ಬೆಂಗಳೂರು: ಸಹಕಾರ ಸಂಘಗಳ ರೂ1 ಲಕ್ಷ ವರಗಿನ ಸಾಲ ಮನ್ನಾ ಯೋಜನೆಯಲ್ಲಿ ಬಾಕಿ ಇದ್ದ 1.05 ಲಕ್ಷ ರೈತರಿಗೆ ರೂ 553.24 ಕೋಟಿ ಅನುದಾನ ಬಿಡುಗಡೆಗೊಳಿಸಲಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು. ಕೆಂಗೇರಿ ಉಪನಗರದ ಗಣೇಶ ಮೈದಾನದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ, ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳಿ ನಿ, ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ಮಹಾ ಮಂಡಳಿ ನಿ,ಕರ್ನಾಟಕ ರಾಜ್ಯ ಸಹಕಾರ …
Read More »ಡಿ.25 ರಂದು ರಾಜ್ಯದ ಅಂಗನವಾಡಿ, ಪ್ರಾಥಮಿಕ ಶಾಲೆಗಳಲ್ಲಿ NEP ಜಾರಿ : ಬಿ.ಸಿ.ನಾಗೇಶ್
ಮಂಗಳೂರು : ಡಿಸೆಂಬರ್ 25 ರಂದು ರಾಜ್ಯದ 20 ಸಾವಿರ ಅಂಗನವಾಡಿ ಹಾಗೂ 6 ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ತರಲು ಉದ್ದೇಶಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಶಿಕ್ಷಣ ನೀತಿಯಡಿ ರಾಜ್ಯ ಪಠ್ಯಕ್ರಮ ನವೆಂಬರ್ ತಿಂಗಳಾಂತ್ಯಕ್ಕೆ ಬರಲಿದೆ. 1,2 ನೇ ತರಗತಿಗೆ ಎರಡೆರಡು ಪುಸ್ತಕ ಇರುತ್ತದೆ. ಒಂದು ಸಂಖ್ಯಾಶಾಸ್ತ್ರ ವಿಚಾರಗಳನ್ನು ತಿಳಿಸುವಂತಹ ಪುಸ್ತಕವಾದರೆ …
Read More »ಸಿದ್ದರಾಮಯ್ಯ ವಿರುದ್ಧ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ : ವರ್ತೂರು ಪ್ರಕಾಶ್
ಕೋಲಾರ: ಕೋಲಾರ ವಿಧಾನಸಭಾ ಚುನಾವಣೆಯಲ್ಲಿ ನನ್ನ ವಿರುದ್ಧ ಯಾರೇ ಅಭ್ಯರ್ಥಿಯಾದರೂ ಸಹ ನಾನು 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ. ಸಿದ್ದರಾಮಯ್ಯ ಅಥವಾ ಬೇರೆ ಯಾರೇ ಅಭ್ಯರ್ಥಿಯಾದರೂ ಕನಿಷ್ಟ ಆದರೂ ಸಹ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತೇನೆ ಎಂದು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಚುನಾವಣೆಯಲ್ಲಿ ಎಲ್ಲಿ ನಿಲ್ಲಬೇಕು ಎನ್ನುವುದು ಅವರ ಪಕ್ಷದ ಹೈಕಮಾಂಡ್ ನಿರ್ಧಾರ ಮಾಡಬೇಕು. ನಾನು ಬನ್ನಿ …
Read More »
ಬೈಕ್ಗೆ ಕ್ಯಾಂಟರ್ ವಾಹನ ಡಿಕ್ಕಿ : ಸವಾರ ಸಾವು
ವಿಜಯಪುರ : ಬೈಕ್ಗೆ ಹಿಂಬದಿಯಿಂದ ಕ್ಯಾಂಟರ್ ವಾಹನ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಝಳಕಿ ಕ್ರಾಸ್ ಬಳಿ ನಡೆದಿದೆ. ಗುರುರಾಜ್ ಶಿರಶ್ಯಾಡ (32) ಮೃತ ಬೈಕ್ ಸವಾರ ಎಂದು ತಿಳಿದುಬಂದಿದೆ. ಮೃತ ಗುರುರಾಜ್ ಬೈಕ್ನಲ್ಲಿ ಹೋಗುವಾಗ ಹಿಂಬದಿಯಿಂದ ಬಂದ ಕ್ಯಾಂಟರ್ ವಾಹನ ಬೈಕ್ ಡಿಕ್ಕಿಹೊಡೆದಿದ್ದು,ಬೈಕ್ ಸವಾರನ ತಲೆ ಮೇಲೆ ಕ್ಯಾಂಟರ್ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬಳಿಕ ಕ್ಯಾಂಟರ್ ಚಾಲಕ …
Read More »ಲಂಚ ಪ್ರಕರಣ : 5 ವರ್ಷ ಜೈಲು ಶಿಕ್ಷೆ, 50,000 ರೂ. ದಂಡ
ಬೆಂಗಳೂರು: ನಿವೇಶನ ಮಾಲೀಕರಿಗೆ 11-ನಕ್ಷೆ ಖಾತೆ ಮಾಡಿಕೊಡಲು ₹ 1 ಲಕ್ಷ ಲಂಚ ಪಡೆದಿದ್ದ ಪ್ರಕರಣದಲ್ಲಿ ಆನೇಕಲ್ ತಾಲ್ಲೂಕಿನ ಶಾಂತಿಪುರ ಗ್ರಾಮ ಪಂಚಾಯಿತಿಯ ಹಿಂದಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಡಿ. ರಾಮಕೃಷ್ಣಪ್ಪ ಅಪರಾಧಿ ಎಂದು ತೀರ್ಮಾನಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಒಂಬತ್ತನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ, ಐದು ವರ್ಷಗಳ ಜೈಲು ಶಿಕ್ಷೆ ಮತ್ತು ₹ 50,000 ದಂಡ ವಿಧಿಸಿದೆ. ಶಾಂತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೂಡಸಂದ್ರ …
Read More »ಸಂಸದರ ಆರೋಗ್ಯ ವಿಚಾರಿಸಿದ ಸಿಎಂ
ಮಂಗಳೂರು: ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದು, ನಗರದ ಏಜೆ ಆಸ್ಪತ್ರೆಗೆ ಭೇಟಿ ನೀಡಿ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಲೋಕಸಭಾ ಸದಸ್ಯರಾದ ಡಿ.ವಿ. ಸದಾನಂದ ಗೌಡ, ಶಾಸಕರಾದ ಭರತ್ ಶೆಟ್ಟಿ, ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. …
Read More »ಮಿತಿ ಮೀರಿದ ನಕಲಿ ಮತದಾರರ ಹಾವಳಿ : ಅಧಿಕಾರಿಗಳ ವಿರುದ್ಧ ಅಬ್ಬಯ್ಯ ಆಕ್ರೋಶ
ಹುಬ್ಬಳ್ಳಿ: ೧೫ ದಿನಗಳಲ್ಲಿ ನಕಲಿ ಮತದಾರರನ್ನು ಮತದಾರ ಪಟ್ಟಿಯಿಂದ ಕೈ ಬಿಡದೇ ಇದ್ದರೇ ಬಿಎಲ್ಒ (ಬೂತ್ ಲೆವಲ್ ಆಫಿಸರ್) ಮತ್ತು ಚುನಾವಣಾ ವಿಭಾಗದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಅವರು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು. ಅವರು, ಶನಿವಾರ ಆಯುಕ್ತರ ಸಮ್ಮುಖದಲ್ಲಿ ಆಯುಕ್ತರ ಕಚೇರಿಯಲ್ಲಿ ಕರೆದ ಸಭೆಯಲ್ಲಿ ಅಧಿಕಾರಳನ್ನು ತರಾಟೆಗೆ ತೆಗೆದುಕೊಂಡರು. ಪೂರ್ವ ವಿಧಾನ ಸಭಾ ಕ್ಷೇತ್ರದ ವಾರ್ಡ್ ಸಂಖ್ಯೆ ೬೪ರಲ್ಲಿ …
Read More »ಇಂದಿರಾ ಕ್ಯಾಂಟಿನ್ ನಲ್ಲೇ ಇಂದಿರಾ ಜನ್ಮದಿನ
ಧಾರವಾಡ: ಮಾಜಿ ಪ್ರಧಾನಮಂತ್ರಿ ದಿವಂಗತ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯನ್ನು ಧಾರವಾಡದಲ್ಲಿ ವಿಶಿಷ್ಠವಾಗಿ ಆಚರಣೆ ಮಾಡಲಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಇದ್ದಾಗ ಜಾರಿಗೆ ತಂದ ಇಂದಿರಾ ಕ್ಯಾಂಟಿನ್ನಲ್ಲೇ ಕಾಂಗ್ರೆಸ್ ಮುಖಂಡ ನಾಗರಾಜ ಗೌರಿ ನೇತೃತ್ವದಲ್ಲಿ ಇತರ ಕಾಂಗ್ರೆಸ್ ಕಾರ್ಯಕರ್ತರು ದಿವಂಗತ ಇಂದಿರಾ ಗಾಂಧಿ ಅವರ ಜನ್ಮ ದಿನಾಚರಣೆಯನ್ನು ಆಚರಣೆ ಮಾಡಿದ್ದಾರೆ. ಇಂದಿರಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸಿದರು. ನಂತರ ಕಾಂಗ್ರೆಸ್ ಮುಖಂಡರು ಇಂದಿರಾ ಕ್ಯಾಂಟಿನ್ನಲ್ಲೇ ಉಪಹಾರ ಸೇವಿಸಿ, …
Read More »ಬೆಂಕಿ ಅವಘಡದಿಂದ ಹೊತ್ತಿ ಊರಿದ ಹೊಟೆಲ್
ಹುಬ್ಬಳ್ಳಿ : ಬೆಂಕಿ ಅವಘಡದಿಂದ ಹೊತ್ತಿ ಊರಿದ ಹೊಟೆಲ್ ಎಲ್ಲೋರ ಹಾಗೂ ಎಟಿಎಂ ಮಶೀನ್ಹ ಹುಬ್ಬಳ್ಳಿಯ ಜೆಸಿ ನಗರದಲ್ಲಿ ನಿನ್ನೆ ತಡರಾತ್ರಿ ನಡೆದ ಘಟನೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರೋ ಶಂಕೆ. ಬೆಂಕಿ ಅವಘಡದಲ್ಲಿ ಹೊಟೆಲ್ ಹಾಗೂ ಹೊಟೆಲ್ ಪಕ್ಕದಲ್ಲಿದ್ದ ಎಟಿಂ ಸುಟ್ಟು ಕರಕಲು ಹೊಟೇಲ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ಸಾಮಗ್ರಿಗಳು,ದಿನಸಿ ಸುಟ್ಟು ಕರಕಲು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳದ ಸಿಬ್ಬಂಧಿ ಶ್ರೀಕಾಂತ್ ಗೋಕಾಕ್ ಎಂಬುವವರಿಗರಿಗೆ …
Read More »ನಿಂತಿದ್ದ ಟ್ರ್ಯಾಕ್ಟರ್ಗೆ ಡಿಕ್ಕಿ ಹೊಡೆದ ಬೈಕ್ ಸವಾರರ ಸ್ಥಿತಿ ಗಂಭೀರ
ಅಳ್ಳಾವರ:ತಾಲೂಕಿನ ಹುಲಿಕೇರಿ ಕ್ರಾಸ್ ಬಳಿ ನಿನ್ನೆ ತಡ ರಾತ್ರಿ ಬೈಕ್ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಕಬ್ಬು ಹೇರಿಕೊಂಡು ನಿಂತಿದ್ದ ಟ್ರ್ಯಾಕ್ಟರ್ ಗೆ ಕುಡಿದ ಮತ್ತಿನಲ್ಲಿದ್ದ ಯುವಕರಿಬ್ಬರು ಬೈಕ್ ನಿಂದ ಗುದ್ದಿದ್ದಾರೆ. ಅಂಬೋಳ್ಳಿ ಗ್ರಾಮದ ಯುವಕ ರುದ್ರಪ್ಪಾ ಚುಳಕಿ ಹಾಗೂ ಮತ್ತೊಬ್ಬ ಯುವಕ ಡೋರಿ ಗ್ರಾಮದವನು ಎಂದು ಗುರುತಿಸಲಾಗಿದೆ. ಬೈಕ್ ಗುದ್ದಿದ ರಭಸಕ್ಕೆ ದ್ವಿಚಕ್ರ ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ. ವಾಹನ ಸವಾರರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಚಿಕಿತ್ಸೆಗಾಗಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





