ರಾಯಚೂರು ಜಿಲ್ಲೆಯ ಲಿಂಗಸುಗೂರು-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹಿಳೆಯನ್ನು ಚುಡಾಯಿಸಿದ ಬಳಿಕ ಆಕೆ ಚಲಾಯಿಸುತ್ತಿದ್ದ ಸ್ಕೂಟಿಗೆ ಟಾಟಾ ಏಸ್ ವಾಹನದಿಂದ ಉದ್ದೇಶಪೂರ್ವಕವಾಗಿ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ. ಘಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿವೆ. ಮದ್ಯದ ಅಮಲಿನಲ್ಲಿದ್ದ ಚಾಲಕ ಮಹಿಳೆಯನ್ನು ಚುಡಾಯಿಸಿದ ಬಳಿಕ ಆಕೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ವಾಹನದಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗುರುಲಿಂಗಮ್ಮ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, …
Read More »ರಾಜ್ಯದಲ್ಲಿ ಮತ್ತೊಂದು ಹೀನ ಕೃತ್ಯ : ಚಾಕ್ಲೆಟ್, ತಿಂಡಿ ಆಸೆ ತೋರಿಸಿ ಬುದ್ಧಿಮಾಂದ್ಯ ಯುವತಿ ಮೇಲೆ ನಿರಂತರ ಅತ್ಯಾಚಾರ!
ಗದಗ : ರಾಜ್ಯದಲ್ಲಿ ಅಮಾನವೀಯ ಘಟನೆ ಒಂದು ನಡೆದಿದ್ದು, ಬುದ್ಧಿಮಾಂದ್ಯ ಯುವತಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿರುವ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಅರಸಣಗಿ ಗ್ರಾಮದಲ್ಲಿ ಈ ಒಂದು ನೀಚ ಕೃತ್ಯ ನಡೆದಿದೆ. ಚಾಕ್ಲೆಟ್ ಮತ್ತು ತಿಂಡಿ ಆಸೆ ತೋರಿಸಿ ನಿರಂತರವಾಗಿ ಅತ್ಯಾಚಾರ ಎಸಗಲಾಗಿದೆ. ಆರು ತಿಂಗಳ ಬಳಿಕ ಬುದ್ಧಿಮಾಂದ್ಯ ಯುವತಿ ಗರ್ಭಿಣಿಯಾಗಿದ್ದು ಅತ್ಯಾಚಾರ ಕೃತ್ಯ ಬಯಲಿಗೆ ಬಂದಿದೆ. ಯುವತಿಯ ತಾಯಿ ದುರ್ಗಪ್ಪ ಎನ್ನುವವ್ನ ವಿರುದ್ಧ ಕೇಸ್ ದಾಖಲಿಸಿದ್ದಾರೆ.ಜುಲೈ …
Read More »ರಾಜ್ಯದಲ್ಲಿ ಮತ್ತೊಂದು ಲವ್ ಜಿಹಾದ್? ಹಿಂದೂ ಯುವತಿಗೆ ಚಾಕುವಿನಿಂದ ಇರಿದ ಮಾಜಿ ಪ್ರಿಯಕರ ನವಾಜ್
ಬೆಂಗಳೂರು: ವರ್ತೂರಿನಲ್ಲಿ ಯುವತಿಯ ಮನೆಗೆ ನುಗ್ಗಿದ ಯುವಕನೊಬ್ಬ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಟುಂಬದ ವಿರೋಧದಿಂದ ಯುವತಿ ಆತನಿಂದ ದೂರವಾಗಿದ್ದು, ಬೇರೆ ಮದುವೆಗೆ ಒಪ್ಪಿದ್ದರಿಂದ ಆಕ್ರೋಶಗೊಂಡ ಯುವಕ ಮನೆಗೆ ನುಗ್ಗಿ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಗೊಂಡ ಯುವತಿ ಹಾಗೂ ಯುವಕ ಇಬ್ಬರಿಗೂ ಚಿಕಿತ್ಸೆ ಮುಂದುವರಿದಿದ್ದು, ವರ್ತೂರು ಪೊಲೀಸ್ ಠಾಣೆಯಲ್ಲಿ …
Read More »ವರದಕ್ಷಿಣೆ ಕಿರುಕುಳ ಆರೋಪ: ಪತಿ ಸೇರಿ ಐವರ ವಿರುದ್ಧ ಪ್ರಕರಣ
ಭಟ್ಕಳ: ವಿವಾಹವಾದಾಗಿನಿಂದಲೂ ವರದಕ್ಷಿಣೆಗಾಗಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಪತಿ ಮತ್ತು ಅವರ ಕುಟುಂಬದವರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಗೊರಟೆಯ ಜಾಣನಮನೆ ನಿವಾಸಿ ಮಾನಸಾ (ಕಾವ್ಯ) ಮೊಗೇರ ದೂರು ನೀಡಿದವರಾಗಿದ್ದು, ಇವರ ಪತಿ ಶ್ರೀಧರ ಮೊಗೇರ, ಮಾವ ಪರಮೇಶ್ವರ ಮೊಗೇರ, ಅತ್ತೆ ಪದ್ಮಾವತಿ ಹಾಗೂ ಮೈದುನರಾದ ಯೋಗೇಶ್ವರ ಮತ್ತು ಆನಂದ ಮೊಗೇರ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.2016 ರಲ್ಲಿ …
Read More »ಬೇರೆ ಮದುವೆಗೆ ಒಪ್ಪಿದ್ದಕ್ಕೆ ಪ್ರೇಯಸಿಗೆ ಚಾಕು ಇರಿದು, ತಾನೂ ಕತ್ತು ಕುಯ್ದುಕೊಂಡ ಪಾಗಲ್ ಪ್ರೇಮಿ!
ಬೆಂಗಳೂರು: ಪ್ರೀತಿಸುತ್ತಿದ್ದ ಯುವತಿ ಬೇರೆಯವರನ್ನು ಮದುವೆಯಾಗಲು ಒಪ್ಪಿದ್ದಾಳೆ ಎಂಬ ಕಾರಣಕ್ಕೆ ಕೋಪಗೊಂಡ ಯುವಕನೊಬ್ಬ ಆಕೆಯ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿ, ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ವರ್ತೂರಿನಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ನರಸಾಪುರ ಮೂಲದ ನವಾಜ್ ಹಾಗೂ ಪಶ್ಚಿಮ ಬಂಗಾಳ ಮೂಲದ ನಂದಿನಿ ದಾಸ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಇವರ ಪ್ರೇಮ ಸಂಬಂಧಕ್ಕೆ ಎರಡೂ ಕುಟುಂಬಗಳ ವಿರೋಧ ವ್ಯಕ್ತವಾಗಿದ್ದರಿಂದ ನಂದಿನಿ ಪ್ರಿಯಕರನಿಂದ ದೂರ ಸರಿದು, …
Read More »ಅಪ್ರಾಪ್ತೆ ಮೇಲೆ ದೌರ್ಜನ್ಯ ನಡೆಸಿದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ
ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಘನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ.-1) 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 35 ಸಾವಿರ ರೂ.ದಂಡ ವಿಧಿಸಿದೆ. 2025ರ ಮೇ 6ರಂದು ದಾಖಲಾಗಿದ್ದ ಪ್ರಕರಣದಲ್ಲಿ, ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ನಿವಾಸಿ 25 ವರ್ಷದ ರಂಜನ್ ಗೌಡ ವಿರುದ್ಧ …
Read More »ಹಂಚಿನಾಳ ಪೆಟ್ರೋಲ್ ಬಂಕ್ನಲ್ಲಿ ₹10ಗಾಗಿ ಜಗಳ; ಬಿಡಿಸಲು ಹೋದ ವ್ಯಕ್ತಿಯ ಕೊಲೆ
ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಹಂಚಿನಾಳ ಕ್ಯಾಂಪ್ ಸಮೀಪದ ಪೆಟ್ರೋಲ್ ಬಂಕ್ನಲ್ಲಿ ₹10 ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡಿದೆ. ಹಂಚಿನಾಳ ಗ್ರಾಮದ ಮೇಘನಾಥ್ (42) ಮೃತಪಟ್ಟ ವ್ಯಕ್ತಿ. ಬಾಟಲಿಯಲ್ಲಿ ಪೆಟ್ರೋಲ್ ಹಾಕಿಸಿಕೊಳ್ಳಲು ಬಂದಿದ್ದ ವ್ಯಕ್ತಿ ಮತ್ತು ಸಿಬ್ಬಂದಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಬಳಿಕ ಸ್ನೇಹಿತನ ಕರೆಗೆ ಸ್ಪಂದಿಸಿ ಸ್ಥಳಕ್ಕೆ ಬಂದ ಮೇಘನಾಥ್, ಬಂಕ್ ಸಿಬ್ಬಂದಿಯನ್ನು ಪ್ರಶ್ನಿಸಿದ ವೇಳೆ ಎರಡೂ ಗುಂಪಿನ ನಡುವೆ ಮಾರಾಮಾರಿ ನಡೆದಿದೆ. ಘರ್ಷಣೆಯ ವೇಳೆ …
Read More »ಮೆಡಿಕಲ್ ಸೀಟು ಕೊಡಿಸೋದಾಗಿ ವಂಚನೆ; ಮಾಜಿ ಸಚಿವರ ಸೊಸೆಗೆ 5 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ವಿಶೇಷ ನ್ಯಾಯಾಲಯ!
ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ 45 ಲಕ್ಷ ರೂಪಾಯಿ ಪಡೆದು ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಸೊಸೆ ನಾಗವೇಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 5 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಜೊತೆಗೆ 10 ಸಾವಿರ ರೂಪಾಯಿ ದಂಡವೂ ವಿಧಿಸಲಾಗಿದೆ. ಪ್ರಕಾಶ್ ಕುಮಾರ್ ಯರಪ್ಪ ನೀಡಿದ ದೂರಿನ ಮೇರೆಗೆ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೆಡಿಕಲ್ ಸೀಟ್ ಕೊಡಿಸುವುದಾಗಿ ಹೇಳಿ ಹಂತ ಹಂತವಾಗಿ …
Read More »ಟೀಚರ್ ಬೈದ್ರು ಎಂದು ದುರಂತ ಅಂತ್ಯಕಂಡ ವಿದ್ಯಾರ್ಥಿನಿ.. ಕಣ್ಣಾಲೆಗಳ ಒದ್ದೆ ಮಾಡ್ತಿವೆ ಆಕೆಯ ವಿದಾಯದ ಸಾಲುಗಳು..
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಮರಸೂರು ಮಡಿವಾಳದಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ (14) ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ ಪೋಷಕರು ಮೃತದೇಹ ಪತ್ತೆಹಚ್ಚಿದ್ದಾರೆ. ಆತ್ಮಹತ್ಯೆಗೆ ಮುನ್ನ ಬರೆದಿದ್ದಾಳೆ ಎನ್ನಲಾದ ಪತ್ರದಲ್ಲಿ, ಶಾಲೆಯಲ್ಲಿ ನಡೆದ ಅವಮಾನ ಹಾಗೂ ತನ್ನ ಮೇಲೆ ಇಲ್ಲಸಲ್ಲದ ಆರೋಪ ಹೊರಿಸಿದ ಕಾರಣ ಮನಸ್ಸಿಗೆ ತುಂಬಾ ನೋವಾಗಿದೆ ಎಂದು ಉಲ್ಲೇಖಿಸಿದ್ದಾಳೆ ಎನ್ನಲಾಗಿದೆ. ಜೊತೆಗೆ …
Read More »ತಹಶೀಲ್ದಾರ್ರನ್ನು ವಿವಸ್ತ್ರಗೊಳಿಸಿ ಹಣಕ್ಕೆ ಬೇಡಿಕೆ ಇಟ್ಟ ರೌಡಿಶೀಟರ್ನ ಬಂಧನ
ರಾಮನಗರ: ಚನ್ನಪಟ್ಟಣದ ತಹಶೀಲ್ದಾರ್ ಬಿ.ಎನ್. ಗಿರೀಶ್ ಅವರಿಗೆ ಪ್ರಜ್ಞೆ ತಪ್ಪಿಸಿ, ಬೆತ್ತಲೆ ವಿಡಿಯೋ ಚಿತ್ರೀಕರಿಸಿ ₹10 ಲಕ್ಷಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ರೌಡಿಶೀಟರ್ ಅನುಷ್ ಶಿವಪ್ಪನನ್ನು ಚನ್ನಪಟ್ಟಣ ಟೌನ್ ಪೊಲೀಸರು ಬಂಧಿಸಿದ್ದಾರೆ. ಶೋಭರಾಜ್ ಹಾಗೂ ನವೀನ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಜೂನ್ 28ರಂದು ತಹಶೀಲ್ದಾರ್ ಅವರನ್ನು ಭೇಟಿ ಮಾಡಿದ ಆರೋಪಿಗಳು ಕುಡಿಯಲು ಹಣ್ಣಿನ ರಸ ನೀಡಿದ್ದು, ಬಳಿಕ ಅವರು ಪ್ರಜ್ಞೆ ಕಳೆದುಕೊಂಡಿದ್ದಾರೆ. ಈ ವೇಳೆ ವಿವಸ್ತ್ರಗೊಳಿಸಿ ವಿಡಿಯೋ ಸೆರೆಹಿಡಿದ ಆರೋಪಿಗಳು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





