Breaking News

BigTv News

ಸಾಲಬಾಧೆ ಬಾರದ ಬೆಳೆ ಹಾನಿ , ಮನನೊಂದ ರೈತ ಆತ್ಮಹತ್ಯೆ

ಕುಂದಗೋಳ : ಸಾಲ ಬಾಧೆ ಹಾಗೂ ಇತ್ತೀಚೆಗೆ ಸುರಿದ ಅತಿವೃಷ್ಟಿಯಿಂದ ಬೆಳೆಹಾನಿಯಾಗಿ ತೀವ್ರವಾಗಿ ಮನನೊಂದಿದ್ದ ಕುಂದಗೋಳ ತಾಲೂಕು ಕೊಡ್ಲಿವಾಡ ಗ್ರಾಮದ ರೈತ ಹನುಮಪ್ಪ ಯಲ್ಲಪ್ಪ ಬಾಲೆಹೊಸೂರ ( 65 ) ಕ್ರಿಮಿನಾಶಕ ಸೇವಿಸಿಆತ್ಮಹತ್ಯೆ ಮಾಡಿಕೊಂಡಿದ್ದಾರೆ . ಮೃತ ರೈತ ಬರದ್ವಾಡ ಕೆನರಾ ಬ್ಯಾಂಕ್ ಶಾಖೆಯಲ್ಲಿ 1 ಲಕ್ಷ 50 ಸಾವಿರ ರೂ.ಸಾಲ ಹೊಂದಿದ್ದರು . ಸಾಲ ಮರುಪಾವತಿಗೆ ಬ್ಯಾಂಕ್ ಒತ್ತಡ ಹೇರಿತ್ತು . ಸ್ವಂತದ 2 ಎಕರೆ 13 ಗುಂಟೆ …

Read More »

ಹುಬ್ಬಳ್ಳಿ ಮಹಾನಗರ ಚಿಕನ್ ವ್ಯಾಪಾರಸ್ಥರ ಸಂಘದ ಎರಡನೇ ವಾರ್ಷಿಕೋತ್ಸವದ ಸಂಭ್ರಮ!

ಹುಬ್ಬಳ್ಳಿ:- ಹುಬ್ಬಳ್ಳಿ ಮಹಾನಗರ ಚಿಕನ್ ವ್ಯಾಪಾರಸ್ಥರ ಸಂಘ ಹಾಗೂ ಹುಬ್ಬಳ್ಳಿ ಪೌಲ್ಟ್ರಿ ಡೀಲರ್ಸ್ ಅಸೋಸಿಯೇಷನ್ ನೇತೃತ್ವದಲ್ಲಿ ಎರಡನೇ ವಾರ್ಷಿಕೋತ್ಸವದ ಕಾರ್ಯಕ್ರಮವನ್ನು ಆರ್ ಎನ್ ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಪ್ರಸಾದ್ ಅಬ್ಬಯ್ಯ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ,ಮಹಾನಗರ ಪಾಲಿಕೆ ಆಯುಕ್ತ.ಡಾ.ಗೋಪಾಲಕೃಷ್ಣ, ಚಿಟಗುಪ್ಪಿ ವೈದ್ಯಾಧಿಕಾರಿ ಶ್ರೀಧರ್ ದಂಡಪ್ಪನ್ನವರ, ಎಮ್ ಡಿ ಜಾಫರ್ ಶಾದೀಕ್,ಆರೀಪ್ ಬಾವಾ,ಅಬ್ದುಲ್ ರೆಹಮಾನ್ ಮುಲ್ಲಾ,ಮಹಾನಗರ ಚಿಕನ್ ಸಂಘದ ಅಧ್ಯಕ್ಷ ಅಲ್ತಾಪ ಬೇಪಾರಿ,ನಾಗರಾಜ ಪಟ್ಡಣ,ಎಮ್‌ಡಿ ಅಲಿ ಕಮಡೊಳ್ಳಿ …

Read More »

ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೇ ಹೆಚ್ಚು ಮಳೆ ಬರುತ್ತದೆ : ಆರ್. ಅಶೋಕ್

ಬಳ್ಳಾರಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದರೇ ಹೆಚ್ಚು ಮಳೆ ಬರುತ್ತದೆ. ಇದರಿಂದಾಗಿ ತಮಿಳುನಾಡಿನಿಂದ ಕಾವೇರಿ ಕಾಟ ಕೂಡ ತಪ್ಪಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಕೂಡ್ಲಿಗಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರವಿದ್ದರೇ ಬರಗಾಲವೇ ಬರುವುದಿಲ್ಲ. ಅಷ್ಟೇ ಅಲ್ಲದೇ ಅತಿ ಹೆಚ್ಚು ಮಳೆ ಬರುವುದರಿಂದಾಗಿ ತಮಿಳುನಾಡು ಬೇಡ ಹೇಳುವಷ್ಟು ನೀರು ಬಿಟ್ಟಿದ್ದೇವೆ ಎಂದರು. ಜಿಲ್ಲಾಧಿಕಾರಿ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಬಗ್ಗೆ ಮಾತನಾಡಿದ ಅವರು, ಕಂದಾಯ ದಾಖಲೆ ಮನೆ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಬೆಂಗಳೂರು : ಕೆಲ ದಿನಗಳಿಂದ ಬ್ರೇಕ್ ನೀಡಿದ್ದ ಮಳೆರಾಯ ಕರ್ನಾಟಕದಲ್ಲಿ ಮತ್ತೆ ಎಂಟ್ರಿ ಕೊಟ್ಟಿದ್ದಾನೆ. ಸಿಲಿಕಾನ್ ಸಿಟಿ ಹಲವು ಭಾಗಗಳಲ್ಲಿ ಇಂದು ಮೋಡ ಕವಿದ ವಾತಾವರಣ ಇದೆ. ನೈಋತ್ಯ ಮುಂಗಾರು ದುರ್ಬಲವಾಗಿರುವ ಹಿನ್ನೆಲೆ ಕರ್ನಾಟಕದಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಮತ್ತು ಉತ್ತರ ಒಳನಾಡು, ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ. ಬೆಂಗಳೂರಿನಲ್ಲಿ ಮುಂದಿನ 24 ಗಂಟೆ ಮೋಡ ಕವಿದ ವಾತಾವರಣವಿರಲಿದ್ದು, ಬೆಂಗಳೂರಿನ …

Read More »

ಇಷ್ಟದ ಗುಡನ್ನು ಬಿಟ್ಟು ಬೇರೆ ಕಡೆ ಸಿಫ್ಟ್ ಆದ ಕ್ರೇಜಿಸ್ಟಾರ್

ಕನ್ನಡ ಚಿತ್ರರಂಗದಲ್ಲಿ ಹೊಸ ಕ್ರೇಜ್ ಹುಟ್ಟುಹಾಕಿದ, ಸಿನಿಮಾನೇ ಉಸಿರು ಎಂದು ನಂಬಿರುವ, ಕನಸಿನಲ್ಲೂ ಸಿನಿಮಾದ ಬಗ್ಗೆಯೇ ಯೋಚಿಸುವ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಇದೀಗ ತಮ್ಮ ನೆಚ್ಚಿನ ಮನೆಯನ್ನು ಖಾಲಿ ಮಾಡಿದ್ದಾರೆ. ಹೌದು! ರಾಜಾಜಿನಗರದಲ್ಲಿರೋ ಮನೆಯನ್ನು ಬಿಟ್ಟು ಹೊಸಕೆರೆ ಹಳ್ಳಿಯಲ್ಲಿರೋ ಮತ್ತೊಂದು ಮನೆಗೆ ರವಿಚಂದ್ರನ್ ಕುಟುಂಬ ತೆರಳಿದ್ದಾರೆ. ಮನೆ ಖಾಲಿ ಮಾಡಲು ಕಾರಣ ಏನೆಂದು ತಿಳಿದಿಲ್ಲ. ಆದರೆ ಮನೆ ಖಾಲಿ ಮಾಡಿದ್ದು, ರಿನೋವೇಷನ್ ಮಾಡಿಸೋದಕ್ಕೆಂದು ಆಪ್ತ ಮೂಲಗಳು ತಿಳಿಸಿವೆ. ಇತ್ತೀಚೆಗಷ್ಟೆ ರವಿಚಂದ್ರನ್ ಮೊದಲ …

Read More »

ಜಪಾನ್ ಮಾಜಿ ಪ್ರಧಾನಿ ಅಂತ್ಯ ಸಂಸ್ಕಾರ : ಇಂದು ಟೋಕಿಯೊಗೆ ತಲುಪಿದ ಮೋದಿ

ಟೋಕಿಯೊ (ಜಪಾನ್): ಜುಲೈ 8 ರಂದು ನಾರಾ ನಗರದಲ್ಲಿ ಪ್ರಚಾರ ಭಾಷಣದ ವೇಳೆ ಗುಂಡಿನ ದಾಳಿಗೆ ಒಳಗಾಗಿ ಸಾವನ್ನಪ್ಪಿದ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟೋಕಿಯೊಗೆ ಆಗಮಿಸಿದ್ದಾರೆ. ಓಸಾಕಾದ ಪೂರ್ವದಲ್ಲಿ ಜುಲೈ 8 ರಂದು ನಾರಾದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 11:30 ಕ್ಕೆ ಅಬೆ ಅವರು ಬೀದಿಯಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡುವಾಗ ಅವರ ಮೇಲೆ …

Read More »

ರಾಜ್ಯದ ರೈತರಿಗೆ ಗುಡ್ ನ್ಯೂಸ್

ಮೈಸೂರು : ರಾಜ್ಯದ ರೈತರಿಗೆ ಇಂಧನ ಸಚಿವ ಸುನೀಲ್ ಕುಮಾರ್ ಗುಡ್ ನ್ಯೂಸ್ ನೀಡಿದ್ದು, ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ ಎಂದರು. ಮೈಸೂರಿನಲ್ಲಿ ವಿದ್ಯುತ್ ದೀಪಾಲಂಕಾರಕ್ಕೆ ಚಾಲನೆ ಬಳಿಕ ಸಚಿವ ಸುನೀಲ್ ಕುಮಾರ್ ಸುದ್ದಿಗಾರರ ಜೊತೆ ಮಾತನಾಡಿದರು. ರಾಜ್ಯದಲ್ಲಿ ರೈತರಿಗೆ ನಿರಂತರ 7 ಗಂಟೆಗಳ ಕಾಲ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ, ಬಿಜೆಪಿ ಸರ್ಕಾರ ಬಂದ ಮೇಲೆ 6 ಲಕ್ಷ ರೈತರಿಗೆ ಹೊಸದಾಗಿ ವಿದ್ಯುತ್ ಸಂಪರ್ಕ ನೀಡಲಾಗಿದೆ. …

Read More »

ಇಂದು ರಾಷ್ಟ್ರಪತಿಗೆ ಪೌರಸಮ್ಮಾನ : ವಿಧಾನಸೌಧದ ಸಿಬ್ಬಂದಿಗೆ ರಜೆ

ಬೆಂಗಳೂರು : ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಿರುವ ಪೌರಸನ್ಮಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಿಬ್ಬಂದಿಗೆ ರಜೆ ಘೋಷಿಸಲಾಗಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಏರ್ಪಡಿಸಲಾಗಿರುವ ರಾಷ್ಟ್ರಪತಿಯವರಿಗೆ ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹಿನ್ನೆಲೆಯಲ್ಲಿ ಸುರಕ್ಷತೆ ಹಾಗೂ ಭದ್ರತೆ ದೃಷ್ಟಿಯಿಂದ ವಿಧಾನಸೌಧದ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಕಚೇರಿಗಳಿಗೆ ದಿನಾಂಕ 27-09-2022 ರ ಮಂಗಳವಾರದಂದು ರಜೆ ಘೋಷಿಸಲಾಗಿದೆ.

Read More »

ಜಿ.ಪಂ,ತಾ.ಪಂ ಚುನಾವಣೆ ನಿರೀಕ್ಷೆಯಲ್ಲಿವಿರುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ 12 ವಾರ ಗಡುವು ನೀಡಲಾಗಿದೆ. ರಾಜ್ಯದಲ್ಲಿನ 31 ಜಿಪಂ ಮತ್ತು 239 ತಾಪಂ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, ಪಂಗಡ ಮತ್ತು ಇತರೆ ಹಿಂದುಳಿದ ವರ್ಗಗಳು ಸೇರಿದಂತೆ ಎಲ್ಲಾ ರೀತಿಯ ಮೀಸಲಾತಿಯನ್ನು 12 ವಾರದೊಳಗೆ ಮರು ನಿಗದಿಪಡಿಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ. ಸರ್ಕಾರದಿಂದ ಕರ್ನಾಟಕ ಪಂಚಾಯತ್ ರಾಜ್ ಹಾಗೂ ಗ್ರಾಮ ಸ್ವರಾಜ್ ತಿದ್ದುಪಡಿ ಕಾಯ್ದೆ …

Read More »

ಮುರುಘಾ ಶರಣರು ಪೀಠತ್ಯಾಗ ಮಾಡದ ಕಾರಣ ಸೆ.29ಕ್ಕೆ ಸಭೆ

ಚಿತ್ರದುರ್ಗ: ಪ್ರೌಢಶಾಲಾ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಗಂಭೀರ ಸ್ವರೂಪದ ಆರೋಪ ಎದುರಿಸುತ್ತಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಪೀಠತ್ಯಾಗ ಮಾಡದ ಕಾರಣಕ್ಕೆ ವೀರಶೈವ ಲಿಂಗಾಯತ ಸಮಾಜದ ಸಭೆಯನ್ನು ಸೆ.29ಕ್ಕೆ ಕರೆಯಲಾಗಿದೆ. ಚಿತ್ರದುರ್ಗ ಹೊರವಲಯದ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಸ್ಮಾರಕದ ಆವರಣದಲ್ಲಿ ಮಾಜಿ ಸಚಿವ ಎಚ್. ಏಕಾಂತಯ್ಯ ಅವರ ನೇತೃತ್ವದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಭೆ ಹಮ್ಮಿಕೊಳ್ಳಲಾಗಿದೆ. ‘ಮುರುಘರಾಜೇಂದ್ರ ಮಠವು ಐತಿಹಾಸಿಕ, ಧಾರ್ಮಿಕ, ಶೈಕ್ಷಣಿಕ ಹಾಗೂ …

Read More »