Breaking News

BigTv News

ನಾಪತ್ತೆಯಾಗಿದ್ದ ಪ್ರವೀಣ್‌ ಬೆಳ್ಚಾಡ ಮೃತದೇಹ ಪತ್ತೆ

ಉಡುಪಿ: ನನ್ನನ್ನು ಹುಡುಕಬೇಡಿ ಎಂದು ಪತ್ರಬರೆದಿಟ್ಟು ಕಳೆದ 10 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪ್ರವೀಣ್‌ ಬೆಳ್ಚಾಡ ಎಂಬವರ ಮೃತದೇಹವು ಬ್ರಹ್ಮಾವರದ ಹಂದಾಡಿ ಕಂಬಳಗದ್ದೆಯ ಹೊಳೆ ಬದಿಯಲ್ಲಿ ಪತ್ತೆಯಾಗಿದೆ. ಪ್ರವೀಣ್‌ ಅಕ್ಟೋಬರ್ 18ರಂದು ರಾತ್ರಿ ಸ್ಕೂಟರ್‌ ಸಮೇತ ಕಾಣೆಯಾಗಿದ್ದರು. ಮನೆಯಲ್ಲಿ ಪತ್ರ ಬರೆದಿಟ್ಟಿದ್ದ ಅವರು ನನ್ನನ್ನು ಹುಡುಕಬೇಡಿ , ನನ್ನ ಸಾವಿಗೆ ನಾನೇ ಕಾರಣ ಎಂದು ಅದರಲ್ಲಿ ಬರೆದಿದ್ದರು. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ದೂರ ದಾಖಲಾಗಿತ್ತು. ಕೆಲ ದಿನಗಳ ಹಿಂದೆ …

Read More »

ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು: ಬಿ.ಸಿ.ನಾಗೇಶ್

ಮಡಿಕೇರಿ : ರಾಜ್ಯದಲ್ಲಿರುವ ಎಲ್ಲ ಅರೇಬಿಕ್ ಶಾಲೆಗಳ ಮಕ್ಕಳು ಬೇರೆ ಶಾಲೆಗಳ ಮಕ್ಕಳಂತೆ ಉತ್ತಮ ಶಿಕ್ಷಣ ಪಡೆಯಬೇಕು ಎಂಬ ಉದ್ದೇಶದಿಂದ ಅರೇಬಿಕ್ ಶಾಲೆಗಳ ಬೋಧನೆ ಕುರಿತು ವರದಿ ಕೇಳಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ 106 ಅನುದಾನಿತ ಅರೇಬಿಕ್ ಶಾಲೆಗಳು ಇವೆ. 80 ಅನುದಾನ ರಹಿತ ಶಾಲೆಗಳಿವೆ. ಇಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮದ ಅನುಸಾರ ಬೋಧನೆ ನಡೆಯುತ್ತಿಲ್ಲ ಎಂಬ ಆರೋಪಗಳಿವೆ. ಹೀಗಾಗಿ, ಈ …

Read More »

ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಆತ್ಮಹತ್ಯೆಗೆ ಶರಣು

ಬಳ್ಳಾರಿ: ಶೀಲ ಶಂಕಿಸಿ ಪತ್ನಿಯನ್ನು ಹತ್ಯೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿ ನಡೆದಿದೆ. ಸಂಡೂರು ತಾಲೂಕಿನ ಜೀಗೇನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕುಡಗೋಲಿನಿಂದ ಪತ್ನಿ ರೇಖಾಳನ್ನು ಪತಿ ಹತ್ಯೆಗೈದಿದ್ದಾನೆ. ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರಸ್ವಾಮಿ ಪತ್ನಿಯನ್ನೇ ಕೊಲೆಗೈದು, ನೇಣಿಗೆ ಶರಣಾದ ವ್ಯಕ್ತಿ. ಚೋರನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಇಂದು ಹೆಚ್.ಡಿ ಕುಮಾರಸ್ವಾಮಿ ಕನಸಿನ ಕೂಸು ‘ಪಂಚರತ್ನ’ ರಥ ಯಾತ್ರೆಗೆ ಚಾಲನೆ

ಬೆಂಗಳೂರು : ಇಂದು ಹೆಚ್.ಡಿ ಕುಮಾರಸ್ವಾಮಿ ಕನಸಿನ ಕೂಸು ‘ಪಂಚರತ್ನ’ ರಥ ಯಾತ್ರೆಗೆ ಸಾಂಕೇತಿಕ ಚಾಲನೆ ಸಿಗಲಿದೆ. ಇಂದು ಬೆಳಗ್ಗೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಬೆಂಗಳೂರಿನಲ್ಲಿ ಪಂಚರತ್ನ ರಥ ಯಾತ್ರೆಗೆ ಹೆಚ್.ಡಿ ಕುಮಾರಸ್ವಾಮಿ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯ ಜೆಡಿಎಸ್ ಮುಖಂಡರು, ಶಾಸಕರು ಭಾಗಿಯಾಗಲಿದ್ದಾರೆ ಎನ್ನಲಾಗಿದೆ. ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ತಯಾರಿ ಜೋರಾಗಿದೆ. ಕಾಂsಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದು …

Read More »

ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಯುವಕ ಸಾವು

ಹೈದ್ರಬಾದ್‌: ಆರೋಗ್ಯವಂತ ಜನರು ಮತ್ತು ಚಿಕ್ಕ ಮಕ್ಕಳು ಸಹ ಹೃದಯಾಘಾತದಿಂದ ಸಾಯುವ ಅನೇಕ ಉದಾಹರಣೆಗಳಿವೆ.  ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಇದೇ ರೀತಿಯ ಘಟನೆ ನಡೆದಿದೆ. ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯ ಬೊಯ್ನಪಲ್ಲಿ ಮಂಡಲದ ವೆಂಕಟರಾವ್ಪಲ್ಲಿ ಗ್ರಾಮದ ಒಂಬತ್ತು ವರ್ಷದ ವಿದ್ಯಾರ್ಥಿ ಕೌಶಿಕ್, ಶಾಲೆಯಲ್ಲಿ ಊಟ ಮಾಡುವಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

Read More »

ಕೇವಲ ಹರ್ಷ ಸಹೋದರಿ ಅಶ್ವಿ‌ನಿ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಶಿವಮೊಗ್ಗಕ್ಕೆ ರಕ್ಷಣೆ ನೀಡಲು ಇಲಾಖೆ ಸಿದ್ಧವಿದೆ : ಎಸ್ಪಿ

‘ ಶಿವಮೊಗ್ಗ: ಕೆಲವು ತಿಂಗಳ ಹಿಂದೆ ದುಷ್ಕರ್ಮಿಗಳಿಂದ ಹತ್ಯೆಯಾಗಿದ್ದ ಬಜರಂಗ ದಳದ ಕಾರ್ಯಕರ್ತ ಹರ್ಷ ಅವರ ಕುಟುಂಬದ ಸದಸ್ಯರಿಗೆ ಕಿಡಿಗೇಡಿಗಳು ಕೊಲೆ ಬೆದರಿಕೆ ಹಾಕಿದ್ದಾರೆಂಬ ಆರೋಪದ ಬಗ್ಗೆ ತನಿಖೆ ನಡೆಸಲಾಗಿದೆ. ಆದರೆ ಈವರೆಗೆ ಬೆದರಿಕೆ ಹಾಕಿರುವುದಕ್ಕೆ ಪೂರಕವಾದ ಅಂಶಗಳು ಕಂಡುಬಂದಿಲ್ಲ ಎಂದು ಶಿವಮೊಗ್ಗ ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೇವಲ ಹರ್ಷ ಸಹೋದರಿ ಅಶ್ವಿ‌ನಿ ಕುಟುಂಬಕ್ಕೆ ಮಾತ್ರವಲ್ಲ, ಇಡೀ ಶಿವಮೊಗ್ಗಕ್ಕೆ ರಕ್ಷಣೆ ನೀಡಲು ಇಲಾಖೆ …

Read More »

ಅಮೆರಿಕದಲ್ಲಿ ಭೀಕರ ಅಪಘಾತ : 3 ಭಾರತೀಯ ವಿದ್ಯಾರ್ಥಿಗಳು ಸಾವು

ವಾಷಿಂಗ್ಟನ್; ಅಮೆರಿಕದಲ್ಲಿ ಭೀಕರ ಅಪಘಾತ ನಡೆದಿದ್ದು, ಮೂವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಯುನೈಟೆ ಸ್ಟೇಟ್ಸ್‌ನ ಪಶ್ಚಿಮ ಮ್ಯಾಸಚೂಸೆಟ್ಸ್‌ನಲ್ಲಿ ಈ ಘಟನೆ ನಡೆದಿದೆ. ಕಾರು ಹಾಗೂ ಮತ್ತೊಂದು ವಾಹನದ ನಡುವೆ ಡಿಕ್ಕಿ ಸಂಭವಿಸಿ ಭೀಕರ ಅಪಘಾತ ಸಂಭವಿಸಿದೆ. ಆಂಧ್ರಪ್ರದೇಶ ಮೂಲದವರಾದ ಪ್ರೇಮ್ ಕುಮಾರ್ ರೆಡ್ಡಿ ಗೋಡಾ (27), ಪಾವನಿ ಗುಲ್ಲಪಲ್ಲಿ (22) ಮತ್ತು ಸಾಯಿ ನರಸಿಂಹ ಪಟಂಶೆಟ್ಟಿ (22) ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ …

Read More »

ಇಂದು ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’ ಬಿಡುಗಡೆ

ಬೆಂಗಳೂರು : ಇಂದು ರಾಜ್ಯಾದ್ಯಂತ ಪುನೀತ್‌ ರಾಜ್‌ಕುಮಾರ್‌ ನಟನೆಯ ‘ಗಂಧದ ಗುಡಿ’  ಇಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಬೆಂಗಳೂರಿನ ಥಿಯೇಟರ್‌ಗಳಲ್ಲಿ ಫಸ್ಟ್‌ ಶೋ ಆರಂಭವಾಗಿದೆ. ಇಂದು ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಎಲ್ಲರೂ ಗಂಧದ ಗುಡಿ ಸಾಕ್ಷ್ಯಾಚಿತ್ರ ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಎಲ್ಲಾ ಥಿಯೇಟರ್‌ಗಳ ಎದುರು ಪುನೀತ್‌ ರಾಜ್‌ಕುಮಾರ್‌ ಅವರ ಕಟೌಟ್‌ಗಳು ರಾರಾಜಿಸುತ್ತಿದ್ದು, ಅಭಿಮಾನಿಗಳು ಅವುಗಳಿಗೆ ಹಾಲಿನ ಅಭಿಷೇಕ ಮಾಡುತ್ತಿದ್ದಾರೆ. ಕರ್ನಾಟಕದಲ್ಲಿ 225ಕ್ಕೂಹೆಚ್ಚು ಸ್ಕ್ರೀನ್‌ಗಳಲ್ಲಿ ಚಿತ್ರ ರಿಲೀಸ್‌ ಆಗ್ತಿದೆ.

Read More »

ನ.11ರಂದು ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ

ಬೆಂಗಳೂರ: ಬರುವ ನ.11ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡುತ್ತಿದ್ದು, ಒಟ್ಟು ನಾಲ್ಕು ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಅಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಮೋದಿ ಆಗಮಿಸಲಿದ್ದಾರೆ. ಅಲ್ಲಿಂದ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಲಿಕಾಪ್ಟರ್‌ನಲ್ಲಿ ತೆರಳುವ ಅವರು ಮೊದಲಿಗೆ ಅಲ್ಲಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ‘ಪ್ರಗತಿಯ ಪ್ರತಿಮೆ’ಯನ್ನು ಅನಾವರಣ ಮಾಡಲಿದ್ದಾರೆ. ಬಳಿಕ ಕೆಂಪೇಗೌಡ …

Read More »

ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವು

ಮುದ್ದೇಬಿಹಾಳ(ವಿಜಯಪುರ): ಹಾವು ಕಚ್ಚಿ ನಾಲ್ಕು ತಿಂಗಳ ಗರ್ಭಿಣಿ ಸಾವಿಗೀಡಾದ ಘಟನೆ ತಾಲೂಕಿನ ಕುಂಟೋಜಿಯಲ್ಲಿ  ಬೆಳಗಿನ ಜಾವ ನಡೆದಿದೆ. ಕುಂಟೋಜಿ ಗ್ರಾಮದಲ್ಲಿ ಹೊಲದ ಪಕ್ಕದಲ್ಲೇ ಇರುವ ಮನೆಯಲ್ಲಿ ಮಲಗಿದ್ದಾಗ ಬೆಳಗಿನಜಾವ ವಿಷಕಾರಿ ಹಾವು ಕಚ್ಚಿದೆ ಎನ್ನಲಾಗಿದೆ. ತೀವ್ರ ಅಸ್ವಸ್ಥಳಾದ ನಾಲ್ಕು ತಿಂಗಳ ಗರ್ಭಿಣಿ ನಿರ್ಮಲಾ ಯಲ್ಲಪ್ಪ ಚಲವಾದಿ(25) ಮೃತಪಟ್ಟಿದ್ದಾರೆ. ಹಾವು ಕಚ್ಚಿರುವುದು ಗೊತ್ತಾದ ತಕ್ಷಣ ಗರ್ಭಿಣಿಯನ್ನು ಮುದ್ದೇಬಿಹಾಳ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆ ಬಳಿಕ, ಹೆಚ್ಚಿನ ಚಿಕಿತ್ಸೆಗೆ ಎಂದು ವಿಜಯಪುರ …

Read More »