Breaking News

BigTv News

ಯಾರೂ ತಕರಾರು ಮಾಡದೇ ಗಣೇಶ ಹಬ್ಬ ಆಚರಣೆ ಮಾಡಬೇಕು : ಶೆಟ್ಟರ್

ಹುಬ್ಬಳ್ಳಿ; ನಗರರ ರಾಣಿ ಚೆನ್ನಮ್ಮ ( ಈದ್ಗಾ ) ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಕೋರ್ಟ್ ಅನುಮತಿ ನೀಡಿದ್ದು ಯಾರೂ ತಕರಾರು ಮಾಡದೇ ಗಣೇಶ ಹಬ್ಬ ಆಚರಣೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು. ನಗರದಲ್ಲಿಂದು ನಗರರ ರಾಣಿ ಚೆನ್ನಮ್ಮ ( ಈದ್ಗಾ ) ಮೈದಾನದಲ್ಲಿ ಗಣೇಶನ ದರ್ಶನದ ನಂತರ ಸುದ್ದಿಗಾರರ ಜೊತೆಗೆ ಮಾತನಾಡಿದರು ರಾಜ್ಯದಲ್ಲಿ ಗಣೇಶ ಹಬ್ಬ ವಿಜೃಂಬನೆಯಿಂದ ನಡಿತಾ ಇದ್ದು ಸಙತಸ ತಂದಿದ್ದು ಕೋವಿಡ್ …

Read More »

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ : 1000ಕ್ಕೂ ಅಧಿಕ ಜನರು ಸಾವು

ಪಾಕಿಸ್ತಾನದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಿಂದ 1000ಕ್ಕೂ ಅಧಿಕ ಜನರು ಮೃತಪಟ್ಟಿದ್ದು, ರಕ್ಷಣಾ ಕಾರ್ಯ ನಡೆಸಲು ಹೆಲಿಕಾಫ್ಟರ್‌ ಇಳಿಯಲೂ ಜಾಗವಿಲ್ಲದಷ್ಟು ಪ್ರವಾಹದ ನೀರು ದೇಶವನ್ನು ಆವರಿಸಿಕೊಂಡಿದೆ. ಮೂರು ದಶಕಗಳಲ್ಲೇ ಕಂಡು ಕೇಳರಿಯದ ಭಾರೀ ಮಳೆಯಿಂದ ಪಾಕಿಸ್ತಾನದಲ್ಲಿ ಪ್ರವಾಹ ಉಂಟಾಗಿದ್ದು, ಸುಮಾರು ೧ ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ.30 ಲಕ್ಷಕ್ಕೂ ಅಧಿಕ ಜನರು ಸ್ಥಳಾಂತರಗೊಂಡಿದ್ದಾರೆ. ಪಾಕಿಸ್ತಾನದ ಬಹುತೇಕ ಜಿಲ್ಲೆಗಳು ದ್ವೀಪದಂತಾಗಿವೆ. ರಕ್ಷಣೆಗೆ ಹೊರಟ ಹೆಲಿಕಾಫ್ಟರ್‌ ಗಳು ಇಳಿಯಲು ಒಣ ಪ್ರದೇಶ ಇಲ್ಲದೇ ಪರದಾಡುತ್ತಿವೆ …

Read More »

ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ 4,700 ಕೆ.ಜಿಗೂ ಅಧಿಕ ಗಾಂಜಾ ಜಪ್ತಿ

ಗುವಾಹಟಿ: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ 4,700 ಕೆ.ಜಿಗೂ ಅಧಿಕ ಪ್ರಮಾಣದ ಗಾಂಜಾವನ್ನು ಜಪ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ. ಇತ್ತೀಚಿನ ದಿನಗಳಲ್ಲಿ ಬೆಳಕಿಗೆ ಬಂದ ಅತಿ ದೊಡ್ಡ ಮಾದಕವಸ್ತು ಸಾಗಣೆ ಪ್ರಕರಣಗಳಲ್ಲಿ ಇದು ಸಹ ಒಂದಾಗಿದೆ ಎಂದೂ ಅವರು ಹೇಳಿದ್ದಾರೆ. ಅಸ್ಸಾಂ ಪೊಲೀಸರು ಸೋಮವಾರ ಚುರೈಬರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಯಮಿತ ತಪಾಸಣೆಯ ನಡೆಸುತ್ತಿದ್ದ ಸಂದರ್ಭ ನಿಷಿದ್ಧ ವಸ್ತುಗಳನ್ನು ಟ್ರಕ್‌ನಲ್ಲಿ ಸಾಗಿಸುತ್ತಿದ್ದದ್ದು ಬೆಳಕಿಗೆ ಬಂದಿದೆ ಎಂದು …

Read More »

ಸಾಮಾಜಿಕ ಮಾಧ್ಯಮ ಪೋಸ್ಟ್‌ : 45 ವರ್ಷ ಜೈಲು ಪಾಲು

ಸೌದಿ ಮಹಿಳೆಯೊಬ್ಬರು ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ 45 ವರ್ಷಗಳ ಕಾಲ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ ಎಂದು ನ್ಯಾಯಾಲಯದ ದಾಖಲೆಗಳನ್ನು ಉಲ್ಲೇಖಿಸಿ ಮಾನವ ಹಕ್ಕುಗಳ ಗುಂಪೊಂದು ಹೇಳಿಕೆ ನೀಡಿದೆ. ಅಲ್ಲದೆ, ಒಂದೇ ವಾರದಲ್ಲಿ ಈ ರೀತಿಯ ಎರಡು ಪ್ರಕರಣಗಳು ನಡೆದಿರುವ ಬಗ್ಗೆಯೂ ವರದಿಯಾಗಿದೆ. ನೌರಾ ಅಲ್-ಕಹ್ತಾನಿ ಅವರು ಸಾಮಾಜಿಕ ಮಾಧ್ಯಮದ ಮೂಲಕ “(ದೇಶದ) ಸಾಮಾಜಿಕ ರಚನೆಯನ್ನು ಹರಿಯಲು ಅಂತರ್ಜಾಲವನ್ನು ಬಳಸಿದ್ದಾರೆ” ಮತ್ತು “ಸಾರ್ವಜನಿಕ ಸುವ್ಯವಸ್ಥೆಯನ್ನು ಉಲ್ಲಂಘಿಸಿದ್ದಾರೆ” ಎಂದು ತಪ್ಪಿತಸ್ಥರೆಂದು ಸಾಬೀತಾದ …

Read More »

ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ, ಸವಾರ ಸಾವು

ಕೊಪ್ಪಳ : ಜಿಲ್ಲೆ ಕುಕನೂರ ತಾಲೂಕಿನ ಬನ್ನಿಕೊಪ್ಪ ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದಿದ್ದು ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಬೈಕ್ ಸವಾರ 35 ವರ್ಷದ ವಿನಾಯಕ್ ಮೃತ ದುರ್ದೈವಿ. ಕೊಪ್ಪಳದಿಂದ ಗದಗಕ್ಕೆ ಹೋಗುವಾಗ ದುರ್ಘಟನೆ ಸಂಭವಿಸಿದೆ. ಕುಕನೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More »

ಜಿ.ಪಂ. ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. ನಿಧನ

ದಾವಣಗೆರೆ: ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಡಾ. ಹರ್ಷಾ ಕೆ.ಬಿ. (37) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ದಾವಣಗೆರೆ ನಗರದ ತಮ್ಮ ನಿವಾಸದಲ್ಲಿ ಕುಸಿದು ಬಿದ್ದ ಕೆಲವೇ ಕ್ಷಣಗಳಲ್ಲಿ ಡಾ.ಹರ್ಷಾ ಮೃತಪಟ್ಟಿದ್ದಾರೆ. ಕುಸಿದು ಬಿದ್ದ ತಕ್ಷಣ ತುರ್ತಾಗಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಡಾ.ಹರ್ಷಾ ಅವರ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇತ್ತೀಚೆಗಷ್ಟೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಯಾಗಿ ಡಾ.ಹರ್ಷಾ ಅಧಿಕಾರ ಸ್ವೀಕರಿಸಿದ್ದರು. ಭಾರತೀಯ ಸೇನೆಯಲ್ಲಿ ಮೇಜರ್ ಆಗಿದ್ದ ಡಾ. ಹರ್ಷ, ಸೇನೆಯಲ್ಲಿ ಸೇವೆ ಮುಗಿಸಿ …

Read More »

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ : ಡಾ.ಶಿವಮೂರ್ತಿ ಬಂಧನಕ್ಕೆ ಆಗ್ರಹ

ಚಿತ್ರದುರ್ಗ: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾಶ್ರೀ ಡಾ.ಶಿವಮೂರ್ತಿ ಶರಣರನ್ನು ಬಂಧಿಸುವಂತೆ ಆಗ್ರಹಿಸಿ ಚಿತ್ರದುರ್ಗದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದರೂ ಈವರೆಗೆ ಪೊಲೀಸರು ಶ್ರೀಗಳನ್ನು ಬಂಧಿಸದೇ ಅವರನ್ನು ರಕ್ಷಿಸುವ ಕಾರ್ಯ ಮಾಡುತ್ತಿದ್ದಾರೆ. ತಕ್ಷಣ ಸ್ವಾಮೀಜಿಗಳನ್ನು ಹಾಗೂ ಕೃತ್ಯಕ್ಕೆ ಕುಮ್ಮಕ್ಕು ನೀಡಿದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಡಿಎಎಸ್ ಎಸ್ ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿ, …

Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂಭ್ರಮದಲ್ಲಿರುವ ಜನತೆಗೆ ವರುಣಾ ದೊಡ್ಡ ಪ್ರಮಾಣದಲ್ಲಿ ಶಾಕ್‌ ನಿಡಿದ್ದು, ಹಬ್ಬದತ್ತ ಊರಿಗೆ ತೆರಳದೇ ಮನೆಲ್ಲೇ ಉಳಿಯುವ ಸನ್ನಿವೇಶ ನಿರ್ಮಾಣವಾಗಿದೆ. ಈ ನಡುವೆ ಆ.29, 30ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ; ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಮತ್ತು ತುಮಕೂರು; ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, …

Read More »

ಸೆ. 1ಕ್ಕೆ ರಾಜ್ಯಕ್ಕೆ ಯೋಗಿ ಆದಿತ್ಯನಾಥ್ ಆಗಮನ

ಬೆಂಗಳೂರು: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಬರುವ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 1 ರಂದು ಯೋಗಿ ಬೆಂಗಳೂರಿಗೆ ಬರ್ತಿದ್ದಾರೆ. ಸೆಪ್ಟಂಬರ್ 1ರ ಬೆಳಗ್ಗೆ 11.30ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಅಲ್ಲಿಂದ ಎಸ್‌ಡಿಎಂ ಇನ್‌ಸ್ಟಿಟ್ಯೂಟ್‌ ಆಫ್ ನ್ಯಾಚುರೋಪತಿ & ಯೋಗಿಕ್ ಸೈನ್ಸ್ ಕ್ಯಾಂಪಸ್‌ಗೆ ಭೇಟಿ ಕೊಡಲಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಮನವಿ ಮೇರೆಗೆ ಯೋಗಿ ಆದಿತ್ಯನಾಥ್ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆದರೆ ಯೋಗಿ ಪ್ರವಾಸ …

Read More »

ರಾಜ್ಯದ 27 ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಅಬ್ಬರ ಜೋರು : ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದ 27 ಜಿಲ್ಲೆಗಳಲ್ಲಿ ಈ ಬಾರಿ ಮಳೆಯ ಅಬ್ಬರ ಜೋರಾಗಿದ್ದು, ಅನಾಹುತಗಳು ಸಂಭವಿಸಿವೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರಾಜ್ಯದ ಒಟ್ಟು 27 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಯಾಗಿದೆ. ಪ್ರಸ್ತುತ ಮತ್ತೆ 820ಮಿ.ಮೀಟರ್ ಮಳೆಯಾಗಿದ್ದು, ರಾಮನಗರ, ಚಾಮರಾಜನಗರ, ಮಂಡ್ಯದಲ್ಲಿ 9 ಮಿ.ಮೀಟರ್ ಮಳೆಯಾಗಿದೆ. ಜೂನ್ ನಿಂದ ಈವರೆಗೆ 187 ಹಳ್ಳಿಗಳಿಗೆ ಮಳೆಯಿಂದಾಗಿ ಹಾನಿಯಾಗಿದೆ ಎಂದರು. ರಾಜ್ಯದಲ್ಲಿ ಈ ಬಾರಿ ಮಳೆಯಿಂದಾಗಿ 96 ಜನರು …

Read More »