Breaking News

BigTv News

ಬಿಸಿ ಬಿಸಿ ಸಾಂಬಾರಿನಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಮಗು ಸಾವು

ಕುಂದಗೋಳ : ತಾಲೂಕಿನ ಬಿಳೇಬಾಳ ಗ್ರಾಮದ 1 ವರ್ಷ 6 ತಿಂಗಳ ಮಗು ಸ್ವಾತಿ ಚಲವಾದಿ ಕಳೆದ ನವೆಂಬರ್ 10 ರಂದು ಮನೆಯಲ್ಲಿ ಆಟವಾಡುತ್ತಿರುವ ವೇಳೆಯಲ್ಲಿ ಬಿಸಿ ಸಾಂಬಾರಿನಲ್ಲಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಳು. ಬಳಿಕ ಸ್ವಾತಿಯನ್ನು ಕುಂದಗೋಳ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸ್ವಾತಿ ಚಲವಾದಿ ಮೃತಪಟ್ಟಿದ್ದಾಳೆ. ಈ ಕುರಿತು ಕುಂದಗೋಳ ಪೊಲೀಸ್ ಗ್ರಾಮೀಣ …

Read More »


15,000 ಶಿಕ್ಷಕರ ನೇಮಕ :  1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಖಾಲಿ ಇದ್ದಂತ 15,000 ಪದವೀಧರ ಶಾಲಾ ಶಿಕ್ಷಕರ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಿ, ಪರೀಕ್ಷೆಯ ಬಳಿಕ ದಾಖಲಾತಿಯ ಪರಿಶೀಲನೆ ಕೂಡ ನಡೆಸಲಾಗಿತ್ತು. ಇದೀಗ ಮುಂದುವರೆದು 1:1 ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಈ ವಾರ ಪ್ರಕಟಿಸಲಾಗುತ್ತಿದೆ. ಈ ಕುರಿತಂತೆ ಟ್ವಿಟ್ಟ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಿಕ್ಷಣ ಸಚಿವ ಬಿ.ಸಿ ನಾಗೇಶ್  ಅವರು, ಪದವೀಧರ ಪ್ರಾಥಮಿಕ ಶಾಲಾ‌ ಶಿಕ್ಷಕರ ನೇಮಕ ಸಂಬಂಧಿಸಿದ 1:1 ‘ತಾತ್ಕಾಲಿಕ ಆಯ್ಕೆ’ ಪಟ್ಟಿಯನ್ನು ಈ ವಾರ …

Read More »

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳಲ್ಲಿ ತಪ್ಪು ಮೌಲ್ಯಮಾಪನ : 9 ಅಧ್ಯಾಪಕರನ್ನು ಅಮಾನತು

ಬೆಂಗಳೂರು : 2022ರ ಏಪ್ರಿಲ್/ಮೇ ತಿಂಗಳಲ್ಲಿ ನಡೆದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಗಳಲ್ಲಿ ತಪ್ಪು ಮೌಲ್ಯಮಾಪನಕ್ಕಾಗಿ ಸರ್ಕಾರಿ ಪಿಯು ಕಾಲೇಜುಗಳ ಒಂಬತ್ತು ಅಧ್ಯಾಪಕರನ್ನು ಅಮಾನತುಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಏತನ್ಮಧ್ಯೆ, ತಪ್ಪು ಮಾಡಿದ ಖಾಸಗಿ ಅನುದಾನರಹಿತ ಕಾಲೇಜಿನ ಒಬ್ಬ ಬೋಧಕನ ವಿರುದ್ಧ ಶಿಸ್ತು ಕ್ರಮಕ್ಕೆ ಇಲಾಖೆ ನಿರ್ದೇಶನ ನೀಡಿದೆ. ಕ್ರಿಯೆಯನ್ನು ಎದುರಿಸುತ್ತಿರುವ 10 ಅಧ್ಯಾಪಕರ ಪೈಕಿ, ತಲಾ ಐದು ಭೌತಶಾಸ್ತ್ರ ಮತ್ತು ಇಂಗ್ಲಿಷ್ ವಿಷಯಗಳಿಗೆ ಸೇರಿದವುಗಳಾಗಿವೆ. …

Read More »

ಬೆಂಗಳೂರುನಲ್ಲಿ ಇನ್ನೂ 2 ದಿನ ಮಳೆ‌ ಸಾಧ್ಯತೆ

ಬೆಂಗಳೂರು: ನಗರದಲ್ಲಿ ನಿತ್ಯ ಸುರಿಯುತ್ತಿರುವ ಮಳೆ ಹಾಗೂ ಇನ್ನೂ ಎರಡು ದಿನ ಮುಂದುವರಿಯುವ ಮುನ್ಸೂಚನೆಯ ಹಿನ್ನೆಲೆಯಲ್ಲಿ ನಗರದ ಎಲ್ಲ ರಸ್ತೆಗಳ ಗುಂಡಿಗಳನ್ನು ಸಂಪೂರ್ಣ ಭರ್ತಿ ಮಾಡಲು ಪಾಲಿಕೆ ಅಧಿಕಾರಿಗಳಿಗೆ ನಿಗದಿಪಡಿಸಿದ ಗಡುವನ್ನು ನ.19ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ನ.9ರವರೆಗೆ, ನಂತರ ಮಳೆಯ ಕಾರಣದಿಂದ ನ.14ರವರೆಗೆ ವಿಸ್ತರಣೆ ಮಾಡಿದ್ದ ಪಾಲಿಕೆ, ಇದೀಗ ಮತ್ತೆ ನ.19ರವರೆಗೆ ವಿಸ್ತರಣೆ ಮಾಡಿದೆ. ಈವರೆಗೆ ಬಿಬಿಎಂಪಿ ಗುರುತಿಸಿದ 33 ಸಾವಿರ ರಸ್ತೆ ಗುಂಡಿಗಳ ಪೈಕಿ 32 ಸಾವಿರಕ್ಕೂ …

Read More »


ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಸಿ.ವೀರೇಂದ್ರ  ಸ್ಪರ್ಧಿಸಲು ತಯಾರು

ಚಿತ್ರದುರ್ಗ: ರಾಜ್ಯ ರಾಜಕೀಯಲ್ಲಿ 2023ರ ವಿಧಾನಸಭೆ ಈಗಿನಿಂದಲೇ ಕಸರತ್ತುಗಳು ನಡೆಯುತ್ತಲೇ ಇವೆ. ಹಾಗೆಯೇ 2023ರ ಚುನಾವಣೆಯಲ್ಲಿ ಚಿತ್ರದುರ್ಗ ವಿಧಾನಸಭಾ ಕ್ಷೇತ್ರದಿಂದ ಕೆ.ಸಿ.ವೀರೇಂದ್ರ ಅವರು ಸ್ಪರ್ಧಿಸಲು ತಯಾರಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ವಿರೇಂದ್ರ ಪರವಾಗಿ ಅಭಿಮಾನಿಗಳು ಅರ್ಜಿ ಸಲ್ಲಿಸಿದರು. 2023ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಯುತ್ತಿದೆ. ಟಿಕೆಟ್ ಖಾತ್ರಿ ಪಡಿಸಿಕೊಳ್ಳಲು ಟಿಕೆಟ್ ಆಕಾಂಕ್ಷಿಗಳು ಆಯಾ ಪಕ್ಷದ ವರಿಷ್ಠರ ಬೆನ್ನು ಬಿದ್ದಿದ್ದಾರೆ. ಈ ಹಿಂದೆಯಷ್ಟೇ ಕ್ಯಾಸಿನೊ …

Read More »

40 ಗಣ್ಯರಿಂದ ಗುಜರಾತ್‌ ಚುನಾವಣಾ ಪ್ರಚಾರ

ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ಸೇರಿದಂತೆ 40 ಗಣ್ಯರ ಹೆಸರನ್ನು ಗುಜರಾತ್‌ ಚುನಾವಣಾ ತಾರಾ ಪ್ರಚಾರಕರಾಗಿ ಕಾಂಗ್ರೆಸ್‌ ಘೋಷಿಸಿದೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹಲೋತ್, ಛತ್ತೀಸಗಡದ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರೂ ತಾರಾ ಪ್ರಚಾರಕರಾಗಿದ್ದಾರೆ. ಗುಜರಾತ್‌ ವಿಧಾನಸಭೆಗೆ ಡಿಸೆಂಬರ್‌ 1 ಮತ್ತು 5ರಂದು ಚುನಾವಣೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾಗಿರುವ ಗುಜರಾತ್‌ನಲ್ಲಿ ಬಿಜೆಪಿ 27 ವರ್ಷಗಳಿಂದ ಅಧಿಕಾರಲ್ಲಿದೆ. …

Read More »

ಮನೆ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು: ‘ಬೆಂಗಳೂರು ಅಮೃತೋತ್ಸವ ಮನೆ’ ಯೋಜನೆಯಡಿ ಸರ್ಕಾರಿ ಇಲಾಖೆ/ಸಂಸ್ಥೆಗಳಲ್ಲಿ ವಸತಿ ಯೋಜನೆಯಡಿ ಅರ್ಜಿ ಸಲ್ಲಿಸಿ ಮನೆ ಖರೀದಿಸಲು ಪಾಲಿಕೆಯಿಂದ ಫಲಾನುಭವಿಯ ವಂತಿಕೆ ಅಥವಾ ಗರಿಷ್ಠ 5 ಲಕ್ಷ ರೂ. ಹೊಂದಾಣಿಕೆ ಮೊತ್ತವನ್ನು ಫಲಾನುಭವಿ ಹೆಸರಿನಲ್ಲಿ ಸಂಬಂಧಪಟ್ಟ ಇಲಾಖೆಗೆ ಪಾವತಿಸುವ ಯೋಜನೆಗೆ ದಿನಾಂಕ: 31-12-2022 ರವೆರೆ ಅರ್ಜಿ ಸಲ್ಲಿಸಬಹುದಾಗಿದೆ. ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ 30 ರೂ. ಶುಲ್ಕವನ್ನು …

Read More »

ಬಸ್‌ ಹಾಗೂ ಲಾರಿ ನಡುವೆ ಅಪಘಾತ : ಚಾಲಕ ಸಾವು

ಸುಳ್ಯ: ಬಸ್‌ ಹಾಗೂ ಲಾರಿ ನಡುವೆ ರಸ್ತೆ ಅಪಘಾತ ಸಂಭವಿಸಿ ಲಾರಿ ಚಾಲಕ ಮೃತಪಟ್ಟ ಘಟನೆ ಇಲ್ಲಿನ ಕಲ್ಲುಗುಂಡಿ ಸಮೀಪ ನಡೆದಿದೆ. ಮೈಸೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಸುಳ್ಯದಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಲಾರಿ ಮುಖಾಮುಖಿ ಡಿಕ್ಕಿಯಾಗಿದೆ.ಲಾರಿ ಚಾಲಕ ಎರಡೂ ವಾಹನಗಳ ಮಧ್ಯೆ ಸಿಲುಕಿಕೊಂಡಿದ್ದರು ಎಂದು ತಿಳಿದುಬಂದಿದೆ. ತಕ್ಷಣವೇ ಸ್ಥಳೀಯರು ಸೇರಿ ಹಲವು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಚಾಲಕನ ಹೊರತೆಗೆದು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. …

Read More »

ಲಂಚ ಪ್ರಕರಣ : ಕೆಎಎಸ್‌ ಅಧಿಕಾರಿ ಬಂಧನ

ಬೆಂಗಳೂರು: ಜಮೀನಿನ ಖಾತೆ ಬದಲಾವಣೆಗೆ ₹ 5 ಲಕ್ಷ ಲಂಚ ಪಡೆಯುತ್ತಿದ್ದ ಕೆಎಎಸ್‌ ಅಧಿಕಾರಿ, ಬೆಂಗಳೂರು ಉತ್ತರ ತಾಲ್ಲೂಕಿನ ವಿಶೇಷ ತಹಶೀಲ್ದಾರ್‌ ವರ್ಷಾ ಒಡೆಯರ್‌ ಹಾಗೂ ಮಧ್ಯವರ್ತಿ ರಮೇಶ್‌ ಎಂಬುವ ವರನ್ನು ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ಬಂಧಿಸಿದ್ದಾರೆ. ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿ ವ್ಯಾಪ್ತಿಯ ಕೆಂಗನಹಳ್ಳಿ ಗ್ರಾಮದಲ್ಲಿ ಲಲಿತ್‌ ಕುಮಾರ್‌ ಎಂಬುವವರಿಂದ 2 ಎಕರೆ ಜಮೀನು ಖರೀದಿಸಿದ್ದರು. ಆದರೆ, ಲಲಿತ್‌ ಅವರ ಹೆಸರೇ ಪಹಣಿಯಲ್ಲಿ ನಮೂದಾಗಿರಲಿಲ್ಲ. ಅವರ …

Read More »

ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ಸಿನಿಮಾ ನಿರ್ದೇಶಕ ಕೆ.ಆರ್. ಮುರಳಿ ಕೃಷ್ಣ (63) ಅವರು ಇಂದು ನಿಧನರಾಗಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಅಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ. ಇಬ್ಬರು ಹೆಣ್ಣು ಮಕ್ಕಳು, ಪತ್ನಿಯನ್ನು ಅಗಲಿದ್ದಾರೆ. ಸಹಕಾರ ನಗರದ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬ್ರೈನ್ ಟೂಮರ್ ನಿಂದ ಬಳಲುತ್ತಿದ್ದರು. ಸಣ್ಣ ಸತ್ಯ, ಗರ ಸೇರಿದಂತೆ ಹಲವು …

Read More »