Breaking News

BigTv News

ಜಂಬೂಸವಾರಿ ತಾಲೀಮಿಗೆ ಒಂದುದಿನದ ಮಟ್ಟಿಗೆ ಬ್ರೇಕ್

ಮೈಸೂರು: ಇಂದು ಅಮಾವಾಸ್ಯೆ ಹಿನ್ನೆಲೆ ದಸರಾ ಜಂಬೂಸವಾರಿಗೆ ಸಿದ್ಧತೆಯಲ್ಲಿದ್ದ ಗಜಪಡೆಗಳ ಜಂಬೂಸವಾರಿ ತಾಲೀಮಿಗೆ ಒಂದುದಿನದ ಮಟ್ಟಿಗೆ ಬ್ರೇಕ್ ನೀಡಲಾಗಿದೆ. ಅದರಂತೆ ಜಂಬೂಸವಾರಿಯಲ್ಲಿ ಭಾಗಿಯಾಗಲಿರುವ ಆನೆಗಳು ಇಂದು ಅರಮನೆ ಆವರಣದಲ್ಲೇ ವಿಶ್ರಾಂತಿಯನ್ನು ಪಡೆಯಲಿವೆ. ನಾಳೆಯಿಂದ ಎಂದಿನಂತೆ ಜಂಬೂಸವಾರಿ ತಾಲೀನು ಮುಂದುವರಿಯಲಿದೆ. ಮುಂಜಾಗ್ರತಾ ಕ್ರಮವಾಗಿ ಅಮಾವಾಸ್ಯೆಯಲ್ಲಿ ಗಜಪಡೆಗಳ ಜಂಬೂಸವಾರಿ ತಾಲೀಮನ್ನು ಸ್ಥಗಿತಗೊಳಿಸಲಾಗಿದೆ. ಸಂಜೆ ನಡೆಯುವ ತಾಲೀಮಿಗೂ ಬ್ರೇಕ್ ಹಾಕಲಾಗಿದೆ.

Read More »

ಪಾಕಿಸ್ತಾನದಲ್ಲಿ ಭೀಕರ ಮಳೆಗೆ 937 ಜನರು ಸಾವು

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸುರಿದ ಭೀಕರ ಮಳೆ ಹಾಗೂ ಪ್ರವಾಹದಿಂದ ಇದುವರೆಗೆ 343 ಮಕ್ಕಳು ಸೇರಿದಂತೆ 937 ಜನರು ಸಾವನ್ನಪ್ಪಿದ್ದಾರೆ. ಸದ್ಯ ಪಾಕಿಸ್ತಾನ ಸರ್ಕಾರ ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಜೂನ್ 14 ರಿಂದ ಸುರಿಯುತ್ತಿರುವ ಮಳೆಯಿಂದ ಪ್ರವಾಹದ ಪರಿಸ್ಥಿತಿ ಉಂಟಾಗಿದ್ದು, ಇಲ್ಲಿಯವರೆಗೆ ಸಿಂಧ್ ಪ್ರಾಂತ್ಯದಲ್ಲಿ 306 ಜನರು ಪ್ರಾಣ ಕಳೆದುಕೊಂಡಿದ್ದಾರೆ.ಬಲೂಚಿಸ್ತಾನದಲ್ಲಿ 234, ಖೈಬರ್ ಪಂಖ್ತುಂಖ್ವಾದಲ್ಲಿ 185 ಹಾಗೂ ಪಂಜಾಬ್ ಪ್ರಾಂತ್ಯದಲ್ಲಿ 165 ಜನರು ಸಾವನ್ನಪ್ಪಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 37 …

Read More »

ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಆರೋಪ

ಮೈಸೂರು: ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಚಿತ್ರದುರ್ಗದ ಮುರುಘರಾಜೇಂದ್ರ ಬೃಹನ್ಮಠದ ಡಾ.ಶಿವರಾತ್ರಿ ಮುರುಘಾ ಶರಣರ ವಿರುದ್ಧ ಮೈಸೂರಿನಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗದ ಬೃಹನ್ಮಠದ ಆಡಳಿತದಲ್ಲಿರುವ ವಿದ್ಯಾರ್ಥಿನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಅವರು ಲೈಂಗಿಕವಾಗಿ ತೊಂದರೆ ನೀಡುತ್ತಿದ್ದಾರೆ. ಇದು ಬಹಳಷ್ಟು ದಿನಗಳಿಂದ ನಡೆಯುತ್ತಿದ್ದು, ಅಲ್ಲಿ ನ್ಯಾಯ ಸಿಗುವ ವಿಶ್ವಾಸವಿಲ್ಲ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮೊರೆ ಹೋಗಿದ್ದರು. ಸಂಸ್ಥೆ ನೀಡಿದ ದೂರು ಆಧರಿಸಿ ಮೈಸೂರು …

Read More »

ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿಗೆ ಒತ್ತಾಯ- ಸದನ ಸಮಿತಿಗೆ ಮುತಾಲಿಕ್ ಭೇಟಿ

ಹುಬ್ಬಳ್ಳಿ: ನಗರದ ಚನ್ನಮ್ಮ ವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಲು ರಾಣಿ ಚೆನ್ನಮ್ಮ ಗಣೇಶೋತ್ಸವ ಸಮಿತಿ ಹಾಗೂಶ್ರೀರಾಮ ಸೇನಾ ವತಿಯಿಂದ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿಗೆ ಒತ್ತಾಯ- ಸದನ ಸಮಿತಿಗೆ ಮುತಾಲಿಕ್ ಭೇಟಿ ಮಾಡಿ ಒತ್ತಾಯ ಮಾಡಿದರು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸದಸ್ಯರೆಲ್ಲರೂ ‘ಶಾಂತಿ ಮತ್ತು ಸೌಹಾರ್ದ’ದ ಮಂತ್ರ ಜಪಿಸಿದ ಬೆನ್ನಲ್ಲೇ ಪ್ರಮೋದ್ ಮುತಾಲಿಕ್ ಅವರು, ಸದನ ಸಮಿತಿ ಹಾಗೂ ಹುಬ್ಬಳ್ಳಿ …

Read More »

ಗುತ್ತಿಗೆದಾರರ ಸಂಘದವರು ಸರಕಾರವನ್ನು ಟೀಕೆ ಮಾಡಿದ್ದಾರೆ

ಉಡುಪಿ: ಗುತ್ತಿಗೆದಾರರ ಸಂಘದವರು ಸರಕಾರವನ್ನು ಟೀಕೆ ಮಾಡಿದ್ದಾರೆ. ನಮ್ಮ ಇಲಾಖೆಯ ವಸತಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಹಣ ಪಾವತಿ ಬಾಕಿ ಇದೆ ಎಂದಿದ್ದಾರೆ. ಸುಮಾರು 1,100 ಕೋ.ರೂ. ನೀಡಲು ಬಾಕಿ ಇದೆ. ಕೊರೋನಾದಿಂದ ಉಂಟಾಗಿರುವ ಎರಡು ವರ್ಷಗಳ ಆರ್ಥಿಕ ಕೊರತೆಯಿಂದ ಬಾಕಿ ಇರಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ 700 ಕೋ.ರೂ. ನೀಡಲಾಗಿದೆ. ಈಗಾಗಲೇ 110 ಕೋ.ರೂ.ಗಳ ಎರಡು ಕಂತುಗಳ ಹಣ ಬಿಡುಗಡೆಯಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ …

Read More »

ಇಂದಿನಿಂದ ಆ. 31ರವರೆಗೂ ಮಳೆ‌ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ …

Read More »

ಇಂದು ಯಡಿಯೂರಪ್ಪ ದೆಹಲಿಯತ್ತ ಪ್ರಯಾಣ : ಕುತೂಹಲ ಮೂಡಿಸಿದ ರಾಜಕೀಯ ನಡೆ

ಬೆಂಗಳೂರು: ಬಿ.ಎಸ್‌ ಯಡಿಯೂರಪ್ಪ ಅವರಿಗೆ ಬಿಜೆಪಿ ಕೇಂದ್ರಿಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿದ ಬಳಿ ಮೊದಲ ಬಾರಿಗೆ ದೆಹಲಿ ಪ್ರಯಾಣ ಮಾಡಲಿದ್ದಾರೆ. ಇಂದು ಬಿಎಸ್‌ ವೈ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ನಂತರ ಅಮಿತ್ ಶಾ ಹಾಗೂ ಜೆ.ಪಿ. ನಡ್ದಾ ಅವರನ್ನು ಭೇಟಿಯಾಗುತ್ತಾರೆ. ಮುಂದೆ ಏನು ಕೆಲಸ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಿದ್ದಾರೆ.

Read More »

ಪತ್ನಿ ಸಾವನ್ನಪ್ಪಿದ ಎರಡೇ ದಿನದಲ್ಲಿ ಮನನೊಂದು ಪತಿ ಆತ್ಮಹತ್ಯೆ

ಅಥಣಿ: ಅನಾರೋಗ್ಯದಿಂದ ಪತ್ನಿ ಸಾವನ್ನಪ್ಪಿದ ಎರಡೇ ದಿನದಲ್ಲಿ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಝುಂಜರವಾಡ ಗ್ರಾಮದ ಸದಾಶಿವ ರಾಮಪ್ಪ ಕಾಂಬಳೆ (26) ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಕೂಡಲೇ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ತಡರಾತ್ರಿ ಸಾವನ್ನಪ್ಪಿದ್ದಾರೆ. ಇನ್ನು ಕೇವಲ‌ ಎರಡು ದಿನಗಳ ಹಿಂದಷ್ಟೇ ಸದಾಶಿವ ಪತ್ನಿ …

Read More »

ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವು

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಂಪತ್ ಪೂಜಾರಿ (17) ರೈಲು ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ವಿದ್ಯಾರ್ಥಿ ಸಂಪತ್ ರೈಲು ಹಳಿ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲು ಅಧಿಕಾರಿಗಳು, ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More »

ಮೈಸೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ ದಿನಾಂಕ ಫಿಕ್ಸ್

ಮೈಸೂರು: ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆಯ್ಕೆಗಾಗಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಸೆ.6ರಂದು ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಸಂಬಂಧ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ಎ-ಮಹಿಳೆಗೆ ಮೀಸಲಾತಿಯನ್ನು ಸರ್ಕಾರದಿಂದ ನಿಗದಿ ಪಡಿಸಿದೆ ಎಂದು ತಿಳಿಸಿದ್ದಾರೆ. ಈ ಮೀಸಲಾತಿಯಂತೆ ಮೈಸೂರು …

Read More »