Breaking News

BigTv News

ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ -2022 ನ್ನು ಜಾರಿಗೆ ತರಲು ಒತ್ತಾಯಿಸಿ ಮನವಿ ಸಲ್ಲಿಕೆ

ಧಾರವಾಡ : ಕನ್ನಡ ಭಾಷೆಯ ಅಭಿವೃದ್ಧಿ ಕುರಿತು ಸಿದ್ಧಪಡಿಸಲಾದ ಕನ್ನಡ ಭಾಷಾ ಅಭಿವೃದ್ಧಿ ವಿಧೇಯಕ -2022 ನ್ನು ಜಾರಿಗೆ ತರಲು ಒತ್ತಾಯಿಸಿ ಧಾರವಾಡ ಗ್ರಾಮೀಣ ಶಾಸಕರಾದ ಅಮೃತ ದೇಸಾಯಿ ಅವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮನವಿ ಸಲ್ಲಿಸಲಾಯಿತು . ಅಧಿವೇಶನದಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕವನ್ನು ಜಾರಿಗೆ ತರಲು ಒಮ್ಮತದಿಂದ ಅನುಮೋದಿಸಬೇಕೆಂದು ತಾಲೂಕಾ ಅಧ್ಯಕ್ಷರಾದ ಶರಣಮ್ಮ ಗೊರೇಬಾಳ , ಗೌರವ ಕಾರ್ಯದರ್ಶಿಗಳಾದ ಮಾರ್ತಾಂಡಪ್ಪ ಕತ್ತಿ , ಮಹಾಂತೇಶ …

Read More »

ಮಳೆಯಿಂದ ಹರಿಯುತ್ತಿದೆ ಕಣ್ಣೀರು: ಓ ಮೇಘರಾಜನೇ ಕಣ್ಣು ತೆರೆದು ನೋಡು ವೃದ್ಧರ ಜೀವನದ ಜಂಜಾಟ

ಹುಬ್ಬಳ್ಳಿ: ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ ಎಂಬುವಂತ ಹಾಡು ಯಾರಿಗೆ ತಾನೇ ಗೊತ್ತಿಲ್ಲ. ಆದರೆ ಬಿಡದೇ ಸುರಿಯುವ ಮಳೆಯಿಂದ ಕಣ್ಣೀರಿನ ಕೊಡಿ ಮಾತ್ರ ಹರಿಯುತ್ತಿದೆ. ತಾವೇ ದುಡಿದು ತಿನ್ನುವ ವೃದ್ಧ ಜೀವಗಳಿಗೆ ಈ ಮಳೆಯು ನರಕಯಾತನೆ ಉಂಟು ಮಾಡಿದೆ. ಅಷ್ಟಕ್ಕೂ ಏನಿದು ಮಳೆ ಹನಿಯ ಕಣ್ಣೀರ ಕಹಾನಿ ಅಂತೀರಾ ಈ ಸ್ಟೋರಿ ನೋಡಿ… ನೀರಿನಲ್ಲಿ ನಿಂತಿರುವ ಮಡಿಕೆ ಕುಡಿಕೆಗಳು. ಈಗಲೋ ಆಗಲೋ ಕರಗಿ ನೀರಾಗುವ ಮಣ್ಣಿನ ಉಪಕರಣಗಳು. …

Read More »

ಇಮ್ಮಡಿ ಪುಲಿಕೇಶಿ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಒತ್ತಾಯ

ಹುಬ್ಬಳ್ಳಿ: ಕನ್ನಡ ಚಕ್ರವರ್ತಿ, ದಕ್ಷಿಣ ಪಥೇಶ್ವರ ಇಮ್ಮಡಿ ಪುಲಿಕೇಶಿ ಪ್ರತಿಮೆಯನ್ನು ಚಾಲುಕ್ಯರ ರಾಜಧಾನಿ ಬಾದಾಮಿಯಲ್ಲಿ ಹಾಗೂ ಬೆಂಗಳೂರಿನ ವಿಧಾನಸೌಧದ ಮುಂದೆ ಸ್ಥಾಪಿಸಬೇಕೆಂದು ಕದಂಬ ಸೈನ್ಯ ಕನ್ನಡ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ್‌ ಒತ್ತಾಯಿಸಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉತ್ತರ ಪಥೇಶ್ವರ ಹರ್ಷವರ್ಧನನು ಇಮ್ಮಡಿ ಪುಲಿಕೇಶಿಯ ಎದುರು ಸೋಲನ್ನು ಒಪ್ಪಿಕೊಂಡು, ಇಮ್ಮಡಿ ಪುಲಿಕೇಶಿಗೆ ದಕ್ಷಿಣ ಪಥೇಶ್ವರ ಬಿರುದು ನೀಡಿದ್ದಾನೆ. ದಕ್ಷಿಣ ಪಥೇಶ್ವರ ಇಮ್ಮಡಿ ಪುಲಕೇಶಿ ಮನಸ್ಸು ಮಾಡಿದ್ದರೆ …

Read More »

ಇಲ್ಲದವರ ಹೊಟ್ಟೆಗೆ ಈದ್ಗಾ ವಿವಾದದ ಕೊಡಲೆ ಪೆಟ್ಟು: ಪಾರ್ಕಿಂಗ್ ಇಲ್ಲ ದುಡಿಮೆಯೂ ಇಲ್ಲ…!

ಹುಬ್ಬಳ್ಳಿ: ಅದು ಸಾಕಷ್ಟು ವಿವಾದ ಸೃಷ್ಟಿಸಿದ್ದ ಮೈದಾನ. ಗಣೇಶೋತ್ಸವ ಆಚರಣೆ ಸಂದರ್ಭದಲ್ಲಿ ಸದ್ದು ಮಾಡಿದ್ದ ಆ ಒಂದು ಮೈದಾನ ಈಗ ನೂರಾರು ಕುಟುಂಬದ ಕಣ್ಣೀರಿಗೆ ಕಾರಣವಾಗಿದೆ. ಅಷ್ಟಕ್ಕೂ ಯಾವುದು ಆ ಮೈದಾನ ಅಲ್ಲಿ ನಡೆದಿದ್ದಾರೂ ಏನು ಅಂತೀರಾ ಈ ಸ್ಟೋರಿ ನೋಡಿ.. ಹೀಗೆ ಎಲ್ಲೆಂದರಲ್ಲಿ ತಮ್ಮ ವಾಹನಗಳನ್ನು ಪಾರ್ಕ್ ಮಾಡಿಕೊಂಡ ವಾಹನ ಚಾಲಕರು ಹಾಗೂ ಮಾಲೀಕರು. ಮೊದಲಿದ್ದ ಸ್ಥಳದಲ್ಲಿ ಪಾರ್ಕಿಂಗ್ ಮಾಡಲು ಅವಕಾಶ ಕೋರುತ್ತಿರುವ ಸಾರಥಿಗಳು. ಇದೆಲ್ಲಾ ದೃಶ್ಯಗಳಿಗೆ ಸಾಕ್ಷಿಯಾಗಿದ್ದು, …

Read More »

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ ಮತ್ತೆ 4,369 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿ ಈವರೆಗೆ 5,28,185 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. 24 ಗಂಟೆಯಲ್ಲಿ 6,322 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ 46,347 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.71ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,39,30,417 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 21,67,644 ಜನರಿಗೆ …

Read More »

ಬಿಜೆಪಿ ಅತಿ ದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ : ಕುಮಾರಸ್ವಾಮಿ

ಬೆಂಗಳೂರು : ಸಾವಿರಾರು ಕೋಟಿ ರು. ಮೌಲ್ಯದ ಸರ್ಕಾರದ ಆಸ್ತಿ ಕಬಳಿಸುವ ಹುನ್ನಾರಕ್ಕೆ ಸಂಬಂಧಿಸಿದಂತೆ ಈ ಸರ್ಕಾರ ನಡೆಸಿರುವ ಅತಿ ದೊಡ್ಡ ಹಗರಣವನ್ನು ವಿಧಾನಸಭೆ ಕಲಾಪದಲ್ಲಿ ಬಯಲು ಮಾಡುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ದಾಖಲೆಗಳನ್ನು ನೀಡಿ ಎಂದು ಪದೇ ಪದೇ ಕೆಣಕಿದ್ದಾರೆ. ಸಾವಿರಾರು ಕೋಟಿ ರು. ಮೌಲ್ಯದ ಸರ್ಕಾರಿ ಆಸ್ತಿಯನ್ನು …

Read More »

ಮಾಜಿ ಸಿಎಂ ಪುತ್ರಿಯ ವ್ಯವಹಾರದಲ್ಲಿ ಭಾರಿ ಮೋಸ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪುತ್ರಿಯ ವ್ಯವಹಾರದ ಪಾಲುದಾರರೆಂದು ವ್ಯಕ್ತಿಯನ್ನು ನಂಬಿಸಿ, ನಗರಾಭಿವೃದ್ಧಿ ಇಲಾಖೆಯಲ್ಲಿನ ಕಡತ ವಿಲೇವಾರಿ ಮಾಡಿಸುವುದಾಗಿ ಸಾಲದ ರೂಪದಲ್ಲಿ 40 ಲಕ್ಷ ರು. ಪಡೆದು ವಂಚಿಸಿದ ಆರೋಪದಡಿ ಮಹಿಳೆ ಸೇರಿ ನಾಲ್ವರ ವಿರುದ್ಧ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕರ್ನಾಟಕ ಹ್ಯೂಮನ್‌ ರೈಟ್ಸ್‌ ಡಿಫೆಂಡ​ರ್‍ಸ್ ಪೇಪರ್‌ನ ಪತ್ರಕರ್ತ ಎಂ.ಆರ್‌.ರಾಜ್‌ಕುಮಾರ್‌ ನೀಡಿದ ದೂರಿನ ಮೇರೆಗೆ ಅಂಬಿಕಾ ಅಲಿಯಾಸ್‌ ನಾಗಲಾಂಬಿಕೆ, ಎಂಎಸ್‌ಡಿ ಕಾಮತ್‌, ರಮೇಶ್‌ಕುಮಾರ್‌ ಹಾಗೂ ಜಗದೀಶ್‌ …

Read More »

ರೈಲು ಹತ್ತಲು ಹೋಗಿ ಪ್ರಾಣ ಕಳೆದುಕೊಂಡ ತಂದೆ, ಮಗ

ಶಿವಮೊಗ್ಗ : ರೈಲು ಹತ್ತುವಾಗಲೇ ಕಾಲು ಜಾರಿ ಬಿದ್ದು ತಂದೆ, ಮಗ ಮೃತಪಟ್ಟಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ನಡೆದಿದೆ. ಪ್ರಸ್ತುತ ಬೆಂಗಳೂರಿನಲ್ಲಿ ವಾಸವಾಗಿರುವ 78 ವರ್ಷದ ಮೋಹನ್ ಪ್ರಸಾದ್ ಹಾಗೂ ಅವರ ಪುತ್ರ 38 ವರ್ಷದ ಅಮರನಾಥ್ ಮೃತರು. ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು, ಬೆಂಗಳೂರಿಗೆ ತೆರಳುವ ಸಲುವಾಗಿ ತಂದೆ ಮಗ ತಾಳಗುಪ್ಪ – ಬೆಂಗಳೂರು – ಮೈಸೂರು ರೈಲು ಹತ್ತುವಾಗ ಮೊದಲು ಮಗ ರಾಜೇಂದ್ರ …

Read More »

3484 ಪೋಲಿಸ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ : ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪಡೆಗಳ ಕಾನ್ಸ್ಟೇಬಲ್ ಹುದ್ದೆಗಳನ್ನು, ಭರ್ತಿ ಮಾಡಲಾಗುತ್ತಿದ್ದು, ಪ್ರಥಮ ಬಾರಿಗೆ, ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3484 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, ಈ ಎಲ್ಲಾ ಹುದ್ದೆಗಳನ್ನು ಅತ್ಯಂತ ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತಿದ್ದು, ಅಕ್ಟೋಬರ್ ತಿಂಗಳ 31 ರಂದು ಆನ್ ಲೈನ್ …

Read More »

ಬಿಬಿಎಂಪಿಯ ಜಂಟಿ ಆಯುಕ್ತರ ಕಚೇರಿಯ ಮೇಲೆ ಭರ್ಜರಿ ಭೇಟಿ

ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಬಿಬಿಎಂಪಿಯ ಜಂಟಿ ಆಯುಕ್ತರ ಕಚೇರಿಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು. ಈ ದಾಳಿಯ ವೇಳೆ ಬಿಬಿಎಂಪಿಯ ಜಂಟಿ ಆಯುಕ್ತ ಶ್ರೀನಿವಾಸ್ ಹಾಗೂ ಪಿಎ ಉಮೇಶ್ ಎಂಬುವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಸಿರೋದಾಗಿ ತಿಳಿದು ಬಂದಿದೆ. ಬಿಬಿಎಂಪಿ ಜಂಟಿ ಆಯುಕ್ತ ಶ್ರೀನಿವಾಸ್ ಅವರ ಆಪ್ತ ಸಹಾಯಕ 4 ಲಕ್ಷ ರೂ. ಹಣದ ಸಮೇತ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ.ಹೈಕೋರ್ಟ್ ಎಸಿಬಿ ರದ್ದುಗೊಳಿಸಿ , ಲೋಕಾಯುಕ್ತಕ್ಕೆ ಅಧಿಕಾರ ನೀಡಲಾಗಿತ್ತು. …

Read More »