Breaking News

BigTv News

ಗುತ್ತಿಗೆದಾರರ ಸಂಘದವರು ಸರಕಾರವನ್ನು ಟೀಕೆ ಮಾಡಿದ್ದಾರೆ

ಉಡುಪಿ: ಗುತ್ತಿಗೆದಾರರ ಸಂಘದವರು ಸರಕಾರವನ್ನು ಟೀಕೆ ಮಾಡಿದ್ದಾರೆ. ನಮ್ಮ ಇಲಾಖೆಯ ವಸತಿ ಶಿಕ್ಷಣ ಸಂಸ್ಥೆಗಳ ಕಟ್ಟಡದ ಹಣ ಪಾವತಿ ಬಾಕಿ ಇದೆ ಎಂದಿದ್ದಾರೆ. ಸುಮಾರು 1,100 ಕೋ.ರೂ. ನೀಡಲು ಬಾಕಿ ಇದೆ. ಕೊರೋನಾದಿಂದ ಉಂಟಾಗಿರುವ ಎರಡು ವರ್ಷಗಳ ಆರ್ಥಿಕ ಕೊರತೆಯಿಂದ ಬಾಕಿ ಇರಿಸಲಾಗಿದೆ. ಈ ಆರ್ಥಿಕ ವರ್ಷದಲ್ಲಿ 700 ಕೋ.ರೂ. ನೀಡಲಾಗಿದೆ. ಈಗಾಗಲೇ 110 ಕೋ.ರೂ.ಗಳ ಎರಡು ಕಂತುಗಳ ಹಣ ಬಿಡುಗಡೆಯಾಗಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ …

Read More »

ಇಂದಿನಿಂದ ಆ. 31ರವರೆಗೂ ಮಳೆ‌ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಕಳೆದ 5 ದಿನಗಳಿಂದ ಕರ್ನಾಟಕದಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಇನ್ನು ಒಂದು ವಾರ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ. ಇಂದಿನಿಂದ ಆಗಸ್ಟ್​ 31ರವರೆಗೂ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಮುನ್ಸೂಚನೆಗಳಿವೆ. ಈ ಬಾರಿಯ ಗಣೇಶ ಚತುರ್ಥಿಯವರೆಗೂ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಲಕ್ಷಣಗಳಿವೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು ಭಾರೀ ಮಳೆ …

Read More »

ಇಂದು ಯಡಿಯೂರಪ್ಪ ದೆಹಲಿಯತ್ತ ಪ್ರಯಾಣ : ಕುತೂಹಲ ಮೂಡಿಸಿದ ರಾಜಕೀಯ ನಡೆ

ಬೆಂಗಳೂರು: ಬಿ.ಎಸ್‌ ಯಡಿಯೂರಪ್ಪ ಅವರಿಗೆ ಬಿಜೆಪಿ ಕೇಂದ್ರಿಯ ಸಂಸದೀಯ ಮಂಡಳಿಯಲ್ಲಿ ಸ್ಥಾನ ಸಿಕ್ಕಿದ ಬಳಿ ಮೊದಲ ಬಾರಿಗೆ ದೆಹಲಿ ಪ್ರಯಾಣ ಮಾಡಲಿದ್ದಾರೆ. ಇಂದು ಬಿಎಸ್‌ ವೈ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ನಂತರ ಅಮಿತ್ ಶಾ ಹಾಗೂ ಜೆ.ಪಿ. ನಡ್ದಾ ಅವರನ್ನು ಭೇಟಿಯಾಗುತ್ತಾರೆ. ಮುಂದೆ ಏನು ಕೆಲಸ ಮಾಡಬೇಕು ಎಂಬುದರ ಕುರಿತು ಚರ್ಚೆ ನಡೆಸಲಿದ್ದಾರೆ.

Read More »

ಪತ್ನಿ ಸಾವನ್ನಪ್ಪಿದ ಎರಡೇ ದಿನದಲ್ಲಿ ಮನನೊಂದು ಪತಿ ಆತ್ಮಹತ್ಯೆ

ಅಥಣಿ: ಅನಾರೋಗ್ಯದಿಂದ ಪತ್ನಿ ಸಾವನ್ನಪ್ಪಿದ ಎರಡೇ ದಿನದಲ್ಲಿ ಮನನೊಂದು ಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಭವಿಸಿದೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಝುಂಜರವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಝುಂಜರವಾಡ ಗ್ರಾಮದ ಸದಾಶಿವ ರಾಮಪ್ಪ ಕಾಂಬಳೆ (26) ಮನೆಯಲ್ಲಿಯೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಆದರೆ ಕೂಡಲೇ ಅವರನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ತಡರಾತ್ರಿ ಸಾವನ್ನಪ್ಪಿದ್ದಾರೆ. ಇನ್ನು ಕೇವಲ‌ ಎರಡು ದಿನಗಳ ಹಿಂದಷ್ಟೇ ಸದಾಶಿವ ಪತ್ನಿ …

Read More »

ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವು

ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಬಳಿ ರೈಲು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ಸಂಪತ್ ಪೂಜಾರಿ (17) ರೈಲು ಡಿಕ್ಕಿ ಹೊಡೆದು ಮೃತಪಟ್ಟ ವಿದ್ಯಾರ್ಥಿ. ಬೈಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಥಳೀಯ ವಿದ್ಯಾರ್ಥಿ ಸಂಪತ್ ರೈಲು ಹಳಿ ದಾಟುವಾಗ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ರೈಲು ಅಧಿಕಾರಿಗಳು, ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Read More »

ಮೈಸೂರು ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಚುನಾವಣೆ ದಿನಾಂಕ ಫಿಕ್ಸ್

ಮೈಸೂರು: ಮಹಾನಗರ ಪಾಲಿಕೆಯ ಮೇಯರ್, ಉಪ ಮೇಯರ್ ಸ್ಥಾನಕ್ಕೆ ಆಯ್ಕೆಗಾಗಿ ಚುನಾವಣೆಯನ್ನು ಘೋಷಣೆ ಮಾಡಲಾಗಿದೆ. ಸೆ.6ರಂದು ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲಾಗಿದೆ. ಈ ಸಂಬಂಧ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಮೈಸೂರು ಮಹಾನಗರ ಪಾಲಿಕೆಯ 24ನೇ ಅವಧಿಗೆ ಮೇಯರ್ ಸ್ಥಾನಕ್ಕೆ ಸಾಮಾನ್ಯ, ಉಪ ಮೇಯರ್ ಸ್ಥಾನಕ್ಕೆ ಹಿಂದುಳಿದ ವರ್ಗ ಎ-ಮಹಿಳೆಗೆ ಮೀಸಲಾತಿಯನ್ನು ಸರ್ಕಾರದಿಂದ ನಿಗದಿ ಪಡಿಸಿದೆ ಎಂದು ತಿಳಿಸಿದ್ದಾರೆ. ಈ ಮೀಸಲಾತಿಯಂತೆ ಮೈಸೂರು …

Read More »

ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ : ಶ್ರೀರಾಮುಲು ವಾಗ್ದಾಳಿಬೆಂ

ದೊಡ್ಡಬಳ್ಳಾಪುರ(ಬೆಂಗಳೂರು ಗ್ರಾಮಾಂತರ): ಸಿದ್ದರಾಮಯ್ಯ ಅವರಿಗೆ ಇವತ್ತು ಇರೋದು ಕೇವಲ ಸಿಎಂ ಕುರ್ಚಿ ಚಿಂತೆಯಷ್ಟೇ. ಅವರನ್ನು ಮುಖ್ಯಮಂತ್ರಿಯಾಗಲು ನಾವು ಬಿಡಲ್ಲ. ಭಾರತೀಯ ಜನತಾ ಪಾರ್ಟಿ ಗಟ್ಟಿಯಾಗಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ ಶ್ರೀರಾಮುಲು ವಾಗ್ದಾಳಿ ನಡೆಸಿದರು. ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಅವರಿಗೆ ಪ್ರಾಣಿ ಪಕ್ಷಿಗಳ ದಾಸೋಹ ಸೇವಾ ಸಮಿತಿಯಿಂದ ಸನ್ಮಾನ ಮಾಡಲಾಯಿತು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪ್ರಾಣಿ ಪಕ್ಷಿಗಳ …

Read More »

ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು : ಪರ್ಸೆಂಟೇಜ್‌ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುಮ್ಮನೆ ರಾಜಕೀಯ ಆರೋಪ ಮಾಡುತ್ತಿದ್ದಾರೆ. ಅವರೇನು ಸತ್ಯಹರಿಶ್ಚಂದ್ರರಾ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇನು ಸತ್ಯ ಹರಿಶ್ಚಂದ್ರರಾ? ಕಾಂಗ್ರೆಸ್‌ ಇದ್ದಾಗ ಎಲ್ಲಾ ಪ್ರಕರಣಗಳನ್ನು ತನಿಖೆ ಮಾಡುತ್ತಿದ್ದರೆ? ರಾಜಕೀಯವಾಗಿ ಮಾಡುತ್ತಿರುವ ಪ್ರಯತ್ನ ಇದಾಗಿದೆ. ಆಧಾರರಹಿತವಾಗಿ ಗುತ್ತಿಗೆದಾರರು ಸಹ ರಾಜಕಾರಣಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೆಪ್ಟೆಂಬರ್ ನಲ್ಲಿ 2022 -23ನೇ ಸಾಲಿನ ಸಾಮಾನ್ಯ ವರ್ಗಾವಣೆ ನಡೆಸಲು ಅನುಮತಿ ನೀಡಲಾಗಿದ್ದು, ಸೆಪ್ಟೆಂಬರ್ 2 ರೊಳಗೆ ಮಾಹಿತಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಳೆದ ವರ್ಷ ಅವಕಾಶ ಸಿಗದೇ ವರ್ಗಾವಣೆಗಾಗಿ ಕಾಯುತ್ತಿದ್ದ ಶಿಕ್ಷಕರಿಗೆ ಈ ಮೂಲಕ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ನೀಡಲಾಗಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಶಿಕ್ಷಕರ ವರ್ಗಾವಣೆ ಅಧಿನಿಯಮದ ಅನ್ವಯ ವರ್ಗಾವಣೆ ನಡೆಸಲಾಗುವುದು. ಪ್ರಸಕ್ತ ಸಾಲಿನ …

Read More »

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿಗಾಗಿ ಪಂಚಲಕ್ಷ ಪತ್ರ ಚಳುವಳಿ ಆರಂಭ

ಹುಬ್ಬಳ್ಳಿ;‌ ರಾಜ್ಯದಲ್ಲಿಯೇ ಅತ್ಯಂತ ದೊಡ್ಡದಾದ ಲಿಂಗಾಯತ ಧರ್ಮದಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಡುವಲ್ಲಿ ಸರ್ಕಾರ ಹಿಂದೇಟು ಹಾಕುತಿದ್ದು ಪಂಚಮಸಾಲಿ ಸಮಾಜದವರ ಹೋರಾಟ ಮಾತ್ರ ಕುಗ್ಗಿಲ್ಲ. ಯಾವುದೇ ಕಾರಣಕ್ಕೋ ಮೀಸಲಾತಿ ಪಡೆದೇ ತಿರುತ್ತೇವೆಎಂಬ ಪಣ ತೊಟಿದ್ದು ಅಕಳೆದ ಹಲವಾರು ದಿನಗಳಿಂದ ಒಂದಲ್ಲಾ ಒಂದು ರೀತಿಯಲ್ಲಿ ಮುಖ್ಯಮಂತ್ರಿಗಳಿಗೆ, ಸರ್ಕಾರಕ್ಕೆ, ಸಮಾಜ ಪ್ರಮುಖರಿಗೆ, ಅಧಿಕಾರಿಗಳಿಗೆ ಹಾಗೂ ಪಂಚಮಸಾಲಿ ಸಮಾಜದ ಸಚಿವರು, ಶಾಸಕರಿಗೆ ಬಿಸಿ ತಟ್ಟುತ್ತಲೇ ಇದ್ದಾರೆ. ಈಗ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು …

Read More »