Breaking News

BigTv News

ರೈತರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಭಾರಿ ಮಳೆಯಿಂದಾಗಿ ಬೆಳೆ ಹಾನಿಗೊಳಗಾದ ರೈತರ ಖಾತೆಗೆ ಪರಿಹಾರದ ಮೊತ್ತ ಜಮಾ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ವಿಧಾನಮಂಡಲ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯ ಕೆ. ಅಬ್ದುಲ್ ಜಬ್ಬಾರ್ ಮತ್ತು ಜೆಡಿಎಸ್ ಸದಸ್ಯ ಟಿ.ಎ.ಶರವಣ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಬಿ.ಸಿ. ಪಾಟೀಲ್ ಅವರು, 7,61,438.86 ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ಹಾನಿಗೀಡಾಗಿದ್ದು, 1.04 ಲಕ್ಷ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ 116.38 …

Read More »

ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ : ಬಂಧಿತರ ಸಂಖ್ಯೆ 21ಕ್ಕೆ ಎರಿಕೆ

ಬೆಳಗಾವಿ: ರಾಜ್ಯದಲ್ಲಿ ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರ ಭಾರೀ ಸದ್ದು ಮಾಡಿತ್ತು. ಇದೀಗ ಅದೇ ರೀತಿಯಲ್ಲಿ ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ವಿಚಾರವೂ ಸದ್ದು ಮಾಡುತ್ತಿದೆ. ಹೌದು ಈ ಪರೀಕ್ಷೆಯಲ್ಲೂ ಅಕ್ರಮ ಎಸಗಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕಾಕ್ ಪೊಲೀಸರು ಶುಕ್ರವಾರ ಮತ್ತೆ ಮೂವರನ್ನು ಬಂಧಿಸಿದ್ದು, ಬಂಧಿತರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ. ನಿನ್ನೆ ಆರೋಪಿಗಳಾದ ಅಕ್ಷಯ ದುಂಡಪ್ಪ ಭಂಡಾರಿ, ಬಸವರಾಜ ರುದ್ರಪ್ಪ ದುಂಡ್ನಾಟಿ, ಬೀರಂಗಡ್ಡಿ ಮತ್ತು ಶ್ರೀಧರ ಲಕ್ಕಪ್ಪ ಕಟ್ಟಿಕರ್ …

Read More »

ಉದ್ಯಮಿ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿ

ಉದ್ಯಮಿ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ. ಪೋರ್ಟ್ಸ್ ರಿಯಲ್ ಟೈಮ್ ಬಿಲಿಯನೇರ್ ಗಳ ಪಟ್ಟಿಯ ಪ್ರಕಾರ, ಅದಾನಿಯಾ ನಿವ್ವಳ ಮೌಲ್ಯ ಸೆಪ್ಟೆಂಬರ್ 16, 2022ರ ಹೊತ್ತಿಗೆ 155.7 ಬಿಲಿಯನ್ ಡಾಲರ್ ಆಗಿದೆ. ಅಂದರೆ ಸುಮಾರು ಶೇ.4ರಷ್ಟು ಹೆಚ್ಚಾಗಿದೆ. ಅಮೆಜಾನ್‌ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಗೌತಮ್ ಅದಾನಿ 2ನೇ ಸ್ಥಾನ ಅಲಂಕರಿಸಿದ್ದಾರೆ. 273.5 ಶತಕೋಟಿ ಡಾಲರ್ ನಿವ್ವಳ ಮೌಲ್ಯದೊಂದಿಗೆ ಎಲೋನ್ ಮಸ್ಕ್ ವಿಶ್ವದ ಅತ್ಯಂತ ಶ್ರೀಮಂತ …

Read More »

ವರುಣನ ಆರ್ಭಟಕ್ಕೆ ತತ್ತರಿಸಿದ ಜನರು

ಈ ಬಾರಿಯ ವರುಣರಾಯನ ಅಬ್ಬರ ಊಹಿಸಲು ಸಾಧ್ಯವಾಗುತ್ತಿಲ್ಲ. ಪ್ರತಿ ವರ್ಷದಂತೆ ನಿಗಧಿತ ಪ್ರಮಾಣದಲ್ಲಿ ಮಲೆನಾಡು, ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸುರಿದಿದೆ. ಇನ್ನು ಕೆಲವು ಭಾಗಗಳಲ್ಲಿ ಮಳೆ  ಮುಂದುವರಿದಿದೆ. ಉತ್ತರ ಕರ್ನಾಟಕದ ಕಲಬುರಗಿ , ಬೀದರ್ ಜಿಲ್ಲೆಗಳಲ್ಲಿ ನಿರೀಕ್ಷೆಗೂ ಮೀರಿದ ಮಳೆಯಾಗಿದೆ. ಜುಲೈ ತಿಂಗಳಿನಿಂದ ಕಲ್ಯಾಣ ಕರ್ನಾಟಕ ಭಾಗದ ನದಿಗಳು  ತುಂಬಿ ಹರಿಯುತ್ತಿವೆ. ಇನ್ನು ಕಳೆದ ಮೂರು ವಾರಗಳಿಂದ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಆದ್ರೆ ಮಹಾರಾಷ್ಟ್ರದ …

Read More »

SC, ST ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮಕ್ಕಳಿಗೆ ಉಚಿತ ಕರ್ನಾಟಕ ದರ್ಶನ ಪ್ರವಾಸ ಏರ್ಪಡಿಸಲಾಗಿದೆ. ಪ್ರವಾಸೋದ್ಯಮ ಇಲಾಖೆಯಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಎಂಟನೇ ತರಗತಿ ಓದುತ್ತಿರುವ ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿಗೆ ಎಸ್‌ಸಿಪಿ ಮತ್ತು ಎಸ್.ಟಿ.ಪಿ.ಯೋಜನೆಯಡಿ ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸ ಕೈಗೊಳ್ಳಲಾಗಿದೆ. ಕೊರೋನಾ ಕಾರಣದಿಂದ ಕಳೆದು ಎರಡು ವರ್ಷಗಳಿಂದ ಈ ಕಾರ್ಯಕ್ರಮ ಸ್ಥಗಿತಗೊಂಡಿದ್ದು, ಈ ವರ್ಷದಿಂದ ಮತ್ತೆ ಆರಂಭಿಸಲಾಗುವುದು. ಪ್ರತಿ ತಾಲೂಕಿನಿಂದ ನಾಲ್ಕು ದಿನಗಳ ಪ್ರವಾಸಕ್ಕೆ ಒಂದು ಬಸ್ …

Read More »

ಮಾಜಿ ಸಚಿವ ವಿರುದ್ಧ ಡಿಕೆಶಿ ಆಕ್ರೋಶ

ಬೆಂಗಳೂರು: ‘ರಾಹುಲ್‌ಗಾಂಧಿ ಅವರ ಪಾದಯಾತ್ರೆಗೆ ಒಂದು ದಿನ 5 ಸಾವಿರ ಜನರನ್ನು ಕಳುಹಿಸಲು ಮಾಜಿ ಸಚಿವ ಆರ್‌.ವಿ.ದೇಶಪಾಂಡೆ ಅವರಿಗೆ ಕೇಳಿದರೆ ಆಗಲ್ಲ ಎನ್ನುತ್ತಾರೆ. ಐದು ವರ್ಷದಲ್ಲಿ ಒಂದು ದಿನವಾದರೂ ರಾಹುಲ್‌ಗಾಂಧಿ ಜತೆ ಕೆಲಸ ಮಾಡಲಾಗಲ್ಲ ಎಂದರೆ ಏನು ಮಾಡಬೇಕು. ಈ ವಿಚಾರದಲ್ಲಿ ಯಾವ ಶಾಸಕರಿಗೂ ವಿನಾಯಿತಿ ನೀಡುವುದಿಲ್ಲ’ ಎಂದು ದೇಶಪಾಂಡೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಂಬೇಡ್ಕರ್‌ ಭವನದಲ್ಲಿ ನಡೆದ ಕೆಪಿಸಿಸಿ ಪದಾಧಿಕಾರಿಗಳು ಹಾಗೂ …

Read More »

ಇಂದು ಜನಸಿದ ಮಕ್ಕಳಿಗೆ ಬಂಪರ್ ಗಿಫ್ಟ್

ತಮಿಳುನಾಡು :  ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 ರಂದು ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ ತೂಗುತ್ತದೆ. ಸ್ಥಳೀಯ …

Read More »

ಚಿಗರಿ ಬಸ್ಸಿನಲ್ಲಿ ಬೆಂಕಿ ಅವಘಡ ; ಪ್ರಯಾಣಿಕರು ಸುರಕ್ಷಿತ

ಧಾರವಾಡ : ಹುಬ್ಬಳ್ಳಿ , ಧಾರವಾಡ ಅವಳಿನಗರದ ಮಧ್ಯೆ ಸಂಚರಿಸುವ ಬಿಆರ್‌ಟಿಎಸ್ ಸಂಸ್ಥೆಯ ಚಿಗರಿ ಬಸ್ಸಿನ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಠಿಸಿದ ಘಟನೆ ಧಾರವಾಡದ ಕೋರ್ಟ್ ಸರ್ಕಲ್ ಬಳಿ ನಡೆದಿದೆ . ಪ್ರಯಾಣಿಕರನ್ನು ಕರೆದುಕೊಂಡು ಹುಬ್ಬಳ್ಳಿ ಕಡೆಗೆ ಹೊರಟಿದ್ದ ಚಿಗರಿ ಬಸ್ಸಿನ ಹಿಂಬದಿಯ ಚಕ್ರದಲ್ಲಿ ಬೆಂಕಿ ಕಾಣಿಸಿಕೊಂಡಿದೆ . ಇದನ್ನು ಕಂಡ ಚಾಲಕ , ಪ್ರಯಾಣಿಕರನ್ನು ಕೆಳಗಿಳಿಸಿದ್ದಾನೆ . ಕೂಡಲೇ ಅಗ್ನಿಶಾಮಕ ದಳದವರಿಗೆ ಸುದ್ದಿ ಮುಟ್ಟಿದ್ದರಿಂದ ಸ್ಥಳಕ್ಕೆ ಬಂದ …

Read More »

ಬಿಡಿಎ ಹಗರಣದಲ್ಲಿ ಯಡಿಯೂರಪ್ಪ ಶುದ್ದಹಸ್ತರಾಗಿ ಹೊರಬರಲಿದ್ದಾರೆ- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬಿಡಿಎ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಹಸ್ತರಾಗಿ ಬರುತ್ತಾರೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ಪ್ರಸ್ತುತ ಯಾವುದೇ ಸಂವಿಧಾನಾತ್ಮಕ ಹುದ್ದೆಯಲ್ಲಿಲ್ಲ‌. ಭಾರತದ ಕಾನೂನು ವ್ಯವಸ್ಥೆ ಅಡಿಯಲ್ಲಿ ತನಿಖೆ ನಡೆಯಲಿ. ನಮಗೆ ಕಾನೂನಿನ ಮೇಲೆ ವಿಶ್ವಾಸ ಇದೆ. ಆದರೆ ಯಡಿಯೂರಪ್ಪ ಬಗ್ಗೆ ಶಾಸಕ ಬಸವರಾಜ ಯತ್ನಾಳ ಏನೂ ಹೇಳಿಕೆ ಕೊಟ್ಟಿದ್ದಾರೆ ಎಂಬ ಸ್ಪಷ್ಟ …

Read More »

ರಾಷ್ಟ್ರಮಟ್ಟದ ಮಿಸ್ ಊರ್ವಶಿ ಸೌಂದರ್ಯ ಸ್ಪರ್ಧೆಯಲ್ಲಿ ಧಾರವಾಡದ ವರ್ಶಿನಿ ರಾಮಡಗಿ ವಿನ್ನರ್

.ಹುಬ್ಬಳ್ಳಿ : ಇತ್ತೀಚೆಗೆ ರಾಜಸ್ಥಾನದ ಜೈಪುರದಲ್ಲಿ ಮಿಸ್ ಇಂಟರ್ ಕ್ವಾಂಟಿನೆಂಟಲ್ ಹಾಗೂ ಎಲೀಟ್ ಫೌಂಡೇಶನ್ ಆಯೋಜಿಸಿದ್ದ ರಾಷ್ಟ್ರಮಟ್ಟದ ಮಿಸ್ ಊರ್ವಶಿ ಸೌಂದರ್ಯ ಸ್ಪರ್ಧೆಯಲ್ಲಿ ಕರ್ನಾಟಕವನ್ನು ಪ್ರತಿನಿಧಿಸಿದ್ದ ಧಾರವಾಡದ ವರ್ಶಿನಿ ರಾಮಡಗಿ ವಿನ್ನರ್​ ಆಗಿ ಹೊರಹೊಮ್ಮಿದ್ದಾರೆ‌ ಎಂದು ವರ್ಷಿಣಿ ತಾಯಿ ಮಂಜುಳಾ ರಾಮಡಗಿ ಹೇಳಿದರು. ವರ್ಶಿನಿ ರಾಮಡಗಿ ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರ್ಶಿನಿ ಮಿಸ್ ಊರ್ವಶಿಯಾಗಿ ವಿನ್ನರಾಗಿದ್ದು, ಒಟ್ಟು 25 ರಾಜ್ಯಗಳಿಂದ 18 ರಿಂದ 25 ವರ್ಷದೊಳಗಿನ 25 ಮಾಡೆಲ್​ಗಳು …

Read More »