ಹುಬ್ಬಳ್ಳಿಯ ಗಾಮನಗಟ್ಟಿ ನಿವಾಸಿ ಕಲ್ಲನಗೌಡ ಹಾಗೂ ಆತನ ತಮ್ಮ ಬಸವನಗೌಡನ ನಡುವೆ ಹಲವು ದಿನಗಳಿಂದ ಆಸ್ತಿ ವಿಚಾರಕ್ಕೆ ಜಗಳ ನಡೆಯುತ್ತಲೇ ಇತ್ತು. ಇದೆ ವಿಚಾರಕ್ಕೆ ನಿನ್ನೆ ಗುರುವಾರದಂದು ತಮ್ಮನಾದ ಬಸವನಗೌಡ ಏಕಾಏಕಿ ಕಲ್ಲನಗೌಡ ಮನೆಗೆ ನುಗ್ಗಿ ಕಣ್ಣಿಗೆ ಕಾರದ ಪುಡಿ ಏರಚಿ ಚಾಕುವಿನಿಂದ ಮನಬಂದಂತೆ ದಾಳಿ ಮಾಡಿದ್ದಾನೆ. ಕಲ್ಲನಗೌಡನ ದ್ವನಿ ಕೇಳಿ ಓಡಿ ಬಂದ ಆತನ ಹೆಂಡತಿ ಮೇಲೆ ಕೂಡ ಬಸವನಗೌಡ ಹಲ್ಲೆ ಮಾಡಿದ್ದಾನೆ, ಆಕೆಯು ಓಡಿ ಹೋಗಿ ತನ್ನ …
Read More »ನೈಜೀರಿಯಾದಲ್ಲಿ ಪ್ರವಾಹ : ಸುಮಾರು 500 ಜನಸಾವು
ನೈಜೀರಿಯಾ : ದಶಕದಲ್ಲೇ ಅತಿ ಭೀಕರ ಪ್ರವಾಹವನ್ನ ನೈಜೀರಿಯಾ ಎದುರಿಸುತ್ತಿದೆ. ಈವರೆಗೆ ಪ್ರವಾಹಕ್ಕೆ ಸಿಲುಕಿ ಸುಮಾರು 500 ಜನ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ 14 ಲಕ್ಷ ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ ಅಂತ ಅಲ್ಲಿನ ಸರ್ಕಾರ ತಿಳಿಸಿದೆ. ಧಾರಾಕಾರವಾಗಿ ಸುರಿಯುತ್ತಿರೊ ಮಳೆಯಿಂದ 45 ಸಾವಿರಕ್ಕೂ ಅಧಿಕ ಮನೆಗಳು ನಾಶಗೊಂಡಿವೆ ಹಾಗೂ 70 ಸಾವಿರ ಹೆಕ್ಟೇರ್ಗೂ ಅಧಿಕ ಕೃಷಿ ಭೂಮಿ ಸಂಪೂರ್ಣ ಹಾನಿಗೊಳಗಾಗಿದೆ ಅಂತ ಸರ್ಕಾರ ಮಾಹಿತಿ ನೀಡಿದೆ.
Read More »ಉತ್ತರ ಸಿಕ್ಕಿಂನಲ್ಲಿ ಭೂಕುಸಿತ : 550 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಣೆ
ಉತ್ತರ ಸಿಕ್ಕಿಂ: ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಭೂಕುಸಿತದಲ್ಲಿ ಸಿಲುಕಿರುವ 550 ಪ್ರವಾಸಿಗರನ್ನು ಭಾರತೀಯ ಸೇನೆ ರಕ್ಷಿಸಿದ್ದು, ಎಲ್ಲರಿಗೂ ವೈದ್ಯಕೀಯ ನೆರವು ಮತ್ತು ಆಹಾರ ಮತ್ತು ಕಠಿಣ ಹವಾಮಾನ ಪರಿಸ್ಥಿತಿಗಳಲ್ಲಿ ಸುರಕ್ಷತೆಗೆ ಮಾರ್ಗದರ್ಶನ ನೀಡಲಾಯಿತು. ಭಾರೀ ಮಳೆ ಮತ್ತು ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಲ್ಲಿ ಸಿಲುಕಿರುವ ಪ್ರವಾಸಿಗರು ಮತ್ತು ಸ್ಥಳೀಯರಿಗೆ ಎಲ್ಲಾ ಸಹಾಯವನ್ನು ಒದಗಿಸುವಂತೆ ನಾಗರಿಕ ಆಡಳಿತದ ಕೋರಿಕೆಯ ಮೇರೆಗೆ ಲಾಚುಂಗ್ನಲ್ಲಿರುವ ಸೇನಾ ಶಿಬಿರ ತಕ್ಷಣವೇ ಕಾರ್ಯಪ್ರವೃತ್ತವಾಗಿ, ಅಗತ್ಯ ನೆರವನ್ನು ನೀಡುತ್ತಿದೆ …
Read More »ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಕೆಲಸಕ್ಕೆ ಹಾಜರಾದ ಪ್ರವೀಣ್ ನೆಟ್ಟಾರು ಅವರ ಪತ್ನಿ
ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿಯವರ ಆದೇಶದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತ ದಿ| ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ವಿಭಾಗದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸಕ್ಕೆ ಹಾಜರಾಗಿದ್ದಾರೆ. ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಅವರು ನೇಮಕಾತಿ ಆದೇಶ ಪತ್ರ ಹಾಗೂ ಅಗತ್ಯ ದಾಖಲೆಗಳನ್ನು ಸಲ್ಲಿಸಿದರು. ಸಿಎಂ ಕಚೇರಿಯ ಆದೇಶ ಪ್ರಕಾರ ನೂತನ ಕುಮಾರಿ ಅವರನ್ನು ಜಿಲ್ಲಾಧಿಕಾರಿ ಕಚೇರಿಯ ಸಿಎಂ ಪರಿಹಾರ ನಿಧಿ ವಿಭಾಗದಲ್ಲಿ …
Read More »ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ : ಶ್ರೀಗಳಿಗೆ ಮತ್ತೊಂದು ಸಂಕಷ್ಟ
ಮೈಸೂರು: ಲೈಂಗಿಕ ಕಿರುಕುಳ ಆರೋಪದ ಮೇಲೆ ಜೈಲಿನಲ್ಲಿ ವಿಚಾರಣೆ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಇದೀಗ ಮತ್ತಿಬ್ಬರು ಅಪ್ರಾಪ್ತ ಬಾಲಕಿಯರಿಗೆ ಅಂತಹದ್ದೇ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಶ್ರೀಗಳ ವಿರುದ್ಧ ನಿನ್ನೆ ತಡ ರಾತ್ರಿ ಮೈಸೂರಿನ ನಜರಬಾದ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಅದರಂತೆ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದು, ಬಳಿಕ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಪೊಲೀಸ್ …
Read More »ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ಮಹತ್ವದ ಸಭೆ : ಸಿಎಂ
ಬೆಂಗಳೂರು : ಮಳೆ ಪೀಡಿತ ರಾಜ್ಯದ 13 ಜಿಲ್ಲೆಗಳ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳ ಜೊತೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಲಿದ್ದಾರೆ. ಇಂದು ಬೆಳಗ್ಗೆ 9 ಗಂಟೆಗೆ ವಿಜಯನಗರ ಜಿಲ್ಲೆಯ ಕಮಲಾಪುರದ ಹೋಟೆಲ್ ನಿಂದ ಸಿಎಂ ಬೊಮ್ಮಾಯಿ ವಿಡಿಯೋ ಸಂವಾದದ ಮೂಲಕ ಸಭೆ ನಡೆಸಲಿದ್ದಾರೆ. ವಿಜಯಪುರ, ಧಾರವಾಡ, ದಾವಣಗೆರೆ, ಬೆಳಗಾವಿ, ವಿಜಯಪುರ, ಗದಗ, ಕಲಬುರಗಿ, ಯಾದಗಿರಿ, ಬಾಗಲಕೋಟೆ, ಹಾವೇರಿ, ಬೀದರ್, ಕೊಪ್ಪಳ ಮತ್ತು ಮೈಸೂರು …
Read More »ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಟ್ಟೆಗಳು ಕಳ್ಳತನ.
ವಾಣಿಜ್ಯ ನಗರಿ ಹುಬ್ಬಳ್ಳಿಯ ಬಟ್ಟೆ ಅಂಗಡಿ ಒಂದರಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ. ಹುಬ್ಬಳ್ಳಿಯ ದುರ್ಗದ ಬೈಲ್ ಹತ್ತಿರ ಇರುವ ಬಾಬಾಸಾನ ಗಲ್ಲಿಯ ಬಟ್ಟೆ ಅಂಗಡಿ ಒಂದರಲ್ಲಿ ಲಕ್ಷ ಗಟ್ಟಲೆ ಬೆಲೆಬಾಳುವ ಬಟ್ಟೆಗಳನ್ನು ಅದೇ ಅಂಗಡಿಯಲ್ಲಿ ಕೆಲಸ ಮಾಡುವವರು ಕಳ್ಳತನ ಮಾಡಿರುವ ಘಟನೆ ನಡೆದಿದೆ. ವಿನೋದ್ ಹೌದು ಕುಮಾರ್ ಸಿಂಥೆಟಿಕ್ಸ ಅನ್ನೋ ಬಟ್ಟೆ ಅಂಗಡಿಯಲ್ಲಿ ಕೆಲ್ಸಾ ಮಾಡ್ತಿರುವ ಅಂಗಡಿ ಕೆಲಸಗಾರರು ಹಾಗೂ ಅವರ ಸ್ನೇಹಿತರೊಂದಿಗೆ ಈ ಒಂದು ಕಳ್ಳತನದ ಕೃತ್ಯ …
Read More »ಮಟನ್ ಶಾಪ್ ನಲ್ಲಿ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆಯೋ ಅಥವಾ ಆತ್ಮಹತ್ಯೆಯೋ..?
ಹುಬ್ಬಳ್ಳಿ: ಮಾಂಸದಂಗಡಿಯಲ್ಲಿಯೇ ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆಹುಬ್ಬಳ್ಳಿಯ ಬಾಣತಿಕಟ್ಟೆಯ ಮೆಹಬೂಬ್ ನಗರದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ಮುಸವದತ್ತಿ ತಾಲ್ಲೂಕಿನ ಬೆಳವಾಡಿ ಗ್ರಾಮದ ಅಸ್ಫಾಕ್ ಬೇಪಾರಿ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಜಗಳ ಮಾಡಿಕೊಂಡು ಹುಬ್ಬಳ್ಳಿಯಲ್ಲಿರುವ ತಮ್ಮ ಸಂಬಂಧಿಯ ಮನೆಗೆ ಬಂದಿದ್ದ. ಆದ್ರೆ ಸಂಬಂಧಿಯ ಮಟನ್ ಶಾಪ್ ನಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದಾನೆ. ಹೊಟ್ಟೆಗೆ ಹಾಗೂ ಕುತ್ತಿಗೆಗೆ ಚಾಕು ಹಾಕಿಕೊಂಡು ಸಾವನ್ನಪಿದ್ದು, ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿದೆ. …
Read More »ಹಿಜಾಬ್ ಪ್ರಕರಣ ಶೀಘ್ರವೇ ಇತ್ಯರ್ಥವಾಗಲಿ : ಶೆಟ್ಟರ್
ಹುಬ್ಬಳ್ಳಿ: ಹಿಜಾಬ್ ಪ್ರಕರಣವನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ದ್ವಿ ಸದಸ್ಯ ಪೀಠ ಒಬ್ಬ ನ್ಯಾಯಾಧೀಶರು ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದರೇ ಮತ್ತೊಬ್ಬರು ಹೈಕೋರ್ಟ್ ಆದೇಶವನ್ನು ತಿರಸ್ಕಾರ ಮಾಡಿದ್ದಾರೆ. ಈ ನಿಟ್ಟಿನಲ್ಲಿ ಸಾಂವಿಧಾನ ಪೀಠ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ತೀರ್ಪು ಹೊರಬರಬೇಕಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಹಿಜಾಬ್ ಕುರಿತು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ದ್ವಿ …
Read More »ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆ ಹೈ ಅಲರ್ಟ್
ಹುಬ್ಬಳ್ಳಿ: ಹಿಜಾಬ್ ವಿವಾದ ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಪೊಲೀಸ್ ಕಮೀಷನರೇಟ್ ನಿಂದ ಹೈ ಅಲರ್ಟ್ ಘೋಷಣೆ ಮಾಡಿದೆ. ಸುಪ್ರೀಂಕೋರ್ಟ್ ತೀರ್ಪು ಹೊರಬೀಳುವ ಹಿನ್ನೆಲೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹುಬ್ಬಳ್ಳಿ ನಗರದಲ್ಲಿ ಹೆಚ್ಚಿನ ಭದ್ರತೆ ನಿಯೋಜನೆ ಮಾಡಲಾಗಿದೆ. ನಗರದ ಚೆನ್ನಮ್ಮ ಸರ್ಕಲ್, ಈದ್ಗಾ ಮೈದಾನ,ನ್ಯೂ ಇಂಗ್ಲಿಷ್ ಮೀಡಿಯಂ ಸ್ಕೂಲ್ ಬಳಿ ಬಂದೋಬಸ್ತ ಮಾಡಲಾಗಿದೆ. ಇನ್ನೂ ತೀರ್ಪು ಪ್ರಕಟ ಹಿನ್ನಲೆ ವಿವಿಧ ಕಡೆಗಳಲ್ಲಿ ಹೆಚ್ಚಿನ ಭದ್ರತೆ ಮಾಡಲಾಗಿದ್ದು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





