Breaking News

BigTv News

ಸಾರ್ವಜನಿಕ ಶಾಂತಿ ನೆಮ್ಮದಿಗೆ ಧಕ್ಕೆ ತಂದ ಮೂವರು ಬಸ್ ಚಾಲಕರ ಬಂದನ್

ಬಂಟ್ವಾಳ: ವಿಟ್ಲದ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ ಶಾಂತಿ ನೆಮ್ಮದಿಗೆ ಧಕ್ಕೆ ತಂದ ಮೂವರು ಬಸ್ ಚಾಲಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಚಿಂತನ್, ಹೊನ್ನಯ್ಯ, ಯತಿರಾಜ್ ಎಂದು ಗುರುತಿಸಲಾಗಿದೆ. ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ವಿಟ್ಲ ಖಾಸಗಿ ಬಸ್ಸ್ ನಿಲ್ದಾಣದಲ್ಲಿದ್ದ ಮೂವರು ಬಸ್ ಚಾಲಕರನ್ನು ಸಾರ್ವಜನಿಕ ಸ್ಥಳವಾದ ಬಸ್ ತಂಗುದಾಣದಲ್ಲಿ ಪರಸ್ಪರ ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ಬೈದಾಡಿಕೊಂಡು ಕೈಯಿಂದ ದೂಡಾಡಿಕೊಂಡು ಸಾರ್ವಜನಿಕ …

Read More »

ಮಹಾರಾಷ್ಟ್ರ ಗಡಿ ವಿವಾದ : ಕೊಲ್ಲಾಪುರ ಅಗಂಡಿಗಳು ಬಂದ್

ಕೊಲ್ಲಾಪುರ : ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿವಾದಕ್ಕೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಲಿದೆ. ಈ ಸಂಬಂಧ ಡಿಸೆಂಬರ್ 14ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ  ಎರಡೂ ರಾಜ್ಯಗಳ ಸಿಎಂ ಜೊತೆ ಸಭೆ ನಡೆಸುವ ಸಾಧ್ಯತೆಗಳಿವೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ , ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ  ಭಾಗಿಯಾಗಲಿದ್ದು, ಎರಡು ರಾಜ್ಯಗಳ ನಡುವೆ ಸೌಹಾರ್ದ ಮೂಡಿಸುವ ಸಂಬಂಧ ಚರ್ಚೆ ನಡೆಯಲಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಕೇಂದ್ರ …

Read More »

ಬೆಂಗಳೂರು ನಗರ ಜಿಲ್ಲಾಧಿಕಾರಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರ

ಬೆಂಗಳೂರು: ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಮೆಟ್ಟಿಲೇರಿದ್ದ ಬೆಂಗಳೂರು ನಗರ ಜಿಲ್ಲಾಧಿಕಾರಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ತಿರಸ್ಕರಿಸಿದೆ. ಮತದಾರರ ದತ್ತಾಂಶ ಕಳ್ಳತನ ಪ್ರಕರಣಕ್ಕೆ ಸಂಬಂಧ ಪೊಲೀಸರು ಸರ್ಕಾರೇತರ ಸಂಸ್ಥೆ ಚಿಲುಮೆಗೆ ಮಾಲೀಕರು ಸೇರಿದಂತೆ 13 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಗೆ ಮೊದಲು ಸಮನ್ಸ್ ನೀಡಲಾಗಿತ್ತು. ಅದೇ ನಿರೀಕ್ಷೆಯಲ್ಲಿದ್ದ ಬೆಂಗಳೂರು ನಗರದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು ನಿರೀಕ್ಷಣಾ ಜಾಮೀನು ಕೋರಿ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಕೆ. …

Read More »

ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್​

ಬೆಂಗಳೂರು: ಐಟಿ ಅಧಿಕಾರಿಗಳು ದಾಖಲಿಸಿದ್ದ ನಾಲ್ಕು ಬೇನಾಮಿ ಆಸ್ತಿ ಪ್ರಕರಣಗಳಲ್ಲಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್​ ಸಿಕ್ಕಿದೆ. ಸುಪ್ರೀಂ ಕೋರ್ಟ್ ಆದೇಶವನ್ನು ಆಧರಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ಜನಾರ್ದನ ರೆಡ್ಡಿ ವಿರುದ್ಧದ ನಾಲ್ಕು ಪ್ರಕರಣಗಳನ್ನು ಕ್ಲೋಸ್ ಮಾಡಿದೆ. 2009ರಲ್ಲಿ ಬೇನಾಮಿ ಆಸ್ತಿ ಗಳಿಕೆ ಮಾಡಿದ ಆರೋಪ ಮೇರೆಗೆ IT ಇಲಾಖೆಯಲ್ಲಿ ದಾಖಲಾಗಿದ್ದ ನಾಲ್ಕು ಪ್ರಕರಣಗಳು 2021ರಲ್ಲಿ ಆದಾಯ ತೆರಿಗೆ ಇಲಾಖೆ ಕೇಸ್​ ದಾಖಲಿಸಿತ್ತು, ಆದ್ರೆ, 2016ರ …

Read More »


ಹವಾಮಾನ ಇಲಾಖೆ ಮಹತ್ವದ  ಮುನ್ಸೂಚನೆ

ಬೆಂಗಳೂರು : ತಮಿಳುನಾಡು-ಆಂಧ್ರಪ್ರದೇಶದ ಕಡಲ ತೀರದಲ್ಲಿ ಚಂಡಮಾರುತ ಎದ್ದಿರುವ ಕಾರಣ ಬೆಂಗಳೂರಿನಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿ ಮಾಂಡೌಸ್‌ ಚೆಂಡಮಾರುತವು ಉತ್ತರ ತಮಿಳುನಾಡು, ಪಾಂಡಿಚೆರಿ, ಆಂಧ್ರಪ್ರದೇಶದ ಶ್ರೀಹರಿಕೋಟಾದ ಕಡಲ ತೀರಗಳಲ್ಲಿ ಚೆಂಡಮಾರುತ ಹಾದು ಹೋಗಲಿದೆ ಎಂದು ಹೇಳಲಾಗಿದೆ. ಚೆಂಡಮಾರುತದ ಪರಿಣಾಮ ಡಿಸೆಂಬರ್‌ 12ರವರೆಗೂ ಬೆಂಗಳೂರಿನಲ್ಲಿ ಮಳೆಯಾಗಲಿದ್ದು ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು …

Read More »

ಜನೆವರಿ ೬ ರಂದು ಕಾಕ್ಟೈಲ್ ಚಿತ್ರ ತೆರೆಗೆ

ಹುಬ್ಬಳ್ಳಿ;ವಿಜಯಲಕ್ಷ್ಮಿ ಕಂಬೈನ್ಸ್ ಬೆಂಗಳೂರು ಕಾಕ್ಟೇಲ್ ಚಲನಚಿತ್ರವು ಜನೆವರಿ ೬ ರಂದು ರಾಜ್ಯಾದ್ಯಂತ ತೆರೆ ಕಾಣಲಿದೆ ಎಂದು ಚಿತ್ರದ ನಿರ್ಮಾಪಕರಾದ ಡಾ. ಶಿವಪ್ಪ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಕ್ಟೈಲ್ ಒಂದು ವಿಭಿನ್ನ ಕಥಾಹಂದರ ಹೊಂದಿರುವ ಒಂದು ಅದ್ಭುತ ಕಥೆಯಾಗಿದ್ದು, ಚಿತ್ರದಲ್ಲಿ ೨ ಹಾಡುಗಳು ಇವೆ.ಬೆಂಗಳೂರು ಸೇರಿದಂತೆ ವಿವಿಧ ಸ್ಥಳಗಳಲ್ಲಿ ಚಿತ್ರದ ಶೂಟಿಂಗ್ ನಡೆದಿದೆ.ಇನ್ನೂ ಚಿತ್ರದಲ್ಲಿ ಬಿರೇನ್ ಕೇಶನ್, ಚರಿಷ್ಮಾ, ಶೋಭರಾಜ್ ಸೇರಿದಂತೆ ಮುಂತಾದ ಗಣ್ಯರು ಚಿತ್ರದಲ್ಲಿ ಅಭಿನಯಿಸಿದ್ದಾರೆ ಎಂದರು. …

Read More »

ಆನೆಗಳ ಹಾವಳಿಗೆ ರೈತರು ಕಂಗಾಲು!

ಕಲಘಟಗಿ : ತಾಲೂಕಿನ ಕೆಲವು ಗ್ರಾಮಗಳಲ್ಲಿ ಸುಮಾರು 2 ತಿಂಗಳಿನಿಂದ ಕಾಡಾನೆಗಳ ಹಾವಳಿಯಿಂದ ರೈತರು ಪರದಾಡುತ್ತಿದ್ದಾರೆ ಬಹುತೇಕ ಗ್ರಾಮಗಳ ಹೊಲಗಳಲ್ಲಿ ಆನೆಗಳ ಹಾವಳಿ ಹೆಚ್ಚಾಗಿದ್ದು, ರೈತರು ಬೆಳೆದ ಕಬ್ಬು, ಮೆಕ್ಕೆಜೋಳ, ಭತ್ತ, ಸೋಯಾಬಿನ್ ಸೇರಿದಂತೆ ಇನ್ನಿತರ ಬೆಳೆಗಳನ್ನ ಸಂಪೂರ್ಣವಾಗಿ ನಾಶ ಮಾಡುತ್ತಿವೆ. ಇದರಿಂದ ರೈತರು ಜೀವ ಭಯದಲ್ಲಿ ಜಮೀನುಗಳಿಗೆ ತೆರಳಿ ಕೆಲಸ ಮಾಡುವಂತಾಗಿದೆ. ಬೆಂಬಿಡದೆ ಕಾಡುತ್ತಿರುವ ಆನೆಗಳ ಹಾವಳಿಯಿಂದ ತಾಲೂಕಿನ ರೈತರು ಬೇಸತ್ತು ಹೋಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆನೆಗಳ ಹಿಂಡನ್ನು …

Read More »

ಎಂಇಎಸ್‌ ವಿರುದ್ಧ ಧಾರವಾಡದಲ್ಲಿ ಕರವೇ ಕಾರ್ಯಕರ್ತರ ಪ್ರತಿಭಟನೆ

ಧಾರವಾಡ: ಪದೇ ಪದೇ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡುತ್ತಿರುವ ಎಂಇಎಸ್‌ ಕಾರ್ಯಕರ್ತರ ವಿರುದ್ಧ ಧಾರವಾಡದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರದ ಮರಾಠಿಗರು ಕರ್ನಾಟಕದ ಬಸ್ಸುಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಲೇ ಇದ್ದಾರೆ. ಕರ್ನಾಟಕದಲ್ಲಿರುವ ಎಂಇಎಸ್ ಗೂಂಡಾಗಳು ಕನ್ನಡಿಗರ ಮೇಲೆಯೇ ದಬ್ಬಾಳಿಕೆ ಮಾಡುತ್ತಿದ್ದಾರೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಎಂಇಎಸ್ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧ ಮಾಡಬೇಕು. ಮಹಾರಾಷ್ಟ್ರದ ಮರಾಠಿಗರು ಎಷ್ಟೇ ದಬ್ಬಾಳಿಕೆ ಮಾಡಿದರೂ …

Read More »

ಕ್ರೀಡಾಪಟುಗಳಿಗೆ ಸಿಹಿ ಸುದ್ದಿ

ಬೆಂಗಳೂರು: ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಸರ್ಕಾರಿ ಉದ್ಯೋಗ ನೀಡುವ ಪ್ರಸ್ತಾವನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಒಲಿಂಪಿಕ್ಸ್, ಪ್ಯಾರಾಲಂಪಿಕ್ಸ್, ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಸರ್ಕಾರ ಬಂಪರ್ ಕೊಡುಗೆ ನೀಡಿದೆ.ಒಲಂಪಿಕ್ಸ್ ಮತ್ತು ಪ್ಯಾರಾಲಂಪಿಕ್ಸ್ ನಲ್ಲಿ ಪದಕ ವಿಜೇತರಿಗೆ ಗ್ರೂಪ್ ಎ ವೃಂದದ ಸರ್ಕಾರಿ ಹುದ್ದೆ ನೀಡಲಾಗುವುದು. ಏಷ್ಯನ್ ಗೇಮ್ಸ್, ಕಾಮನ್ವೆಲ್ತ್ ಗೇಮ್ಸ್ ನಲ್ಲಿ ಪದಕ …

Read More »

ಕುಕ್ಕರ್ ಬಾಂಬ್ ಸ್ಪೋಟ : ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆ ತನಿಖೆ ಹಿನ್ನಡೆ

ಮಂಗಳೂರು : ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಪ್ರಮುಖ ಆರೋಪಿ ಶಾರೀಖ್ ಗೆ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಹಿನ್ನೆಲೆ ತನಿಖೆಗೆ ಭಾರೀ ಹಿನ್ನಡೆಯಾಗಿದೆ. ಕುಕ್ಕರ್ ಬಾಂಬ್ ಸ್ಪೋಟದಿಂದ ಶಾರೀಖ್ ಮೈಗೆ ತೀವ್ರತರಹದ ಸುಟ್ಟ ಗಾಯಗಳಾಗಿದ್ದು, ವೈದ್ಯರಿಂದ ನಿರಂತರ ಚಿಕಿತ್ಸೆ ನಡೆಯುತ್ತಿದೆ. ಶಾರೀಖ್ ಆರೋಗ್ಯ ಸ್ಥಿತಿ ಸುಧಾರಿಸದ ಬಳಿಕ ಆತನನ್ನು ಬೆಂಗಳೂರಿನ ಎನ್ ಐ ಎ ಕಚೇರಿಗೆ ಶಿಫ್ಟ್ ಮಾಡಲು ಸಿದ್ದತೆ ನಡೆಸಲಾಗಿದೆ ಎಂದು …

Read More »