ಬೆಂಗಳೂರು : ಕಾಂತಾರ ಸಿನಿಮಾ ಎಲ್ಲೆಡೆ ತನ್ನ ಹವಾ ಎಬ್ಬಿಸಿ ಬಿಟ್ಟಿದೆ. ಈ ಸಿನಿಮಾ ಹವಾ ಹೆಚ್ಚಿಸೋ ಲಕ್ಷಣ ಹೆಚ್ಚಾಗ್ತಾ ಇದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್ನಲ್ಲಿ ಕಾಂತಾರ ಹೆಚ್ಚಿದೆ.ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ ರೂಪಂ ಹಾಡು ವಿವಾದ ಆಗಿತ್ತು. ಈ ಹಾಡನ್ನು ಕಾಂತಾರ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಅವರು ಮಲಯಾಳಂ ಭಾಷೆಯ ‘ನವರಸಂ..’ ಹಾಡಿನಿಂದ ಇದನ್ನು …
Read More »ಕೆ. ಆರ್. ಪುರಂ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸಾವು : ಎಚ್ ಡಿಕೆ ಆಗ್ರಹ
ಬೆಂಗಳೂರು: ಕೆ. ಆರ್. ಪುರಂ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ನಂದೀಶ್ ಮಾನಸಿಕವಾಗಿ ನೊಂದು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಗೂ ಅವರ ಸಾವಿಗೆ ಕಾರಣವಾದ ಅಂಶಗಳ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಇದು ಉತ್ತರ ಭಾರತದ ಅಧಿಕಾರಿಗಳ ದರ್ಪದಿಂದ ಹಾಗೂ ಸರ್ಕಾರದಿಂದಲೇ ಆಗಿರುವ ಕಗ್ಗೊಲೆಯೇ ಹೊರತು …
Read More »ಅಪ್ಪು ಪುಣ್ಯ ಸ್ಮರಣೆ : ಕಂಠೀರವ ಸ್ಟುಡಿಯೋ ಬಳಿಯಲ್ಲಿ ಬಿಗಿ ಬಂದೋಬಸ್ತ್
ಬೆಂಗಳೂರು: ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ನಮ್ಮನ್ನೆಲ್ಲ ಅಗಲಿ ಇಂದಿಗೆ ಒಂದು ವರ್ಷ ಕಳೆದಿದೆ. ಆದರೂ, ಇಂದಿಗೂ ಅಪ್ಪು ನಮ್ಮ ನಡುವೆ ಇಲ್ಲ ಎಂಬುದನ್ನು ಅರಗಿಸಿಕೊಳ್ಳಲು ಆಗುವುದಿಲ್ಲ. ತಮ್ಮ ಸರಳತೆ ಮತ್ತು ಮಾನವೀಯ ಗುಣಗಳಿಂದಲೇ ಅಸಂಖ್ಯಾತ ಅಭಿಮಾನಿಗಳ ಮನದಲ್ಲಿ ಅಪ್ಪು ಮನೆ ಮಾಡಿದ್ದಾರೆ. ಇಂದು ಅಪ್ಪು ಅವರ ಒಂದನೇ ವರ್ಷದ ಪುಣ್ಯ ಸ್ಮರಣೆ ಹಿನ್ನಲೆಯಲ್ಲಿ ಕಂಠೀರವ ಸ್ಟುಡಿಯೋ ಬಳಿಯಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಉತ್ತರ ವಿಭಾಗದ ಡಿಸಿಪಿ ವಿನಾಯಕ್ ಪಾಟೀಲ್ರ …
Read More »ಕನ್ನಡಿಗರಿಗೆ ಮತ್ತೊಂದು ಬಿಗ್ ಶಾಕ್
ಬೆಂಗಳೂರು : ಕೇಂದ್ರ ಸರ್ಕಾರವು ಕನ್ನಡಿಗರಿಗೆ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಿಂದಿ ಅಥವಾ ಇಂಗ್ಲಿಷ್ …
Read More »ತೆಲಂಗಾಣದಲ್ಲಿ 4ನೇ ದಿನಕ್ಕೆ ಕಾಲಿಟ್ಟ ಭಾರತ್ ಜೋಡೋ ಯಾತ್ರೆ
ತೆಲಂಗಾಣ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ತೆಲಂಗಾಣ ಪ್ರವಾಸ ಮುಂದುವರೆದಿದೆ. ನಾಲ್ಕನೇ ದಿನದಲ್ಲಿ ಮಹೆಬೂಬ್ ನಗರ ಜೆಪಿಎಂಸಿಯಿಂದ ಮೆರವಣಿಗೆ ಆರಂಭವಾಗಿದೆ. ಮಾರ್ಗಮಧ್ಯೆ ಪಾಲಮೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳನ್ನು ಭೇಟಿಯಾಗಿ ರಾಹುಲ್ ಗಾಂಧಿ ಸಂವಾದ ನಡೆಸಿದರು. ಇಂದು ಅವರ ಪಾದಯಾತ್ರೆ ಮಹೆಬೂಬನಗರದಿಂದ ಜಡಚರ್ಲಾವರೆಗೆ ಮುಂದುವರಿಯಲಿದ್ದು, ಪಾದಯಾತ್ರೆ ಒಟ್ಟು 20.3 ಕಿಲೋಮೀಟರ್ ದೂರವನ್ನು ಒಳಗೊಂಡಿದೆ. ಇಂದು ಸಂಜೆ ಪಾದಯಾತ್ರೆಯಲ್ಲಿ ರೇವಂತ್ ರೆಡ್ಡಿ ಜೊತೆಗೆ ಹಲವು ಮುಖಂಡರು ಭಾಗವಹಿಸಲಿದ್ದಾರೆ. …
Read More »ಭಾರತದಲ್ಲಿ ಸಾಮಾಜಿಕ ಜಾಲತಾಣಗಳಿಗೆ ಹೊಸ ನಿಯಮ ಜಾರಿ
ನವದೆಹಲಿ: ಭಾರತದ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಐಟಿ ನಿಯಮಗಳನ್ನು ತಿದ್ದುಪಡಿ ಮಾಡುವ ಅಧಿಸೂಚನೆಯನ್ನು ಹೊರಡಿಸಿದೆ. ಶುಕ್ರವಾರ ಹೊರಡಿಸಿರುವ ಈ ಅಧಿಸೂಚನೆಯಲ್ಲಿ, ಮೂರು ಸದಸ್ಯರ ಕುಂದುಕೊರತೆ ಮೇಲ್ಮನವಿ ಸಮಿತಿಗಳನ್ನು (ಜಿಎಸಿ) ಕೇಂದ್ರವು ಸ್ಥಾಪಿಸಲಿದೆ ಎಂದು ಸಚಿವಾಲಯ ತಿಳಿಸಿದೆ. ಈ ಮೇಲ್ಮನವಿ ಫಲಕಗಳು ವಿವಾದಾತ್ಮಕ ವಿಷಯವನ್ನು ಹೋಸ್ಟ್ ಮಾಡುವ ಕುರಿತು ಟ್ವಿಟ್ಟರ್ ಮತ್ತು ಫೇಸ್ ಬುಕ್ ನಂತಹ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳ ನಿರ್ಧಾರಗಳ ವಿರುದ್ಧ ಬಳಕೆದಾರರು ಹೊಂದಿರಬಹುದಾದ ಕುಂದುಕೊರತೆಗಳನ್ನು ನಿವಾರಿಸಲು …
Read More »ಅಪ್ಪು ಅಗಲಿ ಇಂದಿಗೆ ಒಂದು ವರ್ಷ
ಬೆಂಗಳೂರು: ಕರುನಾಡಿನ ಪ್ರತಿಯೊಬ್ಬರು ಕೂಡ ಅಂದುಕೊಂಡಿರುತ್ತಾರೆ. ಯಾಕೆಂದರೆ ನಮಗ್ಯಾರಿಗೂ ಅಪ್ಪು ನಮ್ಮ ಜೊತೆ ಇಲ್ಲ ಎಂದು ನೆನೆಪಿಸಿಕೊಳ್ಳುವುದಕ್ಕೂ ಇಷ್ಟವಿಲ್ಲ. ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಇನ್ನೂ ನಮ್ಮ ಜೊತೆಯೆ ಇದ್ದಾರೆ. ಅಭಿಮಾನಿಗಳ ಹೃದಯ ಸಿಂಹಾಸನವೇರಿ ಕೂತಿದ್ದಾರೆ. ಕಳೆದ ವರ್ಷ ಈ ದಿನದಂದು ರಾಜ್ಯಕ್ಕೆ ಬರಸಿಡಿಲು ಬಡಿದಿತ್ತು. ನಮ್ಮ ಪ್ರೀತಿಯ ಪವರ್ ಸ್ಟಾರ್ ಅವರನ್ನು ನಾವು ಕಳೆದುಕೊಂಡಿದ್ದೀವಿ. ಹೃದಯಾಘಾತದಿಂದ ಅಪ್ಪು ಬಾರದ ಲೋಕಕ್ಕೆ ಹೊರಟಿದ್ದರು. ಆ ಕರಾಳ ದಿನ ಮತ್ತೆ …
Read More »ಎಫ್.ಎಂ.ಸಿ.ಜಿ ಕ್ಲಸ್ಟರ್ ಹಾಗೂ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಬೊಮ್ಮಾಯಿ ಚಾಲನೆ
ಹುಬ್ಬಳ್ಳಿ: ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಧಾರವಾಡ ಜಿಲ್ಲಾಡಳಿತ ಹಾಗೂ ಎಫ್ಐಸಿಸಿಐ ಸಹಯೋಗದಲ್ಲಿ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಹಮ್ಮಿಕೊಳ್ಳಲಾಗಿದ್ದ ಎಫ್.ಎಂ.ಸಿ.ಜಿ ಕ್ಲಸ್ಟರ್ ಹುಬ್ಬಳ್ಳಿ ಹಾಗೂ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಿಎಂ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದರು. ಹೌದು.. ಉತ್ತರ ಕರ್ನಾಟಕ ಭಾಗದ ಧಾರವಾಡದ ಮುಮ್ಮಿಗಟ್ಟಿಯಲ್ಲಿ ಎಫ್ಎಂಸಿಜಿ ಕ್ಲಸ್ಟರ್ ಸ್ಥಾಪನೆ ಪ್ರಕ್ರಿಯೆಗೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಕರ್ನಾಟಕ ಎಫ್ಎಂಸಿಜಿ ಬಳಕೆಯಲ್ಲಿ ಮುಂಚೂಣಿಯಲ್ಲಿದೆ. ಆದರೆ, ಶೇ 15ರಷ್ಟು ಮಾತ್ರ ದಿನಬಳಕೆ ವಸ್ತುಗಳು ಇಲ್ಲಿ …
Read More »ಸರ್ಕಾರಿ ಶಾಲೆಗೆ ಹೊಸ ರೂಪ: ಬಣ್ಣದರ್ಪಣೆಗೆ ಕೇಂದ್ರ ಸಚಿವರ ಚಿಂತನೆ
ಹುಬ್ಬಳ್ಳಿ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೊಸ ಹೊಸ ಕಾರ್ಯಕ್ರಮಗಳ ಮೂಲಕ ನಮಗೆ ಪ್ರೇರಣೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರಿ ಶಾಲೆಗಳಿಗೆ ಹೊಸ ರೂಪ ನೀಡಲು ಬಣ್ಣದರ್ಪಣೆ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ನಾಳೆ ಕುಂದಗೋಳದ ಹರಭಟ ಶಾಲೆ ಮೈದಾನದಲ್ಲಿ ಚಾಲನೆ ನೀಡಲಾಗುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರಿ ಶಾಲಾ, ಕಾಲೇಜುಗಳಿಗೆ ಬಣ್ಣದರ್ಪಣೆ ಮಾಡುವ ಕಾರ್ಯಕ್ಕೆ ಮುಂದಾಗಿದ್ದು, ಕೆಲವರು ಶಾಲೆ ಹಾಳಾಗಿದೆ …
Read More »ಹುಬ್ಬಳ್ಳಿಯಲ್ಲಿ ಕೋಟಿ ಕಂಠ ಗಾಯನ: ನಾವು ಹಾಡುವ ನುಡಿಯೇ ಕನ್ನಡ ನುಡಿ…!
ಹುಬ್ಬಳ್ಳಿ: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹುಬ್ಬಳ್ಳಿಯ ವಿಶ್ವೇಶ್ವರ ನಗರದ ಪಿರಾಮಿಡ್ ಧ್ಯಾನ ಮಂದಿರಲ್ಲಿ ಹಮ್ಮಿಕೊಳ್ಳಲಾಯಿತು. 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಕೋಟಿ ಕಂಠ ಗಾಯನವನ್ನು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಬಿಜೆಪಿ ಸಾಂಸ್ಕೃತಿಕ ಪ್ರಕೋಷ್ಟದ ಸೆಂಟ್ರಲ್ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು. ಇನ್ನೂ ಸಂಪ್ರದಾಯಿಕ ಉಡುಗೆ ತೊಡುಗಗಳ ಮೂಲಕನೂರಾರು ಜನರು, ಕೋಟಿ ಕಂಠ ಗಾಯನ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





