ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಕೌಟುಂಬಿಕ ಕಲಹ ಭೀಕರ ತಿರುವು ಪಡೆದು, ಪತ್ನಿಯನ್ನು ಕರೆತರಲು ಅತ್ತೆ ಮನೆಗೆ ಹೋದ 35 ವರ್ಷದ ಬಾಬುಸಾಬ್ ಜಮಾದಾರ್ ಹಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಸ್ನೇಹಿತ ಅಪ್ಪಾಲಾಲ ಮಕಾಸಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸೌಂದರ್ಯ, ಆಕೆಯ ತಾಯಿ, ಸೋದರ ಹಾಗೂ ಮತ್ತೊಬ್ಬರು ಸೇರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ …
Read More »ಯುವತಿ ಮೈಮುಟ್ಟಿದ ಕಾಮುಕನಿಗೆ KSRTC ಬಸ್ನಲ್ಲೇ ತಗೋ ತಗೋ ಅಂತ ಗೂಸಾ ಕೊಟ್ಟ ಪ್ರಯಾಣಿಕರು
ಬೆಂಗಳೂರು: ನೆಲಮಂಗಲದ ಬಳಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಗೆ ಸಹಪ್ರಯಾಣಿಕನೊಬ್ಬ ಅಸಭ್ಯವಾಗಿ ಸ್ಪರ್ಶಿಸಿ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಯುವತಿ ಅಳುತ್ತಿರುವುದನ್ನು ಗಮನಿಸಿದ ಸಹಪ್ರಯಾಣಿಕರು ವಿಚಾರಿಸಿದಾಗ ಘಟನೆ ಬೆಳಕಿಗೆ ಬಂದಿದೆ. ತಕ್ಷಣವೇ ಬಸ್ನಲ್ಲಿದ್ದ ಪ್ರಯಾಣಿಕರು ಹಾಗೂ ಮಹಿಳೆಯರು ಮಧ್ಯಪ್ರವೇಶಿಸಿ ಆರೋಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಳಿಕ ಕಂಡಕ್ಟರ್ ಬಸ್ ನಿಲ್ಲಿಸಿ ಆರೋಪಿಯನ್ನು ನೆಲಮಂಗಲ ಟೋಲ್ ಸಮೀಪ ಬಸ್ನಿಂದ ಕೆಳಗಿಳಿಸಿದ್ದಾರೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಸಂಬಂಧ ಪೊಲೀಸ್ …
Read More »ಬಿಎಂಟಿಸಿ ಬಸ್ನಲ್ಲಿ ಸಾರಿಗೆ ಸಚಿವರಿಗೆ ಚಿಲ್ಲರೆ ಸಂಕಷ್ಟ; ನಿರ್ಲಕ್ಷ್ಯ ತೋರಿದ ಸಿಬ್ಬಂದಿ ಅಮಾನತು
ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ ಕುರಿತು ವಾಸ್ತವ ಸ್ಥಿತಿ ಅರಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಿಎಂಟಿಸಿ ಬಸ್ನಲ್ಲಿ ಸಂಚರಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಹೆಬ್ಬಾಳ ಮಾರ್ಗದ ಬಸ್ನಲ್ಲಿ ಟಿಕೆಟ್ಗಾಗಿ ₹100 ನೋಟು ನೀಡಿದ ಸಚಿವರನ್ನು ಗುರುತಿಸದ ನಿರ್ವಾಹಕ, ಚಿಲ್ಲರೆ ಇಲ್ಲವೆಂದು ಬಸ್ನಿಂದ ಇಳಿಯುವಂತೆ ಹೇಳಿದ ಘಟನೆ ನಡೆದಿದೆ. ಸಚಿವರು ಯಾವುದೇ ವಾಗ್ವಾದ ನಡೆಸದೇ ಬಸ್ನಿಂದ ಇಳಿದು, ಚಿಲ್ಲರೆ ಹೊಂದಿಸಿಕೊಂಡು ಮತ್ತೊಂದು ಬಸ್ನಲ್ಲಿ ಪ್ರಯಾಣ ಮುಂದುವರಿಸಿದರು. …
Read More »ಬಸ್ನಲ್ಲಿ ಯುವತಿಗೆ ಮೈಮುಟ್ಟಿ ಲೈಂಗಿಕ ದೌರ್ಜನ್ಯ, ಧರ್ಮದೇಟು ಕೊಟ್ಟ ಪ್ರಯಾಣಿಕರು
ಬೆಂಗಳೂರು ಹೊರವಲಯದ ನೆಲಮಂಗಲ ಮಾರ್ಗದಲ್ಲಿ ಸಂಚರಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ಯುವತಿಗೆ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಘಟನೆ ಬಳಿಕ ಆರೋಪಿಯನ್ನು ಪ್ರಯಾಣಿಕರು ಹಿಡಿದು ಪ್ರಶ್ನಿಸಿದ್ದು, ಬಸ್ನಲ್ಲೇ ಧರ್ಮದೇಟು ನೀಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಯಾಣದ ವೇಳೆ ಗುಲಾಬಿ ಬಣ್ಣದ ಶರ್ಟ್ ಧರಿಸಿದ್ದ ವ್ಯಕ್ತಿ, ಬಿಳಿ ಬಣ್ಣದ ಟಾಪ್ ಧರಿಸಿದ್ದ ಯುವತಿಯನ್ನು ಪದೇ ಪದೇ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎನ್ನಲಾಗಿದೆ. ಇದರಿಂದ ಮನನೊಂದ ಯುವತಿ ಮೌನವಾಗಿ …
Read More »ಬಾಗಲಕೋಟೆಯಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ; 450 ಕೆಜಿ ಶ್ರೀಗಂಧ ಜಪ್ತಿ
ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಯಡಹಳ್ಳಿಯ ಚಿಂಕಾರ ವನ್ಯಜೀವಿ ಧಾಮ ಹಾಗೂ ಅಮಲಝರಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ಸಂಗ್ರಹಿಸಿದ್ದ 450 ಕೆಜಿ ತೂಕದ ಕೋಟ್ಯಂತರ ರೂಪಾಯಿ ಮೌಲ್ಯದ ಶ್ರೀಗಂಧದ ಕಟ್ಟಿಗೆಗಳನ್ನು ಜಪ್ತಿ ಮಾಡಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಮಹಾರಾಷ್ಟ್ರ ಹಾಗೂ ಮಧ್ಯಪ್ರದೇಶ ಮೂಲದ ಅಂತರರಾಜ್ಯ ಕಳ್ಳರ ಜಾಲವನ್ನು ಪತ್ತೆಹಚ್ಚಿದ್ದಾರೆ. ಸ್ಥಳೀಯವಾಗಿ ಶ್ರೀಗಂಧದ ಮರಗಳನ್ನು ಕಡಿದು ಸಾಗಿಸಲು ಸಂಚು ರೂಪಿಸಲಾಗಿತ್ತು ಎಂದು …
Read More »ಪಾರ್ಕ್ನಲ್ಲಿ ಎಣ್ಣೆ ಪಾರ್ಟಿ, ಸ್ನೇಹಿತನ ಕೊಲೆಯಲ್ಲಿ ಅಂತ್ಯ
ಬೆಂಗಳೂರು – ಪಾರ್ಕ್ನಲ್ಲಿ ಮದ್ಯದ ಪಾರ್ಟಿ ಮಾಡಿದ ದುಷ್ಕರ್ಮಿಗಳು ತಮ್ಮ ಸ್ನೇಹಿತನನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ರಾತ್ರಿ ಕೆ.ಎಸ್. ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಾಜ್ಯೋತ್ಸವನಗರದ ನಿವಾಸಿ ರಾಕೇಶ್ ಅಲಿಯಾಸ್ ರಾಕಿ(19) ಕೊಲೆಯಾದ ಯುವಕ. ಈತ ಫುಟ್ಪಾತ್ನಲ್ಲಿನ ಫುಡ್ ವ್ಯಾಪಾರಿ ಬಳಿ ಎಗ್ ರೈಸ್ ಹಾಕುವ ಕೆಲಸ ಮಾಡುತ್ತಿದ್ದ.ನಿನ್ನೆ ಕೆಲಸ ಮುಗಿದ ನಂತರ ತನ್ನ ಸ್ನೇಹಿತರ ಜೊತೆ ಮನೆಗೆ ಸಮೀಪ ಇರುವ ಬಿಬಿಎಂಪಿಯ ಉದ್ಯಾನವನದಲ್ಲಿ ಮದ್ಯದ ಪಾರ್ಟಿ …
Read More »16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ! ಖ್ಯಾತ ಕಿರುತೆರೆ ನಟ ಅರೆಸ್ಟ್
16 ವರ್ಷದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಿಂದಿ ಕಿರುತೆರೆ ನಟ ರೋಹಿತ್ ಚಾಂಡೆಲ್ ಅವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಾಲಕಿಯ ಕುಟುಂಬದ ದೂರಿನ ಮೇರೆಗೆ ಪೋಕ್ಸೋ ಕಾಯ್ದೆ ಸೇರಿದಂತೆ ವಿವಿಧ ಆರೋಪಗಳಡಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಜುಲೈ 5ರಂದು ಬಾಲಕಿಯನ್ನು ಹಿಂಬಾಲಿಸುವುದು, ಪದೇ ಪದೇ ಸಂಪರ್ಕಿಸಲು ಪ್ರಯತ್ನಿಸುವುದು, ಕಿರುಕುಳ ನೀಡುವುದು ಹಾಗೂ ಹಲ್ಲೆ ನಡೆಸಿದ ಆರೋಪಗಳು ದಾಖಲಾಗಿವೆ. ಪ್ರಕರಣ ದಾಖಲಾದ …
Read More »36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ – ಹೆಂಡಿರೊಡನೆ ಜಗಳವಾಡಿ ತಗ್ಲಾಕ್ಕೊಂಡ!
ಕೇರಳದಲ್ಲಿ ಬಸ್ ಕಂಡಕ್ಟರ್ಗೆ ಗನ್ ತೋರಿಸಿ ಸುಲಿಗೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿ 36 ವರ್ಷಗಳ ಬಳಿಕ ಮೈಸೂರಿನಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಬಂಧಿತನನ್ನು 66 ವರ್ಷದ ವಿ.ಕೆ. ಜೋಸ್ ಎಂದು ಗುರುತಿಸಲಾಗಿದ್ದು, ಈತ ತನ್ನ ಹೆಸರನ್ನು ‘ಶಿವಕುಮಾರ್’ ಎಂದು ಬದಲಾಯಿಸಿಕೊಂಡು ಮೈಸೂರಿನಲ್ಲಿ ನೆಲೆಸಿದ್ದ ಎಂದು ತಿಳಿದುಬಂದಿದೆ. ಕೇರಳದ ತಿರುವಂಬಾಡಿ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಜಾಮೀನು ರಹಿತ ವಾರಂಟ್ ಹೊರಡಿಸಿದ ಬಳಿಕ ಮೈಸೂರಿಗೆ ಪರಾರಿಯಾಗಿದ್ದ. ಇಲ್ಲಿ ಪೇಂಟಿಂಗ್ …
Read More »ಬೆಂಗಳೂರು ಏರ್ ಪೋರ್ಟ್ ನಲ್ಲಿ ಬರೋಬ್ಬರಿ 4.22 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ: ಪ್ರಯಾಣಿಕ ಅರೆಸ್ಟ್
ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ವಿದೇಶದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 12.07 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್ನಿಂದ ಬಂದಿದ್ದ ಪ್ರಯಾಣಿಕನ ಲಗೇಜ್ ಪರಿಶೀಲನೆ ವೇಳೆ ಸುಮಾರು ₹4.22 ಕೋಟಿ ಮೌಲ್ಯದ ಮಾದಕ ವಸ್ತು ಪತ್ತೆಯಾಗಿದ್ದು, ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿಯನ್ನು ಬಂಧಿಸಲಾಗಿದೆ. ಕಸ್ಟಮ್ಸ್ ಅಧಿಕಾರಿಗಳ ಪ್ರಕಾರ, ಆರೋಪಿಯು ಲಗೇಜ್ ಬ್ಯಾಗ್ನಲ್ಲಿ ಗಾಂಜಾವನ್ನು ಅಡಗಿಸಿಟ್ಟು ಸಾಗಿಸಲು ಯತ್ನಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ವೇಳೆ ಅಕ್ರಮ …
Read More »ಒಂಟಿ ಯುವತಿ ಮನೆಯೊಳಗೆ ನುಗ್ಗಿದ ಡೆಲಿವರಿ ಬಾಯ್ – ಅಶ್ಲೀಲ ವರ್ತನೆ ವಿಡಿಯೋ ಸೆರೆ!
ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಗೆ ಧಕ್ಕೆ ತರುವ ಘಟನೆ ಬೆಳಕಿಗೆ ಬಂದಿದೆ. ಫ್ಲಿಪ್ಕಾರ್ಟ್ ಹಾಗೂ ಮಿಂತ್ರಾ ಪರವಾಗಿ ಕೆಲಸ ಮಾಡುತ್ತಿದ್ದ ಡೆಲಿವರಿ ಏಜೆಂಟ್ ಒಬ್ಬ, ಒಂಟಿಯಾಗಿದ್ದ ಯುವತಿಯ ಮನೆಗೆ ಬಲವಂತವಾಗಿ ನುಗ್ಗಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಯುವತಿ ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಮನೆಗೆ ಒಳಗೆ ಬರಲು ಅನುಮತಿ ನಿರಾಕರಿಸಿದ್ದರೂ ಡೆಲಿವರಿ ಏಜೆಂಟ್ ಬಲವಂತವಾಗಿ ಪ್ರವೇಶಿಸಿ ಶೌಚಾಲಯ ಬಳಸಿದ್ದಾನೆ. ಬಳಿಕ ಹೊರಡುವ ವೇಳೆ ಯುವತಿಯ ಎದುರೇ ಖಾಸಗಿ ಅಂಗಾಂಗ ಪ್ರದರ್ಶಿಸಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





