Breaking News

BigTv News

ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ : ಆರ್. ಅಶೋಕ್

ಬೆಂಗಳೂರು : ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ ಕೊಡಬೇಕೆ ಬೇಡವೇ ಅನ್ನೋ ಬಗ್ಗೆ ಇಂದು ಸಿಎಂ ಬೊಮ್ಮಾಯಿ ಅನುಪಸ್ಥಿತಿಯಲ್ಲಿ ಕಂದಾಯ ಇಲಾಖೆ ಸಚಿವ ಆರ್. ಅಶೋಕ್ ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಆರ್.ಅಶೋಕ್, ಶಾಸಕ ಜಮೀರ್ ಅಹ್ಮದ್ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. 75 ವರ್ಷಗಳಿಂದಲೂ ಈದ್ಗಾ ಮೈದಾನದಲ್ಲಿ ಧ್ವಜ ಹಾರಿಸಿಲ್ಲ, ವಿರೋಧಿಸುತ್ತಲೇ ಬಂದಿದ್ದಾರೆ. ಕೋಳಿ ಕೇಳಿ ಮಸಾಲೆ ಅರೆಯೋಕೆ ಆಗುತ್ತಾ ಎಂದು …

Read More »

ಜಮ್ಮು, ಕಾಶ್ಮೀರದ ಕಾಂಗ್ರೆಸ್ ಘಟಕಗೆ ಮತ್ತೊಂದು ಆಘಾತ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕಾಂಗ್ರೆಸ್ ಘಟಕ ಮತ್ತೊಂದು ಆಘಾತವನ್ನು ಅನುಭವಿಸಿದ್ದು, ಹಿರಿಯ ನಾಯಕ ಮತ್ತು ಮಾಜಿ ಸಚಿವ ತಾಜ್ ಮೊಹಿಯುದ್ದೀನ್ ಅವರು ಪಕ್ಷವನ್ನು ತೊರೆದು ಗುಲಾಂ ನಬಿ ಆಜಾದ್ ಗುಂಪಿಗೆ ಸೇರ್ಪಡೆಗೊಂಡಿದ್ದಾರೆ. ಆಜಾದ್ ನೇತೃತ್ವದ ಪಕ್ಷ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಆದರೆ ನ್ಯಾಷನಲ್ ಕಾನ್ಫರೆನ್ಸ್ ಅಥವಾ ಪಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.ಇಂದು ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವ ಸೇರಿದಂತೆ ನಾನು ನಿರ್ವಹಿಸುತ್ತಿರುವ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ …

Read More »

ಶಾಸಕ ರಘುಪತಿ ಭಟ್​​ ವಿರುದ್ಧ ಗಂಭೀರ ಆರೋಪ

ಉಡುಪಿ : ಮಣಿಪಾಲ -ಅಂಬಾಗಿಲು ಗುಂಡಿಬೈಲು, ಕಲ್ಸಂಕ ರಸ್ತೆ ಅವ್ಯವಸ್ಥೆ ಬಗ್ಗೆ ಅಸಮಾಧಾನ ಹೊರಹಾಕಿದ ಯುವತಿಯೊಬ್ಬಾಕೆ ಶಾಸಕ ರಘುಪತಿ ಭಟ್​​ ವಿರುದ್ಧ ಆರೋಪ ಮಾಡಿ ವಿಡಿಯೋ ಹರಿಬಿಟ್ಟಿದ್ದು ಈ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಕೋಮಲ್​ ಜೆನಿಫರ್​ ಎಂಬಾಕೆ ಶಾಸಕ ರಘುಪತಿ ಭಟ್​ ಯಾವುದೇ ಕೆಲಸವನ್ನು ಸರಿಯಾಗಿ ಮಾಡೋದಿಲ್ಲ ಎಂದು ವಿಡಿಯೋದಲ್ಲಿ ಆರೋಪಿಸಿದ್ದಾರೆ. ಯುವತಿಯ ವಿಡಿಯೋ ಉಡುಪಿ ಜಿಲ್ಲೆಯಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗಿದೆ. ನಾವು ರೋಡ್​ ಟ್ಯಾಕ್ಸ್​, ವೆಹಿಕಲ್​ …

Read More »

ಕಾಂಗ್ರೆಸ್ ಹೊಸ ಪಕ್ಷದ ಅಧ್ಯಕ್ಷ ರ ಆಯ್ಕೆಗೆ ಮೂಹರ್ತ ಫಿಕ್ಸ್

ನವದೆಹಲಿ: ಕಾಂಗ್ರೆಸ್ ಪಕ್ಷದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಸೇರಿ ಮುಂದಿನ ಎಐಸಿಸಿ ಮುಖ್ಯಸ್ಥರನ್ನು ಆಯ್ಕೆ ಮಾಡುವ ವೇಳಾಪಟ್ಟಿಯನ್ನು ನಿಗದಿಪಡಿಸಿತು. ಅಕ್ಟೋಬರ್ 17 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 19 ರಂದು ಎಣಿಕೆಯ ನಂತರ ಫಲಿತಾಂಶಗಳನ್ನು ಘೋಷಿಸಲಾಗುವುದು ಎಂದು ಪಕ್ಷ ತಿಳಿಸಿದೆ. ಸೆಪ್ಟೆಂಬರ್ 22ರಂದು ಚುನಾವಣೆ ಅಧಿಸೂಚನೆ ಹೊರಬೀಳಲಿದ್ದು, ಸೆಪ್ಟೆಂಬರ್ 24 ಮತ್ತು 30ರ ನಡುವೆ ನಾಮಪತ್ರ ಸಲ್ಲಿಸುವ ದಿನಾಂಕ ಇರುತ್ತದೆ. ನಾಮಪತ್ರ ಹಿಂಪಡೆಯಲು …

Read More »

ಮುರುಘಾಶ್ರೀಗಳ ವಿರುದ್ಧ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ : ಬೊಮ್ಮಾಯಿ

ಬೆಂಗಳೂರು : ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಅಡಿ ಒಂದು ಕೇಸ್ ದಾಖಲಾಗಿದೆ. ಅಲ್ಲದೆ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ. ಈ ಎರಡೂ ಕೇಸ್ ಗಳನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮುರುಘಾರಾಜೇಂದ್ರ ಶ್ರೀಗಳ ವಿರುದ್ಧ ಪೋಕ್ಸೋ ದೂರು ದಾಖಲು ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ದೃಷ್ಟಿಯಿಂದ ಈ ಹಂತದಲ್ಲಿ ಮಾತಾಡೋದು ಸೂಕ್ತ ಅಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ, …

Read More »

ಸೂತಕದ ಮನೆಗೆ ನೇರವಾದ ಶಾಸಕ ಜಿ ಟಿ ದೇವೇಗೌಡ

ಮೈಸೂರು: ತಾಲೂಕಿನಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಮಾವಿನಹಳ್ಳಿಯ ಗ್ರಾಮಸ್ಥರೊಬ್ಬರನ್ನು ಬಲಿ ಪಡೆದಿದೆ. ಜಯಪುರ ಗ್ರಾಮದ ಕಗ್ಗೆರೆ ಕೆರೆ ಶುಕ್ರವಾರ ಭರ್ತಿಯಾಗಿ ಕೋಡಿ ಹರಿದಿತ್ತು. ಇದರ ಸಮೀಪದಲ್ಲಿ ರಸ್ತೆ ದಾಟುವಾಗ ಮಾವಿನಹಳ್ಳಿಯ ಮಹೇಶ (45) ಎಂಬವರು ನೀರುಪಾಲಾಗಿದ್ದಾರೆ. ವಿಷಯ ತಿಳಿದು ಶಾಸಕ ಜಿ ಟಿ ದೇವೇಗೌಡರು ಮೃತ ಗ್ರಾಮಸ್ಥನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೃತನ ಪತ್ನಿಗೆ ವೈಯಕ್ತಿಕ 50 ಸಾವಿರ ರೂ.ಗಳ ನೆರವು ನೀಡಿ …

Read More »

ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು ವಹಿಸಬೇಕು : ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಪಕ್ಷವನ್ನು ಹಾಲಿ ಬಿಕ್ಕಟ್ಟಿನಿಂದ ಮೇಲೆತ್ತುವ ಸಾಮರ್ಥ್ಯ ರಾಹುಲ್ ಗಾಂಧಿಗೆ ಮಾತ್ರ ಇದ್ದು, ಪಕ್ಷದ ನಾಯಕತ್ವವನ್ನು ಅವರೇ ವಹಿಸಿಕೊಳ್ಳಬೇಕು ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ‘ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದಂತೆ ಇಂದು ಇಡೀ ಪರಿಸ್ಥಿತಿ ಸ್ಪಷ್ಟವಾಗಿದೆ. ನನ್ನ ವೈಯಕ್ತಿಕ ಅಭಿಪ್ರಾಯ ಎಂದರೆ ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಪಕ್ಷದ ನೇತೃತ್ವವನ್ನು …

Read More »

ಭೀಕರ ಅಪಘಾತ : ಒಬ್ಬ ಸಾವು

ರಾಮನಗರ: ಬೆಂಗಳೂರು-ಮೈಸೂರು ದಶಪಥದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಒಬ್ಬ ಸಾವಿಗೀಡಾಗಿದ್ದರೆ, ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ರಾಮನಗರ ಬಳಿ ಈ ಅಪಘಾತ ಸಂಭವಿಸಿದೆ. ತೆಂಗಿನಕಾಯಿಗಳನ್ನು ತುಂಬಿಕೊಂಡು ಸಾಗುತ್ತಿದ್ದ ಕ್ಯಾಂಟರ್ ಹಾಗೂ ಬೊಲೆರೋ ಸರಕು ಸಾಗಣಿಕೆ ವಾಹನಗಳ ಮಧ್ಯೆ ಡಿಕ್ಕಿಯಾಗಿ ಈ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಟ್ಯಾಂಕರ್ ಚಲಾಯಿಸುತ್ತಿದ್ದ ತಮಿಳುನಾಡು ಮೂಲಕ ಚಾಲಕ ಸಾವಿಗೀಡಾಗಿದ್ದಾನೆ. ಬೊಲೆರೋ ಸರಕು ಸಾಗಣಿಕೆ ವಾಹನದ ಚಾಲಕನ ಕಾಲು ಮುರಿತಕ್ಕೆ ಒಳಗಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ …

Read More »

ಹವಾಮಾನ ಇಲಾಖೆಯಿಂದ ಮಹತ್ವದ ಮುನ್ಸೂಚನೆ

ಬೆಂಗಳೂರು : ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಮಳೆಯ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಚಾಮರಾಜನಗರ, ಹಾಸನ, ದಾವಣಗೆರೆ, ಕೊಪ್ಪಳ, ಬಳ್ಳಾರಿ, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Read More »

ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ ಭರ್ಜರಿ ಸಿಹಿ ಸುದ್ದಿ

ತುಮಕೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ನೂರು ಎಸ್ ಸಿ, ಎಸ್ ಟಿ ವಿದ್ಯಾರ್ಥಿಗಳಿಗೆ 5 ರಿಂದ 10 ಲಕ್ಷ ರೂ ಧನಸಹಾಯ ನೀಡಿ ಉದ್ಯೋಗ ಸೃಷ್ಟಿ ಮಾಡುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ಇಂದು ರಾಜ್ಯ ಮಟ್ಟದ ಭೋವಿ ಜನಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, 21ನೇ ಶತಮಾನ ಜ್ಞಾನದ ಶತಮಾನ. ನಿಮ್ಮ ಜ್ಞಾನವೇ ತಂತ್ರಾಂಶ ಜ್ಞಾನವಿದೆ. ಶಿಕ್ಷಣಕ್ಕೆ ಮಹತ್ವ ನೀಡಬೇಕು. ಸಮಾಜದ ಶೈಕ್ಷಣಿಕ …

Read More »