ಬೆಳಗಾವಿ: ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವಶದಲ್ಲಿದ್ದ ಆರೋಪಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕಮಿಷನರ್ ಡಾ.ಎಂ.ಬಿ. ಬೋರಲಿಂಗಯ್ಯ ಅವರು ಪ್ರಕರಣವನ್ನು ಸಿಐಡಿ ತನಿಖೆಗೆ ಶಿಫಾರಸು ಮಾಡಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಬಸನಗೌಡ ಈರನಗೌಡ ಪಾಟೀಲ (45) ಸಾವನ್ನಪ್ಪಿದ ಆರೋಪಿ. ಶುಕ್ರವಾರ ಸಂಜೆ ಗಾಂಜಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಪೊಲೀಸರು ಆರೋಪಿಯನ್ನು ಬಂಧಿಸಿ ಕರೆತರುವಾಗ ಕಾಕತಿ ಗ್ರಾಮದ ಮಾರ್ಗ ಮಧ್ಯೆಯೇ ಈರನಗೌಡನ ಆರೋಗ್ಯ ಹದಗೆಟ್ಟಿದೆ. ಈ ವೇಳೆ …
Read More »ಪೊಲೀಸರ ವಶದಲ್ಲಿದ್ದ ಆರೋಪಿ ಅನುಮಾನಾ
ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ಬೆಂಗಳೂರು: ದೇವನಹಳ್ಳಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ. ಕಾರ್ಯಕ್ರಮದ ವೇಳೆ ಗಣ್ಯ ವ್ಯಕ್ತಿಗಳು ಕೆಂಪೇಗೌಡರ ಪ್ರತಿಮೆ ಬಳಿ ನಿಂತು ಪ್ರಧಾನಿ ಮೋದಿಯವರೊಂದಿಗೆ ಫೋಟೋ ತೆಗೆಸಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಆದಿಚುಂಚನಗಿರಿ ಶ್ರೀಗಳಾದ ನಿರ್ಮಲಾನಂದ ಸ್ವಾಮೀಜಿಯವರ ಹೆಗಲ ಮೇಲೆ ಕಂದಾಯ ಸಚಿವ ಆರ್.ಅಶೋಕ್ ಕೈ ಹಾಕಿರುವ ಫೋಟೋ ವೈರಲ್ ಆಗಿದೆ. ಈ ಫೋಟೋವನ್ನು ಟ್ವಿಟರ್ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್ ಸಚಿವ …
Read More »ರಾಜ್ಯ ಬಿಜೆಪಿಯಲ್ಲಿನ ವ್ಯಾಪಕ ಭ್ರಷ್ಟಾಚಾರ ಕುರಿತು ಪ್ರಧಾನಿಗೆ ಪತ್ರ : ಡಿಕೆಶಿ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದ್ದು, ಅವರಿಂದ ಉತ್ತರ ಬರುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳ ಪತ್ರಗಳಿಗೆ ಪ್ರಧಾನಿ ಉತ್ತರಿಸುತ್ತಾರೆ. ಕಾಂಗ್ರೆಸ್ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡಾ ಉತ್ತರಿಸುವ ವಿಶ್ವಾಸವಿದೆ ಎಂದರು. ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್, ಗುತ್ತಿಗೆದಾರರೊಬ್ಬರು …
Read More »ಕನಕದಾಸ ಜಯಂತೋತ್ಸ ವ ಅದ್ದೂರಿಯಾಗಿ ಆಚರಣೆ
ಮಹದೇವಪುರ: ವಿಧಾನಸಭಾ ಕ್ಷೇತ್ರದ ಗುಂಜೂರಿನಲ್ಲಿ ದಾಸ ಶ್ರೇಷ್ಠ ಶ್ರೀ ಕನಕದಾಸರ 535 ನೇ ಜಯಂತೋತ್ಸ ವವನ್ನು ಶ್ರೀ ಕನಕ ಸೇವಾ ವತಿಯಿಂದ ಅದ್ದೂರಿಯಾಗಿ ಆಚರಿಸಲಾಯಿತು. ಗುಂಜೂರಿನ ಗೋಕುಲ್ ಸರ್ಕಲ್ ನಲ್ಲಿ ಥರ್ಮಕೋಲ್ ನಿಂದ ದೇವಾಲಯ ಸೆಟ್ ನಿರ್ಮಿಸಿ, ಅದರಲ್ಲಿ ಕನಕದಾಸರ ಮೂರ್ತಿ ಸ್ಥಾಪಿಸಿ ಪೂಜೆ ಸಲ್ಲಿಸಲಾಯಿತು.ನಂತರ ಅನ್ನಸಂತರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಶಿಕ್ಷಕರು ಹಾಗು ಪೌರಕರ್ಮಿಕರನ್ನು ಸನ್ಮಾನಿಸುವ ಮೂಲಕ ಅರ್ಥಪೂರ್ಣವಾಗಿ ಕನಕದಾಸರ ಜಯಂತಿಯನ್ನು ಆಚರಿಸಿದರು. ಈ ಸಂದರ್ಭದಲ್ಲಿ …
Read More »ಬಸ್ಗೆ ಬೈಕ್ ಡಿಕ್ಕಿ : 2 ಸಾವು
ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ಓವರ್ ಟೇಕ್ ಮಾಡುವ ಭರದಲ್ಲಿ ಎದುರಿಗೆ ಬಂದ ಬಸ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಗ್ರಾಮದ ಬಳಿ ನಿನ್ನೆ ರಾತ್ರಿ ಈ ಘಟನೆ ನಡೆದಿದೆ. ಯಲಹಂಕ ತಾಲೂಕಿನ ತಿಂಡ್ಲು ಗ್ರಾಮದ ಮಂಜುನಾಥ್ (24) ಹಾಗೂ ನಿಖಿಲ್ (19) ಮೃತರು. ಇವರು ಬೈಕ್ನಲ್ಲಿ ಗೌರಿಬಿದನೂರು ಕಡೆಯಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದರು. ಮುಂದಿನ ವಾಹನವನ್ನ ಓವರ್ ಟೇಕ್ ಮಾಡುವ ಭರದಲ್ಲಿ …
Read More »ಮತ್ತೊಂದು ವಿವಾದಕ್ಕೆ ಸಿಲುಕಿಕೊಂಡ ಶಾಸಕ ಸತೀಶ ಜಾರಕಿಹೊಳಿಬೆ
ಬೆಳಗಾವಿ : ‘ಹಿಂದು’ ಎನ್ನುವುದು ಪರ್ಷಿಯನ್ನಿಂದ ಬಂದ ಪದವಾಗಿದ್ದು, ಈ ಪದದ ಅರ್ಥ ಅಶ್ಲೀಲವಾಗಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ, ಬಳಿಕ, ತಮ್ಮ ಹೇಳಿಕೆಯನ್ನು ವಾಪಸ್ ಪಡೆದು ವಿವಾದ ತಣ್ಣಗಾಗಿಸಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಅವರಿಗೆ ಈಗ ಮತ್ತೊಂದು ವಿವಾದ ಸುತ್ತಿಕೊಂಡಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಮಾನವ ಬಂಧುತ್ವ ವೇದಿಕೆ ನ.6ರಂದು ಹಮ್ಮಿಕೊಂಡಿದ್ದ ಮನೆ ಮನೆಗೆ ಬುದ್ಧ, ಬಸವ, ಅಂಬೇಡ್ಕರ ಕಾರ್ಯಕ್ರಮದಲ್ಲಿ ಧರ್ಮವೀರ ಸಂಭಾಜಿ ಮಹಾರಾಜರಿಗೆ …
Read More »ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಹಿಂಗಾರು ಮಳೆ ಚುರುಕುಕೊಳ್ಳುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದಲ್ಲಿ ಹಿಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗಲಿದೆ. ಕರ್ನಾಟಕದ ಒಟ್ಟು 8 ಜಿಲ್ಲೆಗಳಿಗೆ ಹಳದಿ …
Read More »ಮೊದಲ ಆಹ್ವಾನ ಪತ್ರಿಕೆಯನ್ನು ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ : ಬಿಜೆಪಿ ಸ್ಪಷ್ಟನೆ
ಬೆಂಗಳೂರು: ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್ ಸಾಮಾಜಿಕ ಜಾಲತಾಣಗಳಲ್ಲಿ ಅಸಮಾಧಾನ ಹೊರ ಹಾಕಿದ ಬೆನ್ನಲ್ಲೇ ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ, ಮೊದಲ ಆಹ್ವಾನ ಪತ್ರಿಕೆಯನ್ನು ಎಚ್.ಡಿ.ದೇವೇಗೌಡರಿಗೆ ನೀಡಿದ್ದೇವೆ ಎಂದು ಸ್ಪಷ್ಟನೆ ನೀಡಿದೆ. ಪ್ರಧಾನಿಯಾಗಿದ್ದ ಏಕೈಕ ಕನ್ನಡಿಗ ಎಚ್.ಡಿ.ದೇವೇಗೌಡರಿಗೆ ಮೊದಲ ಆಹ್ವಾನ ಪತ್ರ ಹೋಗಿದ್ದು, ಮಾತ್ರವಲ್ಲ ಖುದ್ದು ಸಿಎಂ ಬಸವರಾಜ ಬೊಮ್ಮಾಯಿ ದೂರವಾಣಿ ಕರೆ ಮಾಡಿ ಆಹ್ವಾನಿಸಿದ್ದಾರೆ. ಈ ವಿಷಯದಲ್ಲೂ ಸುಳ್ಳಾಡುವ …
Read More »ಕುರಿ ಕಾಯುತ್ತಿದ್ದವನ ಮೇಲೆ ಕೊಡಲಿಯಿಂದ ಹಲ್ಲೆ ಖಂಡಿಸಿ ಪ್ರತಿಭಟನೆ
ಧಾರವಾಡ : ನವಲೂರು ಬಡಾವಣೆಯಲ್ಲಿ ಕುರಿ ಕಾಯುತ್ತಿದ್ದವನ ಮೇಲೆ ಕೊಡಲಿಯಿಂದ ಹಲ್ಲೆ ಖಂಡಿಸಿ ಹಾಗೂ ಕುರುಬರಿಗೆ ಎಸ್ಸಿ ಎಸ್ಟಿ ಮೀಸಲಾತಿ ಒದಗಿಸಬೇಕು ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕುರಿಗಾರರು ಕುರಿಗಳ ಜೋತೆಗೆ ಬಂದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು ಈ ಸಂದರ್ಭದಲ್ಲಿ ಕುರುಬ ಸಮಾಜಕ್ಕೆ ಎಸ್ಟಿ ಮೀಸಲಾತಿ ಒದಗಿಸಬೇಕು ಕುರುಬರಿಗೆ ಭದ್ರತೆ ಒದಗಿಸಬೇಕು ಎಂದು ಒತ್ತಾಯಿಸಿದ್ದರು. ಪ್ರತಿಭಟನೆಯಲ್ಲಿ ಬಸವರಾಜ ದೇವರು …
Read More »2 ಕಿಮೀ ನಡೆದುಕೊಂಡು ಬಂದು ಪುರಿ ಜಗನ್ನಾಥ ದರ್ಶನ ಪಡೆದ ರಾಷ್ಟ್ರಪತಿ
ಪುರಿ: ದೇಶದ ಅತ್ಯುನ್ನತ ಹುದ್ದೆಗೆ ಏರಿದ ಬಳಿಕ ಮೊದಲ ಬಾರಿಗೆ ಒಡಿಶಾಕ್ಕೆ ಭೇಟಿ ನೀಡಿರುವ ಅವರು ಪುರಿ ಜಗನ್ನಾಥ ದೇಗುಲಕ್ಕೆ ಭೇಟಿ ನೀಡಿದ್ದಾರೆ. ದ್ರೌಪದಿ ಮುರ್ಮು ಅವರು ಹಮ್ಮು ಬಿಮ್ಮು ಇಲ್ಲದ ರಾಷ್ಟ್ರಪತಿ ಎಂಬುದನ್ನು ಸಾಬೀತು ಮಾಡಿದ್ದಾರೆ. ವಿಶೇಷವೆಂದರೆ, ಅವರು ಎರಡು ಕಿಮೀ ನಡೆದುಕೊಂಡು ಬಂದು ದೇಗುಲದಲ್ಲಿ ವಿಶೇಷ ಪೂಜೆ-ಪ್ರಾರ್ಥನೆ ಸಲ್ಲಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಷ್ಟ್ರಪತಿಗಳ ಜತೆಗೆ ಇದ್ದರು. ದ್ರೌಪದಿ ಮುರ್ಮು ಅವರು ಒಟ್ಟು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





