Breaking News

BigTv News

ಸಿದ್ದ ರಾಮಯ್ಯ ಯಾವ ಕ್ಷೇತ್ರದಲ್ಲಿ ನಿಂತರೂ ಡಿ.ಕೆ.ಶಿವಕುಮಾರ್ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ : ಬಿಜೆಪಿ ವಾಗ್ದಾಳಿ

ಬೆಂಗಳೂರು: ‘ಮುಂದಿನ ಚುನಾವಣೆಗೆ ಕ್ಷೇತ್ರ ಹುಡುಕಲು ಇಷ್ಟೊಂದು ಕಸರತ್ತು ನಡೆಸುತ್ತಿರುವ ಪ್ರತಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಪರಿಸ್ಥಿತಿ ನೋಡಿದರೆ, ಯಾವ ಕ್ಷೇತ್ರದಲ್ಲಿ ನಿಂತರೂ ಡಿ.ಕೆ.ಶಿವಕುಮಾರ್ ಸೋಲಿಸುತ್ತಾರೆ ಎಂಬ ಭಯ ಕಾಡುತ್ತಿರುವ ಹಾಗಿದೆ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ರವಿವಾರ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಕಳೆದ ಚುನಾವಣೆಯಲ್ಲಿ ಗೆಲ್ಲಿಸಿ ಮಾನ ಕಾಪಾಡಿದ ಬಾದಾಮಿ ಕ್ಷೇತ್ರದ ಜನತೆಗೆ ಕೈ ಕೊಡುವುದು ಜನನಾಯಕನ ಲಕ್ಷಣವೇ? ರಾಜಕೀಯ ಸಂದಿಗ್ಧ ಕಾಲದಲ್ಲಿ ಮಾನ ಕಾಪಾಡಿದ ಜನತೆಗಿಂತ …

Read More »

ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್‌ನ ಮೊದಲ ಹಂತದ ಪಟ್ಟಿ ಬಿಡುಗಡೆ : ನಿಖಿಲ್ ಕುಮಾರಸ್ವಾಮಿ

ಚಿತ್ರದುರ್ಗ: ಪಂಚರತ್ನ ಯಾತ್ರೆಯಲ್ಲಿ ಜೆಡಿಎಸ್‌ನ ಮೊದಲ ಹಂತದ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ. ಅಂದೇ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ಗೊಂದಲವಿರುವ ಜೆಡಿಎಸ್ ಅಭ್ಯರ್ಥಿ ಯಾರು ಎಂದು ಘೋಷಿಸುವ ಸಾಧ್ಯತೆಗಳಿವೆ ಎಂದು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಚಿತ್ರದುರ್ಗದಲ್ಲಿ ಹೇಳಿದರು. ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಬುರಡುಕಂಟೆ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ತಿಂಗಳ 19ರಂದು ಕೋಲಾರ ಜಿಲ್ಲೆಯ ಮುಳಬಾಗಿಲಿನಲ್ಲಿ ಪಂಚರತ್ನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ. ಹಿರಿಯೂರು ಟಿಕೆಟ್ ವಿಚಾರದಲ್ಲಿ …

Read More »

ಸಿದ್ದರಾಮಯ್ಯ ಇಂದು ಕೋಲಾರಕ್ಕೆ ಭೇಟಿ

ಬೆಂಗಳೂರು:  ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಚುರುಕುಗೊಳ್ಳುತ್ತಿದ್ದು, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಕ್ಷೇತ್ರದ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಇಂದು ಕೋಲಾರ ಪ್ರವಾಸ ಕೈಗೊಂಡಿದ್ದಾರೆ. ವಿಶೇಷವಾಗಿ ರೂಪಿಸಲಾಗಿರುವ ವಿಶೇಷ ಬಸ್‍ನಲ್ಲಿ ಇಂದು ಬೆಳಗ್ಗೆ ಕೋಲಾರಕ್ಕೆ ತೆರಳಿದರು. ಅಲ್ಲಿ ಸುಮಾರು 10ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳಿಗೆ ಭೇಟಿ ನೀಡಿದರು. ಕೋಲಾರ ನಗರದ ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ನಂತರ ಮೆಥೋಡಿಸ್ಟ್ ಚರ್ಚ್‍ಗೆ ತೆರಳಿ ಪ್ರಾರ್ಥನೆ …

Read More »

ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟನಲ್ಲಿ 487 ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಹಾಲು ಉತ್ಪಾದಕರ ಒಕ್ಕೂಟ ಖಾಲಿ ಇರುವ ವಿವಿಧ 487 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡೆಪ್ಯೂಟಿ ಡೈರೆಕ್ಟರ್, ಜೂನಿಯರ್ ಟೆಕ್ನಿಷಿಯನ್ ಸೇರಿ ವಿವಿಧ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕರ್ನಾಟಕ ಸರ್ಕಾರದಲ್ಲಿ ವೃತ್ತಿ ಜೀವನವನ್ನು ಹುಡುಕುತ್ತಿರುವ ಉದ್ಯೋಗಾ ಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 19, 2022 ಕೊನೆಯ ದಿನವಾಗಿದೆ. ಶೈಕ್ಷಣಿಕವಿದ್ಯಾರ್ಹತೆ: KMF ಅಧಿಕೃತ …

Read More »

ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ  ಆರೋಪ :
ಬಿಜೆಪಿ ಮುಖಂಡ ವಿರುದ್ಧ ಪ್ರಕರಣ ದಾಖಲು

ಕಲಬುರಗಿ: ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಒಡ್ಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ವಿರುದ್ಧ ನಗರದ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಆರೋಪಿ ಬಂಧನಕ್ಕೆ ಐವರು ಪೊಲೀಸ್‌ ತಂಡ ಹೈದರಾಬಾದ್‌ಗೆ ತೆರಳಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.ಪ್ರಿಯಾಂಕ್ ಖರ್ಗೆ ಮಾತನಾಡುವ ವೇಳೆ, ತಾಳ್ಮೆ ಮೀರಿದರೆ ಬಿಜೆಪಿಯವರಿಗೆ ಓಡಾಡಲು ಬಿಡುವುದಿಲ್ಲ ಎಂದಿದ್ದಾರೆ. ಅವರ ಕ್ರಿಯೆಗೆ ಪ್ರತಿಕ್ರಿಯೆ ಕೊಟ್ಟಿದ್ದಾರೆ’  ವಿಧಾನ ಪರಿಷತ್ ಸದಸ್ಯ ತಿಳಿಸಿದ್ದರು.

Read More »

ಬೆಂಗಳೂರುನಲ್ಲಿ ವರುಣನ ಆರ್ಭಟ

ಬೆಂಗಳೂರು : ವಾಯುಭಾರ ಕುಸಿತದ ಪರಿಣಾಮ ಬೆಂಗಳೂರಿನಲ್ಲಿ ಮಳೆಯಾಗುತ್ತಿದೆ. ರಾಜಧಾನಿಯಲ್ಲಿ ಹಗಲಿಡೀ ಸುರಿದ ಮಳೆ ರಾತ್ರಿ ವೇಳೆ ಹಲವೆಡೆ ಬಿರುಸಾಗಿ ಸುರಿದಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ಹಾಗೂ ಪುದುಚೇರಿ ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರ ಪರಿಣಾಮ ರಾಜಧಾನಿಗೂ ತಟ್ಟಿದ್ದು ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Read More »

ಮಾಜಿ ಸಿಎಂ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ‌: ಕುಮಾರಸ್ವಾಮಿ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ಷೇತ್ರ ಹುಡುಕಾಟ ನಡೆಸುತ್ತಿರುವ ಬಗ್ಗೆ, ಅವರು ಕೋಲಾರಕ್ಕೆ ಹೋಗಿರುವ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸಿದ್ದರಾಮಯ್ಯ ಬಗ್ಗೆ ಲಘುವಾಗಿ ಮಾತನಾಡಲ್ಲ. ಅವರು ಮಾಜಿ ಮುಖ್ಯಮಂತ್ರಿಗಳು, ಸಚಿವರಾಗಿದ್ದವರು ಹಾಗೂ ಉಪಮುಖ್ಯಮಂತ್ರಿಯಾಗಿದ್ದವರು. ಅವರು ಎಲ್ಲಿ ಬೇಕಾದರೂ ಚುನಾವಣೆಗೆ ನಿಲ್ಲಬಹುದು. ಅವರಿಗೆ ಕ್ಷೇತ್ರವೇ …

Read More »


ನೂತನ ಮನೆಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್

ಬೆಂಗಳೂರು:  ಸೇರಿದಂತೆ ರಾಜ್ಯದಲ್ಲಿ 18 ಲಕ್ಷ ಮನೆ ನೊಂದಣಿಗಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ. ಬರುವ ವರ್ಷ ಎಲ್ಲಾ ಮನೆಗಳಿಗೆ ಹಣ ಬರಲಿದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಹೇಳಿದ್ದಾರೆ.ಈ ಮೂಲಕ ನೂತನ ಮನೆಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಗುಡ್ ನ್ಯೂಸ್ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಬಂದ ಮೇಲೆ 5 ಲಕ್ಷ ಮನೆಗಳನ್ನು ನಿರ್ಮಾಣ ಮಾಡಿದ್ದೇವೆ. ಬೆಂಗಳೂರಿನಲ್ಲಿ 1 ಲಕ್ಷ ಮನೆ ನಿರ್ಮಾಣ ಯೋಜನೆ ಇದೆ. ಈಗಾಗಲೇ 20 …

Read More »

ರಾಶಿ ಮಷಿನ್​​ಗೆ ಸೀರೆ ಸಿಲುಕಿ ಮಹಿಳೆ ಸಾವು

ಬಾಗಲಕೋಟೆ: ರಾಶಿ ಮಷಿನ್​​ಗೆ ಸೀರೆ ಸಿಲುಕಿ ಅವಘಡ ಸಂಭವಿಸಿದರಿಂದ ಮಹಿಳೆ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಶಿರೂರ ಗ್ರಾಮದಲ್ಲಿ ನಡೆದಿದೆ.ಮೆಕ್ಕೆ ಜೋಳದ ರಾಶಿ ಮಾಡುವ ವೇಳೆ ಭಾನುವಾರ ಈ ಘಟನೆ ನಡೆದಿದೆ. ರೇಣುಕಾ ಮಾದರ ಮೃತ ಮಹಿಳೆ. ರಾಶಿ ಮಾಡುವಾಗ ಮಷಿನ್​ನಲ್ಲಿ ಮೆಕ್ಕೆ ಜೋಳ ಹಾಕುವ ಸಮಯದಲ್ಲಿ ಸೀರೆ ಸಿಲುಕಿದೆ. ಇದರಿಂದ ಮಷಿನ್​ನಲ್ಲಿ ದೇಹ ಸಿಲುಕಿ ಸ್ಥಳದಲ್ಲಿಯೇ ಪ್ರಾಣ ಬಿಟ್ಟಿದ್ದಾರೆ. ತೋಗುಣಸಿ ಗ್ರಾಮದ ರೇಣುಕಾ ಎರಡು ದಿನಗಳ ಹಿಂದೆ ಶಿರೂರಗೆ …

Read More »

ರಸ್ತೆ ಗುಂಡಿಯಿಂದಾಗಿ ನಿವೃತ್ತ ಯೋಧ ಸ್ಥಳದಲ್ಲೇ ಸಾವು

ಮಂಡ್ಯ: ನಗರದ ಹೊರವಲಯದ ಕಾರಿಮನೆ ಗೇಟ್ ಬಳಿ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಅಫಘಾತದಲ್ಲಿ ನಿವೃತ್ತ ಯೋಧ ಸ್ಥಳದಲ್ಲೇ ದುರಂತ ಅಂತ್ಯಕಂಡಿದ್ದಾರೆ. ಮಂಡ್ಯ ತಾಲೂಕಿನ ಸಾತನೂರು ಗ್ರಾಮದ ಬೀರೇಶ್ವರ ಬಡಾವಣೆಯ ನರಸಯ್ಯ ಅವರ ಮಗ ಕುಮಾರ್​(34) ಮೃತರು.ಭಾರತೀಯ ಸೇನೆಯಲ್ಲಿ ನಿವೃತ್ತರಾದ ನಂತರ ಊರಿಗೆ ಆಗಮಿಸಿದ್ದ ಕುಮಾರ್​ಗೆ ಗ್ರಾಮಸ್ಥರು ಅದ್ದೂರಿ ಮೆರವಣಿಗೆ ಮಾಡಿ ಸ್ವಾಗತಿಸಿದ್ದರು. ಪೊಲೀಸ್​ ಇಲಾಖೆಗೆ ಕೆಲಸವೂ ಸಿಕ್ಕಿತ್ತು. ಬೆಂಗಳೂರಿನಲ್ಲಿ ಪೊಲೀಸ್​ ಕಾನ್​ಸ್ಟೆಬಲ್​ ತರಬೇತಿಯನ್ನೂ ಪಡೆಯುತ್ತಿದ್ದ ಕುಮಾರ್​, ರಜೆ ಮೇರೆಗೆ ಗ್ರಾಮಕ್ಕೆ …

Read More »