ರಾಜಸ್ಥಾನ: ಜೋಧ್ಪುರದ ಭುಂಗ್ರಾ ಗ್ರಾಮದಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಮದುವೆಗೆ ಬಂದಿದ್ದ 60 ಜನ ಅತಿಥಿಗಳು ಗಾಯಗೊಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದ ನಂತರ ನೀರಿನ ಟ್ಯಾಂಕರ್ ಗಳೊಂದಿಗೆ ಅಗ್ನಿಶಾಮಕ ದಳದ ತಂಡವನ್ನು ಕರೆಸಲಾಗಿದ್ದು, ಬೆಂಕಿ ನಂದಿಸಲಾಗಿದೆ.ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ಪ್ರಕಾರ, ಗುರುವಾರ ಭುಂಗ್ರಾದಿಂದ ವರನ ಮೆರವಣಿಗೆ ಪ್ರಾರಂಭವಾಗುವ ಮೊದಲು …
Read More »ಬಿಜೆಪಿ ನಾಯಕ ಎನ್.ಆರ್.ರಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಲೋಕಾಯುಕ್ತಕ್ಕೆ ದೂರು
ಬೆಂಗಳೂರು: ಕಾಂಗ್ರೆಸ್ ನಾಯಕರು, ಸರಕಾರಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಆಧಾರ ರಹಿತ ದೂರುಗಳನ್ನು ಸಲ್ಲಿಕೆ ಮಾಡುವ ಬಿಜೆಪಿ ನಾಯಕ ಎನ್.ಆರ್.ರಮೇಶ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಲಾಗಿದೆ. ಕೆಪಿಸಿಸಿಯ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಪ್ರಶಾಂತ್ ಅವರು ಲೋಕಾಯುಕ್ತಕ್ಕೆ ದೂರು ಸಲ್ಲಿಕೆ ಮಾಡಿದ್ದು, ಲೋಕಾಯುಕ್ತ ಕಾಯ್ದೆ ಕಲಂ 20ರ ಅಡಿಯಲ್ಲಿ ಮೊಕ್ದಮೆ …
Read More »
ಕಾಂಗ್ರೆಸ್ ಪಕ್ಷ ಡ್ರೈವರ್ ಇಲ್ಲದ ಬಸ್ ತರಹ ಆಗಿದೆ :
ಸಿಎಂ ಇಬ್ರಾಹಿಂ ಲೇವಡಿ
ಕಲಬುರಗಿ : ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿರುವ ಕಾಂಗ್ರೆಸ್ ಪಕ್ಷ, ಡ್ರೈವರ್ ಇಲ್ಲದ ಬಸ್ ತರಹ ಆಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಲೇವಡಿ ಮಾಡಿದರು. ನಗರದ ಐವನ್ ಇ ಶಾಹಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಗುರುನೂ ಇಲ್ಲ, ಗುರಿಯೂ ಇಲ್ಲ. ಪ್ರಾದೇಶಿಕ ಪಕ್ಷಗಳನ್ನು ಕೊಲ್ಲಲು ಸಾಕಷ್ಟು ಪ್ರಯತ್ನ ಮಾಡಿದ ಕಾಂಗ್ರೆಸ್ ಇಂದು ಹೀನಾಯ ಸೋಲು ಅನುಭವಿಸಿದೆ ಎಂದು …
Read More »ಗುಜರಾತ್ ಚುನಾವಣೆ : 156ಕ್ಷೇತ್ರವನ್ನು ಬಾಚಿಕೊಂಡು ಬಿಜೆಪಿ ಭರ್ಜರಿ ಜಯ
ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆ 2022ರಲ್ಲಿ ಬಿಜೆಪಿ ಪಕ್ಷ ಸತತ ಏಳನೇ ಬಾರಿಗೆ ಐತಿಹಾಸಿಕ ಜಯ ಸಾಧಿಸಿದೆ. ರಾಜ್ಯದ ಒಟ್ಟು 182ಕ್ಷೇತ್ರಗಳಲ್ಲಿ ಪೈಕಿ ಬಿಜೆಪಿಯು ಒಟ್ಟು 156ಕ್ಷೇತ್ರವನ್ನು ಬಾಚಿಕೊಂಡು ವಿಜೃಂಭಿಸಿದೆ. ಗುಜರಾತಿನಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ನಿರೀಕ್ಷಿತ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದೆ. ಯಾವ ಎದುರಾಳಿ ಪಕ್ಷ ಪೈಪೋಟಿಗೆ ಸಿಲುಕದೆ ಸರಾಗವಾಗಿ ಜಯ ಭೇಟಿ ಭಾರಿಸಿದೆ. ಗುಜರಾತಿನ ಜನರು ಸಸತವಾಗಿ ಬಿಜೆಪಿ ಏಳನೇ ಭಾರಿ ಬಿಜೆಪಿಯ ಐತಿಹಾಸಿಕ ಕಾರಣರಾಗಿದ್ದಾರೆ. ಈ …
Read More »ಯುವ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್
ಬೆಂಗಳೂರು : ಯುವ ಜನತೆಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಯುವಜನ ಸ್ನೇಹಿ ಅಂಶಗಳುಳ್ಳ ‘ಕರ್ನಾಟಕ ಯುವ ನೀತಿ- 2022’ ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ನಿನ್ನೆ ವಿಧಾನಸೌಧದಲ್ಲಿ ನಡೆದ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕರ್ನಾಟಕ ಯುವ ನೀತಿ- 2022’ ಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಯುವಜನರಿಗೆ ಹಲವು ಪೂರಕ ತರಬೇತಿ ನೀಡುವುದು, ಸ್ವಯಂ ಉದ್ಯೋಗಕ್ಕೆ …
Read More »ಮತದಾರರ ಮಾಹಿತಿ ಕಳವು ಆರೋಪ : ನಿರೀಕ್ಷಣಾ ಜಾಮೀನು ನಿರಾಕರಣೆ
ಬೆಂಗಳೂರು: ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಆರೋಪ ಸಂಬಂಧಿಸಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮತ್ತು ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿಲಕ್ಷ್ಮೀ ಮತ್ತು ಕೆಂಪೇಗೌಡ ಎಂಬುವರಿಗೆ ನಿರೀಕ್ಷಣಾ ಜಾಮೀನು ನೀಡಲು ನಗರದ 66ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಪ್ರಕರಣ ಸಂಬಂಧ ಬಂಧನ ಭೀತಿ ಎದುರಿಸುತ್ತಿರುವ, ಸದ್ಯ ಸೇವೆಯಿಂದ ಅಮಾನತುಗೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮತ್ತು ಚಿಲುಮೆ ಸಂಸ್ಥೆಯ ಸಿಬ್ಬಂದಿಯಾದ ಜ್ಯೋತಿ ಲಕ್ಷ್ಮಿ,ಕೆಂಪೇಗೌಡ ಸಲ್ಲಿಸಿದ್ದ …
Read More »ಆದಾಯ ಮೀರಿ ಆಸ್ತಿ : ಠಾಕ್ರೆ, ಪುತ್ರನ ವಿರುದ್ಧ ತನಿಖೆ
ಮುಂಬೈ: ಆದಾಯ ಮೀರಿದ ಆಸ್ತಿ ಹೊಂದಿರುವ ದೂರಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮತ್ತು ಅವರ ಪುತ್ರನ ವಿರುದ್ಧ ಪ್ರಾಥಮಿಕ ತನಿಖೆ ನಡೆಸಲಾಗಿದೆ ಎಂದು ಮುಂಬೈ ಪೊಲೀಸರು ಗುರುವಾರ ಬಾಂಬೆ ಹೈಕೋರ್ಟ್ಗೆ ತಿಳಿಸಿದ್ದಾರೆ. ನ್ಯಾಯಮೂರ್ತಿಗಳಾದ ಧೀರಜ್ ಠಾಕೂರ್ ಮತ್ತು ವಾಲ್ಮೀಕಿ ಮೆನೆಜೆಸ್ ಅವರಿದ್ದ ದ್ವಿಸದಸ್ಯ ಪೀಠಕ್ಕೆ ಸರ್ಕಾರಿ ಅಭಿಯೋಜಕ ಅರುಣಾ ಕಾಮತ್ ಪೈ ಈ ಮಾಹಿತಿ ನೀಡಿದರು. ಠಾಕ್ರೆ ಕುಟುಂಬದ ವಿರುದ್ಧ ಸಿಬಿಐ ಅಥವಾ ಇ.ಡಿ ತನಿಖೆ ಕೋರಿ …
Read More »ಮಾನನಷ್ಟ ಮೊಕದ್ದಮೆ : ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಗೆ ಜಾಮೀನು
ಚಿಕ್ಕಬಳ್ಳಾಪುರ: ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು ಮಂಗಳವಾರ (ಡಿ.6) ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದಿದ್ದಾರೆ. ಸಚಿವ ಸುಧಾಕರ್ ವಿರುದ್ಧ ಮಾನನಷ್ಟ ಮೊಕದ್ದಮೆ ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ಡಾ.ಕೆ.ಸುಧಾಕರ್ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿದ್ದರು. ಅವರ ನೇಮಕ ಪ್ರಶ್ನಿಸಿ ಆಂಜನೇಯರೆಡ್ಡಿ …
Read More »ದುಶ್ಚಟಗಳ ದಾಸನಾದ ಮಗ – ಸುಪಾರಿ ಕೊಟ್ಟು ಕೊಲೆ ಮಾಡಿಸಿಯೇ ಬಿಟ್ಟ ತಂದೆ..!
ಹುಬ್ಬಳ್ಳಿ : ಒಂದು ಇರುವೆ ಸಹ ಸಾಯಿಸಲು ಸಹ ಬಿಡದ ವಿಶ್ವಕ್ಕೆ ಶಾಂತಿ ಮಂತ್ರ ಕೋರಿದ ಜೈನ್ ಸಮುದಾಯವೇ ತಲೆ ತಗ್ಗಿಸುವಂತೆ, ನಾಗರಿಕ ಸಮಾಜವೇ ನಾಚುವಂತೆ ಸ್ವತಃ ತಂದೆಯೇ ಹೆತ್ತ ಮಗನನ್ನು ಕೊಂದ ಪ್ರಕರಣ ಅಂತಿಮ ಘಟ್ಟ ತಲುಪಿದೆ. ಮಣ್ಣಿನಲ್ಲಿ ಮುಚ್ಚಿಟ್ಟ ಶವದ ಜೊತೆಗೆ ಸತ್ಯವನ್ನು ಹೊರೆಳೆದ ಪೊಲೀಸರು, ಅಂತಿಮ ವಿಚಾರಣೆ ನಡೆಸುತ್ತಿದ್ದಾರೆ. ಆದರೆ ಮಗನನ್ನು ಕಳೆದುಕೊಂಡ ತಾಯಿ ತನ್ನ ಗಂಡ ಹೇಳಿದ ಸುಳ್ಳನ್ನು ಸತ್ಯವೆಂದು ನಂಬಿ, ಇನ್ನೂ ಬಾರದ …
Read More »ಗುಜರಾತ್ ಚುನಾವಣೆ ಫಲಿತಾಂಶ ರಾಜ್ಯದ ಚುನಾವಣೆಗೆ ಬೂಸ್ಟರ್: ಶೆಟ್ಟರ್
ಹುಬ್ಬಳ್ಳಿ: ಗುಜರಾತ್ ರಾಜ್ಯದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತ ಸಿಕ್ಕಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಗುಜರಾತ್ ಹಾಗೂ ಹಿಮಾಚಲ ಪ್ರದೇಶ ಚುನಾವಣೆ ಕುರಿತು ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಗುಜರಾತ್ ರಾಜ್ಯದ ಅಭೂತಪೂರ್ವ ಜಯ ನಿಜಕ್ಕೂ ರಾಜ್ಯದ ಚುನಾವಣೆಗೆ ಬೂಸ್ಟರ್ ಆಗಿ ಪರಿಣಮಿಸುತ್ತದೆ. ಗುಜರಾತ್ ರಾಜ್ಯದ ಜನರು ಭಾರತೀಯ ಜನತಾ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





