ಬೆಂಗಳೂರು: ಇದೀಗ ರಾಜ್ಯಸರ್ಕಾರ 11 ಮಂದಿ ಐಪಿಎಸ್ ಅಧಿಕಾರಿಗಳನ್ನು ಬೇರೆ ಬೇರೆ ಸ್ಥಾನಗಳಿಗೆ ವರ್ಗಾವಣೆ ಮಾಡಿದ್ದು ಅವರಲ್ಲಿ ಇತ್ತೀಚೆಗೆ ಭ್ರಷ್ಟಾಚಾರದ ಆರೋಪಕ್ಕೆ ತುತ್ತಾಗಿದ್ದ ಅಧಿಕಾರಿ ರವಿ ಡಿ ಚೆನ್ನಣ್ಣನವರ್ ಕೂಡ ಇದ್ದಾರೆ. ರಾಜ್ಯ ಸರ್ಕಾರ ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಚೆನ್ನಣ್ಣನವರ್ರನ್ನು ಕಿಯೋನಿಕ್ಸ್ ಸಂಸ್ಥೆಯ ನಿರ್ದೇಶಕನಾಗಿ ವರ್ಗಾವಣೆ ಮಾಡಲಾಗಿದೆ. ಇದೇ ಮೊದಲ ಬಾರಿಗೆ ಬೆಂಗಳೂರಿಗೆ ಸ್ಪೆಷಲ್ ಟ್ರಾಫಿಕ್ ಕಮಿಷನರ್ಅನ್ನು ನೇಮಕ ಮಾಡಲಾಗಿದ್ದು ಐಪಿಎಸ್ ಅಬ್ದುಲ್ ಸಲೀಂಗೆ ಈ ಸ್ಥಾನವನ್ನು …
Read More »ಶ್ರೀಗಳ ವಿರುದ್ಧ ಪಿತೂರಿ ಮಾಡಿದ್ದ ಆರೋಪಿಗಳು ಜೈಲಿಗೆ
ಚಿತ್ರದುರ್ಗ : ಮುರುಘಾ ಮಠದ ಶ್ರೀ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಸುಳ್ಳು ಕೇಸು ದಾಖಲಿಸಲು ಪಿತೂರಿ ಮಾಡಿದ ಮತ್ತು ಮಠದಲ್ಲಿದ್ದ ಭಾವಚಿತ್ರಗಳನ್ನು ಕದ್ದೊಯ್ದ ಆರೋಪದಲ್ಲಿ ಬಂಧಿತರಾಗಿರುವ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ. ಬಸವರಾಜನ್ ಹಾಗೂ ಮಠದ ಶಾಲಾ ಶಿಕ್ಷಕನಾಗಿದ್ದ ಬಸವರಾಜೇಂದ್ರನ ನ್ಯಾಯಾಂಗ ಬಂಧನವನ್ನು ಇನ್ನೂ ೧೪ ದಿನ ವಿಸ್ತರಿಸಿ ಮರಳಿ ಜೈಲಿಗೆ ಕಳುಹಿಸಲಾಗಿದೆ. ಮುರುಘಾ ಶ್ರೀಗಳು ಮತ್ತು ಎಸ್.ಕೆ ಬಸವರಾಜನ್ ಅವರು ಬದ್ಧ ವೈರಿಗಳಂತಿದ್ದು, ಎಸ್ಕೆ ಬಸವರಾಜನ್ ಪಿತೂರಿಯಿಂದಲೇ …
Read More »ಚಿಕ್ಕಮಗಳೂರುಗೆ ಸಿಎಂ ಭೇಟಿ
ಚಿಕ್ಕಮಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಇಂದು ಚಿಕ್ಕಮಗಳೂರು ಪ್ರವಾಸ ಮಾಡಲಿದ್ದು, ಜನಸಂಕಲ್ಪ ಯಾತ್ರೆ ಸೇರಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಕಡೂರು-ತರೀಕೆರೆ ತಾಲೂಕಿನಲ್ಲಿ ಸಿಎಂ ಪ್ರವಾಸ ಮಾಡಲಿದ್ದು, ಮೊದಲು ಕಡೂರು ಪಟ್ಟಣದಲ್ಲಿ ಜನಸಂಕಲ್ಪ ಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 10:30ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಕಡೂರಿಗೆ ಆಗಮಿಸಲಿದ್ದಾರೆ. ಬಿಎಸ್ ವೈ ಸಿಎಂ ಆಗಿದ್ದಾಗ ನೀರಾವರಿ ಯೋಜನೆಗೆ ಅನುದಾನ ನೀಡಲಾಗಿತ್ತು. 108 ಕೆರೆಗಳಿಗೆ ನೀರು ತುಂಬಿಸಲು 1289 ಕೋಟಿ ಬಿಡುಗಡೆ ಮಾಡಲಾಗಿತ್ತು. ಆ …
Read More »
ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ನಟ ಕೃಷ್ಣ ನಿಧನ
ಹೈದರಾಬಾದ್: ತೆಲುಗು ಚಿತ್ರರಂಗದ ಸೂಪರ್ಸ್ಟಾರ್ ಹಾಗೂ ಹಿರಿಯ ನಟ ಕೃಷ್ಣ ಅವರು ಇಂದು (ನ.15) ಕೊನೆಯುಸಿರೆಳೆದಿದ್ದಾರೆ. ಕೃಷ್ಣ ಅವರು ಪ್ರಖ್ಯಾತ ನಟ ಮಹೇಶ್ ಬಾಬು ಅವರ ತಂದೆ. ಕೆಲವು ದಿನಗಳ ಹಿಂದಷ್ಟೇ ಸಹೋದರ ಮತ್ತು ತಾಯಿಯನ್ನು ಕಳೆದುಕೊಂಡಿದ್ದ ಮಹೇಶ್ ಬಾಬು ಇದೀಗ ತಂದೆಯನ್ನು ಕಳೆದುಕೊಂಡಿದ್ದಾರೆ. ಕೃಷ್ಣ ಅವರು ಉಸಿರಾಟದ ತೊಂದರೆ ಜೊತೆಗೆ ಬಹು ಅಂಗಾಂಗ ವೈಫಲ್ಯ ಅನುಭವಿಸುತ್ತಿದ್ದರು. ನಿನ್ನೆ ಸಂಜೆ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ, ಐಸಿಯುನಲ್ಲಿ ಚಿಕಿತ್ಸೆ …
Read More »ಸಿದ್ದ ರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರೂ ಡಿ.ಕೆ.ಶಿವಕುಮಾರ್ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ : ಬಿಜೆಪಿ ವಾಗ್ದಾಳಿ
ಬೆಂಗಳೂರು: ‘ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿ.ಕೆ.ಶಿವಕುಮಾರ್ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ರವಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ …
Read More »ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್ನ ಮೊದಲ ಹಂತದ ಪಟ್ಟಿ ಬಿಡುಗಡೆ : ನಿಖಿಲ್ ಕುಮಾರಸ್ವಾಮಿ
ಚಿತ್ರದುರ್ಗ: ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್ನ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಂದೇ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಗೊಂದಲವಿರುವ ಜೆಡಿಎಸ್ ಅಭ್ಯರ್ಥಿ ಯಾರು ಎಂದು ಘೋಷಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚಿತ್ರದುರ್ಗದಲ್ಲಿ ಹೇಳಿದರು. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬುರಡುಕಂಟೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 19ರಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಪಂಚರತ್ನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಹಿರಿಯೂರು ಟಿಕೆಟ್ ವಿಚಾರದಲ್ಲಿ …
Read More »ಸಿದ್ದರಾಮಯ್ಯ ಇಂದು ಕೋಲಾರಕ್ಕೆ ಭೇಟಿ
ಬೆಂಗಳೂರು: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಇಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ವಿಶೇಷವಾಗಿ ರೂಪಿಸಲಾಗಿರುವ ವಿಶೇಷ ಬಸ್ನಲ್ಲಿ ಇಂದು ಬೆಳಗ್ಗೆ ಕೋಲಾರಕ್ಕೆ ತೆರಳಿದರು. ಅಲ್ಲಿ ಸುಮಾರು 10ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳಿಗೆ ಭೇಟಿ ನೀಡಿದರು. ಕೋಲಾರ ನಗರದ ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಮೆಥೋಡಿಸ್ಟ್ ಚರ್ಚ್ಗೆ ತೆರಳಿ ಪ್ರಾರ್ಥನೆ …
Read More »ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟನಲ್ಲಿ 487 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು : ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ 487 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾ ಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 19, 2022 ಕೊನೆಯ ದಿನವಾಗಿದೆ. ಶೈಕ್ಷಣಿಕವಿದ್ಯಾರ್ಹತೆ: KMF ಅಧಿಕೃತ …
Read More »
ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಆರೋಪ :
ಬಿಜೆಪಿ ಮುಖಂಡ ವಿರುದ್ಧ ಪ್ರಕರಣ ದಾಖಲು
ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರೋಪಿ ಬಂಧನಕ್ಕೆ ಐವರು ಪೊಲೀಸ್ ತಂಡ ಹೈದರಾಬಾದ್ಗೆ ತೆರಳಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಿಯಾಂಕ್ ಖರ್ಗೆ ಮಾತನಾಡುವ ವೇಳೆ, ತಾಳ್ಮೆ ಮೀರಿದರೆ ಬಿಜೆಪಿಯವರಿಗೆ ಓಡಾಡಲು ಬಿಡುವುದಿಲ್ಲ ಎಂದಿದ್ದಾರೆ. ಅವರ ಕ್ರಿಯೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ’ ವಿಧಾನ ಪರಿಷತ್ ಸದಸ್ಯ ತಿಳಿಸಿದ್ದರು.
Read More »ಬೆಂಗಳೂರುನಲ್ಲಿ ವರುಣನ ಆರ್ಭಟ
ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಹಗಲಿಡೀ ಸುರಿದ ಮಳೆ ರಾತ್ರಿ ವೇಳೆ ಹಲವೆಡೆ ಬಿರುಸಾಗಿ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರ ಪರಿಣಾಮ ರಾಜಧಾನಿಗೂ ತಟ್ಟಿದ್ದು ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





