ಮೈಸೂರು: ವಿದೇಶಿ ವಿದ್ಯಾರ್ಥಿಯೊಬ್ಬ ನೇಣಿಗೆ ಶರಣಾಗಿದ್ದಾರೆ. ನಗರದ ಗೋಕುಲಂ ಬಡಾವಣೆ ನಿವಾಸಿ ಜೋರ್ಡಾನ್ ದೇಶದ ಕರಕ್ ನಗರದ ನಿವಾಸಿ ಕ್ಯೂಸೆ ಸುಹೇಲ್ ಇಸಾ ಆಲ್ಬಗೇನ್ ಮೃತ ವಿದ್ಯಾರ್ಥಿ. ಬಡಾವಣೆಯ ಮನೆಯಲ್ಲಿ ವಾಸ್ತವ್ಯ ಹೂಡಿದ್ದ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ವಿವಿ ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ
ಧಾರವಾಡ : ಲಾಡ್ಜ್ ನಲ್ಲಿ ಒಂದೇ ಫ್ಯಾನಿಗೆ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ ಜಿಲ್ಲೆಯ ನವಲಗುಂದಲ್ಲಿ ನಡೆದಿದೆ. ಅಶೋಕ ಲಾಡ್ಜ್ನಲ್ಲಿ ಮೂರು ದಿನಗಳಿಂದ ವಾಸವಾಗಿದ್ದ ಪ್ರೇಮಿಗಳಾದ ಕುಮಾರ ತಳವಾರ (22) ಮತ್ತು ದೀಪಾ ಎತ್ತಿನಗುಡ್ಡ (18) ಆತ್ಮಹತ್ಯೆ ಮಾಡಿಕೊಂಡವರು.ಕಳೆದ 3 ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್ನಲ್ಲಿ ಉಳಿದುಕೊಂಡಿದ್ದ ಪ್ರೇಮಿಗಳು ಬುಧವಾರ ಒಂದೇ ಫ್ಯಾನ್ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ …
Read More »ಹನುಮ ಜಯಂತಿ ಆಚರಣೆ : 3 ದಿನ ಮಧ್ಯ ಮಾರಾಟ ನಿಷೇಧ
ಮೈಸೂರು: ರಾಜ್ಯದಲ್ಲಿ ಕಳೆದ ಎರಡು ದಿನಗಳಿಂದ ಹನುಮ ಜಯಂತಿ ಆಚರಣೆ ನಡಯುತ್ತಿದ್ದು, ಹಲವು ಕಡೆಗಳಲ್ಲಿ ವಿಜೃಂಭಣೆಯಿಂದ ಆಚರಣೆ ನಡೆಯುತ್ತಿದೆ. ಈ ಹಿನ್ನಲೆ ಹುಣಸೂರಿನಲ್ಲಿ ಮೂರು ದಿನಗಳ ಕಾಲ ಮಧ್ಯ ಮಾರಾಟವನ್ನು ನಿಷೇಧಿಸಲಾಗಿದೆ. ರಾಜ್ಯದ ಎಲ್ಲೆಡೆಯಲ್ಲಿ ಹನುಮ ಜಯಂತಿ ಆಚರಣೆಯನ್ನು ಆಚರಿಸುತ್ತಿದ್ದು, ಮೈಸೂರಿನ ಹುಣಸೂರಿನಲ್ಲೂ ಕೂಡ ಹನುಮ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಇಂದಿನಿಂದ ಮೂರು ದಿನಗಳವರೆಗೂ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು …
Read More »ಸಚಿವ ಆನಂದ್ ಸಿಂಗ್ ಅವರ ಪುತ್ರಿ ಮದುವೆಯಲ್ಲಿ ಸಿಎಂ ಭಾಗಿ
ವಿಜಯನಗರ: ಸಚಿವ ಆನಂದ್ ಸಿಂಗ್ ಅವರ ಪುತ್ರಿ ವೈಷ್ಣವಿ ಸಿಂಗ್ ಹಾಗೂ ಮಧ್ಯಪ್ರದೇಶ್ ಮೂಲದ ಉದ್ಯಮಿ ಯುವರಾಜ್ ಸಿಂಗ್ ಜಾದೂನ್ ಅವರ ವಿವಾಹ ಸಮಾರಂಭ ನಿನ್ನೆ ರಾಜಸ್ಥಾನದ ರಾಮ್ ಬಾಗ್ ಪ್ಯಾಲೇಸ್ ನಲ್ಲಿ ನಡೆಯಿತು. ಸಿಎಂ ಬಸವರಾಜ್ ಬೊಮ್ಮಾಯಿ, ಶ್ರೀರಾಮುಲು, ಆರ್ ಅಶೋಕ್, ಸೇರಿದಂತೆ ಹಲವು ಗಣ್ಯ ಮಾನ್ಯರು ಮದುವೆ ಸಮಾರಂಭದಲ್ಲಿ ಭಾಗಿಯಾಗಿ ನವ ವಧುವರರಿಗೆ ಆಶೀರ್ವದಿಸಿದರು. ಇದೇ ತಿಂಗಳು 9 ನೇ ತಾರೀಖಿನಂದು ಹೊಸಪೇಟೆಯಲ್ಲಿ ಅರತಕ್ಷತೆ ಕಾರ್ಯಕ್ರಮ ನಡೆಯಲಿದ್ದು, …
Read More »ತುಮಕೂರು ಜಿಲ್ಲೆಯಲ್ಲಿ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ : ಸಿಎಂ
ತುಮಕೂರು : ಮುಂದಿನ ದಿನಗಳಲ್ಲಿ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ. ಇಂದು ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ದಿ ದೃಷ್ಟಿ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ ಎಂದು ಬೊಮ್ಮಾಯಿ ಹೇಳಿದರು. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, …
Read More »ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು : ಸಿಎಂ
ತುಮಕೂರು : ವೈದ್ಯಕೀಯ ಕ್ಷೇತ್ರದ ಎಲ್ಲರೂ ಬಡವರಿಗೆ ಸುಲಭ ದರದಲ್ಲಿ ಚಿಕಿತ್ಸೆ ನೀಡಲು ಯೋಜನೆ ರೂಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಗ್ರಹಿಸಿದರು. ಬುಧವಾರ ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ದೇವಾಲಯ- ಉಚಿತ ನೇತ್ರ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾರಾಯಣ ನೇತ್ರಾಲಯ ಒಂದು ಹೆಜ್ಜೆ ಮುಂದೆ ಹೋಗಿ ಉಚಿತ ಚಿಕಿತ್ಸೆ ನೀಡುತ್ತಿದ್ದಾರೆ. ಇದಕ್ಕಿಂತ ಉದಾಹರಣೆ ಮತ್ತೊಂದಿಲ್ಲ. ಡಾ: ಭುಜಂಗ ಶೆಟ್ಟಿಯವರು ತಮ್ಮ ವೃತ್ತಿ ಯಲ್ಲಿ ಯಶಸ್ವಿಯಾಗಿದ್ದಾರೆ. ಯಶಸ್ಸು …
Read More »ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್
ಬೆಳಗಾವಿ: ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆಕ್ಟೀವ್ ಆಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಟಾಂಗ್ ಕೊಟ್ಟಿದಾರೆ. ಆಖಾಡ ತಯಾರಾಗಿದೆ. ನಾವು ತಯಾರಿದ್ದೇವೆ, ನೀವು ಧುಮುಕಿ. ಚುನಾವಣೆ ಗೆದ್ದ ಮರುದಿನದಿಂದಲೇ ನಾನು ತಯಾರಿ ನಡೆಸಿದ್ದೇನೆ. ಚುನಾವಣೆಗೆ 90 ದಿನ ಇದೆ ಎಂದು ನಾನು ತಯಾರಿ ನಡೆಸಿಲ್ಲ ಎಂದು ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ಪರಾಭವಗೊಳಿಸಲು ರಮೇಶ್ ಜಾರಕಿಹೊಳಿ …
Read More »ಡಿ. . 28 ರಂದು ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ
ಬೆಂಗಳೂರು; ಪುರಾಣ ಪ್ರಸಿದ್ಧ ಘಾಟಿ ಸುಬ್ರಮಣ್ಯ ದೇವಾಲಯ ಬ್ರಹ್ಮರಥೋತ್ಸವಕ್ಕೆ ಸಿದ್ಧವಾಗುತ್ತಿದೆ. ಭಕ್ತರಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆರ್. ಲತಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದ 2022-23ನೇ ಸಾಲಿನ ಬ್ರಹ್ಮರಥೋತ್ಸವದ ಪೂರ್ವಸಿದ್ಧತೆ ಸಭೆ ನಡೆಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಶ್ರೀ ಘಾಟಿ ಸುಬ್ರಮಣ್ಯ ದೇವಾಲಯದಲ್ಲಿ ಬ್ರಹ್ಮರಥೋತ್ಸವ …
Read More »
ಅಂಜನಾದ್ರಿ ಬೆಟ್ಟದಲ್ಲಿ ಸಂಕೀರ್ತನಾ ಯಾತ್ರೆ : ಪೋಲಿಸ್ ಬಂದೋಬಸ್ತ್
ಕೊಪ್ಪಳ : ಡಿಸೆಂಬರ್ 5 ರ ಇಂದು ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟಕ್ಕೆ ತೆರಳಲಿರುವ ಹನುಮ ಮಾಲಾಧಾರಿಗಳು ಆಂಜನೇಯ ದರ್ಶನ ಪಡೆದು ನಂತರ ಮಾಲೆ ವಿಸರ್ಜನೆ ಮಾಡಲಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹಂಪಿ ಆನೆಗುಂದಿಯ ಅಂಜನಾದ್ರಿ ಬೆಟ್ಟಕ್ಕೆ ತೆರಳಲಿರುವ ಹನುಮ ಮಾಲಾಧಾರಿಗಳು ಆಂಜನೇಯ ದರ್ಶನ ಪಡೆದು ನಂತರ ಮಾಲೆ ವಿಸರ್ಜನೆ ಮಾಡಲಿದ್ದಾರೆ.ಈ ಹಿನ್ನೆಲೆ ನಗರದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ …
Read More »
ಗುಜರಾತ್ ವಿಧಾನಸಭಾ ಚುನಾವಣೆಯ : ತಾಯಿ ಆರ್ಶಿರವಾದ ಪಡೆದ ಪ್ರಧಾನಿ
ಹೊಸದಿಲ್ಲಿ: ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಹಂತದಲ್ಲಿ 93 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ ಚಲಾಯಿಸಲಿದ್ದಾರೆ. ಮತದಾನಕ್ಕೆ ರವಿವಾರವೇ ಹುಟ್ಟೂರಿಗೆ ಆಗಮಿಸಿದ ಮೋದಿ 99 ವರ್ಷದ ತಾಯಿಯನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು ಎಂದು ವರದಿ ಮಾಡಿದೆ. ಗುಜರಾತ್ನ 14 ಕೇಂದ್ರ ಮತ್ತು ಉತ್ತರ ಜಿಲ್ಲೆಗಳ 93 ಕ್ಷೇತ್ರಗಳಿಗೆ ಸೋಮವಾರ ಮತದಾನ ನಡೆಯಲಿದೆ. 2017ರ ಚುನಾವಣೆಯಲ್ಲಿ ಬಿಜೆಪಿ 51 ಹಾಗೂ ಕಾಂಗ್ರೆಸ್ 39 ಸ್ಥಾನಗಳನ್ನು ಗೆದ್ದಿದ್ದವು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





