ಬೆಂಗಳೂರು : ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ನೆರೆಹಾನಿ ಪರಿಹಾರಕ್ಕೆ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ. ಈ ವೇಳೆ ಬೆಂಗಳೂರಿಗೆ ತಕ್ಷಣದ ಪರಿಹಾರವಾಗಿ 300 ಕೋಟಿ ರೂ.ಹಾಗೂ ರಾಜ್ಯದ ಉಳಿದ ಭಾಗಕ್ಕೆ 300 ಕೋಟಿ ರೂ. ಬಿಡುಗಡೆಗೆ ಆದೇಶಿಸಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ …
Read More »ಎದೆಗೆ ತಾಗಿದ ಪಟಾಕಿ ; ಯುವಕನ ಸ್ಥಿತಿ ಗಂಭೀರ
ಹುಬ್ಬಳ್ಳಿ : ಪಟಾಕಿ ಹಚ್ಚುತ್ತಿದ್ದ ವೇಳೆಯಲ್ಲಿ ಪಟಾಕಿಯೊಂದು ಆಕಸ್ಮಿಕವಾಗಿ ಯುವಕನ ಎದೆಗೆ ತಾಗಿದ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಈಗಷ್ಟೇ ನಡೆದಿದೆ . ಕುಂದಗೋಳ ತಾಲ್ಲೂಕಿನ ಗುರುವಿನಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಗಣಪತಿ ಕಳಿಸುವಾಗ ಹಚ್ಚಿದ ಪಟಾಕಿ ಮಂಜುನಾಥ ಎಂಬ ಯುವಕನ ಎದೆಗೆ ತಾಗಿದ ಪರಿಣಾಮ ತೀವ್ರವಾಗಿ ಅಶ್ವಸ್ಥನಾಗಿದ್ದಾನೆ . ಕೂಡಲೇ ಮಂಜುನಾಥನನ್ನು ಕುಂದಗೋಳ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದು ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ …
Read More »ಶ್ರೀ ಬಸವ ಸಿದ್ಧಲಿಂಗ ಸ್ವಾಮೀಜಿ ನೇಣಿಗೆ ಶರಣು
ಬೆಳಗಾವಿ: ಮಾನಸಿಕ ನೊಂದ ಶ್ರೀ ಬಸವ ಸಿದ್ಧಲಿಂಗ ಸ್ವಾಮೀಜಿ ಮಠಕೆ ನೇಣು ಹಾಕಿಕೊಂಡ ಘಟನೆ ಬೈಲಹೊಂಗಲ ತಾಲೂಕಿನ ನೇಗಿನಹಾಳದಲ್ಲಿ ಬೆಳಕಿಗೆ ಬಂದಿದೆ. ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಿಡಿ ಹೊರ ಬರುತ್ತೆ ಎಂದು ಹೆದರಿಕೊಂಡು ಬೈಲಹೊಂಗಲ ಶ್ರೀಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ಗುರು ಮಡಿವಾಳೇಶ್ವರ ಮಠದ ಪೀಠಾಧಿಪತಿ ಬಸವ ಸಿದ್ಧಲಿಂಗ ಸ್ವಾಮೀಜಿ ಸಾವಿಗೆ ಕೊರಳೊಡ್ಡಿದ್ದಾರೆ. ಇಬ್ಬರು ಮಹಿಳೆಯರ ವೈರಲ್ ಆಡಿಯೋದಲ್ಲಿ ಸ್ವಾಮೀಜಿ ಹೆಸರು ಕೇಳಿ ಬಂದಿತ್ತು. ಮುರುಘಾಶ್ರೀ …
Read More »ಹುಟ್ಟೂರಿನ ಶಿಕ್ಷಕರಿಗೆ ಸನ್ಮಾನ– ಶಿಕ್ಷಕರ ದಿನೋತ್ಸವಕ್ಕೆ ಮೆರಗು
ಧಾರವಾಡ : ತಾಲೂಕಿನ ಹೆಬ್ಬಳ್ಳಿ ಗ್ರಾಮದವರು, ಕರ್ನಾಟಕ ಸರಕಾರಿ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ಉಪ್ಪಿನ ಅವರು ತನ್ನ ಹುಟ್ಟೂರು ಹೆಬ್ಬಳ್ಳಿಯ ಎಲ್ಲಾ ಶಾಲೆಗಳ ಮುಖ್ಯ ಗುರುಗಳನ್ನು ಸತ್ಕರಿಸುವ ಮೂಲಕ ಶಿಕ್ಷಕ ದಿನೋತ್ಸವಕ್ಕೆ ಹೊಸ ಮೆರಗನ್ನು ತಂದಿದ್ದಾರೆ. ಅವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ ಮಾತನಾಡಿದ ಶಾಲಾಭಿವೃದ್ದಿ ಸಮಿತಿಯ ಸದಸ್ಯರಾದ ಚಂದ್ರಶೇಖರ ಮಟ್ಟಿ, ಇವತ್ತು ಪವಿತ್ರ ದಿನ ಅಕ್ಷರದ ಬೆಳಕನ್ನು ನೀಡಿದ ಗುರುಗಳಿಗೆ ಗೌರವಿಸುವ …
Read More »ತಾಯಿಯ ಮೊದಲ ವರ್ಷದ ಶ್ರದ್ಧಾಂಜಲಿ ದಿನವೇ ಮನಗ ಸಾವು
ಸಾಗರ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಎಸ್ಎನ್ ನಗರ ಹೊಸ ಬಡಾವಣೆಯಲ್ಲಿ ಎರಡು ದಿನಗಳ ಹಿಂದೆಯಷ್ಟೇ ಸ್ನೇಹಿತರೊಂದಿಗೆ ನಾಗರಾಜ್ ಹುಟ್ಟು ಹಬ್ಬ ಆಚರಿಸಿಕೊಂಡಿದ್ದಾನೆ. ಮೃತ ನಾಗರಾಜನ ತಾಯಿ ತೀರಿಕೊಂಡು ನಾಳೆಗೆ ಒಂದು ವರ್ಷ ಆಗಲಿದೆ. ಮನೆಯಲ್ಲಿ ಒಬ್ಬಂಟಿ ಆಗಿದ್ದ ನಾಗರಾಜ್ ತಾಯಿಯ ಅಗಲಿಕೆಯಿಂದ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದೆ. ಸಾಗರ ಪೇಟೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪ್ರೊಬೆಷನರಿ ಡಿವೈಎಸ್ಪಿ ಅಶ್ವಿನಿ, ಗೋವರ್ಧನ್, ಎಎಸ್ಐ …
Read More »ಇಂದು ಮತ ಏಣಿಕೆ ಪ್ರಾರಂಭ : ಬ್ರಿಟಿನ್ ಪ್ರಧಾನಿ ಪಟ್ಟ ಯಾರಿಗೆ
ಬ್ರಿಟನ್ : ಭಾರತೀಯ ಮೂಲದ ರಿಷಿ ಸುನಕ್ ಮತ್ತು ವಿದೇಶಾಂಗ ಕಾರ್ಯದರ್ಶಿ ಲಿಜ್ ಟ್ರಸ್ ಇವರಲ್ಲಿ ಯಾರು ಬ್ರಿಟನ್ ಪ್ರಧಾನಿ ಪಟ್ಟಕ್ಕೇರಲಿದ್ದಾರೆ ಎಂದು ಇಂದು ನಿರ್ಧಾರವಾಗಲಿದೆ. ಪ್ರಧಾನಿ ಪಟ್ಟಕ್ಕೆ ಅಂತಿಮವಾಗಿ ಕಣದಲ್ಲಿರುವ ಇವರು ಭಾನುವಾರ ತಮ್ಮದೇ ಆದ ಪ್ರತಿಜ್ಞೆಯನ್ನು ನೀಡಿದ್ದಾರೆ.ರಿಷಿ ಸುನಕ್ ಕಡಿಮೆ ಆದಾಯದ ಜನರನ್ನು ಗುರಿಯಾಗಿಸಿಕೊಂಡು ಪ್ರಚಾರ ಮಾಡಿದರೆ, ಇತ್ತ ಲಿಜ್ ಟ್ರಸ್ ನಾನು ಪ್ರಾಧಾನಿಯಾಗಿ ಆಯ್ಕೆಯಾದರೆ, ‘ತಕ್ಷಣವೇ ಕ್ರಮ ಕೈಗೊಂಡು ಕಾರ್ಯನಿರ್ವಹಿಸುತ್ತೇನೆ’ ಎಂದಿದ್ದಾರೆ. ಆದ್ರೆ, ಯಾವ ವಿಷಯದ …
Read More »ಗಣೇಶನ ವಿಸರ್ಜನೆ ವೇಳೆ ಹಾರಿಹೋಯುತ್ತು ಯುವಕನ ಪ್ರಾಣ ಪಕ್ಷಿ
ತುಮಕೂರು: ಚತುರ್ಥಿ ಸಲುವಾಗಿ ಪ್ರತಿಷ್ಠಾಪಿಸಲಾಗಿದ್ದ ಗಣೇಶನ ಮೂರ್ತಿಯನ್ನು ಇಂದು ಕೊಂಡೊಯ್ದು ವಿಸರ್ಜನೆ ಮಾಡುವ ಸಂದರ್ಭದಲ್ಲಿ ಯುವಕನೊಬ್ಬ ಸಾವಿಗೀಡಾಗಿದ್ದಾನೆ. ತುಮಕೂರು ಜಿಲ್ಲೆಯಲ್ಲಿ ಈ ದುರಂತ ಸಂಭವಿಸಿದೆ. ತುಮಕೂರು ತಾಲೂಕಿನ ಮುದಿಗೆರೆ ಕಟ್ಟೆಯಲ್ಲಿ ಈ ಅವಘಡ ಸಂಭವಿಸಿದೆ. ತುಮಕೂರಿನ ಭೀಮಸಂದ್ರ ನಿವಾಸಿ ಚೇತನ್ (15) ಸಾವಿಗೀಡಾದ ಯುವಕ.ಇಂದು ಸಂಜೆ ಗಣೇಶ ಮೂರ್ತಿಯನ್ನು ತೆಗೆದುಕೊಂಡು ಹೋಗಿ ವಿಸರ್ಜನೆ ಮಾಡುವ ಸಂದರ್ಭ ನೀರಿನಲ್ಲಿ ಮುಳುಗಿ ಈತ ಸಾವಿಗೀಡಾಗಿದ್ದಾನೆ. ಸ್ಥಳಕ್ಕೆ ಬೆಳ್ಳಾವಿ ಠಾಣೆ ಪೊಲೀಸರು ಭೇಟಿ ನೀಡಿ …
Read More »ಪಾಕಿಸ್ತಾನದ ಭೀಕರ ಪ್ರವಾಹಕ್ಕೆ 1,300 ಜನರು ಬಲಿ
ಇಸ್ಲಾಮಾಬಾದ್ : ಪಾಕಿಸ್ತಾನದ ಭೀಕರ ಪ್ರವಾಹದ ಪರಿಣಾಮವಾಗಿ ದೇಶದಲ್ಲಿ ಸುಮಾರು 1,300 ಜನರು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 29 ಜನರು ಸಾವನ್ನಪ್ಪಿದ್ದು, ಇನ್ನೂ ಕೂಡಾ ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ದೇಶದ ದೊಡ್ಡ ಭಾಗಗಳೇ ಪ್ರವಾಹದಿಂದ ಮುಳುಗಡೆಯಾಗಿದೆ. ಮುಖ್ಯವಾಗಿ ಸಿಂಧ್ನಲ್ಲಿನ ಭೀಕರ ಪ್ರವಾಹಕ್ಕೆ ಕನಿಷ್ಠ 180 ಜನರು ಸಾವನ್ನಪ್ಪಿದ್ದಾರೆ. ಬಳಿಕ ಖೈಬರ್ ಪಖ್ತುಂಕ್ವಾದಲ್ಲಿ 138 ಹಾಗೂ ಬಲೂಚಿಸ್ತಾನದಲ್ಲಿ 125 ಜನರು ಸಾವನ್ನಪ್ಪಿದ್ದಾರೆ. ಸುಮಾರು …
Read More »ಪಿಎಸ್ಐ ಹುದ್ದೆ ನಿರೀಕ್ಷೆಯಲ್ಲಿ ಇರುವವರಿಗೆ ಸಿಹಿ ಸುದ್ದಿ
ಹುಬ್ಬಳ್ಳಿ: ಈಗಾಗಲೇ 545 ಪಿಎಸ್ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್ಐ ಹುದ್ದೆಗಳ ನೇಮಕಕ್ಕೆ ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಘೋಷಣೆ ಮಾಡಿದ್ದಾರೆ. ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, ಎಂಟು ತಿಂಗಳ ಹಿಂದೆಯಷ್ಟೇ ಶಂಕುಸ್ಥಾಪನೆ ನೆರವೇರಿಸಿದ್ದ ಎರಡು ಪೊಲೀಸ್ ಠಾಣೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಉದ್ಘಾಟಿಸಿರುವುದು ಅನುಕರಣೀಯ ಸಂಗತಿಯಾಗಿದೆ. ಈ ಹಿಂದೆ ವರ್ಷಕ್ಕೆ …
Read More »ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವು
ಮುಂಬೈ: ರಸ್ತೆ ಅಪಘಾತದಲ್ಲಿ ಟಾಟಾ ಸನ್ಸ್ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ತನಿಖೆಗೆ ಆದೇಶಿಸಿದ್ದಾರೆ. ಭಾನುವಾರ ಅಹಮದಾಬಾದ್ನಿಂದ ಮುಂಬೈಗೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಸಂಚುರಿಸುತ್ತಿದ್ದಾಗ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಬಳಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ ಅಪಘಾತ ಸಂಭವಿಸಿತ್ತು. ಸೈರಸ್ ಮಿಸ್ತ್ರಿ ನಿಧನಕ್ಕೆ ಸಂತಾಪ ಸೂಚಿಸಿರುವ ದೇವೇಂದ್ರ ಫಡಣವೀಸ್, ಡಿಜಿಪಿ ಜೊತೆ ಮಾತನಾಡಿ ವಿವರವಾದ ತನಿಖೆಗೆ ಆದೇಶಿಸಿದ್ದಾರೆ. ಪಾಲ್ಘರ್ ಜಿಲ್ಲೆಯಲ್ಲಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





