Breaking News

BigTv News

ಸಮಾವೇಶ ಬಳಿಕ ರಸ್ತೆ ಮಾರ್ಗವಾಗಿ ತೆರಳಿರುವ ಪ್ರಧಾನಿ

ಮಂಗಳೂರು: ನಗರದಲ್ಲಿ ಸಮಾವೇಶ, ಸಭೆ ಮುಗಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ರಸ್ತೆ ಮಾರ್ಗವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ನಿಗದಿಯಂತೆ ಅವರು ಎನ್‌ಎಂಪಿಎದಿಂದ ಹೆಲಿಕಾಪ್ಟರ್‌ ಮೂಲಕ ವಿಮಾನ ನಿಲ್ದಾಣಕ್ಕೆ ಹೋಗಿ, ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ತೆರಳಬೇಕಿತ್ತು. ಹವಾಮಾನ ವೈಪರೀತ್ಯದ ಕಾರಣ ಅವರು ಕೆಪಿಟಿ, ಬೋಂದೇಲ್, ಕಾವೂರು ಮೂಲಕ ರಸ್ತೆಯಲ್ಲಿ ವಿಮಾನ ನಿಲ್ದಾಣಕ್ಕೆ ತೆರಳಿದರು ಎಂದು ಮೂಲಗಳು ತಿಳಿಸಿವೆ.

Read More »

ಹಿರಿಯ ಸಾಹಿತಿ ಕುಶಾಲಪ್ಪ ಗೌಡ ನಿಧನ

ಸುಳ್ಯ : ಹಿರಿಯ ಸಾಹಿತಿ ಹಾಗೂ ಭಾಷಾ ವಿಜ್ಞಾನಿ ಪ್ರೊಫೆಸರ್ ಕೊಡಿ ಕುಶಾಲಪ್ಪ ಗೌಡ ಅವರು ನಿಧನರಾಗಿದ್ದಾರೆ. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆಂದು ಕುಟುಂಬದ ಮೂಲಗಳು ತಿಳಿಸುವೆ. ಇವರು ಆಧುನಿಕ ಭಾಷಾ ವಿಜ್ಞಾನ ಹಾಗೂ ಪರಂಪರಾಗತವಾದ ವ್ಯಾಕರಣ ಶಾಸ್ತ್ರದಲ್ಲಿ ಪಾಂಡಿತ್ಯವನ್ನು ಪಡೆದುಕೊಂಡಿದ್ದರು. ಇವರು ಮೇ 30 ರಂದು 1931 ರಲ್ಲಿ ಕೊಡಗು ಜಿಲ್ಲೆಯ ಉತ್ತರ ಭಾಗದಲ್ಲಿರುವ ಪೆರಾಜೆಯ ಕೋಡಿ ಗ್ರಾಮದಲ್ಲಿ ಜನಿಸಿದರು. ವೃತ್ತಿಯಲ್ಲಿ ಪ್ರಾಧ್ಯಾಪಕರಾಗಿರುವ …

Read More »

ಮೋದಿ ಆಗಮನಕ್ಕೆ ಮಂಗಳೂರಿಗೆ ಹರಿದ ಬಂದ ಜನ ಸಾಗರ

ಮಂಗಳೂರು: ಕರಾವಳಿಯ ಆರ್ಥಿಕ ಹೆಬ್ಟಾಗಿಲು ಕಡಲನಗರಿ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಆಗಮನಕ್ಕೆ ಜನ ಸಾಗರವೇ ಸಾಕ್ಷಿಯಾಯಿತು. ಲಕ್ಷಾಂತರ ಅಭಿಮಾನಿಗಳಿಂದ “ಮೋದಿ-ಮೋದಿ’ ಎಂಬ ಘೋಷಣೆಗಳು ಸಭಾಂಗಣದ ಒಳಗೂ -ಹೊರಗೂ ಪ್ರತಿಧ್ವನಿಸಿ “ಮೋದಿ ಹವಾ’ ಸೃಷ್ಟಿಸಿತು. ದಕ್ಷಿಣ ಕನ್ನಡ ಜಿಲ್ಲೆಗೆ ಇದು ಐದನೇ ಬಾರಿಯ ಭೇಟಿಯಾದರೂ ಸರಕಾರಿ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಧಾನಿಯಾಗಿ ನರೇಂದ್ರ ಮೋದಿ ಭಾಗವಹಿಸುತ್ತಿರುವುದು ಇದೇ ಮೊದಲು. ಹಾಗಾಗಿ ಪ್ರಧಾನಿ ಎಂಬ ಅಂಶವೂ ಲಕ್ಷಾಂತರ ಸಂಖ್ಯೆಯಲ್ಲಿ ಜನರನ್ನು ಸೆಳೆದು …

Read More »

ಯಾರೋ ಏನೋ ಹೇಳಿದರೆಂದು ಬೆಂಗಳೂರು ಬ್ರ್ಯಾಂಡ್ ಹಾಳಾಗಲ್ಲ : ಆರ್ ಅಶೋಕ್

ಬೆಂಗಳೂರು: ಯಾರೋ ಏನೋ ಹೇಳಿದರೆಂದು ಬೆಂಗಳೂರು ಬ್ರ್ಯಾಂಡ್ ಹಾಳಾಗಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಂಗಳೂರು ಬ್ರ್ಯಾಂಡ್ ಹಾಳಾಗುತ್ತಿರುವ ಬಗ್ಗೆ ಮೋಹನದಾಸ್ ಪೈ ಮಾಡಿರುವ ಟ್ವೀಟನ್ನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇವೆ. ಬೆಂಗಳೂರು ಸಾಕಷ್ಟು ಬೆಳೆದಿದ್ದು ಹಲವು ರಾಜ್ಯದಿಂದ ಜನರು ಇಲ್ಲಿಗೆ ಬರುತ್ತಿದ್ದಾರೆ. ಯಾರೋ ಎನೋ ಹೇಳಿದರೆಂದು ಬೆಂಗಳೂರು ಬ್ಯ್ರಾಂಡ್ ಹಾಳಾಗುವುದಿಲ್ಲ ಎಂದರು. ಬೆಂಗಳೂರಲ್ಲಿ ಮಾತ್ರ ಮಳೆಯಾಗಿಲ್ಲ. ಅಮೆರಿಕ, ಪಾಕಿಸ್ತಾನ ಸೇರಿ ಎಲ್ಲಾ …

Read More »

ಮಳೆ ಕರಿತು ಹವಾಮಾನ ಇಲಾಖೆಯಿಂದ ಮಹತ್ವದ ಮಾಹಿತಿ

ರಾಜ್ಯದಲ್ಲಿ ಮಳೆಯ ಪ್ರಮಾಣ ಕೊಂಚ ಕಡಿಮೆಯಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ದಿಢೀರ್ ಅಂತ ಸುರಿಯುವ ಮಳೆ ಜನರನ್ನು ಸಂಕಷ್ಟಕ್ಕೆ ಸಿಲುಕುತ್ತಿದೆ. ಕೆಲವೊಮ್ಮೆ ಬಿಸಿಲು, ಮರುಕ್ಷಣವೇ ಮಳೆ ಸುರಿಯಲು ಪ್ರಾರಂಭಿಸಿದೆ. ಕಳೆದ ಒಂದು ವಾರದಿಂದ ಸುರಿದ ಮಳೆಗೆ ಜಮೀನಿನಲ್ಲೇ ತರಕಾರಿ ಕೊಳೆತ ಹೋಗಿದೆ. ಪರಿಣಾಮ ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ದುಪ್ಪಟ್ಟು ಆಗಿದೆ. ಇಂದು ಸಹ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಭಾಗದಲ್ಲಿ …

Read More »

ದೇವಸ್ಥಾನಕ್ಕೆ ಹೊರಟ ಭಕ್ತರು ಸ್ಮಶಾನ ಸೇರಿದರು

ಅರಾವಳಿ(ಗುಜರಾತ್​): ಬೆಳ್ಳಂಬೆಳಗ್ಗೆ ವಿಧಿಯಾಟಕ್ಕೆ ಆರು ಮಂದಿ ಭಕ್ತರು ದುರ್ಮರಣ ಹೊಂದಿದ ಘಟನೆ ಗುಜರಾತ್​​ನಲ್ಲಿ ನಡೆದಿದೆ. ಅರಾವಳಿ ಜಿಲ್ಲೆಯ ಮಾಲ್ಪುರ್​ ಎಂಬಲ್ಲಿನ ಕೃಷ್ಣನಗರದ ಅಂಬಾಜಿ ದೇವಸ್ಥಾನಕ್ಕೆ ನಡೆದುಕೊಂಡು ಹೋಗ್ತಿದ್ದ ಭಕ್ತರ ಮೇಲೆ ವೇಗವಾಗಿ ಬಂದ ಇನ್ನೋವಾ ಕಾರು ಹರಿದಿದೆ. ಪರಿಣಾಮ, ಆರು ಮಂದಿ ಸಾವಿಗೀಡಗಿದ್ದಾರೆ. ಅಲ್ಲದೇ ಇತರೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತರೆಲ್ಲರೂ …

Read More »

ಬಸ್‌ಗೆ ಟ್ರಕ್ ಡಿಕ್ಕಿ : 4 ಜನ ಸಾವು

ಲಕ್ನೋ(ಉತ್ತರ ಪ್ರದೇಶ): ವಲಸೆ ಕಾರ್ಮಿಕರಿದ್ದ ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಸುಮಾರು 24 ಮಂದಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದಿದೆ. ನೇಪಾಳಿ ವಲಸೆ ಕಾರ್ಮಿಕರನ್ನು ಹೊತ್ತ ಡಬಲ್ ಡೆಕ್ಕರ್ ಬಸ್ ಗೋವಾಕ್ಕೆ ತೆರಳುತ್ತಿದ್ದಾಗ ಅದರ ಒಂದು ಟೈರ್ ಪಂಕ್ಚರ್ ಆಗಿತ್ತು. ಹೀಗಾಗಿ, ಬಸ್‌ಅನ್ನು ಚಾಲಕ ರಸ್ತೆ ಬದಿ ನಿಲ್ಲಿಸಿ ಟೈರ್ ಬದಲಾಯಿಸುತ್ತಿದ್ದ ವೇಳೆ ವೇಗವಾಗಿ ಬಂದ ಟ್ರಕ್ ವಾಹನಕ್ಕೆ ಹಿಂದಿನಿಂದ …

Read More »

ಮುರುಘಾ ಮಠದ ಶ್ರೀ ಮೇಲಿನ ಆರೋಪದ ಬಗ್ಗೆ ಸೂಕ್ತ ತನಿಖೆ ಮಾಡಬೇಕು : ಸಿದ್ದರಾಮಯ್ಯ

ಬೆಂಗಳೂರು: ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿಯರು ನೀಡಿರುವ ದೂರಿನ ಆಧಾರದ ಮೇಲೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಕುರಿತಾಗಿ ಅವರು ಟ್ವೀಟ್ ಮಾಡಿದ್ದು, ಚಿತ್ರದುರ್ಗದ ಮುರುಘಾ ಮಠದ ಸ್ವಾಮಿಗಳ ವಿರುದ್ಧದ ಆರೋಪ ಗಂಭೀರ ಸ್ವರೂಪದ್ದಾಗಿದೆ. ಪೊಲೀಸರು ಯಾವುದೇ ಒತ್ತಡಕ್ಕೊಳಗಾಗದೆ ಸಂತ್ರಸ್ತ ವಿದ್ಯಾರ್ಥಿನಿಯರ ದೂರಿನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ …

Read More »

ಲಂಕಾ ಅಧ್ಯಕ್ಷ ರಿಗೆ ಪತ್ರ ಬರೆದ ನಿತ್ಯಾನಂದ ಸ್ವಾಮಿ

ಕೊಲಂಬೊ : ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ ಹೀಗೆಂದು ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ. ದೇಶವನ್ನೇ ತೊರೆದು ಈಕ್ವೆಡಾರ್ ದ್ವೀಪದಲ್ಲಿ ನೆಲೆಸಿರುವ ಬಿಡದಿ ಧ್ಯಾನಪೀಠದ ಸ್ವಾಮಿ ನಿತ್ಯಾನಂದನ ಆರೋಗ್ಯ ಕ್ಷೀಣಿಸುತ್ತಿದೆಯಂತೆ ಅಲ್ಲದೆ ಆ ದ್ವೀಪ ರಾಷ್ಟ್ರದಲ್ಲಿ ವೈದ್ಯಕೀಯ ಸೌಲಭ್ಯಗಳ ಕೊರತೆಯು ಇದೆಯಂತೆ ಹಾಗಾಗಿ ನನ್ನ ಜೀವಕ್ಕೆ ಅಪಾಯವಿದೆ, ತುರ್ತು ಚಿಕಿತ್ಸೆಗಾಗಿ ಕೂಡಲೇ …

Read More »

ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆ

ನವದೆಹಲಿ: ದೇಶಾದ್ಯಂತ ಸಾಂಕ್ರಾಮಿಕ ರೋಗ ಭೀತಿ ಹೆಚ್ಚುತ್ತಿದ್ದು, ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 7,219 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಮಹಾಮಾರಿಗೆ ದೇಶದಲ್ಲಿ ಈವರೆಗೆ 5,27,965 ಜನರು ಸಾವನ್ನಪ್ಪಿದ್ದಾರೆ.ಇನ್ನು ದೇಶದಲ್ಲಿ 56,745 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.68ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,38,65,016 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ನಿನ್ನೆ 25,83,815 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, …

Read More »