Breaking News

BigTv News

ಮುರಘಾಮಠದ ಶ್ರೀಗಳು 14 ದಿನಗಳ ನ್ಯಾಯಾಂಗ ಬಂಧನಚಿತ್

ಚಿತ್ರದುರ್ಗ :  ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಮುರುಘಾಮಠದ ಶ್ರೀಗಳನ್ನು ಗುರುವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಯ ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗದ ಹೆಚ್ಚುಉವರಿ ಸೆಷನ್ಸ್ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾ. ಕೋಮಾಲಾ ಅವರು ಶ್ರೀಗಳನ್ನು 14 ದಿನ ನ್ಯಾಯಾಂಗ …

Read More »

ಪ್ರಧಾನಿ ರಾಜ್ಯ ಪ್ರವಾಸದಿಂದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ; ಸಚಿವ ಜೋಶಿ

ಧಾರವಾಡ : ಸೆ .2 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯ ಪ್ರವಾಸ ಕೈಗೊಂಡಿದ್ದು , ಇದರಿಂದ ಪ್ರಮುಖವಾಗಿ ಕರಾವಳಿ ಭಾಗದ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಬಂದಂತಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು . ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಮಂಗಳೂರಿನಲ್ಲಿ ನಡೆಯುವ ಎರಡು ಪ್ರೊಜೆಕ್ಟ್ಗಳ ಉದ್ಘಾಟನೆಗೆ ಮೋದಿ ಬರಲಿದ್ದಾರೆ . ನಂತರ ಮೋದಿ ಅವರು ಬಹುದೊಡ್ಡ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಲಿದ್ದಾರೆ ಎಂದರು …

Read More »

ಸಾವರ್ಕರ್ ಪೋಟೋ ವಿವಾದಕ್ಕೆ ಪಾಲಿಕೆ ಬ್ರೇಕ್: ಏಕಾಏಕಿ ಪೋಟೋ ಫ್ಲೆಕ್ಸ್ ತೆರವು…!

ಹುಬ್ಬಳ್ಳಿ : ಈದ್ಗಾ ಮೈದಾನ ಗಣೇಶೋತ್ಸವದಲ್ಲಿ ಸಾವರ್ಕರ್ ಫೋಟೋ ವಿವಾದಕ್ಕೆ ಹು-ಧಾ ಮಹಾನಗರ ಪಾಲಿಕೆ ತೆರೆ ಎಳೆದಿದ್ದು, ಸಾವರ್ಕರ್ ಫೋಟೊ ಇರುವ ಫ್ಲೆಕ್ಸ್ ತೆರವುಗೊಳಿಸುವ ಮೂಲಕ ವಿವಾದಕ್ಕೆ ಬ್ರೇಕ್ ಹಾಕಿದೆ. ಪಾಲಿಕೆ ಆಯುಕ್ತರ ಸೂಚನೆ ಮೇರೆಗೆ ಗಣೇಶ ಮೂರ್ತಿ ಹಿಂದುಗಡೆ ಹಾಕಿದ್ದ ಫ್ಲೆಕ್ಸ್ ತೆರವು ಮಾಡಿದ್ದು, ಮುಂದಿನ ದಿನಗಳಲ್ಲಿ ಅನುಮತಿಗೆ ತೊಂದರೆ ಆಗಬಹುದು ಎನ್ನುವ ಲೆಕ್ಕಾಚಾರದ ಹಿನ್ನೆಲೆಯಲ್ಲಿ ಕೊನೆಗೂ ಗಣೇಶ ಪೆಂಡಾಲ್ ನಲ್ಲಿದ್ದ ಸಾವರ್ಕರ್ ಫೋಟೋ ತೆರವು ಮಾಡಿದ್ದಾರೆ. ನಿನ್ನೆಯಷ್ಟೇ …

Read More »

ಸೆ.2ರಂದು ಮೋದಿ ಮಂಗಳೂರಿಗೆ ಭೇಟಿ : ವಾಹನ ಸಂಚಾರ ಮಾರ್ಗ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ಹಿನ್ನೆಲೆಯಲ್ಲಿ ಸೆ.2ರಂದು ಸಂಚಾರ ಮಾರ್ಗದಲ್ಲಿ ತಾತ್ಕಾಲಿಕ ಬದಲಾವಣೆ ಮಾಡಲಾಗಿದೆ. ಮಂಗಳೂರು ವಿಮಾನ ನಿಲ್ದಾಣದಿಂದ ಕಂಜಾರು – ಮರವೂರು – ಮರಕಡ – ಕಾವೂರು – ಬೊಂದೇಲ್ – ಪದವಿನಂಗಡಿ – ಯೆಯ್ಯಾಡಿ – ರಾಷ್ಟ್ರೀಯ ಹೆದ್ದಾರಿ 66 ರ ಕೆ.ಪಿ.ಟಿ. ಜಂಕ್ಷನ್‌ನಿಂದ – ಕೊಟ್ಟಾರ ಚೌಕಿ ಕೂಳೂರು – ಎನ್‌ಎಂಪಿಎವರೆಗೆ ಹಾದು ಹೋಗುವ ರಸ್ತೆಗಳ ಎರಡೂ ಬದಿಗಳಲ್ಲಿ ಎಲ್ಲಿ ರೀತಿಯ ವಾಹನಗಳ …

Read More »

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶ

ನವದೆಹಲಿ: ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ತಾಯಿ ವಿಧಿವಶರಾದರು.  ಇಟಲಿಯಲ್ಲಿನ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ಸೋನಿಯಾ ಗಾಂಧಿ ತಾಯಿ, ಸಂಸದ ರಾಹುಲ್ ಗಾಂಧಿ ಅಜ್ಜಿ ಪಾವೊಲಾ ಮೈನೋ ಆಗಸ್ಟ್ 27ರಂದು ನಿಧನರಾಗಿದ್ದಾರೆ. ಮಂಗಳವಾರ ಅಂತ್ಯಕ್ರಿಯೆ ನಡೆದಿದೆ. ಕೇಂದ್ರದ ಮಾಜಿ ಸಚಿವ, ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಈ ಕುರಿತು ಟ್ವೀಟ್ ಮಾಡಿದ್ದಾರೆ. ವೈದ್ಯಕೀಯ ಪರೀಕ್ಷೆಗಾಗಿ ಸೋನಿಯಾ ಗಾಂಧಿ ವಿದೇಶಕ್ಕೆ ತೆರಳಿದ್ದು, ರಾಹುಲ್ ಗಾಂಧಿ ಸಹ ಅವರ ಜೊತೆ …

Read More »

ಹಳೇ ದ್ವೇಷ : ಓರ್ವ ವ್ಯಕ್ತಿ ಸಾವು

ಮೈಸೂರು: ಹಳೇ ದ್ವೇಷದಲ್ಲಿ ಇಬ್ಬರು ಯುವಕರಿಗೆ ಚಾಕುವಿನಿಂದ ಇರಿದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದರೆ, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಘಟನೆ ಇಲ್ಲಿನ ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕ್ಯಾತಮಾರನಹಳ್ಳಿ ನಿವಾಸಿ ವೆಂಕಟೇಶ ಕೊಲೆಯಾದಾತ. ನವೀನ್ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಕೆ ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಕೊಲೆ ಆರೋಪಿಗಳಾದ ಚಂದ್ರು ಹಾಗೂ ಶೆಟ್ಟಿ ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆಯ ಸಂಪೂರ್ಣ ವಿವರ: ಕ್ಯಾತಮಾರನಹಳ್ಳಿಯ ಅಶ್ವತ್ಥಕಟ್ಟೆ ಬಳಿ ನವೀನ್ ಹಾಗೂ ವೆಂಕಟೇಶ್ …

Read More »

ಅಪಹರಣ ಪ್ರಕರಣ : ಸಚಿವ ಕಾರ್ತಿಕ್ ಕುಮಾರ್ ರಾಜೀನಾಮೆ

ಪಾಟ್ನ: 2014ರ ಅಪಹರಣ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಬಿಹಾರದ ಸಚಿವ ಕಾರ್ತಿಕ್ ಕುಮಾರ್, ವಿರೋಧ ಪಕ್ಷಗಳ ತೀವ್ರ ಒತ್ತಡದ ನಡುವೆ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸರ್ಕಾರದಲ್ಲಿ ಆರ್‌ಜೆಡಿ ಎಂಎಲ್‌ಸಿ ಕಾರ್ತಿಕ್ ಕುಮಾರ್ ಅವರು ಕಾನೂನು ಸಚಿವರಾಗಿದ್ದರು. ಆದರೆ ಕಬ್ಬು ಉದ್ಯಮ ಸಚಿವರಾಗಿ ಖಾತೆ ಬದಲಾಯಿಸಿದ್ದ ಕೆಲವೇ ಗಂಟೆಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಚಿವರ ರಾಜೀನಾಮೆ ಪತ್ರವನ್ನು ಬಿಹಾರ ರಾಜ್ಯಪಾಲರು ಅಂಗೀಕರಿಸಿದ್ದಾರೆ. ಕಂದಾಯ …

Read More »

ಡಿಕೆಶಿ ಮನೆಗೆ ಮಧ್ಯಪ್ರದೇಶದ ಮಾಜಿ ಸಿಎಂ ಭೇಟಿ

ಬೆಂಗಳೂರು: ಸದಾಶಿವನಗರದ ತಮ್ಮ ನಿವಾಸಕ್ಕೆ ಬುಧವಾರ ರಾತ್ರಿ ಭೇಟಿ ನೀಡಿದ ಭಾರತ್ ಜೋಡೋ ಯಾತ್ರೆಯ ರಾಷ್ಟ್ರೀಯ ಸಮಿತಿ ಅಧ್ಯಕ್ಷ, ಮಧ್ಯಪ್ರದೇಶದ ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ಮುಖಂಡ ದಿಗ್ವಿಜಯ್ ಸಿಂಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು. ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಉಸ್ತುವಾರಿ ವಹಿಸಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿಕೆ ಹರಿಪ್ರಸಾದ್, ಸಂಸದ ಡಿಕೆ ಸುರೇಶ್, ರಾಜ್ಯಸಭೆ ಸದಸ್ಯ …

Read More »

ಭೀಕರ ಅಪಘಾತ : ಒಂದೇ ಕುಟುಂಬದ ಮೂವರು ಸಾವು

ವಿಜಯಪುರ:ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ  ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಕೊಲ್ಹಾರದ ಕುಪಕಡ್ಡಿ ಬಳಿ ನಡೆದಿದೆ. ಮೂರು ತಿಂಗಳ ಮಗು ಸೇರಿ ಅಪಘಾತದಲ್ಲಿ ಕಲಬುರಗಿ ಮೂಲದ ಒಂದೇ ಕುಟುಂಬದ ಮೂವರೂ ಮೃತಪಟ್ಟಿದ್ದಾರೆ. ಸಾರಿಗೆ ಸಂಸ್ಥೆಯ ಬಸ್ ಹಾಗೂ ಎರಡು ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ವಿಜಯಪುರ- ಹುಬ್ಬಳ್ಳಿ ರಾಷ್ಟ್ರೀಯ …

Read More »

ಮುರುಘಾಮಠದ ಶ್ರೀಗಳಿಗೆ ಎದುರಾದ ಮತ್ತೊಂದು ಸಂಕಷ್ಟ

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ …

Read More »