ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳು ಬಂಧನವಾಗಿದ್ದು, ಇದೀಗ ಚಿತ್ರದುರ್ಗದ ಮುರುಘಾ ಮಠದ ನೂತನ ಆಡಳಿತ ಅಧಿಕಾರಿಯಾಗಿ ನಿವೃತ್ತ ನ್ಯಾಯಮೂರ್ತಿ ಎಸ್.ಬಿ. ವಸ್ತ್ರಮಠದ್ ಅವರನ್ನು ನೇಮಕ ಮಾಡಲಾಗಿದೆ. ಮುರುಘಾಮಠದಲ್ಲಿ ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಅವರು ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಲೈಂಗಿಕ ದೌರ್ಜನ ಆರೋಪದ ಹಿನ್ನೆಲೆಯಲ್ಲಿ ಮಠದ ಆಡಳಿತಾಧಿಕಾರಿಯಾಗಿದ್ದ ಮಾಜಿ ಶಾಸಕ ಎಸ್. ಕೆ ಬಸವರಾಜನವರನ್ನು ಆಡಳಿತ ಅಧಿಕಾರಿಯಿಂದ ತೆಗೆದು ಹಾಕಾಗಿತ್ತು. ಎಸ್.ಕೆ.ಬಸವರಾಜ …
Read More »ಹೊಸ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಅನುಮೋದನೆ
ಬೆಂಗಳೂರು : ಬಡವರು ಹೆಚ್ಚಾಗಿ ವಾಸಿಸುವ ಹಾಗೂ ವಲಸೆ, ಭೂಮಿರಹಿತ ಕಾರ್ಮಿಕರು ಹೆಚ್ಚಾಗಿರುವ ರಾಜ್ಯದ ಗ್ರಾಮೀಣ ಮತ್ತು ನಗರ ಭಾಗಗಳಲ್ಲಿ 268.98 ಕೋಟಿ ರು. ವೆಚ್ಚದಲ್ಲಿ ಹೊಸದಾಗಿ 4244 ಅಂಗನವಾಡಿ ಕೇಂದ್ರಗಳನ್ನು ಪ್ರಾರಂಭಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಡಳಿತಾತ್ಮಕ ಅನುಮೋದನೆ ನೀಡಿದೆ. ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯ’ ಅಡಿ ಗ್ರಾಮೀಣ ಭಾಗಗಳಲ್ಲಿ 1,655 ಹಾಗೂ ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರ ಸ್ಥಾಪನೆಯಾಗಲಿವೆ. ತನ್ಮೂಲಕ ರಾಜ್ಯದ ಸುಮಾರು …
Read More »ಮಂಗಳೂರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ಗೀತಾ ಸಾವು
ಮಂಗಳೂರು : ಕಳೆದ 11 ವರ್ಷಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ಗೀತಾ ಸಾವನ್ನಪ್ಪಿದೆ. ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಹೆಣ್ಣು ಶ್ವಾನ ಮೇ 21, 2011 ರಂದು ಜನಿಸಿತ್ತು. ಆಗಸ್ಟ್ 19, 2011 ರಂದು ಪೊಲೀಸ್ ಪಡೆಗೆ ಸೇರ್ಪಡೆಯಾಗಿತ್ತು. ಕರ್ತವ್ಯಕ್ಕೆ ಸೇರಿ 11 ವರ್ಷಗಳ ಕಾಲ ಇಲಾಖೆಗೆ ಸೇವೆ ಸಲ್ಲಿಸಿತ್ತು. ಗೀತಾ ಬೆಂಗಳೂರಿನ ಸಿಎಆರ್ ಸೌತ್ ನಲ್ಲಿ 11 ತಿಂಗಳ …
Read More »ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ
ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಬೆಂಗಳೂರಿನಲ್ಲಿ ಮಳೆ ಕೊಂಚ ಕಡಿಮೆಯಾಗಿದ್ದರೂ ಇನ್ನೂ 1 ವಾರ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ, ಮಲೆನಾಡಿನಲ್ಲೂ ಸೆ. 9ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಕಳೆದೊಂದು ತಿಂಗಳಿನಿಂದ ವರುಣನ ಆರ್ಭಟ ಹೆಚ್ಚಾಗಿರುವುದರಿಂದ ಕಂಗೆಟ್ಟಿರುವ ಜನರಿಗೆ ಇದರಿಂದ ಇನ್ನಷ್ಟು ಆತಂಕ ಎದುರಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ವೇಗವಾಗಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ಸೂಚನೆ …
Read More »ಮುರುಘಾ ಮಠದ ಶ್ರೀಗೆ ಎದುರಾದ ಮತ್ತೊಂದು ಸಂಕಷ್ಟ
ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ಬಂಧನದ ಬೆನ್ನಲ್ಲೇ ಹೊಳಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನ ಹಾಗೂ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ಮುರುಘಾ ಶ್ರೀಗಳನ್ನು ಅಮಾನತುಗೊಳಿಸಲಾಗಿದೆ. ಶನಿವಾರದಂದು ನಡೆದ ತುರ್ತು ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಈ ಕ್ರಮ ಜರುಗಿಸಲಾಗಿದೆ ಎಂದು ವಿಶ್ವಸ್ಥ ಸಮಿತಿ ಗೌರವ …
Read More »ಸಿಇಟಿ ರ್ಯಾಂಕ್ ಪಟ್ಟಿ ರದ್ದು
ಬೆಂಗಳೂರು : 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಮರುಪರೀಕ್ಷೆ ಬರೆದ ಅಭ್ಯರ್ಥಿಗಳ ಪ್ರಸಕ್ತ ಸಾಲಿನ ಸಿಇಟಿ ಅಂಕಗಳ ಜೊತೆಗೆ 2020-21 ನೇ ಸಾಲಿನ ದ್ವಿತೀಯ ಪಿಯುಸಿ ಅಂಕಗಳನ್ನು ಪರಿಗಣಿಸಿ ಹೊಸ ಸಿಇಟಿ ರ್ಯಾಕಿಂಗ್ ಪಟ್ಟಿ ಪ್ರಕಟಿಸುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ತಿಳಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಜುಲೈ 30 …
Read More »ತಿರುಪತಿಯಲ್ಲಿ ಸಪ್ತಪದಿ ತುಳಿದ ಕಿರುತೆರೆ ಚಲುವೆ, ಖ್ಯಾತ ನಿರ್ಮಾಪಕ
ತಮಿಳು ಕಿರುತೆರೆಯಲ್ಲಿ ಹೆಸರು ಮಾಡಿರುವ ನಟಿ , ನಿರೂಪಕಿ ಮಹಾಲಕ್ಷ್ಮೀ ಅವರ ವಿವಾಹ ಇಂದು ನಡೆದಿದೆ . ಖ್ಯಾತ ನಿರ್ಮಾಪಕ ರವೀಂದರ್ ಚಂದ್ರಶೇಖರನ್ ಅವರೊಂದಿಗೆ ಮಹಾಲಕ್ಷ್ಮೀ ಅವರ ಮದುವೆ ಕಾರ್ಯ ನಡೆದಿದೆ . ಮಹಾಲಕ್ಷ್ಮೀ ತಿರುಪತಿಯಲ್ಲಿ ಸಪ್ತಪದಿ ತುಳಿದಿದ್ದಾರೆ . ಈ ಫೋಟೋಗಳನ್ನು ಅವ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ . ಈ ಫೋಟೋಗೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ . ಕೆಲವರು ನಟಿಯ ಆಯ್ಕೆಯ ಬಗ್ಗೆ ಅಸಮಾಧಾನ ಹೊರ …
Read More »ಅಮೃತ ಸರೋವರ ಯೋಜನೆಯಲ್ಲಿ ಭ್ರಷ್ಟಾಚಾರದ ವಾಸನೆ- ತಪ್ಪು ಎಸಗಿದವರ ಮೇಲೆ ಕ್ರಮಕ್ಕೆ ಆಗ್ರಹ
ಹುಬ್ಬಳ್ಳಿ : ಸರ್ಕಾರ ಅನೇಕ ಯೋಜನೆಗಳನ್ನು ಜನರಿಗೆ ಸದುಪಯೋಗವಾಗಲಿ ಅಂತಾ ಜಾರಿಗೆ ತರುತ್ತಾರೆ ಆದರೆ ಅದರಲ್ಲಿ ಅಧಿಕಾರಿಗಳು ಹಾಗೂ ಕೇಲ ಜನಪ್ರತಿನಿಧಿಗಳು ಸೇರಿಕೊಂಡು ಆ ಇಡೀ ಯೋಜನೆ ಯಾವುದೇ ರೀತಿಯ ಉಪಯೋಗಕ್ಕೆ ಬಾರದೇ ಹಾಳಾಗುವಂತೆ ಮಾಡುವ ಅನೇಕ ಉದಾಹರಣೆಗಳಲ್ಲಿ ಇದು ಒಂದು. ರಾಜ್ಯ ಸರ್ಕಾರ ಸ್ವಾತಂತ್ರ್ಯ ಅಮೃತ ಮಹೋತ್ಸವ ಸಂಭ್ರಮದ ಅಂಗವಾಗಿ ಅಮೃತ ಸರೋವರ ಯೋಜನೆ ಮೂಲಕ ಕೆರೆಗಳ ಪುನಶ್ಚೇತನಕ್ಕೆ ರಾಜ್ಯ ಸರ್ಕಾರ ಪ್ರತಿ ಕೆರೆಗೆ 39 ಲಕ್ಷ ರೂ. …
Read More »ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನ…!
ಹುಬ್ಬಳ್ಳಿ: ಮನನೊಂದ ಯುವಕನೊಬ್ಬ ತನ್ನ ಕುತ್ತಿಗೆಗೆ ತಾನೇ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿಯ ಗಿರಣಿಚಾಳದಲ್ಲಿ ನಡೆದಿದೆ.ಗಿರಣಿಚಾಳದ ನಿರೂಪಾದಿ ಬಂಡಾರಿ ಎಂಬ ಯುವಕ ತನ್ನ ಮನೆಯಲ್ಲಿ ಚಾಕು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಮನೆಯ ಅಕ್ಕಪಕ್ಕದವರು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ದಿನಗಳ ಹಿಂದೆ ಒಂದೇ ಬೈಕನಲ್ಲಿ ತನ್ನ ಸ್ನೇಹಿತನ ಜೊತೆಗೆ ಹೋಗುತ್ತಿದ್ದಾಗ ರಸ್ತೆ ಅಪಘಾತದಲ್ಲಿ ಸ್ನೇಹಿತನನ್ನು ಕಳೆದುಕೊಂಡಿದ್ದಾನೆ ಹಾಗೂ ಮದುವೆಗೆ ಹೆಣ್ಣು ಸಿಕ್ಕಿಲ್ಲ …
Read More »ಮುರುಘಾಮಠದ ಶ್ರೀಗೆ ಏದುರಾದ ಮತ್ತೊಂದು ಸಂಕಷ್ಟ
ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಗಳ ಬಂಧನವಾಗಿದ್ದು, ಇದೀಗ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬೆಂಗಳೂರು ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ. ಮುರುಘಾ ಶ್ರೀಗಳ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ 8 ಕೋಟಿ ಮೌಲ್ಯದ ಮಠದ ಆಸ್ತಿ 49 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವರ ಖಾಸಗಿ ದೂರು ನೀಡಿದ್ದಾರೆ. ಶ್ರೀಗಳ ವಿರುದ್ಧ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





