ತಮ್ಮ ಬ್ಯಾಗವೊಂದನ್ನು ಬಿಟ್ಟು ಹೋಗಿದ್ದರು. ಬ್ಯಾಗಿನಲ್ಲಿ ಲಕ್ಷಾಂತರ ಮೌಲ್ಯದ ಆಭರಣಗಳು ಕೂಡ ಇದ್ದವು. …

Read More »

ಜನೇವರಿ ಮೊದಲ ವಾರದಲ್ಲಿ ಪ್ರಧಾನಿ ಮೋದಿ ಧಾರವಾಡಕ್ಕೆ ಐಐಟಿ ಕೇಂದ್ರ ಉದ್ಘಾಟನೆ: ಜೋಶಿ

ಧಾರವಾಡ: ಧಾರವಾಡ ತಾಲೂಕಿನ ಮುಮ್ಮಿಗಟ್ಟಿ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಐಐಟಿ ಕೇಂದ್ರದ ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಶನಿವಾರ ವೀಕ್ಷಣೆ ಮಾಡಿದರು. ಧಾರವಾಡದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭೆಯ ಪದವಿ ಪ್ರದಾನ ಸಮಾರಂಭ ಮುಗಿಸಿಕೊಂಡು ನೇರವಾಗಿ ಐಐಟಿ ಕೇಂದ್ರಕ್ಕೆ ಭೇಟಿ ನೀಡಿದ ಜೋಶಿ, ಅಲ್ಲಿನ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು. ಅಲ್ಲದೇ ಜನೇವರಿ 1ನೇ ತಾರೀಖಿಗೆ ಕಾಮಗಾರಿ ಪೂರ್ಣಗೊಳಿಸಿ ರೆಡಿ ಇಟ್ಟುಕೊಳ್ಳಬೇಕು ಎಂದು ಸೂಚನೆ ನೀಡಿದರು ನಂತರ ಸುದ್ದಿಗಾರರೊಂದಿಗೆ ಮಾತನಾಡಿ, …

Read More »

ರಾಜ್ಯದಲ್ಲಿಯೂ ಗುಜರಾತ್ ಮಾದರಿ ಚುನಾವಣೆಗೆ ನನ್ನ ಆಗ್ರಹವಿದೆ : ಸಚಿವ ಜೋಶಿ

ಧಾರವಾಡ:ಕರ್ನಾಟಕದಲ್ಲಿಯೂ ಗುಜರಾತ್ ಮಾದರಿ ಚುನಾವಣೆ ಮಾಡಲು ನಮ್ಮ ಆಗ್ರಹ ಇದ್ದೇ ಇದೆ. 8 ವರ್ಷಗಳಿಂದ ನಾನು ಪ್ರಧಾನಿಗಳ ಜೊತೆ ಕೆಲಸ ಮಾಡಿದ್ದೇನೆ, ಗುಜರಾತ್ ಮಾದರಿ ಚುನಾವಣೆ ಒಳ್ಳೆಯ ಸಂಗತಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಸಚಿವ ಜೋಶಿ, ಟಿಕೆಟ್ ನೀಡುವುದರ ಬಗ್ಗೆ ನಾನು ಈಗಲೇ ಹೇಳುವುದಿಲ್ಲ, ಯಾವಾಗ ಟಿಕೆಟ್ ಹಂಚುವ ಸಂದರ್ಭ ಬರುತ್ತದೆಯೋ ಆವಾಗ ನೋಡೋಣ. ನಡೆ, ನುಡಿ, ಬದ್ಧತೆ ಆಧಾರದಲ್ಲಿಯೇ ಪಕ್ಷ ಅಭ್ಯರ್ಥಿಗಳನ್ನು …

Read More »

ಬೀದಿ ಬದಿ ವ್ಯಾಪಾರಸ್ಥರ ಅತಿಕ್ರಮಣ ತೆರವು ಹೆಸರಿನಲ್ಲಿ ಬೇಕಾಬಿಟ್ಟಿ ಎತ್ತಂಗಡಿ

ಹುಬ್ಬಳ್ಳಿ: ಬೀದಿ ಬದಿ ವ್ಯಾಪಾರಸ್ಥರು ಬದಕುವ ಹಕ್ಕನ್ನು ಹೊಂದಿದ್ದು, ಅತಿಕ್ರಮಣ ತೆರವು ಹೆಸರಿನಲ್ಲಿ ಬೇಕಾಬಿಟ್ಟಿ ಎತ್ತಂಗಡಿ ಮಾಡಲಾಗುತ್ತಿದೆ ಎಂದು ನೆಟವರ್ಕ್ ಅಸೋಸಿಯೇಷನ್ ಸ್ಟ್ರೀಟ್ ಆಫ್ ಕರ್ನಾಟಕ ರಾಜಾಧ್ಯಕ್ಷ ರಿಯಾಜ್ ಡಲಾಯತ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ೨೭೭ ಸ್ಥಳೀಯ ಸಂಸ್ಥೆಗಳು ಇದ್ದು, ಪಟ್ಟಣ ವೆಂಡಿಂಗ್ ಕಮಿಟಿಯಲ್ಲಿ ಚರ್ಚಿಸಿ ವ್ಯಾಪಾರಸ್ಥರ ತೆರವು ಹಾಗೂ ಸ್ಥಳಾಂತರ ಬಗ್ಗೆ ಕ್ರಮ ಕೈಗೊಳ್ಳಬೇಕು ಆದರೇ ಅಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅದನ್ನು ಉಲ್ಲಂಘನೆ ಮಾಡಲಾಗುತ್ತುದೆ ಎಂದು …

Read More »

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

ಕಲಬುರಗಿ: ತಾಲೂಕಿನ ಮರಗುತ್ತಿ ಗ್ರಾಮಕ್ಕೆ ಹೊಂದಿಕೊಂಡಿರುವ ಎಂ.ಎಂ.ಗಾರ್ಡನ್ ಬಳಿ ಶುಕ್ರವಾರ(ಡಿ.9) ತಡರಾತ್ರಿ ವ್ಯಕ್ತಿಯೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೊಲೆಯಾದವ ಮಾಲಗತ್ತಿ ನಿವಾಸಿ ಸಚಿನ್ ಬಸವರಾಜ್ ಅಂಬಲಗಿ(35) ಎಂದು ಗುರುತಿಸಲಾಗಿದೆ. ಈತ ಮಾಲಗತ್ತಿಯ ಎಂ.ಎಂ.ಗಾರ್ಡನ್ ಬಳಿಯಲ್ಲಿ ದುಷ್ಕರ್ಮಿಗಳ ಮಾರಕಾಸ್ತ್ರಗಳಿಂದ ಹತನಾಗಿದ್ದಾನೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಕೊಲೆಗಾರರಿಗಾಗಿ ಹುಡುಕಾಟ ನಡೆದಿದೆ ಎಂದು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಸಿಪಿಐ ಅರುಣ ಮುರಗೊಂಡಿ ತಿಳಿಸಿದ್ದಾರೆ.ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ …

Read More »

ಮಾಂಡೌಸ್ ಚಂಡಮಾರುತ : 16 ವಿಮಾನಗಳ ಹಾರಾಟ ರದ್ದು

ಹೊಸದಿಲ್ಲಿ: ಮಾಂಡೌಸ್ ಚಂಡಮಾರುತದಿಂದ ಚೆನ್ನೈನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, 16 ವಿಮಾನಗಳ ಹಾರಾಟ ರದ್ದು ಮಾಡಲಾಗಿದೆ. ಮಾಂಡೌಸ್ ಚಂಡಮಾರುತದ ಅಬ್ಬರಕ್ಕೆ ಉತ್ತರ ತಮಿಳುನಾಡು ಮತ್ತು ಪುದುಚೇರಿ ನಡುವೆ 70 ಕಿ.ಮೀ ವೇಗದಲ್ಲಿ ಬೀಸುತ್ತಿರುವ ಗಾಳಿಯೊಂದಿಗೆ ಚೆನ್ನೈನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಿದೆ. ಶುಕ್ರವಾರ ಸಂಜೆಯಿಂದ ತಮಿಳುನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ತಮಿಳುನಾಡಿನ ಕೆಲವು ಭಾಗಗಳು ಜಲಾವೃತಗೊಂಡಿವೆ. ಕೆಟ್ಟ ಹವಾಮಾನದ ಕಾರಣ ದಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ 16 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಇವುಗಳಲ್ಲಿ …

Read More »


ಹಾಸನದಲ್ಲಿ ಕಾಡಾನೆಗಳ ಹಾವಳಿ : ಜನರಲ್ಲಿ ಆತಂಕ

ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ. ಇದೀಗ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ಆರೇಹಳ್ಳಿಯ ಗ್ರಾಮದ ಪ್ರಮುಖ ರಸ್ತೆಯಲ್ಲಿ ಒಂಟಿ ಸಲಗ ಓಡಾಡುತ್ತಿದ್ದು. ಕಾಡಾನೆ ಓಡಾಟದ ವಿಡಿಯೋ ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ನಾಡಿಗೆ ಬರಲು ಪ್ರಾರಂಭಿಸಿವೆ. ಇದರಿಂದ ಜನರು ಹೊರಗಡೆ ಬರುವುದು ಕೂಡ ಕಷ್ಟವಾಗಿದೆ. ಹೀಗಾಗಿ ಅರಣ್ಯ ಅಧಿಕಾರಿಗಳಿಗೆ …

Read More »

ಪೋಲಿಸ್ ರು ವಕೀಲರ ಮೇಲೆ ಹಲ್ಲೆ ಖಂಡಿಸಿ ಪ್ರತಿಭಟನೆ

ಮೈಸೂರು; ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಇತ್ತೀಚೆಗೆ ವಕೀಲರ ಮೇಲೆ ಹಲ್ಲೆ ನಡೆಸಿರುವುದನ್ನು ಖಂಡಿಸಿ ಮಂಡ್ಯದ ಬಾರ್ ಅಸೋಸಿಯೇಷನ್ ಸದಸ್ಯರು ಶುಕ್ರವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಮಂಡ್ಯದ ಸಂಜಯ್ ವೃತ್ತದಲ್ಲಿ ಜಮಾಯಿಸಿದ ವಕೀಲರು ಮಾನವ ಸರಪಳಿ ರಚಿಸಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪೊಲೀಸ್ ಇಲಾಖೆ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ರಾಜೇಂದ್ರ ವಕೀಲ್, ವಕೀಲರ ವಿರುದ್ಧ …

Read More »