Breaking News

BigTv News

ನಿಧಾನವಾಗಿ ಹೋಗಿ ಎಂದಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ; ಹೆಲ್ಮೆಟ್‌ನಿಂದ ತಲೆಗೆ ಹೊಡೆದ ಅಪ್ಪ-ಮಗ!

ಬೆಂಗಳೂರು: ನಿಧಾನವಾಗಿ ವಾಹನ ಚಲಾಯಿಸುವಂತೆ ಹೇಳಿದ್ದಕ್ಕೆ ಆಟೋ ಚಾಲಕ ವೆಂಕಟೇಶ್ ಅವರ ಮೇಲೆ ಅಪ್ಪ-ಮಗ ಸೇರಿದಂತೆ ಮೂವರು ಹೆಲ್ಮೆಟ್‌ನಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ವೆಂಕಟೇಶ್ ಕುಟುಂಬದೊಂದಿಗೆ ವಿವೇಕನಗರದಿಂದ ಆಸ್ಟಿನ್ ಟೌನ್‌ಗೆ ತೆರಳುತ್ತಿದ್ದಾಗ ಬೈಕ್ ಸವಾರನಿಗೆ ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಹೇಳಿದ್ದಾರೆ. ಇದರಿಂದ ಆಕ್ರೋಶಗೊಂಡ ಮೂವರು ಆಟೋ ಅಡ್ಡಗಟ್ಟಿ ಹೆಲ್ಮೆಟ್‌ನಿಂದ ಹಲ್ಲೆ ನಡೆಸಿದ್ದಾರೆ. ಹಲ್ಲೆಯಿಂದ ವೆಂಕಟೇಶ್ ಅವರ ತಲೆಗೆ ಗಂಭೀರ ಗಾಯವಾಗಿದ್ದು, ರಕ್ತಸ್ರಾವದಿಂದ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ. ಆರೋಪಿಗಳು ಆಸ್ಪತ್ರೆಗೆ …

Read More »

ಶವಗಳ ಅಂಗಾಂಗ ಮಾರಾಟ ವಿರುದ್ಧ ಕಠಿನ ಕ್ರಮ: ಸಚಿವ ಡಾ| ಅಜಯಸಿಂಗ್‌

ಯಾದಗಿರಿ: ಶ್ಮಶಾನದಲ್ಲಿ ಹೂತ ಶವಗಳ ದೇಹದ ಅಂಗಾಂಗಗಳನ್ನು ಮಾರಾಟ ಮಾಡುತ್ತಿರುವ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೂವರನ್ನು ಬಂಧಿಸಲಾಗಿದೆ ಎಂದು ಸಚಿವ ಡಾ. ಅಜಯ್ ಸಿಂಗ್ ತಿಳಿಸಿದರು. ವೈದ್ಯಕೀಯ ಕಾಲೇಜಿನ ಪಾತ್ರದ ಕುರಿತು ನೋಟಿಸ್ ಜಾರಿ ಮಾಡಲಾಗಿದ್ದು, ನಾಲ್ಕೈದು ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಯಾರನ್ನೂ ರಕ್ಷಿಸುವ ಪ್ರಶ್ನೆಯಿಲ್ಲ ಎಂದರು. ಇದೇ ವೇಳೆ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಅಂತರ್ಜಲ ಹೆಚ್ಚಿಸಲು ₹300 ಕೋಟಿ ವೆಚ್ಚದ ಯೋಜನೆ ರೂಪಿಸಲಾಗಿದೆ …

Read More »

ಜೇವರ್ಗಿ | ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ 27 ವರ್ಷದ ಇಸ್ಮಾಯಿಲ್ ಇಮಾಮ್ ಪಟೇಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಬಾಲಕಿ ಮತ್ತು ಆರೋಪಿಗೆ ಪರಿಚಯವಾಗಿತ್ತು ಎನ್ನಲಾಗಿದೆ. ಬಾಲಕಿ ಕಾಣೆಯಾಗಿದ್ದಾಳೆ ಎಂದು ಪೋಷಕರು ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ರೇವನೂರ ಗ್ರಾಮದ ಬಳಿ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Read More »

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, ಪರಶುರಾಮ ಅವರನ್ನು ಕಂಬಕ್ಕೆ ಕಟ್ಟಿ ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಪ್ರಮೋದ್ ಹಾಗೂ ಭಾವನಾ ಪರಸ್ಪರ ಪ್ರೀತಿಸುತ್ತಿದ್ದು, ಮದುವೆಯಾಗಲು ನಿರ್ಧರಿಸಿದ್ದರು. ಯುವತಿ ಕಳುಹಿಸಿದ ಪತ್ರದ ಹಿನ್ನೆಲೆಯಲ್ಲಿ ಪ್ರಮೋದ್ ಸ್ನೇಹಿತರೊಂದಿಗೆ ಆಕೆಯನ್ನು ಕರೆದುಕೊಂಡು ಹೋಗಲು ಗ್ರಾಮಕ್ಕೆ ಬಂದಿದ್ದ ಎನ್ನಲಾಗಿದೆ. ಈ ವೇಳೆ ಯುವತಿಯ ಕುಟುಂಬಸ್ಥರು ಮೂವರನ್ನು ಹಿಡಿದು ಹಲ್ಲೆ …

Read More »

ಕಲಬುರಗಿಯಲ್ಲಿ ಶೀಲ ಶಂಕಿಸಿ ಪತಿಯಿಂದ ಪತ್ನಿಯ ಹತ್ಯೆ: ಕೊಡಲಿಯಿಂದ ಕೊಚ್ಚಿ ಪರಾರಿ

ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಕೋಡ್ಲಿ ತಾಂಡಾದ ನೀಲಾಬಾಯಿ ರಾಠೋಡ್ (32) ಅವರನ್ನು ಪತಿ ನಾಮದೇವ ರಾಠೋಡ್ ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ದಂಪತಿಗೆ ಮೂವರು ಮಕ್ಕಳಿದ್ದು, ಪತ್ನಿಯ ನಡವಳಿಕೆ ಬಗ್ಗೆ ಪತಿ ಅನುಮಾನಪಡುತ್ತಿದ್ದ ಎನ್ನಲಾಗಿದೆ. ಪತ್ನಿಗೆ ನಿರಂತರ ಕಿರುಕುಳ ನೀಡುತ್ತಿದ್ದ ನಾಮದೇವನ ಹಿಂಸೆ ತಾಳಲಾರದೆ ನೀಲಾಬಾಯಿ ಕೆಲ ದಿನಗಳ ಹಿಂದೆ ಮಕ್ಕಳೊಂದಿಗೆ ತವರು ಮನೆಗೆ ತೆರಳಿದ್ದರು. ಹಿರಿಯರ ಸಂಧಾನದ ಬಳಿಕ ಮತ್ತೆ ಗಂಡನ ಮನೆಗೆ ಮರಳಿದ್ದರು. …

Read More »

ಮೈಕ್ರೋ ಫೈನಾನ್ಸ್ ಸಿಬ್ಬಂದಿ ಅಟ್ಟಹಾಸ: ಬೆನ್ನಟ್ಟಿ ಬೈಕ್ ಗೆ ಒದ್ದ ಏಜೆಂಟ್: ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ನೆಲಮಂಗಲದಲ್ಲಿ ಬೈಕ್ ಸಾಲದ ಕಂತು ಪಾವತಿಸದ ಕಾರಣ ಮೈಕ್ರೋ ಫೈನಾನ್ಸ್ ಏಜೆಂಟರು ಬೈಕ್‌ಗೆ ಒದ್ದ ಪರಿಣಾಮ ರಸ್ತೆಗೆ ಬಿದ್ದು ಗಾಯಗೊಂಡಿದ್ದ ಮುರುಳಿ (39) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಎಲ್ ಅಂಡ್ ಟಿ ಮೈಕ್ರೋ ಫೈನಾನ್ಸ್‌ನ ಮೂವರು ಏಜೆಂಟರು ಬೈಕ್ ಅಡ್ಡಹಾಕಿ ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದೆ. ಈಗಾಗಲೇ ಎರಡೂ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮುರುಳಿ ನಿರಂತರ ಡಯಾಲಿಸಿಸ್ ಪಡೆಯುತ್ತಿದ್ದರು. ಗಾಯಗೊಂಡ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ …

Read More »

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಹಿಮಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ಸಕಲೇಶಪುರ ತಾಲೂಕಿನ ಬಾಳಗೋಡು ಗ್ರಾಮದಲ್ಲಿ ನಡೆದಿದೆ. ಮಂಗಳೂರಿನಲ್ಲಿ ಅಂತಿಮ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಹಿಮಾಳಿಗೆ ನೌಶಾದ್ ಎಂಬಾತ ಪ್ರೀತಿಸುವಂತೆ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅಲ್ಲದೆ, ಇಬ್ಬರೂ ಜೊತೆಯಾಗಿ ತೆಗೆಸಿಕೊಂಡ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. …

Read More »

ಸಕಲೇಶಪುರ:ಇನ್‌ಸ್ಟಾಗ್ರಾಂನಲ್ಲಿ ಖಾಸಗಿ ಫೋಟೋ ಹಾಕಿದ್ದಕ್ಕೆ ಬಿ.ಇ.ವಿದ್ಯಾರ್ಥಿನಿ ಆತ್ಮಹತ್ಯೆ

ಹಾಸನ: ಖಾಸಗಿ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಪ್ರಕಟಿಸಿ ಬೆದರಿಕೆ ಹಾಕಿದ್ದರಿಂದ ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ಬೆಳಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಹಿಮಾ ಮಂಗಳೂರಿನ ಖಾಸಗಿ ಎಂಜಿನಿಯರಿಂಗ್ ಕಾಲೇಜಿನಲ್ಲಿ 3ನೇ ವರ್ಷದ ಬಿ.ಇ ವ್ಯಾಸಂಗ ಮಾಡುತ್ತಿದ್ದಳು. ನೌಶಾದ್ ಎಂಬಾತನೊಂದಿಗೆ ಪ್ರೀತಿಯಲ್ಲಿದ್ದ ಆಕೆ, ಕುಟುಂಬದವರ ಸಲಹೆಯಂತೆ ಸಂಬಂಧ ಕಡಿದುಕೊಳ್ಳಲು ನಿರ್ಧರಿಸಿದ್ದಳು. ಇದರಿಂದ ಇಬ್ಬರ ನಡುವೆ ಜಗಳವಾಗಿದ್ದು, ಆತ ಇಬ್ಬರೂ ಜೊತೆಯಾಗಿ ತೆಗೆಸಿಕೊಂಡಿದ್ದ ಫೋಟೋಗಳನ್ನು ಇನ್‌ಸ್ಟಾಗ್ರಾಂನಲ್ಲಿ …

Read More »

ದೊಡ್ಡಬಳ್ಳಾಪುರಿಂದ ನಾಪತ್ತೆಯಾಗಿದ್ದ ದಲಿತ ಮುಖಂಡ ಧರ್ಮಸ್ಥಳದಲ್ಲಿ ಸಾವು

ದೊಡ್ಡಬಳ್ಳಾಪುರ: ಛಲವಾದಿ ಮಹಾಸಭಾ ತಾಲೂಕು ಘಟಕದ ಮಾಜಿ ಅಧ್ಯಕ್ಷ ಹಾಗೂ ದಲಿತ ಮುಖಂಡ ಸಿ. ಗುರುರಾಜಪ್ಪ ಅವರ ಮೃತದೇಹ ಧರ್ಮಸ್ಥಳದ ಶ್ರೀಮುಡಿ ಭವನದ ಆವರಣದಲ್ಲಿ ಪತ್ತೆಯಾಗಿದೆ. ದೊಡ್ಡಬಳ್ಳಾಪುರದ ಕಛೇರಿಪಾಳ್ಯ ನಿವಾಸಿಯಾಗಿದ್ದ ಗುರುರಾಜಪ್ಪ ಅವರು ಗುರುವಾರ ಬೈಕ್‌ನಲ್ಲಿ ತೆರಳಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದರು. ಕುಟುಂಬಸ್ಥರು ನಾಪತ್ತೆ ಪ್ರಕರಣ ದಾಖಲಿಸಲು ಪೊಲೀಸ್ ಠಾಣೆಗೆ ತೆರಳಿದಾಗ ಧರ್ಮಸ್ಥಳದಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ. ಮೃತದೇಹದ ಭಾವಚಿತ್ರದ ಆಧಾರದ ಮೇಲೆ …

Read More »

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ರಾಯಚೂರಿನ ಜಲಾಲನಗರದಲ್ಲಿ ನಡೆದಿದೆ. ಮೃತರನ್ನು ವಿಷ್ಣು (45), ಪತ್ನಿ ಅರುಣಾ (36), ಮಗ ಶ್ಲೋಕ (10) ಹಾಗೂ ಮಗಳು ಖುಷಿ (7) ಎಂದು ಗುರುತಿಸಲಾಗಿದೆ. ಮನೆಯವರು ಮಲಗಿದ್ದಾಗ ವಿಷ್ಣು ಈ ಕೃತ್ಯ ಎಸಗಿ, ಬಳಿಕ ಚಿಕ್ಕಸುಗೂರು ಗ್ರಾಮದ …

Read More »