ಬೆಂಗಳೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷವು ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ ಪೂರ್ವಭಾವಿ ಸಭೆಗೆ ತೆರಳಲು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನಿರಾಕರಿಸಿದರು. ‘ಸಭೆಗೆ ನನ್ನನ್ನು ಕರೆದಿಲ್ಲ, ಮಾಡಿಲ್ಲ. ಹೀಗಿರುವಾಗ ನಾನ್ಯಾಕೆ ಸಭೆಗೆ ಹೋಗಬೇಕು’ ಎಂದು ಅವರು ಅಸಮಾಧಾನ ಹೊರಹಾಕಿದರು. ನಗರದಲ್ಲಿ ನಿನ್ನೆ (ಸೆ.13) ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿತ್ತು. ಈ ವೇಳೆ ಎದುರುಬದುರು ಹಾಲ್ನಲ್ಲಿ ಶಾಸಕಾಂಗ ಸಭೆ ಹಾಗೂ ಭಾರತ್ ಜೋಡೋ ಪಾದಯಾತ್ರೆಗೆ ಮೀಟಿಂಗ್ …
Read More »ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ :3 ಜನ ಸಾವು
ಹುಬ್ಬಳ್ಳಿ : ತಾಲೂಕಿನ ವರೂರು ಗ್ರಾಮದ ಗಣೇಶ ಹೋಟೆಲ್ ಬಳಿ ವೇಗವಾಗಿ ಬರುತ್ತಿದ್ದ ಕಾರು ಚಾಲಕನು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಚಾಲಕ, ಮಹಿಳೆ ಸೇರಿ ಮೂವರು ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ನಡೆದಿದೆ. ಅಪಘಾತದಲ್ಲಿ ದಾವಣಗೆರೆ ಮೂಲದ ಚಾಲಕ ಶಾರೂಖ (27), ಸೊಹೇಲ್ (26), ಚಿಕ್ಕಮಗಳೂರು ಜಿಲ್ಲೆ ಆಲದೂರಿನ ಎಚ್.ಕೆ. ಸುಶೀಲಾ (35) ಮೃತಪಟ್ಟಿದ್ದಾರೆ ಹಾಗೂ ಇನ್ನೋರ್ವ ಗಾಯಗೊಂಡಿದ್ದಾನೆ. ಅವಲಕ್ಕಿ ವ್ಯಾಪಾರ ಮಾಡಿಕೊಂಡಿದ್ದ …
Read More »ಪತ್ರ ಬರೆದಿಟ್ಟು ನಾಪತ್ತೆಯಾದ 3 ಬಾಲಕಿಯರು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೂವರು ಶಾಲಾ ಬಾಲಕಿಯರು ನಾಪತ್ತೆಯಾಗಿದ್ದು ಈ ಬಗ್ಗೆ ಪೋಷಕರು ಪುಲಕೇಶಿನಗರ ಠಾಣೆಗೆ ದೂರು ನೀಡಿದ್ದಾರೆ. ಶಕ್ತೀಶ್ವರಿ (15), ವರುಣಿಕಾ (16), ನಂದಿನಿ(15) ನಾಪತ್ತೆಯಾದ ಬಾಲಕಿಯರು. ಸೆ.6ರಂದು ಬೆಂಗಳೂರಿನ ಪ್ರಾಮನೆಡ್ ರಸ್ತೆಯಲ್ಲಿರುವ ಸೇಂಟ್ ಜೋಸೆಫ್ ಕಾನ್ವೆಂಟ್ ಹೈ ಪ್ರೈಮರಿ ಶಾಲೆಯಿಂದ ಬಾಲಕಿಯರು ನಾಪತ್ತೆಯಾಗಿದ್ದಾರೆ. ಕಾಣೆಯಾಗಿ 9 ದಿನವಾದರೂ ಇನ್ನೂ ಕೂಡ ಮಕ್ಕಳು ಪತ್ತೆಯಾಗಿಲ್ಲ. ಪೋಷಕರು ಎಷ್ಟೇ ಹುಡುಕಿದರೂ ಬಾಲಕಿಯರು ಪತ್ತೆಯಾಗಿಲ್ಲ. ಅಲ್ಲದೆ ಶಾಲೆಯಲ್ಲಿ ಕೇಳದರು ಸಿಬ್ಬಂದಿ …
Read More »ಪ್ರೀತಂ ಗೌಡಗೆ ಸವಾಲ್ ಹಾಕಿದ ಕುಮಾರಸ್ವಾಮಿ
ಹಾಸನ : ಜಿಲ್ಲೆಯ ಏಕೈಕ ಬಿ.ಜೆ.ಪಿ ಶಾಸಕ ಪ್ರೀತಂ ಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ನಡುವಿನ ವಾಕ್ಸಮರ ಮತ್ತೆ ಮುಂದುವರಿದಿದೆ. ಹಾಸನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ನಿನ್ನ ಆಸ್ತಿ ಎಷ್ಟು, ನಮ್ಮ ಆಸ್ತಿ ಎಷ್ಟು ಹೇಳು ಎಂದು ಪ್ರೀತಂ ಗೌಡಗೆ ಸವಾಲು ಹಾಕಿದ್ದಾರೆ. ನಮಗೆ ಇ.ಡಿ ಮತ್ತು ಐಟಿ ಬಗ್ಗೆ ಭಯವಿಲ್ಲ. ನಾವು ರಾಜಮನೆತನದವರಲ್ಲ. ರಾಹುಲ್ ಗಾಂಧಿಯಿಂದ ಜೆಡಿಎಸ್ ಪಕ್ಷ ವನ್ನು ಬಿಜೆಪಿಯ ಬಿ …
Read More »ಮೊಟ್ಟೆ ಎಸೆದ ಪ್ರಕರಣ ಕುರಿತು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ ಮಾಜಿ ಸಿಎಂ
ವಿಧಾನಸಭೆ: ನೆರೆ ಸಂತ್ರಸ್ತರ ಸಮಸ್ಯೆ ಆಲಿಸಲು ಕೊಡುಗು ಜಿಲ್ಲೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ಕೊಟ್ಟ ವೇಳೆ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿ, ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿತು. ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಮಾತನಾಡುವಾಗ ಸ್ವತಃ ಸಿದ್ದರಾಮಯ್ಯನವರು ಈ ವಿಷಯ ಪ್ರಸ್ತಾಪಿಸಿದರು. ಆಗ ಕೆ.ಜಿ. ಬೋಪ್ಪಯ್ಯ ಹಾಗೂ ಅಪ್ಪಚ್ಚು ರಂಜನ್ ವಿರುದ್ಧ ನೇರ ಆರೋಪ ಮಾಡಿದ ಸಿದ್ದರಾಮಯ್ಯ ಘಟನೆಗೆ ಇವರಿಬ್ಬರೇ ನೇರ ಕಾರಣ. ಕೊಡಗಿನ …
Read More »ಟ್ವಿಟರ್ ನಲ್ಲಿ ಹೆಚ್ಚು ಫಾಲೋವರ್ಗ್ರಳನ್ನು ತಲುಪಿದ ಕೊಹ್ಲಿ
ನವದೆಹಲಿ: 211 ಮಿಲಿಯನ್ ಇನ್ಸಾಗ್ರಾಮ್ ಅನುಯಾಯಿಗಳನ್ನು ಹೊಂದಿರುವ ಭಾರತದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ, ಟ್ವಿಟರ್ ನಲ್ಲಿ 50ಮಿಲಿಯನ್ ಫಾಲೋವರ್ಗ್ರಳನ್ನು ತಲುಪಿದ ಮೊದಲ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕ್ರಿಸ್ಟಿಯಾನೊ ರೊನಾಲ್ಡ್ & ಲಿಯೋನೆಲ್ ಮೆಸ್ಸಿ ನಂತರ ಇನ್ಸಾಗ್ರಾಮ್ನಲ್ಲಿ ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವದ 3ನೇ ಆಟಗಾರರಾಗಿದ್ದಾರೆ. ಫೇಸ್ಟುಕಲ್ಲಿ ಕೊಹ್ಲಿ 49 ಮಿಲಿಯನ್ನೂ ಹೆಚ್ಚು ಫಾಲೋವರ್ಗ್ರಳನ್ನು ಹೊಂದಿದ್ದಾರೆ.
Read More »ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ನಿಶ್ಚಿತ : ಎಚ್.ಎಂ. ರೇವಣ್ಣ
ಬೀದರ್: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿಯಾಗುವುದು ನಿಶ್ಚಿತ ಎಂದು ಮಾಜಿ ಸಚಿವರೂ ಆದ ಕೆಪಿಸಿಸಿ ಉಪಾಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದರು. ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ ಅಮೃತ ಮಹೋತ್ಸವ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಜನಸಾಗರವನ್ನು ಕಂಡು ಬಿಜೆಪಿಗೆ ನಡುಕ ಉಂಟಾಗಿದೆ. ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎನ್ನುವ ಭೀತಿಯಿಂದ ಸಚಿವರು ಅವರ ವಿರುದ್ಧ ಸತ್ಯಕ್ಕೆ ದೂರವಾದ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು. ತಾಕತ್ತಿದ್ದರೆ ನಮ್ಮ ಗೆಲುವು …
Read More »ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹೆಂಡತಿ ಬಗ್ಗೆ ನಿಂದನೆ : ಮಹಿಳೆ ಬಂಧನ
ಮುಂಬೈ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತಾ ಫಡ್ನವಿಸ್ ಅವರ ಫೇಸ್ಬುಕ್ ಪುಟದಲ್ಲಿ ನಿಂದನೀಯ ಹಾಗೂ ಅಸಭ್ಯವಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ 50 ವರ್ಷದ ಮಹಿಳೆಯೊಬ್ಬರನ್ನು ಸೈಬರ್ ಪೊಲೀಸ್ ಇಲಾಖೆ ಬಂಧಿಸಿದೆ. ಬಂಧಿತ ಮಹಿಳೆ ಸ್ಮೃತಿ ಪಾಂಚಾಲ್ ಅವರು ಕಳೆದ ಎರಡು ವರ್ಷಗಳಿಂದ ಅಮೃತಾ ಫಡ್ನವಿಸ್ ಅವರ ಅಧಿಕೃತ ಸಾಮಾಜಿಕ ಮಾಧ್ಯಮ ಪುಟದಲ್ಲಿ ಅನೇಕ ನಕಲಿ ಖಾತೆಗಳನ್ನು ಬಳಸಿಕೊಂಡು ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುತ್ತಿದ್ದಾರೆ ಎಂದು …
Read More »ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ : ಬಿ.ಸಿ. ನಾಗೇಶ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ. 26 ರಿಂದ ಅ. 10 ರವರೆಗೆ ದಸರಾ ರಜೆ ನೀಡಲು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸೂಚನೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಹಬ್ಬಕ್ಕೆ ಪೂರಕವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಮಕ್ಕಳಿಗೆ ದಸರಾ ರಜೆ ನೀಡಬೇಕೆಂದು ಶಾಸಕ ವೇದವ್ಯಾಸ ಕಾಮತ್ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವ ಬಿ.ಸಿ. ನಾಗೇಶ್ ಸೆಪ್ಟೆಂಬರ್ 26 ರಿಂದ ಅಕ್ಟೋಬರ್ 10ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ …
Read More »ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪಕ್ಷದ ಮಹತ್ವದ ಸಭೆ
ಬೆಂಗಳೂರು : ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ರಾಜ್ಯ ಉಸ್ತುವಾರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಅವರ ಉಪಸ್ಥಿತರಿದ್ದರು.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





