ಹುಬ್ಬಳ್ಳಿ: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಆತ್ಮನಿರ್ಭರ ಭಾರತಕ್ಕೆ ನಾವೆಲ್ಲ ಸಂಕಲ್ಪ ಮಾಡೋಣ,ಓರಿಸ್ಸಾದ ಸಾಮಾನ್ಯ ಕುಟುಂಬದಿಂದ ಬಂದಿರುವ ಮಹಿಳೆಯನ್ನು ಗೌರವಿಸುವ ಮೂಲಕ ಹುಬ್ಬಳ್ಳಿ ಧಾರವಾಡದ ಜನತೆ ದೇಶದ ಸಮಸ್ತ ಮಹಿಳೆಯರನ್ನು ಗೌರವಿಸಿದ್ದಾರೆ ಎಂದು ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಹೇಳಿದರು. ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯು ಇಲ್ಲಿನ ಕರ್ನಾಟಕ ಜಿಮ್ಖಾನಾ ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪೌರಸನ್ಮಾನ ಸ್ವೀಕರಿಸಿ ಮಾತನಾಡಿದರು, ಹುಬ್ಬಳ್ಳಿ ಧಾರವಾಡ ಅವಳಿನಗರಗಳು ಕರ್ನಾಟಕ ಮಾತ್ರವಲ್ಲ,ಸಮಗ್ರ ಭಾರತದ ಸಾಂಸ್ಕೃತಿಕ,ಐತಿಹಾಸಿಕ ನಗರಗಳಾಗಿವೆ.ಉತ್ತರ …
Read More »VIP , VVIP ಪಾಸ್ ಇದ್ದರು ಲೇಟ್ ಆಗಿ ಬಂದ್ರೆ ನೋ ಎಂಟ್ರಿ
ಹುಬ್ಬಳ್ಳಿ : ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಆಗಮಿಸುತ್ತಿದ್ದು , ಕೆಲ ಜನರಿಗೆ VIP ಪಾಸ್ ನೀಡಿದ್ದಾರೆ . ಆದ್ರೆ ಕಾರ್ಯಕ್ರಮಕ್ಕೆ ತಡವಾಗಿ ಬಂದ್ರೆ ಯಾವ ಪಾಸ್ ಇದ್ರು ನೋ ಎಂಟ್ರಿ . ಎಷ್ಟೇ ವಾದ ಮಾಡಿದ್ರು ಪೊಲೀಸರು ಮರಳಿ ಕಳಿಸುತ್ತಿದ್ದಾರೆ . ಹೌದು ರಾಷ್ಟ್ರಪತಿ ದೌಪದಿ ಮುರ್ಮು ಅವರಿಗೆ ಪಾಲಿಕೆ ವತಿಯಿಂದ ಪೌರ ಸನ್ಮಾನ ಹಮ್ಮಿಕೊಂಡಿದೆ . ಸನ್ಮಾನ ಕಾರ್ಯಕ್ರಮವನ್ನು ವೀಕ್ಷಿಸಲು VIP …
Read More »ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ ನಿಧನ
ಬಂಟ್ವಾಳ: ಇಲ್ಲಿನ ಶಂಭೂರು ಗ್ರಾಮದ ಬರ್ಕೆ ನಿವಾಸಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತ ವಿಠಲ ಸಪಲ್ಯ ಬರ್ಕೆ (75) ಇವರು ಅಸೌಖ್ಯದಿಂದ ಭಾನುವಾರ ಬೆಳಿಗ್ಗೆ ಸ್ವಗೃಹದಲ್ಲಿನಿಧನರಾದರು. ಮೃತರಿಗೆ ಪತ್ನಿ, ಮೂವರು ಪುತ್ರರು ಮತ್ತು ಪುತ್ರಿ ಇದ್ದಾರೆ.ಮೃತರು ಕಲ್ಲಡ್ಕ ಹಂಚಿನ ಕಾರ್ಖಾನೆ ನಿವೃತ್ತ ಉದ್ಯೋಗಿಯಾಗಿ, ಆರ್ ಎಸ್ ಎಸ್ ಹಿರಿಯ ಕಾರ್ಯಕರ್ತರಾಗಿ, ಬರ್ಕೆ ಕುಟುಂಬದ ಮುಖ್ಯಸ್ಥರಾಗಿ, ವಿವಿಧ ಸಮಾಜಮುಖಿ ಸಂಘ ಸಂಸ್ಥೆಗಳಲ್ಲಿ ತೊಡಗಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಬರ್ಕೆ ಮನೆ ಬಳಿ …
Read More »ದಕ್ಷಿಣ ಕನ್ನಡದಲ್ಲಿ ದೀಪಗಳಿಂದ ಅಲಕಂರಿಸಿದ ನವರಾತ್ರಿ ಸಂಭ್ರಮ
ಮಂಗಳೂರು/ ಉಡುಪಿ/ಕಾಸರಗೋಡು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಾದ್ಯಂತ ಸೆ. 26ರಂದು ನವರಾತ್ರಿ, ದಸರಾ ಸಂಭ್ರಮ ಆರಂಭಗೊಳ್ಳಲಿದ್ದು ವಿವಿಧ ದೇವಾಲಯಗಳಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಕರಾವಳಿಯ ಪ್ರಮುಖ ದೇವಸ್ಥಾನಗಳಲ್ಲಿ 9 ದಿನಗಳ ಕಾಲ ನವರಾತ್ರಿ ಅಂಗವಾಗಿ ವಿಶೇಷ ಪೂಜೆ, ಹತ್ತನೇ ದಿನ ವಿಜಯದಶಮಿ ಕಾರ್ಯಕ್ರಮ ನೆರವೇರಲಿದೆ.ವಿವಿಧ ದೇಗುಲಗಳು ವಿದ್ಯುತ್ ದೀಪ, ಹೂವುಗಳಿಂದ ಶೃಂಗಾರಗೊಂಡಿವೆ. ದ.ಕ. ಜಿಲ್ಲೆಯ ಪುರಾಣ ಪ್ರಸಿದ್ಧ ಶ್ರೀ ಮಂಗಳಾದೇವಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಪೊಳಲಿ ಶ್ರೀ …
Read More »ಬಿಜೆಪಿ ಜಾತಿ ಬಣ್ಣ ಕಟ್ಟುತ್ತಿದ್ದಾರೆ : ಸಿದ್ದ ರಾಮಯ್ಯ
ಬೆಂಗಳೂರು: ಬಿಜೆಪಿಯ ‘ಲಿಂಗಾಯತ ವಿರೋಧಿ ಕಾಂಗ್ರೆಸ್’ ಅಭಿಯಾನದ ಬಗ್ಗೆ ತಿರುಗೇಟು ನೀಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಬಿಜೆಪಿಯವರು ತಮ್ಮ ಸರ್ಕಾರದ ಭ್ರಷ್ಟಾಚಾರ, ತಪ್ಪುಗಳನ್ನು ಮುಚ್ಚಿಕೊಳ್ಳಲು ಜಾತಿ ಬಣ್ಣ ಕಟ್ಟುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ನ ಲಿಂಗಾಯತ ವಿರೋಧಿ ಅನ್ನುವುದಾದರೆ ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ್ದು ಯಾರು? ಯಡಿಯೂರಪ್ಪ ಯಾವ ಜಾತಿ? ವಿಜಯೇಂದ್ರನಿಗೆ ಸಚಿವ ಸ್ಥಾನ ನೀಡದಿರುವುದು ಯಾಕೆ? ವಿಜಯೇಂದ್ರ ಯಾವ ಜಾತಿ ಎಂದು ಪ್ರಶ್ನಿಸುವ ಮೂಲಕ ಬಿಜೆಪಿಯೇ ಲಿಂಗಾಯತ …
Read More »ದಸರಾ ವಿದ್ಯುತ್ ದೀಪಾಲಂಕಾರವನ್ನು ವೀಕ್ಷಿಸಿದ ಸಿಎಂ
ಮೈಸೂರು: ದಸರಾ ಅಂಗವಾಗಿ ನಗರದಲ್ಲಿ ಮಾಡಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮತ್ತು ಇಂಧನ ಸಚಿವ ಸುನೀಲ್ಕುಮಾರ್ ಭಾನುವಾರ ಮಧ್ಯರಾತ್ರಿವರೆಗೂ ವೀಕ್ಷಿಸಿದರು. ರಾತ್ರಿ 10.30ರ ಸುಮಾರಿಗೆ ನಗರ ಪ್ರದಕ್ಷಿಣೆ ಆರಂಭಿಸಿದ ಅವರು, ರ್ಯಾಡಿಷನ್ ಬ್ಲೂ ಹೋಟೆಲ್ನಿಂದ ಕೆಎಸ್ಆರ್ಟಿಸಿಯ ಎರಡು ವೋಲ್ವೋ ಬಸ್ ಮೂಲಕ ಜೆಎಸ್ಎಸ್ ಮಹಾವಿದ್ಯಾಪೀಠ ವೃತ್ತಕ್ಕೆ ಬಂದರು. ಅಲ್ಲಿಂದ ಪ್ರವಾಸೋದ್ಯಮ ನಿಗಮದ ‘ಅಂಬಾರಿ’ ಡಬ್ಬಲ್ ಡೆಕ್ಕರ್ …
Read More »ಜಾರಕಿಹೊಳಿ ಕುಟುಂಬ ಕೂಡಿ ಯಾವುದೇ ರೀತಿ ಸರ್ಕಾರ ಉರುಳಿಸಿಲ್ಲ : ಸತೀಶ್ ಜಾರಕಿಹೊಳಿ
ಗೋಕಾಕ : ಇಡೀ ಜಾರಕಿಹೊಳಿ ಕುಟುಂಬ ಕೂಡಿ ಸರ್ಕಾರ ಉರುಳಿಸಿದ್ದಾರೆ ಎಂದು ಭಾಷಣಕಾರರು ಹೇಳಿದ್ದಾರೆ. ಜಾರಕಿಹೊಳಿ ಕುಟುಂಬ ಕೂಡಿ ಯಾವುದೇ ರೀತಿ ಸರ್ಕಾರ ಉರುಳಿಸಿಲ್ಲ. ಇದರಲ್ಲಿ ನನಗೂ, ಬಾಲಚಂದ್ರ ಹಾಗೂ ಲಖನ್ಗೂ ಯಾವುದೇ ರೀತಿ ಸಂಬಂಧವಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು ನಗರದ ಹಿಲ್ಗಾರ್ಡನ್ ಕಚೇರಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸದ ಅವರು, ಸರ್ಕಾರ ಬೀಳಿಸುವಲ್ಲಿ ಯಾರ ಪಾತ್ರವಿದೆಯೋ ಅವರಿಗೆ ಮಾತ್ರ ಆ ಮಾತು ಹೋಗಲಿ. ಅದನ್ನು …
Read More »SC, ST ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಪ್ರಸಕ್ತ ಸಾಲಿನಲ್ಲಿ ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಂದು ಸಾವಿರ ವಿದ್ಯಾರ್ಥಿ ನಿಲಯಗಳನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಭಾನುವಾರದಂದು ಬೆಂಗಳೂರಿನಲ್ಲಿ ನಡೆದ ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಉದ್ಯಾನ ನಾಮಕರಣ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅವರು, ವಿದ್ಯಾರ್ಥಿಗಳಿಗೆ ಸ್ಪೂರ್ತಿ ಸಿಗಲಿ ಎಂಬ ಕಾರಣಕ್ಕೆ …
Read More »ಮೈಸೂರು ದಸರಾ : ರಾಷ್ಟ್ರಪತಿಯಿಂದ ಮೊದಲ ಬಾರಿಗೆ ಉದ್ಘಾಟನೆ
ಮೈಸೂರು: ಸಾಂಸ್ಕೃತಿಕ ಸಿರಿ ಮತ್ತು ಧಾರ್ವಿುಕ ಐಸಿರಿಯ ಸಮ್ಮಿಲನವಾದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವೊಂದು ಸುಂದರ ದೃಶ್ಯಕಾವ್ಯ. ವರ್ಷಕ್ಕೊಮ್ಮೆ ಬರುವ ಈ ರಮಣೀಯ ಘಳಿಗೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಿಂಗಾರಗೊಂಡು ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಕೋವಿಡ್ ಸಂಕ್ರಮಣದಿಂದ ಕಳೆದ 2 ವರ್ಷ ಸರಳವಾಗಿ ನಡೆದಿದ್ದ ಉತ್ಸವದಲ್ಲಿ ಈ ಬಾರಿ ಸಡಗರ ಮೇಳೈಸಲಿದೆ. ಸೆ. 26ರಂದು ನಾಡಹಬ್ಬದ ಅಂಕದ ಪರದೆ ಗರಿ ಬಿಚ್ಚಲಿದೆ. ಮೊದಲ ಬಾರಿಗೆ ರಾಷ್ಟ್ರಪತಿಯಿಂದ ಚಾಲನೆ: ಚಾಮುಂಡಿಬೆಟ್ಟದ …
Read More »ರಾಜ್ಯ ಸರ್ಕಾರದಿಂದ ಬಿಗ್ ಆರ್ಡರ್
ಬೆಂಗಳೂರು: ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ ಎಂಬ ಶೀರ್ಷಿಕೆಯ ನಾಮಫಲಕವನ್ನು ಅಳವಡಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ಈ ಮೂಲಕ ಪೇ ಸಿಎಂ ಪೋಸ್ಟರ್ ಕಾಂಗ್ರೆಸ್ ಅಭಿಯಾನಕ್ಕೆ ರಾಜ್ಯ ಸರ್ಕಾರದಿಂದ ಟಕ್ಕರ್ ಕೊಡಲಾಗಿದೆ. ರಾಜ್ಯದ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಅಳವಡಿಸಲು ಅದೇಶ ಮತ್ತು ಸುತ್ತೋಲೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಸರಣಿ ಭ್ರಷ್ಟಾಚಾರ ಆರೋಪ ಹಿನ್ನಲೆಯಲ್ಲಿ ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ರಿಂದ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





