Breaking News

BigTv News

ಅ.11ರಿಂದ ಒಂದು ತಿಂಗಳ ಕಾಲ ಮಾಜಿ ಸಿಎಂ ಜೊತೆ ಸಿಎಂ ರಾಜ್ಯಪ್ರವಾಸ : ಬೊಮ್ಮಾಯಿ

ಬೆಂಗಳೂರು: ಪಕ್ಷದ ಬಲವರ್ಧನೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸುವ ಸಲುವಾಗಿ ಅ.11ರಿಂದ ಒಂದು ತಿಂಗಳ ಕಾಲ ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಜತೆ ರಾಜ್ಯ ಪ್ರವಾಸ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್‌ ಜೋಡೋ ಅಭಿಯಾನಕ್ಕೂ ಮುನ್ನವೇ ರಾಜ್ಯದಲ್ಲಿ ಬಿಜೆಪಿ ಆರು ರ‍್ಯಾಲಿಗಳನ್ನು ಆಯೋಜಿಸಲು ನಿರ್ಧರಿಸಿತ್ತು. ಆದರೆ ದಸರಾ ಹಾಗೂ ವಿಧಾನಸಭಾ ಅಧಿವೇಶನಗಳ ಹಿನ್ನೆಲೆಯಲ್ಲಿ ರ‍್ಯಾಲಿಗಳನ್ನು ನಡೆಸುವುದು ವಿಳಂಬವಾಯಿತು ಎಂದರು. …

Read More »

ಆರನೇ ದಿನಕ್ಕೆ ಕಾಲಿಟ್ಟಿ ಭಾರತ ಜೋಡೋ ಯಾತ್ರೆ

ಹಾಸನ: ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ ಜೋಡೋ ಯಾತ್ರೆ ಆರನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಈ ಯಾತ್ರೆಯಲ್ಲಿ ಪಕ್ಷದ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹಾಗೂ ಸಹೋದರ ಸುರೇಶ್‌ ಗೆ ಸಾಧ್ಯವಾಗುತ್ತಿಲ್ಲ. ಬೆಳಗ್ಗೆ ಏಳು ಗಂಟೆಯಿಂದ ನಾಗಮಂಗಲದ ಮಲ್ಲೇನಹಳ್ಳಿಯಿಂದ ಯಾತ್ರೆ ಆರಂಭವಾಗಲಿದೆ. ನಾಗಮಂಗಲ ತಾಲೂಕಿನ ಅಂಚೆ ಚಿತ್ತನಹಳ್ಳಿ ಬಳಿಯಿರುವ ಮೈದಾನದವರೆಗೂ ಸಾಗಿ ಹನ್ನೊಂದು ಗಂಟೆಗೆ ಲಂಚ್‌ ಬ್ರೇಕ್‌ ತೆಗೆದುಕೊಳ್ಳಲಿದ್ದಾರೆ. ಮತ್ತೆ ನಾಲ್ಕು ಗಂಟೆಗೆ ಯಾತ್ರೆ ಆರಂಭಗೊಳ್ಳಲಿದೆ ಬೆಳ್ಳೂರು ಬಸ್‌ ಸ್ಟಾಪ್‌ …

Read More »

ಪಿಎಸ್‌ಐ ನೇಮಕಾತಿ ಅಕ್ರಮ : ಪಿಎಸ್‌ಐ‌ ಬಂಧನ

ಬೆಂಗಳೂರು: 545 ಪೊಲೀಸ್ ಸಬ್‌ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮದಲ್ಲಿ ಭಾಗಿಯಾಗಿದ್ದ ಕೆ.ಆರ್.ಪುರ ಸಂಚಾರ ಠಾಣೆ ಪಿಎಸ್‌ಐ ಸುಬ್ರಮಣಿ (35) ಅವರನ್ನು ಸಿಐಡಿ ಅಧಿಕಾರಿಗಳು ಗುರುವಾರ ಬಂಧಿಸಿದ್ದಾರೆ. ಎಡಿಜಿಪಿ ಅಮ್ರಿತ್ ಪೌಲ್, ಡಿವೈಎಸ್ಪಿ ಶಾಂತಕುಮಾರ್ ಸೇರಿದಂತೆ 60ಕ್ಕೂ ಹೆಚ್ಚು ಆರೋಪಿಗಳನ್ನು ಪ್ರಕರಣದಲ್ಲಿ ಈಗಾಗಲೇ ಬಂಧಿಸಲಾಗಿದೆ. ‘ಪಿಎಸ್‌ಐ ಅಕ್ರಮ ಸಂಬಂಧ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದ್ದಂತೆ ಸುಬ್ರಮಣಿ ತಲೆಮರೆಸಿಕೊಂಡಿದ್ದ. ಬೆಂಗಳೂರಿನಲ್ಲಿ ಗುರುವಾರ ಈತನನ್ನು ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು. ಹೆಚ್ಚಿನ ವಿಚಾರಣೆಗಾಗಿ …

Read More »

ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ ಕಂಡಿದ್ದು, ಕಳೆದ 24 ಗಂಟೆಯಲ್ಲಿ ಕೇವಲ 1,999 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,754 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 30362 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.74ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,40,47,344 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 3,97,407 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 2,18,88,17,589 ಡೋಸ್ …

Read More »

ಮುರುಘಾ ಮಠದ ಪೀಠಾಧ್ಯಕ್ಷರನ್ನು ನೇಮಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಕೆ

ಚಿತ್ರದುರ್ಗ; ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಎಸ್.ಕೆ.ಬಸವರಾಜನ್ ಹೇಳಿರುವಂತೆ ಮುರುಘಾ ಮಠದಲ್ಲಿ 14 ವರ್ಷದ ಬಳಿಕ ಶೂನ್ಯ ಪೀಠಾರೋಹಣ ಮಾಡಬೇಕಾದ ಹಾಗೂ ಶಾಂತವೀರ ಶ್ರೀಗಳ ಭಾವಚಿತ್ರ ಇರಿಸುವ ಅನಿವಾರ್ಯತೆ ಬಂದಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇಷ್ಟೊತ್ತಿಗೆ ಹೊಸ ಪೀಠಾಧ್ಯಕ್ಷರನ್ನು ನೇಮಿಸಬೇಕಿತ್ತು. ಮಠ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಪೀಠಾಧ್ಯಕ್ಷರ ನೇಮಿಸಲು ಅಧಿಕಾರವಿದೆ. ಮುರುಘಾ ಶ್ರೀ ವ್ಯವಸ್ಥಾಪಕರೇ ಹೊರತು ಮಾಲೀಕರಲ್ಲ. ಪೀಠಾಧ್ಯಕ್ಷರನ್ನು ನೇಮಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ.

Read More »

ಅ.12 ರಂದು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಇದೇ 12ರ ಸಂಜೆ 4 ಗಂಟೆಗೆ ಪೂರ್ವಭಾವಿ ಸಭೆ ನಡೆಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ. ‘ಸಾಹಿತ್ಯ ಸಮ್ಮೇಳನವನ್ನು ಐತಿಹಾಸಿಕವಾಗಿ ನಡೆಸಲು ಸರ್ಕಾರ ಮುಂದಾಗಿದೆ. ಸಣ್ಣಪುಟ್ಟ ಗೊಂದಲಗಳು ತಿಳಿಯಾಗಿವೆ. ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಪರವಾಗಿ ಹಾವೇರಿ ಜಿಲ್ಲೆಯ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್‌, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್‌ …

Read More »

ಕಾಂಗ್ರೆಸ್ ಮಾಜಿ ಸಚಿವ ನಿಧನ

ಹುಬ್ಬಳ್ಳಿ : ಕಾಂಗ್ರೆಸ್ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಇಹಲೋಕ ತ್ಯಜಿಸಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಜಬ್ಬಾರ್ ಖಾನ್ ಹೊನ್ನಳ್ಳಿ ಅವರು ಎಸ್.ಎಂ.ಕೃಷ್ಣ ಸರ್ಕಾರದ ಸಂಪುಟದಲ್ಲಿ ಯುವಜನ ಮತ್ತು ಕ್ರೀಡಾ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.‌ಜಬ್ಬಾರ್ ಖಾನ್ ಹೊನ್ನಾಳ್ಳಿ ಅಗಲಿಕೆಗೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

Read More »

ಕೂಡಲ ಸಂಗಮ ದೇವಸ್ಥಾನದ ಆಸ್ತಿ ಕಬಳಿಕೆಗೆ ಸಂಚು : ಡಾ.ಚನ್ನಬಸವಾನಂದ ಸ್ವಾಮೀಜಿ

ಹುಬ್ಬಳ್ಳಿ: ಕೂಡಲ ಸಂಗಮ ಬಸವ ಧರ್ಮ ಪೀಠದ ಸಾವಿರಾರು ಕೋಟಿ ಆಸ್ತಿಗಾಗಿ ಮತ್ತು ಧರ್ಮದ ಹೆಸರಿನಲ್ಲಿ ಹಣ ಮಾಡಲು ಬೀದರಿನ ಬಸವರಾಜ ಧನ್ನೂರ ಹಾಗೂ ಅವರ ಸಂಗಡಿಗರು ಸಂಸ್ಥೆಯ ಅಧ್ಯಕ್ಷರಾದ ಮಾತೆ ಗಂಗಾ ದೇವಿಯವರ ಹಾಗೂ ಇನ್ನುಳಿದ ಜಂಗಮ ಮೂರ್ತಿಗಳ ನಡುವೆ ದ್ವೇಷ ವೈಷಮ್ಯ ಮೂಡಿಸಿ ಸಂಸ್ಥೆ ಹಾಳು ಮಾಡುತ್ತಿದ್ದಾರೆ ಎಂದು ಬೆಂಗಳೂರಿನ ಶ್ರಿಚನ್ನಬಸವೇಶ್ವರ ಜ್ಞಾನ ಪೀಠದ ಪೀಠಾಧ್ಯಕ್ಷ ಶ್ರೀ ಡಾ.ಚನ್ನಬಸವಾನಂದ ಸ್ವಾಮೀಜಿ ಆರೋಪಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

Read More »

ಅನುಮಾನಾಸ್ಪದ ರೀತಿಯಲ್ಲಿ ಪಿಡಿಒ ಮೃತದೇಹ ಪತ್ತೆ

ರಾಯಚೂರು : ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಹೊರ ವಲಯದ ಹೆದ್ದಾರಿ ಬಳಿ ಕೋಠಾ ಗ್ರಾಮ ಪಂಚಾಯಿತಿಯ ಪಿಡಿಒ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ. ಕೋಠಾ ಗ್ರಾಮ ಪಂಚಾಯಿತಿ ಪಿಡಿಒ ಗಜದಂಡಯ್ಯ ಸ್ವಾಮಿ ಎನ್ನುವವರ ಶವ ಪತ್ತೆಯಾಗಿದ್ದು, ಭಾರೀ ಅನುಮಾನಕ್ಕೆಡೆ ಮಾಡಿದೆ.ಲಿಂಗಸುಗೂರು ತಾಲ್ಲೂಕು ಯಲಗಲದಿನ್ನಿ ಗ್ರಾಮದ ಹೊರವಲಯದಲ್ಲಿ ಗಜದಂಡಸ್ವಾಮಿ ತ್ರಿಪುರಾಂತಯ್ಯ (49) ಶವ ಪತ್ತೆಯಾಗಿದೆ. ತಲೆಗೆ ಬಲವಾಗಿ ಕಲ್ಲು ಅಥವಾ ಮಾರಕಾಸ್ತ್ರದಿಂದ ಹೊಡೆತ ಬಿದ್ದಿದೆ. ಇವರು ಲಿಂಗಸುಗೂರು ತಾಲ್ಲೂಕು ಕೋಠ ಗ್ರಾಮದವರಾಗಿದ್ದು, …

Read More »

ಅ. . ೮ ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳುವ ಮೂಲಕ ಕರ್ನಾಟಕದಾದ್ಯಂತ ಉಗ್ರ ಹೋರಾಟ

ಹುಬ್ಬಳ್ಳಿ : ೨೦೧೧ ರ ಜನಸಂಖ್ಯೆಯ ಆಧಾರಿತವಾಗಿ ಪರಿಶಿಷ್ಟ ಜಾತಿಗೆ ೧೫% ರಿಂದ ೧೮% ರ ವರೆಗೆ ಪರಿಶಿಷ್ಟ ಪಂಗಡಕ್ಕೆ ೩% ರಿಂದ ೭.೫% ರ ವರೆಗೆ ಉದ್ಯೋಗ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಹೆಚ್ಚಿಸಬೇಕು ಇಲ್ಲದಿದ್ದರೆ ಇದೇ. ೮ ರಂದು ಬೆಂಗಳೂರು ಚಲೋ ಹಮ್ಮಿಕೊಳ್ಳುವ ಮೂಲಕ ಕರ್ನಾಟಕದಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಆಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಮೋಹನ ಗುಡಸಲಮನಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ …

Read More »