Breaking News

BigTv News

ಮಣ್ಣಲ್ಲಿ ಮಣ್ಣಾದ ಉಮೇಶ ಕತ್ತಿ

ಬೆಳಗಾವಿ : ಹೃದಯಾಘಾತದಿಂದ ನಿಧನರಾದ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ ಹುಕ್ಕೇರಿಯ ಸ್ವಗ್ರಾಮ ಬೆಲ್ಲದ ಬಾಗೇವಾಡಿಯ ತೋಟದ ಮನೆಯಲ್ಲಿ ಸಂಜೆ ನೆರವೇರಿತು. ಕುಶಾಲತೋಪು ಸಿಡಿಸಿ ಸಕಲ ಸರ್ಕಾರಿ ಗೌರವಗಳೊಂದಿಗೆ ವೀರಶೈವ ಲಿಂಗಾಯತ ಧಾರ್ಮಿಕ ಪದ್ಧತಿಯಂತೆ ಅಂತಿಮ ವಿಧಿ ವಿಧಾನ ನೆರವೇರಿತು. ವೀರಶೈವ ಲಿಂಗಾಯತ ಪದ್ಧತೆಯಂತೆ ಅಂತಿಮ ವಿಧಿವಿಧಾನವನ್ನು ಬೆಲ್ಲದ ಬಾಗೇವಾಡಿ ಗ್ರಾಮದ ಮಹಾಂತ ವಿರಕ್ತ ಮಠದ ಶಿವಾನಂದ ಸ್ವಾಮೀಜಿ ಅವರ ನೇತೃತ್ವದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ತಂದೆ-ತಾಯಿ ಸಮಾಧಿ ಪಕ್ಕದಲ್ಲೇ ಉಮೇಶ್ …

Read More »

ನಟಿ ಲೀಲಾವತಿ ಅನಾರೋಗ್ಯ , ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ

ಬೆಂಗಳೂರು: ಕನ್ನಡದ ಹಿರಿಯ ನಟಿ ಲೀಲಾವತಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಅವರ ನಿವಾಸಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವಂತ ಕನ್ನಡದ ಹಿರಿಯ ನಟಿ ಲೀಲಾವತಿ ಹಾಸಿಗೆ ಹಿಡಿದಿದ್ದಾರೆ. ನೆಲಮಂಗಲದ ಬಳಿಯ ಅವರ ತೋಟದ ಮನೆಯಲ್ಲಿಯೇ ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಯನ್ನು ನಟಿ ಲೀಲಾವತಿಗೆ ನೀಡಲಾಗುತ್ತಿದೆ. ಈ ವಿಷಯ ತಿಳಿದಂತ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ …

Read More »

ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ ತೆರಳಿದರೆ ವಿರಾಮ ಹೇಳುತ್ತೇನೆ : ದಿಗ್ವಿಜಯ ಸಿಂಗ್

ಕನ್ಯಾಕುಮಾರಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ರಾಹುಲ್ ಗಾಂಧಿ ತೆರಳಿದರೆ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆ ವಿರಾಮ ತೆಗೆದುಕೊಂಡು ಅದೇ ಹಂತದಿಂದ ಆರಂಭವಾಗಲಿದೆ ಎಂದು ದಿಗ್ವಿಜಯ ಸಿಂಗ್  ಹೇಳಿದ್ದಾರೆ. ಇಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಯಾತ್ರೆಯ ಸಂಚಾಲಕ ಸಿಂಗ್, “ರಾಹುಲ್ ಗಾಂಧಿ ಅವರು ಯಾತ್ರೆಯ ಮಾರ್ಗದ ಉದ್ದಕ್ಕೂ ನಡೆಯುತ್ತಾರೆ, ಅವರು ಪ್ರಚಾರಕ್ಕೆ ಬಿಡುವು ನೀಡಿದರೆ, ಯಾತ್ರೆಯನ್ನು ನಿಲ್ಲಿಸಿ ಅದೇ ಸ್ಥಳದಿಂದ ಪುನರಾರಂಭಿಸಲಾಗುವುದು. .” ಯಾತ್ರೆಯು 12 ರಾಜ್ಯಗಳು ಮತ್ತು …

Read More »

ಧಾರಾಕಾರ ಮಳೆಗೆ ಬೆಂಗಳೂರಿನ ಜನ ತತ್ತರ

ಬೆಂಗಳೂರು: ಉತ್ತರ ಬೆಂಗಳೂರಿನ ನೆಲೆಸಿರುವ ಕೆಲವು ಉನ್ನತ ವ್ಯಾಪಾರ ಅಧಿಕಾರಿಗಳು ತಮ್ಮ ಪ್ರದೇಶದಲ್ಲಿ ಈ ಪರಿಸ್ಥಿತಿ ಬರುತ್ತದೆ ಎಂದು ಕನಸಿನಲ್ಲೂ ಯೋಚಿಸಿರಲಿಕ್ಕಿಲ್ಲ. ಎರಡು ದಿನಗಳ ಭಾರೀ ಮಳೆಯಿಂದ ಉಂಟಾದ ಪ್ರವಾಹದಿಂದಾಗಿ ಹಲವಾರು ಉದ್ಯಮಿಗಳು ತಮ್ಮ ಸ್ವಂತ ಮನೆಗಳಲ್ಲಿ ಸಿಲುಕಿಕೊಂಡರು, ನಗರದ ಹಲವಾರು ಭಾಗಗಳಲ್ಲಿ, ವಿಶೇಷವಾಗಿ ಐಟಿ ಕಾರಿಡಾರ್ ರಸ್ತೆಗಳಲ್ಲಿ ಜನ ಜೀವನವನ್ನು ಸ್ತಬ್ದಗೊಳಿಸಿತ್ತು. ನಾಗವಾರದ ಸಮೀಪವಿರುವ ಕಣ್ಮನ ಸೆಳೆಯುವ ಪ್ರದೇಶವು ಪ್ರವಾಹದ ಸಮಯದಲ್ಲಿ ನಾಗವಾರ ಕೆರೆಯಾಗಿ ಮಾರ್ಪಟ್ಟಿತು.ಇಲ್ಲಿ ಬಿಲಿಯನೇರ್‌ಗಳ ವಿಲ್ಲಾದ …

Read More »

ನವೀಕೃತ ಸೆಂಟ್ರಲ್ ವಿಸ್ತಾಕ್ಕೆ ಮೋದಿ ಚಾಲನೆ

ನವದೆಹಲಿ: ನವೀಕೃತ ಸೆಂಟ್ರಲ್ ವಿಸ್ತಾದ ಕೆಲವು ಭಾಗ, ಕರ್ತವ್ಯ ಪಥ ಹಾಗೂ ಇಂಡಿಯಾ ಗೇಟ್ ಸನಿಹ ಪ್ರತಿಸ್ಠಾಪಿಸಲಾಗಿರುವ ನೇತಾಜಿ ಸಭಾಷ್ ಚಂದ್ರ ಬೋಸ್ ಪ್ರತಿಮೆಯನ್ನು, ಇಂದು ಪ್ರಧಾನಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ. ನವೀಕೃ ಸೆಂಟ್ರಲ್ ವಿಸ್ತಾ ಬಹುತೇಕ ಸಿದ್ಧವಾಗಿದ್ದು, ಮೋದಿ ವಿಜಯ್ ಚೌಕ್ ನಿಂದ ಇಂಡಿಯಾ ಗೇಟ್ ವರೆಗಿನ ಭಾಗವನ್ನು ಇಂದು ಉದ್ಘಾಟಿಸಲಿದ್ದಾರೆ. ಈ ನವೀಕೃತ ಸೆಂಟ್ರಲ್ ವಿಸ್ತಾದಲ್ಲಿ ರಾಜ್ಯವಾರು ಆಹಾರ ಮಳಿಗೆಗಳು, ಕೆಂಪು ಗ್ರಾನೈಟ್ ಪಾದಚಾರಿ ಮಾರ್ಗಗಳು, …

Read More »

ಉಮೇಶ್ ಕತ್ತಿ ನಿಧನಕ್ಕೆ 3 ದಿನಗಳ ಕಾಲ ಶೋಕಾಚರಣೆ ಮಾಡಬೇಕಾಗಿತ್ತು : ಸಿದ್ದರಾಮಯ್ಯ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಆಹಾರ ಸಚಿವರಾಗಿದ್ದ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಂದು ದಿನದ ಶೋಕಾಚರಣೆಗೆ ಸೂಚನೆ ನೀಡಿದೆ. ಈ ಕುರಿತಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಮೇಶ್ ಕತ್ತಿ ಅವರು ಹಾಲಿ ಸಚಿವರಾಗಿದ್ದರು. ಹೀಗಾಗಿ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಮಾಡಬೇಕಾಗಿತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ. ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಗಾಗಿ ಬೆಳಗಾವಿಗೆ ತೆರಳುವ …

Read More »

ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ : ಡಿಕೆಶಿ

ಬೆಂಗಳೂರು : ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.‘ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು. ಇದ್ದುದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, …

Read More »

ಇಂದು ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಫೋಕ್ಸೋ ಪ್ರಕರಣ ಸಂಬಂಧ ಜಿಲ್ಲಾ 2ನೇ ಅಪರ ಮತ್ರು ಸತ್ರ ನ್ಯಾಯಾಲಯದಲ್ಲಿ ಇಂದು ಮುರುಘಾಶ್ರೀ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಸಂತ್ರಸ್ತರ ಪರ ವಕೀಲರಿಗೆ ಆಕ್ಷೇಪಣೆ ಸಲ್ಲಿಕೆಗೆ ಸೂಚನೆ ನೀಡಿದ್ದು, ಇಂದು ಮುರುಘಾಶ್ರೀಗೆ ಜೈಲ್ ಅಥವಾ ಬೇಲ್ ಭವಿಷ್ಯ ನಿರ್ಧಾರವಾಗಲಿದೆ. ಸದ್ಯ ಸೆ‌.14ರವೆರೆಗೆ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀ, ರಾತ್ರಿ ಸೊಳ್ಳೆ ಕಾಟದಿಂದ ಕಂಗಾಲಾಗಿದ್ದಾರೆ ಎನ್ನಲಾಗುತ್ತಿದೆ. ರಾತ್ರಿ ವೇಳೆ ಮೂರ್ನಾಲ್ಕು ಸಲ ಮುರುಘಾಶ್ರೀ ಎದ್ದೆದ್ದು ಕುಳಿತಿದ್ದಾರೆ. ಬೆಳಗ್ಗೆ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಸೂಚನೆ

ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ 11.56 ಸೆ.ಮೀ. ನಿಂದ 20.44 ಸೆ.ಮೀ.ವರೆಗೆ ಮಳೆಯಾಗುವ ನಿರೀಕ್ಷೆಯಿದ್ದು, ‘ಆರೆಂಜ್ ಅಲರ್ಟ್ ನೀಡಲಾಗಿದೆ. ಮಂಡ್ಯ, ಚಿತ್ರದುರ್ಗ, ಶಿವಮೊಗ್ಗ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ತುಮಕೂರು, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಗುರುವಾರದಿಂದ ಶುಕ್ರವಾರ ಬೆಳಗ್ಗೆ 8:30ರ ವರೆಗೆ ಉಡುಪಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದ್ದು, ದಾವಣಗೆರೆ, ಚಿತ್ರದುರ್ಗ, ಹಾಸನ, …

Read More »

ದೊಡ್ಡ ಪ್ರಮಾಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಂತರ ರಾಜ್ಯ ಆರೋಪಿಗಳ ಬಂಧನ..!

ಹುಬ್ಬಳ್ಳಿ: ಗಾಂಜಾ ಸಾಗಾಟ ಮಾಡುತಿದ್ದ ಅಂತರ ರಾಜ್ಯ ಆರೋಪಿಗಳನ್ನು ಬಂಧಿಸುವಲ್ಲಿ ಸಿಇಎನ್ ಠಾಣೆ ಪೊಲೀಸರು ಯಶಸ್ವಿ ಆಗಿದ್ದಾರೆ. ಹುಬ್ಬಳ್ಳಿಯ ಕೇಶ್ವಾಪೂರ್ ಹತ್ತಿರ ಸಿಇಎನ್ ಪೊಲೀಸರು ಪೆಟ್ರೋಲಿಂಗ ಮಾಡುತ್ತಿರುವಾಗ ಆಂದ್ರಪ್ರದೇಶ ಮೂಲದ ಇನ್ನೋವಾ ಕಾರೊಂದು ಸಂಶಯಾಸ್ಪದವಾಗಿ ನಿಂತುರುದನ್ನು ಕಂಡು ಪೊಲೀಸರು ಕಾರನ್ನು ಪರಿಶೀಲಿಸುತ್ತಾರೆ, ಆಗ ಕಾರಿನಲ್ಲಿ ದೊಡ್ಡ ಪ್ರಮಾಣದ ಗಾಂಜಾ ಸಾಗಿಸುತ್ತಿರುವುದು ಕಂಡು ಬಂದಿದೆ. ಕೂಡಲೇ ಸಿಇಎನ್ ಪೊಲೀಸ್ ಠಾಣೆಯ ಇನ್ಸಪೆಕ್ಟರ್‌ ಹಾಗೂ ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ಕಾರಿನಲ್ಲಿದ್ದ ಬರೋಬ್ಬರಿ …

Read More »