ಹುಬ್ಬಳ್ಳಿ: ರಾಜ್ಯಾದ್ಯಂತ ಬಾರಿ ಚರ್ಚೆಗೆ ಗ್ರಾಸವಾಗಿದ್ದ ಹುಬ್ಬಳ್ಳಿಯ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಮೂರು ದಿನಗಳವರೆಗೆ ಪ್ರತಿಷ್ಠಾಪಿಸಲಾಗಿದ್ದ ಗಣೇಶ ಮೂರ್ತಿಯನ್ನು ಇಂದು ಪೊಲೀಸರ ಸರ್ಪಗಾವಲಿನಲ್ಲಿ ವಿಜೃಂಭಣೆಯಿಂದ ವಿಸರ್ಜನೆ ಮಾಡಲಾಯಿತು. ನಗರದ ಈದ್ಗಾ ಮೈದಾನದಿಂದ ಬೆ.11.30 ರ ಸುಮಾರಿಗೆ ನೂರಾರು ಪೊಲೀಸರ ಬಿಗಿ ಭದ್ರತೆಯೊಂದಿಗೆ ಮೂರ್ತಿ ಮೆರವಣಿಗೆ ಆರಂಭವಾಯಿತು. ಅದ್ದೂರಿಯಾಗಿ ವಿಸರ್ಜನಾ ಮೆರವಣಿಗೆ ಮೂಲಕ ಚೆನ್ನಮ್ಮ ವೃತ್ತ ಮಾರ್ಗವಾಗಿ ಯಾವುದೇ ಪಾಶ್ಚಾತ್ಯ ಸಂಸ್ಕೃತಿ ವಾದ್ಯಗಳಿಗೆ ಮಾರು ಹೋಗದೇ, ಕೇವಲ ದೇಶಿಯ ಹಿಂದೂ …
Read More »ರಾಜ್ಯದ ಗಮನ ಸೆಳೆದ ಹುಬ್ಬಳ್ಳಿ ರಾಣಿ ಚೆನ್ನಮ್ಮ ಮೈದಾನದ ಗಣೇಶನ ವಿಸರ್ಜನೆ
ಹುಬ್ಬಳ್ಳಿ : ರಾಜ್ಯದ ಗಮನ ಸೆಳೆದ ನಗರದ ರಾಣಿ ಚೆನ್ನಮ್ಮ ಮೈದಾನದ ಗಣೇಶನ ವಿಸರ್ಜನೆ ಕಾರ್ಯಕ್ರಮ ಇಂದು ಜರುಗಲಿದ್ದು, ಈ ಹಿನ್ನಲೆ ಡೊಳ್ಳು ಕುಣಿತ, ಗೊಂಬೆ ಕುಣಿತ, ಭಜನೆ ನೋಡುಗರ ಗಮನ ಸೆಳೆಯಿತು. ಗಜಾನನಿಗೆ ವಿವಿಧ ಹಿಂದೂಪರ ಸಂಘಟನೆಗಳಿಂದ ಪೂಜೆ ಸಲ್ಲಿಸಿದರು. ಇದೇ ವೇಳೆ ಸಾವಿರಾರು ಭಕ್ತರು ಗಜಾನನ ದರ್ಶನಾರ್ಶಿವಾದ ಪಡೆದು ಭಕ್ತಿಗೆ ಪಾತ್ರರಾದರು. ರಾಣಿ ಚೆನ್ನಮ್ಮ ಮೈದಾನದ ಗಣೇಶನ ಮುಂದೆ ವಿವಿಧ ಕಲಾವಿದರಿಂದ ಹಿಂದೂ ಸಾಂಪ್ರದಾಯದಂತೆ ಕಲಾ ವೈಭವವನ್ನು …
Read More »ಎಸ್ಡಿಎಂ ಸಂಸ್ಥೆಯ ಉಪಾಧ್ಯಕ್ಷ ಡಾ. ನ. ವಜ್ರಕುಮಾರ ಇನ್ನಿಲ್ಲ..!
ಧಾರವಾಡ: ಧಾರವಾಡದ ಜನತಾ ಶಿಕ್ಷಣ ಸಮಿತಿಯ ಕಾರ್ಯದರ್ಶಿ, ಎಸ್ಡಿಎಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದ ಡಾ. ನ. ವಜ್ರಕುಮಾರ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದರು. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕಳೆದ ಹಲವಾರು ತಿಂಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಮೂಲತಃ ಉಡುಪಿ ತಾಲೂಕು ಯರ್ಮಾಳ ಗ್ರಾಮದವರಾಗಿದ್ದ ಅವರು ಸದ್ಯ ಧಾರವಾಡ ಯಾಲಕ್ಕಿ ಶೆಟ್ಟರ ಕಾಲೋನಿ ನಿವಾಸಿಯಾಗಿದ್ದರು. ತಮ್ಮ ಕೊನೆಯ ಕ್ಷಣಗಳವರೆಗೂ ಎಸ್ಡಿಎಂ ಸಂಸ್ಥೆ ಅಭಿವೃದ್ಧಿಗೆ ಶ್ರಮಿಸಿದ್ದರು. ಪ್ರಾಥಮಿಕ ಶಿಕ್ಷಣ ಉಡುಪಿ ತಾಲೂಕಿನ ಮುಲ್ಕಿಯಲ್ಲಿ …
Read More »ಲಾರಿ ಮೂರು ಎತ್ತಿನಗಾಡಿಗಳಿಗೆ ಡಿಕ್ಕಿ : ಐದು ಎತ್ತುಗಳು ಸಾವು
ಮಂಡ್ಯ : ಜಿಲ್ಲೆಯ ಪಾಂಡವಪುರ ತಾಲೂಕಿನ ಮಹದೇವಪುರದಲ್ಲಿ ರಾತ್ರಿ ಲಾರಿಯೊಂದು ಮೂರು ಎತ್ತಿನಗಾಡಿಗಳಿಗೆ ಡಿಕ್ಕಿ ಹೊಡೆದಿದ್ದು, ಅಪಘಾತ ಸಂಭವಿಸಿದೆ. ನಾಗಮಂಗಲ ಕಡೆಯಿಂದ ಶ್ರೀರಂಗಪಟ್ಟಣ ಕಡೆಗೆ ತರಕಾರಿ ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಪಾಂಡವಪುರದ ಮಹದೇವಪುರದಲ್ಲಿ ಮೂರು ಎತ್ತಿನಗಾಡಿಗಳಿಗೆ ಡಿಕ್ಕಿ ಹೊಡೆದಿದ್ದು, ಐದು ಎತ್ತುಗಳು ಸ್ಥಳದಲ್ಲೇ ಸಾವಿಗೀಡಾಗಿವೆ. ಮತ್ತೊಂದೆಡೆ ಮೂವರು ರೈತರು ಮತ್ತು ಒಂದು ಎತ್ತಿಗೆ ಗಾಯಗಳಾಗಿವೆ. ಅಪಘಾತ ವಾಗುತ್ತಿದ್ದಂತೆ ತಕ್ಷಣವೇ ಲಾರಿ ಚಾಲಕ ಪರಾರಿಯಾಗಿದ್ದಾನೆ.ಈ ಪ್ರಕರಣ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ …
Read More »ಅಕ್ರಮ ನಾಡ ಪಿಸ್ತೂಲ್ ಮಾರಾಟ : 4 ನಾಡ ಪಿಸ್ತೂಲ್, 18 ಜೀವಂತ ಗುಂಡು ಜಪ್ತಿ
ಕಲಬುರಗಿ: ಭೀಮಾ ತೀರದಲ್ಲಿ ಅಕ್ರಮ ನಾಡ ಪಿಸ್ತೂಲ್ ಮಾರಾಟ ದಂಧೆ ಸಕ್ರೀಯವಾಗಿ ನಡೆಯುತ್ತಿದ್ದು, ನಾಡ ಪಿಸ್ತೂಲ್ ಹೊಂದಿದ್ದ ನಾಲ್ವರ ಬಂಧನ ಮಾಡಲಾಗಿದೆ. ಬಂಧಿತರಿಂದ 4 ನಾಡ ಪಿಸ್ತೂಲ್, 18 ಜೀವಂತ ಗುಂಡು ಜಪ್ತಿ ಮಾಡಲಾಗಿದೆ. ಭೀಮಣ್ಣ ಪೂಜಾರಿ, ಸಿದ್ದಪ್ಪ ಪೂಜಾರಿ, ಸಲೀಂ ಶಿರಸಗಿ, ಪರಸಯ್ಯ ಸೆರೆಯಾದವರು. ಮಧ್ಯಪ್ರದೇಶದ ದಾರ್ ಜಿಲ್ಲೆಯಲ್ಲಿ ನಾಡ ಪಿಸ್ತೂಲ್ ಖರೀದಿಸಿ ತಂದಿದ್ದ ಭೀಮಣ್ಣ, ಜಿಲ್ಲೆಯಲ್ಲಿ ನಾಡ ಪಿಸ್ತೂಲ್ ಬಂಧಿತರು ಮಾರಾಟ ಮಾಡುತ್ತಿದ್ದರು. ಅಫಜಲಪುರ ಪೊಲೀಸ್ ಠಾಣೆಯಲ್ಲಿ …
Read More »ಸಿಡಿಲು ಬಡಿದು ಮಹಿಳೆ ಸಾವು
ಕೋಲಾರ: ಜಿಲ್ಲೆಯಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ಸಿಡಿಲು ಬಡಿದು ಮಹಿಳೆ ಮೃತಪಟ್ಟಿದ್ದಾರೆ.ಮುಳಬಾಗಿಲು ತಾಲೂಕಿನ ಮಣಿಘಟ್ಟೆಮಿಟ್ಟೆ ಗ್ರಾಮದಲ್ಲಿ ರವಳಿ (28) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.ಇವರು ತಮ್ಮ ಹೊಲದಲ್ಲಿ ರಾಗಿ ಬಿತ್ತನೆ ಮಾಡಿದ್ದರು. ಆದರೆ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಹೊಲದಲ್ಲಿ ನೀರು ತುಂಬಿಕೊಂಡು ಕೆರೆಯಂತಾಗಿತ್ತು. ಈ ಹಿನ್ನೆಲೆ ನೀರನ್ನು ಹೊರಹಾಕುವ ಸಲುವಾಗಿ ತಮ್ಮ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮಹಿಳೆಗೆ ಸಿಡಿಲು ಬಡಿದಿದೆ. ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ನಂಗಲಿ ಪೊಲೀಸ್ …
Read More »ಮಳೆಹಾನಿ ಪ್ರದೇಶಗಳಿಗೆ ಭೇಟಿ : ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಪಿ ಶಿವಕುಮಾರ್ ಗೆ ವಿ.ಸೋಮಣ್ಣ ಹಿಗ್ಗಾಮುಗ್ಗಾ ತರಾಟೆಗೆ
ಚಾಮರಾಜನಗರ : ವಸತಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ ಜಿಲ್ಲೆಯ ವಿವಿಧೆಡೆ ಮಳೆಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಟಿ ಪಿ ಶಿವಕುಮಾರ್ ಅವರನ್ನು ಸಚಿವ ವಿ.ಸೋಮಣ್ಣ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ಮೊದಲು ಕೊಳ್ಳೇಗಾಲಕ್ಕೆ ಆಗಮಿಸಿದ ಸಚಿವ ಸೋಮಣ್ಣ, ಎಸ್ಪಿ ಶಿವಕುಮಾರ್ ಸ್ಥಳಕ್ಕೆ ಬಾರದಿರುವ ಬಗ್ಗೆ ಕರೆ ಮಾಡಿ ತರಾಟೆಗೆ ತೆಗೆದುಕೊಂಡರು. ಬೆಂಗಳೂರಿನಿಂದ ನಾನೇ ಬಂದಿದ್ದೀನಿ. ನೀವ್ಯಾಕೆ …
Read More »ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ : ಎಡಿಜಿಪಿ ಅಲೋಕ್ ಕುಮಾರ್ ಸೂಚನೆ
ಮಂಗಳೂರು:ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವ ಕಾರ್ಯಕ್ರಮದ ಸಿದ್ದತೆ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತೆಯ ಬಗ್ಗೆ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದುಕೊಂಡಿದ್ದಾರೆ. ಪ್ರಧಾನಿ ಭಾಗವಹಿಸುವ ಕಾರ್ಯಕ್ರಮದಲ್ಲಿ ಕಪ್ಪುಬಟ್ಟೆ ಧರಿಸುವಂತಿಲ್ಲ. ಕಪ್ಪು ಬಟ್ಟೆ ಕೊಂಡೊಯ್ಯುವಂತಿಲ್ಲ ಎನ್ನುವ ಸ್ಪಷ್ಟ ಸೂಚನೆಯನ್ನು ಎಡಿಜಿಪಿ ಅಲೋಕ್ ಕುಮಾರ್ ನೀಡಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಮಂಗಳೂರಿಗೆ ಪ್ರಧಾನಿಯವರು ಆಗಮಿಸುತ್ತಾರೆ. ಮತ್ತೆ ಸಂಜೆ 4.30ಕ್ಕೆ ಮಂಗಳೂರು ಏರ್ ಪೋರ್ಟ್ ನಿಂದ ತೆರಳುತ್ತಾರೆ. ಭದ್ರತೆಗಾಗಿ ಹೊರಗಿನ ಜಿಲ್ಲೆಗಳಿಂದ ಪೊಲೀಸರು ಆಗಮಿಸಿದ್ದಾರೆ. …
Read More »49 ನೇ ವಸಂತಕ್ಕೆ ಕಾಲಿಟ್ಟ ಕಿಚ್ಚ ಸುದೀಪ್
ಸ್ಯಾಂಡಲ್ವುಡ್ ಬಾದ್ಷಾ ಅಂದರೆ ಯಾರಿಗೆ ಇಷ್ಟ ಇಲ್ಲ. ಕನ್ನಡ ಚಿತ್ರರಂಗದ ಕಿಚ್ಚ ಸುದೀಪ್ ಅಂದರೆ ನೂರು ರೂಪಾಯಿ ನೋಟು ನೋಡಿದ ಹಾಗೇ ಇರುತ್ತೆ. ಯಾಕೆ ಗೊತ್ತಾ? 100 ರೂಪಾಯಿ ನೋಟಿನಲ್ಲಿ ಎಲ್ಲಾ ಭಾಷೆ ಇರುವ ಹಾಗೆ, ಕಿಚ್ಚನ ನೋಡಿದರೆ ಪರಿಪೂರ್ಣ ನಟ ಎಂದರೆ ಅತಿಶೋಕ್ತಿಯಲ್ಲ. ಹೀರೋ , ವಿಲನ್ , ಸಪೋರ್ಟಿಂಗ್ ಕ್ಯಾರಕ್ಟರ್, ಗೆಸ್ಟ್ ಕ್ಯಾರೆಕ್ಟರ್ ಹೀಗೆ ಕಿಚ್ಚ ಮಾಡದೇ ಇರುವ ಪಾತ್ರವೇ ಇಲ್ಲ ಅನ್ನಬಹುದು. ಇಂಥಹ ನಟನಿಗೆ ಇಂದು …
Read More »ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದಂತವರಿಗೆ ಸಿಹಿ ಸುದ್ದಿ
ಬೆಂಗಳೂರು: 15 ಸಾವಿರ ಶಿಕ್ಷಕರ ಹುದ್ದೆಯ ನೇಮಕಾತಿಯಲ್ಲಿ ಆಯ್ಕೆಯಾಗದೇ ಇನ್ನೂ 3,500ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಲ್ಲದೇ ಬಾಕಿ ಉಳಿಯಲಿವೆ ಎನ್ನಲಾಗುತ್ತಿದೆ. ಆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡ ನಂತ್ರ ಬಾಕಿ ಹುದ್ದೆಗಳಿಗೆ ಅರ್ಜಿ ಕರೆಯಲಾಗುತ್ತಿದೆ ಎನ್ನಲಾಗಿದೆ. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದಂತವರಿಗೆ ಮತ್ತೆ ಟಿಇಟಿ ಪರೀಕ್ಷೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಮಾಹಿತಿ ನೀಡಿದ್ದು, 2022ರ ಕರ್ನಾಟಕ ಶಿಕ್ಷಕರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





