ಬೆಂಗಳೂರು : ಮುಂದಿನ 21 ದಿನಗಳ ಕಾಲ ಕರ್ನಾಟಕದ ರಾಜಕೀಯ ಮೇಲಾಟದ ಕೇಂದ್ರ ಬಿಂದುವಾಗಲಿದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡಿರುವ ‘ಭಾರತ್ ಜೋಡೋ’ ಯಾತ್ರೆ! ದೇಶದಲ್ಲಿ ಒಗ್ಗಟ್ಟು ಮೂಡಿಸುವ ಅಭಿಲಾಷೆಯೊಂದಿಗೆ ತಮಿಳುನಾಡಿನ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಹೆಸರಿನಲ್ಲಿ ಪಾದಯಾತ್ರೆ ಕೈಗೊಂಡಿರುವ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರು 20 ದಿನಗಳ ಕಾಲ ಕೇರಳದಲ್ಲಿ ಯಾತ್ರೆ ನಡೆಸಿ ಶುಕ್ರವಾರ ಕರ್ನಾಟಕ ಪ್ರವೇಶಿಸಲಿದ್ದಾರೆ. ಶುಕ್ರವಾರದಿಂದ ಮುಂದಿನ 21 ದಿನಗಳ …
Read More »ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮತ್ತೆ ಮಳೆ ಆರಂಭವಾಗಿದ್ದು, ನಿನ್ನೆ (ಗುರುವಾರ) ವರುಣ ಅಬ್ಬರಿಸಿದ್ದಾನೆ. ಹೀಗಾಗಿ ಇಂದಿನಿಂದ (ಸೆಪ್ಟೆಂಬರ್ 30) 4-5 ದಿನ ಕರ್ನಾಟಕದಲ್ಲಿ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರದೇಶಗಳಲ್ಲಿ ಇನ್ನೆರಡು ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.
Read More »ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದ ಪ್ರಕರಣ : ಪೊಲೀಸ್ ಠಾಣೆಗೆ ಡಿಕೆಶಿ ಭೇಟಿ
ಚಾಮರಾಜನಗರ: ಭಾರತ್ ಜೋಡೋ ಯಾತ್ರೆ ಹಿನ್ನೆಲೆಯಲ್ಲಿ ಗುಂಡ್ಲುಪೇಟೆ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಅಳವಡಿಸಿದ್ದ ನಾಯಕರ ಫ್ಲೆಕ್ಸ್ಗಳನ್ನು ಹರಿದು ಹಾಕಿದ್ದಕ್ಕೆ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿದ ಅವರು, ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ. ಕೂಡಲೇ ಅವರನ್ನು ಬಂಧಿಸದಿದ್ದರೆ ಎಂದರೆ ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಪೊಲೀಸರಿಗೆ ವಾರ್ನಿಂಗ್ ಕೊಟ್ಟಿದ್ದಾರೆ.ನಾವು ಕದ್ದುಮುಚ್ಚಿ ಕಾರ್ಯಕ್ರಮವನ್ನು ಮಾಡುತ್ತಿಲ್ಲ. ಅವರ ರಾಜಕಾರಣ ಏನಿದೆ ಅದನ್ನು ಮಾಡಲಿ, ಇಂತಹ ಹೇಡಿತನವನ್ನು ನಾವು …
Read More »ಅ. 3 ರಿಂದ ಐದು ದಿನಗಳ ಕಾಲ ದಸರಾ ರಜೆ
ಬೆಂಗಳೂರು: ರಾಜ್ಯ ಹೈಕೋರ್ಟ್ ಗೆ ಅ. 3 ರಿಂದ ಐದು ದಿನಗಳ ಕಾಲ ದಸರಾ ರಜೆ ಇರಲಿದ್ದು, ರಜೆ ಕಾಲದಲ್ಲಿ ಕಾರ್ಯನಿರ್ವಹಿಸುವ ನ್ಯಾಯ ಪೀಠಗಳನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ರಚಿಸಿದ್ದಾರೆ. ಅ. 3 ರಿಂದ 7 ರವರೆಗೆ ರಜಾ ಕಾಲದಲ್ಲಿ ನ್ಯಾಯಮೂರ್ತಿಗಳಾದ ಎಸ್. ಸುನಿಲ್ ದತ್ ಯಾದವ್, ಟಿ.ಜಿ. ಶಿವಶಂಕರೇಗೌಡ ಅವರ ನೇತೃತ್ವದ ರಜಾ ಕಾಲದ ವಿಭಾಗಿಯ ಪೀಠ ಎಂಟನೇ ಕೋರ್ಟ್ ಹಾಲ್ ನಲ್ಲಿ ವಿಚಾರಣೆ ನಡೆಸಲಿದೆ. …
Read More »ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ನೌಕರಿ ಆದೇಶ ಹೊರಡಿಕೆ
ಬೆಂಗಳೂರು: ಜುಲೈ 26ರಂದು ಕೊಲೆಗೀಡಾದ ಬಿಜೆಪಿ ಯುವ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನಕುಮಾರಿ ಎಂ. ಅವರಿಗೆ ಮುಖ್ಯಮಂತ್ರಿಯವರ ಸಚಿವಾಲಯದಲ್ಲಿ ‘ಸಿ’ ದರ್ಜೆಯ ಗುತ್ತಿಗೆ ನೌಕರಿ ನೀಡಿ ಆದೇಶ ಹೊರಡಿಸಲಾಗಿದೆ. ಪ್ರವೀಣ್ ಪತ್ನಿಗೆ ತಮ್ಮ ಸಚಿವಾಲಯದಲ್ಲಿ ನೌಕರಿ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೆಪ್ಟೆಂಬರ್ 10 ರಂದು ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನಾ ಸಮಾವೇಶದಲ್ಲಿ ಘೋಷಿಸಿದ್ದರು. ಅದರಂತೆಯೇ, ನೂತನಕುಮಾರಿ ಅವರಿಗೆ ಉದ್ಯೋಗ …
Read More »ಪೇ ಸಿಎಂ ಪೋಸ್ಟರ್ : ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟಿಸ್
ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸಿದ್ದ ಪೇ ಸಿಎಂ ಅಭಿಯಾನದ ಭಾಗವಾಗಿ ಬೆಂಗಳೂರಿನ ಹಲವು ಕಡೆ ಪೇ ಸಿಎಂ ಪೋಸ್ಟರ್ ಅಂಟಿಸಿದ್ದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ಅಪರಾಧ ವಿಭಾಗದ ಸಿಸಿಬಿ ಪೊಲೀಸರು ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಪದಾಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಬೆಂಗಳೂರಿನಲ್ಲಿ ನಡೆದಂತಹ ‘ಪೇ ಸಿಎಂ ಪೋಸ್ಟರ್ ಪ್ರಕರಣ’ ವನ್ನು ಸಿಸಿಬಿಗೆ ವರ್ಗಾಯಿಸಿ ಬೆಂಗಳೂರು ನಗರ ಕಮೀಷನರ್ ಪ್ರತಾಪ್ ರೆಡ್ಡಿ ಆದೇಶ …
Read More »ಪೋಕ್ಸೋ ಕೇಸ್ : ಮುರುಘಾ ಶ್ರೀಗಳಿಗೆ ಬಿಗ್ ಶಾಕ್
ಚಿತ್ರದುರ್ಗ: ಪೋಕ್ಸೋ ಕೇಸ್ ನಲ್ಲಿ ನ್ಯಾಯಾಂಗ ಬಂಧನದಲ್ಲಿರುವಂತ ಮುರುಘಾ ಶ್ರೀಗಳಿಗೆ ಈಗಾಗಲೇ ಕೋರ್ಟ್ ಜಾಮೀನು ನಿರಾಕರಿಸಿತ್ತು. ಅವರ ನ್ಯಾಯಾಂಗ ಬಂಧನ ಮುಂದುವರೆಸಿ ಆದೇಶಿಸಿ ಶಾಕ್ ನೀಡಿತ್ತು. ಈ ಬೆನ್ನಲ್ಲೇ ಇಂದಿನ ಸಭೆಯಲ್ಲಿ ಮುರುಘಾ ಶರಣರನ್ನು ಮಠದ ಪೀಠಾಧ್ಯಕ್ಷ ಸ್ಥಾನದಿಂದ ತೆಗೆದು, ಹೊಸ ಪೀಠಾಧ್ಯಕ್ಷರ ಆಯ್ಕೆ ಮಾಡೋದಕ್ಕೆ ನಿರ್ಧಾರ ಕೈಗೊಂಡು ಮತ್ತೊಂದು ಬಿಗ್ ಶಾಕ್ ನೀಡಲಾಗಿದೆ. ಇಂದು ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರು ಪೋಸ್ಕೋ ಪ್ರಕರಣದಲ್ಲಿ ಜೈಲು ಪಾಲು ಆಗಿರುವಂತ ಬೆನ್ನಲ್ಲೇ, …
Read More »ದೀಪಕ್ ಪಟದಾರೆ ಪತ್ನಿ ನೇಣಿಗೆ ಶರಣು.
ಗ್ರಾ.ಪಂ ಸದಸ್ಯ ದೀಪಕ್ ಪಠದಾರಿ ಹತ್ಯೆ ಪ್ರಕರಣ.ಪತಿಯ ಸಾವಿನ ನ್ಯಾಯ ಕೇಳಿ ಅಲೆದಾಡುತ್ತಿದ್ದ ದೀಪಕ್ ಪತ್ನಿ ಆತ್ಮಹತ್ಯೆ. ಸದ್ಯ ದೀಪಕ್ ಹತ್ಯೆ ಕೇಸ್ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು ಪತಿ ಸಾವಿಗೆ ನ್ಯಾಯಕ್ಕಾಗಿ ಅಲೆದಾಡುತ್ತಿದ್ದ ಪುಷ್ಪಾ ಮನನೊಂದು ಆತ್ಮಹತ್ಯೆ. ನವನಗರದ ಸಂಬಂದಿ ಮನೆಯಲ್ಲಿ ನೇಣಿಗೆ ಕೊರಳೊಡ್ಡಿರುವ ಪುಷ್ಪ. ನವನಗರ ಪೊಲೀಸರು ಸ್ಥಳಕ್ಕೆ ದೌಡು. ಹಲವು ಅನುಮಾನಕ್ಕೆ ಕಾರಣವಾದ ಆತ್ಮಹತ್ಯೆ. ಹುಬ್ಬಳ್ಳಿ ತಾಲೂಕಿನ ರಾಯನಾಳ ಬಳಿ ದೀಪಕ್ ಹತ್ಯೆಯಾಗಿತ್ತು.ಜುಲೈ 4 ರಂದು …
Read More »ಪೇ ಸಿಎಂ ಬೆನ್ನಲ್ಲೇ ಪೇ ಮೇಯರ್: ಸಾಮಾಜಿಕ ಜಾಲತಾಣದಲ್ಲಿ ವೈರಲ್.
ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಬೆಂಗಳೂರು ಮಾದರಿಯಲ್ಲಿ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಹೌದು..ಪೇ ಸಿಎಂ ಚರ್ಚೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ ಪೇ ಮೇಯರ್ ಅಭಿಯಾನದ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮೇಯರ್ ಈರೇಶ್ ಅಂಚಟಗೇರಿ ವಿರುದ್ದ ಪೇ ಮೇಯರ್ ಅಭಿಯಾನ ಸದ್ದು ಮಾಡಿದೆ. ಕೈ ನಾಯಕರಿಂದ ಪೇ ಮೇಯರ್ ಅಭಿಯಾನ ಆರಂಭವಾಗಿದ್ದು, ರಾಷ್ಟ್ರಪತಿಗಳ ಪೌರ ಸನ್ಮಾನ ಕಾರ್ಯಕ್ರಮದ ಹೆಸರಲ್ಲಿ ಸುಮಾರು 1.5 ಕೋಟಿ ದುಂದು …
Read More »ತಾರತಮ್ಯ ಮಾಡದೇ ರೈತರಿಗೆ ಪರಿಹಾರ ನೀಡಬೇಕು ; ಕೋನರಡ್ಡಿ
ನವಲಗುಂದ : ನವಲಗುಂದ ವಿಧಾನ ಸಭಾ ಕ್ಷೇತ್ರದ ನವಲಗುಂದ , ಹುಬ್ಬಳ್ಳಿ ಹಾಗೂ ಅಣ್ಣಿಗೇರಿ ತಾಲ್ಲೂಕುಗಳಲ್ಲಿ ಸಾಕಷ್ಟು ಮಳೆಯಾಗಿ ಬೆಳೆ ಹಾನಿಯಾಗಿದೆ . ಕೇಂದ್ರ ಅಧ್ಯಯನ ತಂಡ ಬೆಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಪರಿಹಾರವನ್ನು ನೀಡುತ್ತಿದ್ದಾರೆ ಅದು ಕೂಡ ತಾರತಮ್ಯ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದರು ನವಲಗುಂದ ಪಟ್ಟಣದ ಮಾಜಿ ಶಾಸಕ ಎನ್ ಹೆಚ್ ಕೋನರಡ್ಡಿ ಅವರ ಕಚೇರಿಯಲ್ಲಿ ಮಾತನಾಡಿ , ಕೆಲವು ರೈತರಿಗೆ ಎಕರೆಗೆ ಹದಿಮೂರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





