ಕಠ್ಮಂಡು: ಭಾರೀ ಮಳೆ ಹಿನ್ನೆಲೆಯಲ್ಲಿ ಪಶ್ಚಿಮ ನೇಪಾಳದಲ್ಲಿ ಭೂಕುಸಿತ ಉಂಟಾಗಿದ್ದು, ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದಾರೆ. 7 ಮಂದಿಗೆ ಗಾಯಗಳಾಗಿದ್ದು, 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೇಪಾಳದ ರಾಜಧಾನಿ ಕಠ್ಮಂಡುವಿನ ಪಶ್ಚಿಮಕ್ಕೆ ಸುಮಾರು 450 ಕಿ.ಮೀ ದೂರದಲ್ಲಿರುವ ಅಚ್ಚಾಮ್ ಜಿಲ್ಲೆಯಲ್ಲಿ ಭೂಕುಸಿತ ಉಂಟಾಗಿದ್ದು, ಘಟನೆಯಲ್ಲಿ ಹಲವಾರು ಮನೆಗಳು ಮಣ್ಣಿನಡಿ ಹೂತುಹೋಗಿವೆ ಎನ್ನಲಾಗಿದೆ.ಅವಶೇಷಗಳಿಂದ ಮೃತದೇಹ ಹಾಗೂ ಗಾಯಾಳುಗಳನ್ನು ಹೊರ ತೆಗೆಯಲಾಗುತ್ತಿದ್ದು ಮೃತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ …
Read More »ಬೆಂಗಳೂರುನಲ್ಲಿ ವಿಷ್ಣುವರ್ಧನ್ ಜನ್ಮದಿನ ವಿಶೇಷವಾಗಿ ಆಚರಣೆ
ಬೆಂಗಳೂರು: ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಜನ್ಮ ಜಯಂತಿ ಇಂದು. ಈ ದಿನ ಅವರ ಅಭಿಮಾನಿಗಳ ಪಾಲಿಗೆ ಯಾವತ್ತಿಗೂ ವಿಶೇಷವೇ. ಪ್ರತೀ ಬಾರಿ ಸಾಹಸಸಿಂಹನ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ರಕ್ತದಾನ, ಅನ್ನದಾನ ಮಾಡಿ ಗಮನ ಸೆಳೆಯುತ್ತಿದ್ದರು. ಈ ಬಾರಿ ಅಭಿಮಾನಿಗಳು ಹುಟ್ಟುಹಬ್ಬದ ನಿಮಿತ್ತ 50 ಕಟೌಟ್ ಗಳನ್ನು ನಿಲ್ಲಿಸಿ ವಿಶೇಷವಾಗಿ ಸಂಭ್ರಮಾಚರಿಸುತ್ತಿದ್ದಾರೆ. ಇದೇ ವರ್ಷ ವಿಷ್ಣು ದಾದ ಚಿತ್ರರಂಗಕ್ಕೆ ಕಾಲಿಟ್ಟು 50 ವರ್ಷಗಳಾಗುತ್ತಿವೆ. ಈ ಹಿನ್ನಲೆಯಲ್ಲಿ ಅವರ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದೆ.
Read More »ಬಿಗ್ಬಾಸ್ ಸೀಸನ್ 9ಗೆ ಒಟಿಟಿ ಸೀಸನ್ ವಿನ್ನರ್ ಆಗಿ ಹೊರಹೊಮ್ಮಿದ ರೂಪೇಶ್ ಶೆಟ್ಟಿ
ಬೆಂಗಳೂರು: ಬಿಗ್ಬಾಸ್ ಸೀಸನ್ 9ಗೆ ಒಟಿಟಿ ಸೀಸನ್ನಿಂದ ರೂಪೇಶ್ ಶೆಟ್ಟಿ, ರಾಕೇಶ್ ಅಡಿಗ, ಆರ್ಯವರ್ಧನ ಗುರೂಜಿ ಹಾಗೂ ಸಾನ್ಯಾ ಅಯ್ಯರ್ ಆಯ್ಕೆಯಾಗಿದ್ದಾರೆ. ಟಾಪ್ 4 ಸ್ಥಾನಕ್ಕಾಗಿ ಸಾನ್ಯಾ ಅಯ್ಯರ್ ಹಾಗೂ ಸೋನು ಗೌಡ ನಡುವೆ ತೀರ್ವ ಪೈಪೋಟಿ ಏರ್ಪಟ್ಟಿತ್ತು. ಆದರೆ ಕೊನೆಯಲ್ಲಿ ಕಿಚ್ಚ ಸುದೀಪ್ ಬಿಗ್ ಬಾಸ್ ಕನ್ನಡ ಒಟಿಟಿ ಸೀಸನ್ ಒಂದರ ಟಾಪ್ 4 ಸ್ಪರ್ಧಿ ಸಾನ್ಯಾ ಅಯ್ಯರ್ ಎಂದು ಘೋಷಣೆ ಮಾಡಿದ್ದಾರೆ. ಬಿಗ್ಬಾಸ್ ಒಟಿಟಿ ಸೀಸನ್ 1ರ …
Read More »ಶಾಸಕ ಜಮೀರ್ ಅಹ್ಮದ್ ಖಾನ್ಗೆ ಏಕವಚನದಲ್ಲಿ ಮಾತನಾಡಿದ ಜೆ.ಸಿ.ಮಾಧುಸ್ವಾಮಿ
ಬೆಂಗಳೂರು : ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಖಾನ್ಗೆ ವಿಧಾನಮಂಡಲದ ಅಧಿವೇಶನದ ವೇಳೆ, ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆಯ ಸಚಿವ ಜೆ.ಸಿ.ಮಾಧುಸ್ವಾಮಿ ಏಕವಚನದಲ್ಲಿ ಬುದ್ದಿಮಾತನ್ನು ಹೇಳಿ ಸುಮ್ಮನಾಗಿಸಿದ್ದಾರೆ. ನಿಲುವಳಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಧುಸ್ವಾಮಿ ಸದನದಲ್ಲಿ ಮಾತನಾಡುತ್ತಿದ್ದರು.ಆಗ, ಪದೇಪದೇ ಜಮೀರ್ ಅಹ್ಮದ್ ಎದ್ದುನಿಂತು ಅಡ್ಡಿ ಪಡಿಸುತ್ತಿದ್ದರು. ಆಗ, ಮಾಧುಸ್ವಾಮಿ, ಇದು ರೂಲ್ಸಿಗೆ ಸಂಬಂಧಿಸಿದ ಚರ್ಚೆ, ನಿನಗೆ ಅರ್ಥವಾಗುವುದಿಲ್ಲ ಎಂದು ಅವರನ್ನು ಸುಮ್ಮನಾಗಿಸಿದರು. ಪಿಎಸ್ಐ ಹಗರಣಕ್ಕೆ ಸಂಬಂಧಿಸಿದಂತೆ, ನಿಯಯ 60ರ ಅಡಿಯಲ್ಲಿ …
Read More »ಕೇಂದ್ರ ಸರ್ಕಾರದ ವಿರುದ್ಧ ಗ್ರಾಮೀಣ ಬ್ಯಾಂಕ್ ನೌಕರರ ಹೋರಾಟ
ಹುಬ್ಬಳ್ಳಿ : ಕೇಂದ್ರ ಸರ್ಕಾರ ಈಗಾಗಲೇ ಹಲವು ಇಲಾಖೆಗಳನ್ನ ಖಾಸಗೀಕರಣ ಮಾಡಿದೆ . ಇದರ ಬೆನ್ನಲ್ಲೇ ಬ್ಯಾಂಕುಗಳನ್ನ ಖಾಸಗೀಕರಣ ಮಾಡಲು ಹೊರಟಿದೆ . ಇದರಿಂದಾಗಿ ಬ್ಯಾಂಕ್ ನೌಕರರು ಕೇಂದ್ರ ಸರ್ಕಾರದ ವಿರುದ್ಧ ಬೀದಿಗಿಳಿದು ಹೋರಾಟ ಮಾಡಲು ನಿರ್ಧರಿಸಿದ್ದಾರೆ . ಹೌದು ಖಾಸಗೀಕರಣ ವಿರೋಧಿಸಿ ಒಂದೆಡೆ ರಸ್ತೆಗಿಳಿದು 2015 ರಿಂದ ಹೋರಾಟ ಮಾಡುತ್ತಿರುವವರು , ಇನ್ನೊಂದಡೆ ನೌಕರರು ಸಾಲಾಗಿ ನಿಂತು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರುತ್ತಿರುವ ದೃಶ್ಯಗಳು ಇದಕ್ಕೆಲ್ಲ ಕಾರಣ …
Read More »ವಾಣಿಜ್ಯನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಇದೇ 26 ರಂದು ಭೇಟಿ
ಹುಬ್ಬಳ್ಳಿ : ವಾಣಿಜ್ಯನಗರಿ ಹುಬ್ಬಳ್ಳಿಗೆ ರಾಷ್ಟ್ರಪತಿ ದೌಪದಿ ಮುರ್ಮು ಇದೇ 26 ರಂದು ಭೇಟಿ ನೀಡುವ ಮೂಲಕ ಮಹಾನಗರ ಪಾಲಿಕೆ ಪೌರಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ . ರಾಷ್ಟ್ರಪತಿ ದೌಪದಿ ಮುರ್ಮುಗೆ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯಿಂದ ಪೌರಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಬೆಳಗ್ಗೆ 9 ಗಂಟೆಗೆ ಮೈಸೂರಲ್ಲಿ ದಸರಾಕ್ಕೆ ಚಾಲನೆ ನೀಡಿ ಅಲ್ಲಿಂದ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ . , ಬಳಿಕ 11 ಗಂಟೆಗೆ ಇಲ್ಲಿನ ಜಿಮ್ಖಾನಾ ಮೈದಾನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ …
Read More »ಮೋದಿಜಿ ನಡೆ ಚಿಣ್ಣರ ಕಡೆ ಚಾಲನೆ
ಧಾರವಾಡ: ಕರ್ಪ್ಜ್ಞಾನ ಫೌಂಡೇಶನ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ಎಜುಕೇಷನ್ ಬೋರ್ಡ್ ಇವರ ಸಂಯುಕ್ತ ಆಶ್ರಯದಲ್ಲಿ ಮೋದಿಜಿ ನಡೆ ಚಿಣ್ಣರ ಕಡೆ ಪ್ರಧಾನಿ ನರೇಂದ್ರ ಮೋದಿಯವರ 72ನೇಯ ಜನ್ಮದಿನೋತ್ಸವದ ಅಂಗವಾಗಿ ಹಮ್ಮಿಕೊಂಡ ಗಣಿತ-ಮೇಳಕ್ಕೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಚಾಲನೆ ನೀಡಿದರು. ಈ ಕಾರ್ಯಕ್ರಮ ದ ಅಂಗವಾಗಿ ಒಟ್ಟು 8 ಕೆ.ಜಿ ರಂಗೋಲಿ ಬಳಸಿ, 7 ಪೋಟ್.2. ಇಂಚಿನ ಪ್ರಧಾನಿ ಮೋದಿ ಅವರ ಭಾವಚಿತ್ರ ಕೆಲಗೇರಿಯ ಮಂಜುನಾಥ …
Read More »ಪ್ರಧಾನಿ ಹುಟ್ಟು ಹಬ್ಬದ ನಿಮಿತ್ತ ರಕ್ತ ದಾನ ಶಿಬಿರ
ಹುಬ್ಬಳ್ಳಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 72 ನೇ ಜನ್ಮ ದಿನಾಚರಣೆಯನ್ನು ಹುಬ್ಬಳ್ಳಿಯಲ್ಲಿ ಮಾದರಿಯಾಗಿ ಆಚರಿಸಲಾಯಿತು. ಪ್ರದಾಯನ ಮಂತ್ರಿ ನರೇಂದ್ರ ಮೋದಿ ಜನ್ಮ ದಿನದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ರಾಷ್ಟ್ರೋತ್ತಾನ ರಕ್ತನಿಧಿಯಲ್ಲಿ ರಕ್ತ ದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಇದೇ ವೇಳೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ರಕ್ತದಾನ ಮಾಡಿದರು. ಕೇಂದ್ರ ಸಚಿವರಿಗೆ ಮಾಜಿ ಸಿ ಎಂ ಜಗದೀಶ ಶೆಟ್ಟರ್ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಸಾಥ್ …
Read More »ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎನ್ನುವುದು ಸುಳ್ಳು ಸುದ್ದಿ : ವರಿಷ್ಠಾಧಿಕಾರಿ ಸ್ಪಷ್ಟನೆ
ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ವದಂತಿ ಹರಡಿದ್ದು, ಇದು ಸಂಪೂರ್ಣ ಸುಳ್ಳು ಸುದ್ದಿಯಾಗಿರುವ ಕಾರಣ ಜಿಲ್ಲೆಯ ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ ನೀಡಿದ್ದಾರೆ. ಇತ್ತಿಚಿಗೆ ರಾಜ್ಯದಲ್ಲಿ ಮಕ್ಕಳ ಕಳ್ಳರು ಬಂದಿದ್ದಾರೆ ಎಂದು ಜಿಲ್ಲೆಯಲ್ಲಿ ಸುಳ್ಳು ವದಂತಿ ಹರಡುತ್ತಿದ್ದು, ಸಾರ್ವಜನಿಕರು ಆತಂಕಕ್ಕೆ ಒಳಗಾಗಬಾರದು ಮತ್ತು ತಮ್ಮ ಗ್ರಾಮಕ್ಕೆ ಆಗಮಿಸುವ ಬೇರೆ ಗ್ರಾಮದ ವ್ಯಕ್ತಿಗಳ ಮೇಲೆ ಯಾವುದೇ ಕಾರಣಕ್ಕೂ ಆವೇಶ …
Read More »2013 -2017ರಲ್ಲಿ ಪಿಎಸ್ಐ ನೇಮಕಾತಿ ಅಕ್ರಮ : ಶಾಸಕ ಪಿ.ರಾಜೀವ್
ಬೆಂಗಳೂರು: 2013ರಲ್ಲಿ ನಡೆದ ಪಿಎಸ್ಐ ಮತ್ತು ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ಮಾಹಿತಿ ಕಲೆಹಾಕಿದ್ದು, ಅವುಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ಶಾಸಕ ಪಿ.ರಾಜೀವ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013 ರಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಪರೀಕ್ಷೆಯನ್ನೇ ಬರೆಯದ ಹಲವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಅಂಥವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇದರ ಸುಳಿವು ಪಡೆದು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





