ಮುಂಬೈ: ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಟ್ವಿಟ್ಟರ್ ಮೂಲಕ ಅಮಿತಾಬ್ ಬಚ್ಚನ್ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಮೊದಲನೇ ಅಲೆ ಬಂದ ಸಂದರ್ಭದಲ್ಲಿ ಜುಲೈ 2020ರಲ್ಲಿ ಅಮಿತಾಬ್ ಬಚ್ಚನ್ , ಅವರ ಪುತ್ರ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯಾ ರೈ, ಮೊಮ್ಮಗಳು ಆರಾಧ್ಯ ಬಚ್ಚನ್ ಅವರಿಗೆ ಕೊರೋನಾ ಸೋಂಕು ಕಾಣಿಸಿಕೊಂಡಿತ್ತು. ಅಮಿತಾಬ್ ಬಚ್ಚನ್ …
Read More »ಅನುಮಾನ ಭೂತದಡಿ ಪತ್ನಿಯನ್ನು ಬಲಿ ಪಡೆದ ಪಾಪಿ ಪತಿ
ಬೆಂಗಳೂರು : ಅನೈತಿಕ ಸಂಬಂಧದ ಅನುಮಾನದಡಿ ಪತ್ನಿಯ ಕುತ್ತಿಗೆ ಸೀಳಿ ಪತಿಯೇ ಕೊಲೆ ಮಾಡಿರುವ ಘಟನೆ ಕೆಆರ್ ಪುರಂ ನ್ಯಾನ್ಸಿ ಪ್ಲೋರಾ(29) ಮೃತ ಗೃಹಿಣಿ ಎಂದು ಗುರುತಿಸಲಾಗಿದೆ. ಆರೋಪಿ ಪತಿ ಜಾನ್ ಸುಪ್ರಿತ್ನನ್ನು ಬಂಧಿಸಲಾಗಿದೆ. ಶಾಮಿಯಾನ ಹಾಕುವ ಉದ್ಯಮ ಮಾಡುತ್ತಿದ್ದ ಜಾನ್ ಸುಪ್ರಿತ್ ಕಳೆದ ಎಂಟು ವರ್ಷಗಳ ಹಿಂದೆ ನ್ಯಾನ್ಸಿ ಪ್ಲೋರಾಳನ್ನು ಮದುವೆಯಾಗಿದ್ದ. ದಂಪತಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ. ಅನೈತಿಕ ಸಂಬಂಧದ ಅನುಮಾನದಲ್ಲಿ ಮನೆಯಲ್ಲಿ ಆಗಾಗೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. …
Read More »2024ರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸೋಲು: ಡಾ. ಸುಬ್ರಮಣಿಯನ್ ಸ್ವಾಮಿ
ನವದೆಹಲಿ : ಆಡಮ್ಸ್ ಬ್ರಿಡ್ಜ್ ಎಂದೂ ಕರೆಯಲ್ಪಡುವ ರಾಮಸೇತುವನ್ನು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸುವಂತೆ ಕೋರಿ ಮಾಜಿ ರಾಜ್ಯಸಭಾ ಸದಸ್ಯ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಇದರ ಬೆನ್ನಲ್ಲೇ ಟ್ವೀಟ್ ಮಾಡಿದ ಸುಬ್ರಮಣಿಯನ್ ಸ್ವಾಮಿ, ರಾಮ ಸೇತುವನ್ನು ಪ್ರಾಚೀನ ಪರಂಪರೆಯ ಸ್ಮಾರಕವನ್ನಾಗಿ ಘೋಷಣೆ ಮಾಡಲು ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಲಾಗಿದೆ. ಈ ನಿರ್ಧಾರದ ಬಗ್ಗೆ ಅಫಿಡವಿಟ್ ಸಲ್ಲಿಸಲು ನ್ಯಾಯಾಲಯ ಸರ್ಕಾರಕ್ಕೆ ಸೂಚಿಸಿದೆ. ಒಂದು ವೇಳೆ …
Read More »ಮಾಜಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ
ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಬೆದರಿಕೆ, ಮೊಟ್ಟೆ ಎಸೆತ ಪ್ರಕರಣ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭದ್ರತೆ ಹೆಚ್ಚಳ ಮಾಡಲಾಗಿದೆ. ಶಿವಾನಂದ ಸರ್ಕಲ್ ಬಳಿ ಇರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಸರ್ಕಾರಿ ನಿವಾಸಕ್ಕೆ ಹೆಚ್ಚಿನ ಭದ್ರತೆ ಒದಗಿಸಲಾಗಿದ್ದು, ಮೆಟಲ್ ಡಿಟೆಕ್ಟರ್ ಅಳವಡಿಕೆ ಮಾಡಲಾಗಿದೆ. ಸಿದ್ದರಾಮಯ್ಯ ನಿವಾಸಕ್ಕೆ ಭದ್ರತೆ ಹೆಚ್ಚಿಸುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. …
Read More »ರಸ್ತೆ ಗುಂಡಿಯಿಂದಾಗಿ ಬೈಕ್ ಸ್ಕಿಡ್ ಆಗಿ ಮತ್ತೊಂದು ಜೀವ ಬಲಿ
ಬೆಂಗಳೂರು : ಕಾಲೇಜಿಗೆ ತನ್ನ ಮಗಳನ್ನು ಬಿಟ್ಟು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಗುಂಡಿಯಿಂದಾಗಿ ಬೈಕ್ ಸ್ಕಿಡ್ ಆಗಿ ಮತ್ತೊಂದು ಜೀವ ಬಲಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೇರೋಹಳ್ಳಿ ಮುಖ್ಯ ರಸ್ತೆಯ ಗುಂಡಿಯಿಂದ ಸುಪ್ರೀತ್ (44) ಎಂಬ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಆಗಸ್ಟ್ 18ಕ್ಕೆ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ರಸ್ತೆ ಗುಂಡಿಯಿಂದಾಗಿ ಬೈಕ್ ಸ್ಕಿಡ್ ಆಗಿ ಸುಪ್ರೀತ್ ನೆಲಕ್ಕೆ ಬಿದ್ದಿದ್ದಿದ್ದಾರೆ. ಇನ್ನು, ಆಗಸ್ಟ್ 18ರಂದು ಬಿದ್ದು …
Read More »ಸಾಲದ ಬಾಧೆ : ಉದ್ಯಮಿ ಆತ್ಮಹತ್ಯೆ
ಬಳ್ಳಾರಿ: ಸಾಲದ ಬಾಧೆ ರೈತರನ್ನಷ್ಟೇ ಅಲ್ಲ, ಉದ್ಯಮಿಗಳನ್ನೂ ಕಾಡುತ್ತಿದೆ. ಅವರು ಕೂಡ ಸಾಲಕ್ಕೆ ಹೆದರಿ ಪ್ರಾಣ ಕಳೆದುಕೊಳ್ಳುತ್ತಿರುವ ಪ್ರಕರಣಗಳು ನಡೆಯುತ್ತಿದ್ದು, ಅಂಥ ಸಾವಿನ ಪಟ್ಟಿಗೆ ಇದೀಗ ಮತ್ತೊಂದು ಸೇರ್ಪಡೆ ಆಗಿದೆ. ಸಾಲದ ಕಂತು ಕಟ್ಟಲಾಗದೆ ಎರಡು ಲಾರಿ ಮಾಲೀಕರೊಬ್ಬರು ನೇಣಿಗೆ ಕೊರಳೊಡ್ಡಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಅಂಕಮನಾಳ ಬಳಿ ಈ ಆತ್ಮಹತ್ಯೆ ನಡೆದಿದೆ. ತುಂಬರಗುದ್ದಿ ಗ್ರಾಮದ ಕರಿಯಪ್ಪ ಎಂಬವರು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಎರಡು …
Read More »ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇಂದು ಬೆಂಗಳೂರು ನಗರ, ಬೆಂಗಳೂರು …
Read More »ಕೊಡಗಿನಲ್ಲಿ ನಾನು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ : ಸಿದ್ದರಾಮಯ್ಯ
ಬೆಂಗಳೂರು : ‘ಕೊಡಗಿನಲ್ಲಿ ನಾನು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ. ಅಂದು ಅಕ್ಕಿರೊಟ್ಟಿ, ಕಳಲೆ ಪಲ್ಯ ತಿಂದಿದ್ದೆ. ಇದೇ ವಾಸ್ತವ ವಿಚಾರ. ಕೇವಲ ವಾದದ ಉದ್ದೇಶದಿಂದ ಮಾಂಸ ತಿಂದು ಬಂದರೆ ಸಮಸ್ಯೆ ಏನು ಎಂದು ಪ್ರಶ್ನಿಸಿದ್ದೆ ಅಷ್ಟೆ’ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಡಗಿನಲ್ಲಿ ನಾನು ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿದ್ದೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ. ಆವತ್ತು ವಿಧಾನ ಪರಿಷತ್ ಸದಸ್ಯರಾದ …
Read More »ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಚಿಕಿತ್ಸೆಗೆ ವಿದೇಶಕ್ಕೆ ಪ್ರಯಾಣ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಚಿಕಿತ್ಸೆಗೆ ವಿದೇಶಕ್ಕೆ ತೆರಳಲಿದ್ದು, ಅವರ ಜೊತೆಗೆ ಮಕ್ಕಳಾದ ರಾಹುಲ್ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ತೆರಳಿಲಿದ್ದಾರೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ. ಆದರೆ ಯಾವಾಗ ಹೋಗುತ್ತಿದ್ದಾರೆ ಅಥವಾ ಯಾವ ಸ್ಥಳಕ್ಕೆ ಹೋಗುತ್ತಿದ್ದಾರೆ ಎಂಬ ಬಗ್ಗೆ ಮಾಹಿತಿ ತಿಳಿಸಿಲ್ಲ. ಆದರೆ ಸೆಪ್ಟಂಬರ್ 4ರಂದು ರಾಹುಲ್ ಗಾಂಧಿ ಅವರು ‘ಮೆಹಂಗಾಯಿ ಪರ್ ಹಲ್ಲಾ ಬೋಲ್’ ಅಭಿಯಾನದಲ್ಲಿ ಮಾತನಾಡಲಿದ್ದಾರೆ ಎಂದು …
Read More »ವ್ಯಾನ್ನ ರೇಡಿಯಟರ್ ಬ್ಲಾಸ್ಟ್ : 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಹುಬ್ಬಳ್ಳಿ:ಸ್ಕೂಲ್ ವ್ಯಾನ್ನ ರೇಡಿಯಟರ್ ಬ್ಲಾಸ್ಟ್ ವಾಗಿ ಚೇತನಾ ಪಬ್ಲಿಕ್ ಶಾಲೆಗೆ ಸೇರಿದ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾದ ಘಟನೆ ಹುಬ್ಬಳ್ಳಿಯ ಗೋಕುಲ ರೋಡ್ನ ಸೆಂಟ್ರಲ್ ಎಕೈಸ್ ಕಾಲೋನಿಯಲ್ಲಿ ನಡೆದಿದೆ. ಗಾಯಗೊಂಡ ವಿದ್ಯಾರ್ಥಿಗಳನ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಾಲೆಯಿಂದ ಮನೆಗೆ ವಾಪಸ್ ಬಿಡುವಾಗ ಸಂಭವಿಸಿದೆ. ಸ್ಥಳಕ್ಕೆ ಗೋಕುಲ ರೋಡ್ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





