Breaking News

BigTv News

ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ

ಕಲಬುರ್ಗಿ: ಒಂದೆಡೆ ಕಾಂಗ್ರೆಸ್ 40% ಸರ್ಕಾರ ಎಂಬುದಾಗಿ ರಾಜ್ಯ ಸರ್ಕಾರದ ವಿರುದ್ಧ ಸರಣಿ ಕಿಡಿಕಾರುತ್ತಿದೆ. ಮತ್ತೊಂದೆಡೆ ಗುರುವಾರ ಸದನದಲ್ಲಿಯೇ ರಾಜ್ಯ ಬಿಜೆಪಿ ಸರ್ಕಾರದ ಸಚಿವರೊಬ್ಬರ ಅಕ್ರಮವನ್ನು ದಾಖಲೆ ಸಹಿತ ಬಹಿರಂಗ ಪಡಿಸೋದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬುಧವಾರ ಕಲಬುರ್ಗಿ ವಿಮಾನ ನಿಲ್ದಾಣದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ನಿಯಮ ಉಲ್ಲಂಘಿಲಸಿ, ಅಧಿಕಾರವನ್ನು ದುರುಪಯೋಗ ಮಾಡಿಕೊಂಡು, ಅಕ್ರಮವನ್ನು ಎಸಗಿದ್ದಾರೆ. ಅದರ …

Read More »

ಮಾಜಿ ಪ್ರಧಾನಿಗಳ ಆರೋಗ್ಯ ವಿಚಾರಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ‘ದೇವೇಗೌಡರ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆಯಾಗಿದೆ. ಬಹಳ ಆತ್ಮೀಯವಾಗಿ, ಲವಲವಿಕೆಯಿಂದ ಮಾತನಾಡಿದ್ದಾರೆ. ಸಾಕಷ್ಟು ಹಳೆಯ ವಿಚಾರಗಳನ್ನು ಮೆಲಕು ಹಾಕಿದರಲ್ಲದೆ ರಾಜ್ಯಕ್ಕೆ ಒಳ್ಳೆಯದು ಮಾಡಬೇಕೆಂಬ ನಿಟ್ಟಿನಲ್ಲಿ ಅವರ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಆರೋಗ್ಯ ಚೆನ್ನಾಗಿರಲಿ, ನೂರ್ಕಾಲ ಚೆನ್ನಾಗಿ ಬಾಳಲಿ. ರಾಜ್ಯಕ್ಕೆ ಅವರಿಂದ ಇನ್ನಷ್ಟು ಮಾರ್ಗದರ್ಶನ ಸಿಗುವಂತಾಗಲಿ ಎಂದು …

Read More »

35 ವರ್ಷಗಳ ಬಳಿ ರಾಷ್ಟ್ರದ ಪ್ರಥಮ ಪ್ರಜೆಗೆ ಸನ್ಮಾನಕ್ಕೆ ಹುಬ್ಬಳ್ಳಿಯಲ್ಲಿ ನಡೆತಾ ಇದೆ ಪೂರ್ವ ಸಿದ್ಧತೆ

ಹುಬ್ಬಳ್ಳಿ: ಅದು ಇಡೀ ದೇಶಕ್ಕೆ ಶಾಂತಿಯ ಸಂದೇಶ ಸಾರಿಗೆ ನಾಡು, ವಾಣಿಜ್ಯ ನಗರಿ ಎಂಬ ಹೆಗ್ಗಳಿಕೆ ಬೇರೆ ಇಂತಹ ನಾಡಿನಲ್ಲಿ ಈಗ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮಾ ಅವರನ್ನು ಅಭಿನಂದಿಸಲು ಸಕಲ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತದೆ. ಸುಮಾರು ಮೂರುವರೆ ದಶಕಗಳ ಬಳಿಕ ರಾಷ್ಟ್ರಪತಿಯವರಿಗೆ ಪೌರಸನ್ಮಾನ ನೀಡುತಿದ್ದು ಎರಡನೇ ಬಾರಿಗೆ ರಾಷ್ಟ್ರದ ಪ್ರಥಮ ಪ್ರಜೆಗೆ ಪೌರಸನ್ಮಾನ ಮಾಡುವ ಭಾಗ್ಯವನ್ನು ಹುಬ್ಬಳ್ಳಿ ಧಾರವಾಡಮಹಾನಗರ ಪಾಲಿಕೆ ಪಡೆದುಕೊಂಡಿದೆ.ಸೆ.26ರಂದು ಆಗಮಿಸುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ …

Read More »

ಹುಬ್ಬಳ್ಳಿಯಲ್ಲಿ ವಿಷ್ಣು ವರ್ಧನ್ ಅವರ 72ನೇ ಜಯಂತಿ ಆಚರಣೆ

ಹುಬ್ಬಳ್ಳಿ: ಸಾಹಸಸಿಂಹ, ಅಭಿನವ ಭಾರ್ಗವ, ಕನ್ನಡದ ಕಣ್ಮಣಿ ಡಾ ವಿಷ್ಣುವರ್ಧನ್ ಅವರ 72ನೇ ಜಯಂತಿಯ ಅಂಗವಾಗಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದಿಂದ ವಿಷ್ಣು ವರ್ಧನ್ ಅವರ ಜಯಂತಿಯನ್ನು ರಾಯಣ್ಣನ ಕಚೇರಿಯಲ್ಲಿ ಆಚರಿಸಲಾಯಿತು.ಸಾಹಸಸಿಂಹ ವಿಷ್ಣುವರ್ಧನ್ ಅವರ ಆದರ್ಶ ಬದುಕು ನಮ್ಮೆಲ್ಲರಿಗೂ ಸ್ಪೂರ್ತಿದಾಯಕ ದೈಹಿಕವಾಗಿ ಅವರು ನಮ್ಮ ನಡುವೆ ಇಲ್ಲದಿದ್ದರೂ ಕೂಡ ವಿಷ್ಣುವರ್ಧನ್ ಅವರ ಆದರ್ಶಗಳ ಮುಖಾಂತರ ಹಾಗೂ ಅವರು ನಟಿಸಿದ ಚಲನಚಿತ್ರಗಳ ಮುಖಾಂತರ ಅವರು ಎಂದೆಂದಿಗೂ ಅಜರಾಮರವಾಗಿದ್ದಾರೆ ಇಂತಹ ಅಪ್ರತಿಮ …

Read More »

ಸೆ. 24 ರಂದು ಮಹಿಷ ದಸರಾ ಆಚರಣೆ

ಮೈಸೂರು : ಮೈಸೂರಿನ ಚಾಮುಂಡಿ ಬೆಟ್ಟದಲ್ಲಿರುವ ಮಹಿಷ ಪ್ರತಿಮೆ ಬಳಿ ಸೆಪ್ಟೆಂಬರ್ 24 ರಂದು ಮಹಿಷ ದಸರಾ ಆಚರಿಸಲಾಗುವುದು ಎಂದು ಮಾಜಿ ಮೇಯರ್ ಪುರುಷೋತ್ತಮ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 24 ರಂದು ಮಹಿಷ ದಸರಾ ಆಚರಿಸಲಾಗುವುದು. ಮಹಿಷಾ ದಸರಾ ಆಚರನೆಯನ್ನು ಯಾರು ತಡೆಯಲು ಬಂದರೂ ನಮ್ಮ ನಿರ್ಧಾರ ಬದಲಾಗುವುದಿಲ್ಲ. ಸೆ.25 ರಂದು ಚಾಮುಂಡಿ ಬೆಟ್ಟದ ಮಹಿಷಾ ಪ್ರತಿಮೆ ಬಳಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಮಹಿಷಾ …

Read More »

ಮಳೆಯಿಂದ ಹಾನಿಗೊಳಗಾದ ರಸ್ತೆ , ದುರಸ್ತಿ ಕಾಮಗಾರಿಗೆ 300 ಕೋಟಿ ರೂ. ಮಂಜೂರು : ಸಿ.ಸಿ. ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ 2022-23ನೇ ಸಾಲಿನಲ್ಲಿ ಮಳೆಯಿಂದ ಹಾನಿಗೊಳಗಾದ ರಸ್ತೆ ಹಾಗೂ ಇತರ ಆಸ್ತಿಗಳ ದುರಸ್ತಿ ಕಾಮಗಾರಿಗೆ 300 ಕೋಟಿ ರೂ. ಮಂಜೂರು ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್‌ ತಿಳಿಸಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ ರಸ್ತೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿ ಆಗಿದೆ. ಲೋಕೋಪಯೋಗಿ ಇಲಾಖೆ ರಸ್ತೆಗಳ …

Read More »

ದ.ಕ‌ ಜಿಲ್ಲೆಗೆ ಪ್ರವೇಶಿಸದಂತೆ ಮುತಾಲಿಕ್‌ಗೆ ಮೇಲೆ ಹೇರಿದ ಆದೇಶ ರದ್ದು

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶಿಸದಂತೆಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ಗೆ ಜಿಲ್ಲಾಡಳಿತ ನಿರ್ಬಂಧಿಸಿ ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವುದನ್ನು ಪ್ರಶ್ನಿಸಿ ಮುತಾಲಿಕ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿರುವ ನ್ಯಾ| ಎಂ.ನಾಗಪ್ರಸನ್ನ ಅವರಿದ್ದ ಪೀಠವು, ಪ್ರಕರಣವನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ಗೆ ವರ್ಗಾವಣೆ ಮಾಡಿದ್ದು, ಕಾನೂನಿನ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಹೇಳಿದೆ. ಪೊಲೀಸ್‌ ಆಯುಕ್ತರು ಹೊರಡಿಸಿದ್ದ ಆದೇಶದ ಅವಧಿ ಈಗಾಗಲೇ …

Read More »

ಅತೀ ಹೆಚ್ಚು ಜನ ವಿಕ್ಷೀಸಿದ ರಾಣಿ ಎಲಿಜಬೆತ್ ಅಂತ್ಯಕ್ರಿಯೆಯ ಪ್ರಸಾರ

ವಯೋ ಸಹಜ ಕಾಯಿಲೆಯಲ್ಲಿ ಬಳಲುತ್ತಿದ್ದ ಬ್ರಿಟನ್ ಇತಿಹಾಸದಲ್ಲೇ ಸುದೀರ್ಘ ವರ್ಷಗಳ ಕಾಲ ಆಳ್ವಿಕೆ ನಡೆಸಿದ ರಾಣಿ ಎಂದೇ ಖ್ಯಾತಿ ಘಳಿಸಿದ ರಾಣಿ ಎಲಿಜಬೆತ್ II ನಿಧನರಾಗಿದ್ದಾರೆ. ರಾಣಿ ಎಲಿಜಬೆತ್ ಅಂತ್ಯಕ್ರಿಯೆಯ ಪ್ರಸಾರವನ್ನು ಜಗತ್ತಿನ ಅರ್ಧಕ್ಕಿಂತಲೂ ಹೆಚ್ಚು ಮಂದಿ ನೋಡಿದ್ದಾರೆ ಎನ್ನಲಾಗುತ್ತಿದೆ. ಸೆಪ್ಟೆಂಬರ್ 19ರಂದು ರಾಣಿ ಎಲಿಜಬೆತ್ II ರ ಅಂತ್ಯಕ್ರಿಯೆ ನಡೆದಿದ್ದು, ಅಂತ್ಯಕ್ರಿಯೆಯನ್ನು ನೇರ ಪ್ರಸಾರ ಮಾಡಲಾಗಿತ್ತು. ಅಂದಾಜಿನ ಪ್ರಕಾರ ಸುಮಾರು 420 ಕೋಟಿ ಜನರು ಅಂತ್ಯಕ್ರಿಯೆ ವೀಕ್ಷಿಸಿದ್ದಾರೆ ಎಂದು …

Read More »

ಪಿಎಸ್‌ಐ ಅಕ್ರಮದಲ್ಲಿ ಪಾಲ್ಗೊಂಡಿರೋ ರಾಜಕಾರಣಿಗಳ ಬಂಧಿಸಿ

ಬೆಂಗಳೂರು : ನಿರೀಕ್ಷೆಯಂತೆ ಸದನದಲ್ಲಿ ಪಿಎಸ್‌ಐ ನೇಮಕಾತಿ ಹಗರಣ ಪ್ರತಿಧ್ವನಿಸಿದೆ. ವಿಷಯ ಪ್ರಸ್ತಾಪಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರದ ಮೇಲೆ ಮುಗಿಬಿದ್ರು. ಪ್ರಕರಣದಲ್ಲಿ ಪಾಲ್ಗೊಂಡಿರೋ ರಾಜಕಾರಣಿಗಳ ಬಂಧನಕ್ಕೆ ಒತ್ತಾಯಿಸಿದ್ರು. ಹಾಲಿ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆಗೆ ಒತ್ತಾಯಿಸಿದರು. ಆಡಳಿತ ಮತ್ತು ವಿಪಕ್ಷಗಳ ಮಧ್ಯೆ ಜೋರು ವಾಗ್ಯುದ್ಧ ನಡೆಯಿತು. ಸದನದ ಬಾವಿಗಿಳಿದು ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ರು. ಉದ್ಯೋಗಾಂಕ್ಷಿಗಳು ನೀಡಿದ್ದ ಅಕ್ಕಿ, ಬೇಳೆಯ ಗಂಟನ್ನು ಸಿದ್ದರಾಮಯ್ಯ ತೋರಿಸಿದ್ದಕ್ಕೆ ಇದೆಲ್ಲಾ ಇವೆಂಟ್ ಮ್ಯಾನೇಜ್ಮೆಂಟ್ ಎಂದು …

Read More »

ಜಿಮ್ ಗಳಲ್ಲಿ ಪ್ರೋಟೀನ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ : ಸುಧಾಕರ್

ಬೆಂಗಳೂರು : ರಾಜ್ಯದ ಕೆಲ ಜಿಮ್ ಗಳಲ್ಲಿ ಪ್ರೋಟೀನ್ ಪೌಡರ್ ಮಾರಾಟ ಮಾಡಲಾಗುತ್ತಿದ್ದು, ಪ್ರೋಟೀನ್ ಪೌಡರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯದ ಹಲವು ಜಿಮ್​ನಲ್ಲಿ ಬಳಸುವ ಪ್ರೋಟೀನ್​ ಪೌಡರ್ ಅನ್ನು ಬ್ಯಾನ್‌ ಮಾಡುವಂತೆ ಸದನದಲ್ಲಿ ಒತ್ತಾಯ ಮಾಡಲಾಗಿದೆ. ಈ ಬಗ್ಗೆ ಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಸತೀಶ್​ ರೆಡ್ಡಿ ಜಿಮ್​ಗಳಲ್ಲಿ ಬಳಕೆ ಮಾಡುವ ಪ್ರೋಟೀನ್ ಪೌಡರ್‌ಗಳ ಬಗ್ಗೆ ಸದನದ ಗಮನ ಸೆಳೆದು ತಮ್ಮ ಸಂತೋಷ್ …

Read More »