ಬೆಂಗಳೂರು: ಮೊಟ್ಟೆ ಎಸೆತ ಪ್ರಕರಣದ ಬೆನ್ನಲ್ಲೇ ರಾಜ್ಯ ಸರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಜೆಡ್ ಶ್ರೇಣಿಯ ಭದ್ರತೆ ನೀಡಿದೆ. ಕೊಡಗಿನಲ್ಲಿ ಮೊಟ್ಟೆ ಎಸೆತ ಪ್ರಕರಣದ ಬಗ್ಗೆ ವ್ಯಾಪಾಕ ಆಕ್ರೋಶ ಕೇಳಿ ಬಂದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಭದ್ರತೆ ಹೆಚ್ಚಿಸಲಾಗಿದ್ದು, ಇದೀಗ ಜೆಡ್ ಭದ್ರತೆ ನೀಡಲು ರಾಜ್ಯ ಸರಕಾರ ಆದೇಶಿಸಿದೆ.ಸಿದ್ದರಾಮಯ್ಯ ಅವರಿಗೆ ಅಧಿಕಾರಿಗಳು, ಸಿಬ್ಬಂದಿ ಸೇರಿ 21 ಮಂದಿಯನ್ನು ನಿಯೋಜನೆ ಮಾಡಲಾಗಿದೆ. ಮೂರು ಪಾಳಿಯಲ್ಲಿ ನಿರಂತರವಾಗಿ ಕರ್ತವ್ಯ ನಿರ್ವಹಿಸಬೇಕು. ಎಲ್ಲೇ …
Read More »ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು : ರಾಜ್ಯ ಸರ್ಕಾರವು ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪೌರ ಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಇನ್ನೆರಡು ತಿಂಗಳಲ್ಲಿ ಆದೇಶ ಹೊರಡಿಸಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವ ಗೋವಿಂದ ಕಾರಜೋಳ, ನೇರ ಪಾವತಿ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಇನ್ನೆರಡು ತಿಂಗಳಲ್ಲಿ ಕಾಯಂಗೊಳಿಸಲಾಗುವುದು. ಸಫಾಯಿ ಕರ್ಮಚಾರಿ ಸಮಸ್ಯೆ ಪರಿಹಾರ ಆಗುವವರೆಗೂ ತಲಾ 2 ಸಾವಿರ ರೂ. ನೀಡುತ್ತಿದೆ. ನೌಕರರನ್ನು …
Read More »ಪಾಲಿಕೆ ಆವರಣದಲ್ಲಿ ಗಣೇಶೋತ್ಸವಕ್ಕೆ ಅನುಕು ಪ್ರದರ್ಶನ
ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡುವುದಕ್ಕೆ ಹುಬ್ಬಳ್ಳಿ ಗಣೇಶೋತ್ಸವ ಮಂಡಳಿ ಎಲ್ಲ ಇಲಾಖೆಗೆ ಹೇಗೆಲ್ಲಾ ಮನವಿ ಮಾಡಿಕೊಂಡಿದೆ ಎಂಬುದನ್ನು ಪಾಲಿಕೆ ಆವರಣದಲ್ಲಿ ಗಣೇಶ ಮೂರ್ತಿಯನ್ನು ಹಾಕಿಕೊಂಡು ಅನುಕು ಪ್ರದರ್ಶನ ಮಾಡಿದರು. ಹುಬ್ಬಳ್ಳಿ ಗಣೇಶೋತ್ಸವ ಮಂಡಳಿ ಗಣೇಶೋತ್ಸವಕ್ಕೆ ಪೊಲೀಸ್ ಇಲಾಖೆ, ಹವಾ ನಿಯಂತ್ರಣ ಇಲಾಖೆ, ಮಹಾನಗರ ಪಾಲಿಕೆ, ಹೆಸ್ಕಾಂ, ರಾಜಕೀಯ ಹೀಗೆ ಎಲ್ಲ ಇಲಾಖೆಯ ಅಧಿಕಾರಿಗಳಿಗೆ ಉತ್ಸವ ಮಾಡಲು ಅವಕಾಶ ಮಾಡಿ ಕೊಡಲು ಹೆಗೆಲ್ಲಾ ಮನವಿ ಸಲ್ಲಿಸಿದ್ದಾರೆ. ಆ …
Read More »ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಹೆಚ್ಚಿದ ಕಾವು
ಹುಬ್ಬಳ್ಳಿ : ಈದ್ಗಾ ಮೈದಾನದಲ್ಲಿ ಗಣೆಶೋತ್ಸವ ಆಚರಣೆಗೆ ಗಡುವು ವಿಚಾರ, ಹುಬ್ಬಳ್ಳಿಯಲ್ಲಿ ಹಿಂದೂ ಸಂಘಟನೆಗಳ ತೀವ್ರ ಸ್ವರೂಪದ ಹೋರಾಟ ಆರಂಭವಾಗಿದೆ. ಕೂಡಲೇ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಗಳು ಹೆಚ್ಚುತ್ತಿವೆ. ಇದೇ ವೇಳೆ ಮಾತನಾಡಿದ ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ಗಣೇಶೋತ್ಸವ ಆಚರಣೆಗೆ ಸರ್ಕಾರ ಹಾಗೂ ಪಾಲಿಕೆ ಮೀನಾ ಮೇಷ ಎಣಿಸುತ್ತಿದೆ. ಈದ್ಗಾ ಮೈದಾನವೇನೂ ನಿಮ್ಮಪ್ಪನ ಸ್ವತ್ತಲ್ಲ. ಈದ್ಗಾ ಮೈದಾನ ಸಾರ್ವಜನಿಕ ಸ್ವತ್ತು. ಅಲ್ಲಿ ಮುಸ್ಲಿಂ …
Read More »ಸಿಎಂ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ನಿಧನ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ (40) ಹೃದಯಾಘಾತದಿಂದ ಸೋಮವಾರ ಬೆಳಿಗ್ಗೆ ನಿಧನರಾದರು. ಬೆಳಿಗ್ಗೆ ಜಿಮ್ಗೆ ಹೋಗಿದ್ದ ಅವರು ಕುಸಿದುಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನ ಆಗಲಿಲ್ಲ ಎಂದು ಕುಟುಂಬ ಮೂಲಗಳು ತಿಳಿಸಿವೆ. ವಿವಿಧ ಪತ್ರಿಿಕೆ, ಟಿವಿ ಚಾನೆಲ್ಗಳಲ್ಲಿ ಕಾರ್ಯನಿರ್ವಹಿಸಿದ್ದ ಗುರುಲಿಂಗಸ್ವಾಮಿ ಅವರು, ಬಸವರಾಜ ಬೊಮ್ಮಾಾಯಿ ಅವರು ಗೃಹ ಸಚಿವರಾಗಿದ್ದಾಗಲೂ ಮಾಧ್ಯಮ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.
Read More »ಕಾಂಗ್ರೆಸ್ ಪಕ್ಷದ ಆನಂದ ಶರ್ಮಾ ರಾಜಿನಾಮೆ
ನವದೆಹಲಿ: ಗುಲಾಂ ನಬಿ ಆಜಾದ್ ಅವರು ಜಮ್ಮು ಮತ್ತು ಕಾಶ್ಮೀರ ಪ್ರಚಾರ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಕೆಲವೇ ದಿನಗಳ ಅಂತರದಲ್ಲಿ ಜಿ 23 ಸಹವರ್ತಿ ಆನಂದ್ ಶರ್ಮಾ ಅವರು ಹಿಮಾಚಲ ಪ್ರದೇಶದ ಪಕ್ಷದ ಸ್ಟೀರಿಂಗ್ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ ಭಾನುವಾರ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಶರ್ಮಾ, ಪಕ್ಷದ ಯಾವುದೇ ಸಭೆಗಳಿಗೆ ತಮ್ಮನ್ನು ಆಹ್ವಾನಿಸದ ಕಾರಣ ಅವರ ಆತ್ಮಗೌರವಕ್ಕೆ ಧಕ್ಕೆಯಾಗಿರುವುದರಿಂದ …
Read More »ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿ : 2 ಸಾವು
ಧಾರವಾಡ : ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ -ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಲಘಟಗಿಯ ಧಾರವಾಡ ಕ್ರಾಸ್ ಬಳಿ ಖಾಸಗಿ ಬಸ್ ಮತ್ತು ಕ್ರೂಸರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕ್ರೂಸರ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕ್ರೂಸರ್ ನಲ್ಲಿದ್ದವರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ಗ್ರಾಮದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರಿಗೆ ಗಂಭೀರ ಗಾಯಗೊಂಡಿದ್ದು, ಗಾಯಗೊಂಡವರನ್ನು …
Read More »ಮಾಜಿ ಸಿಎಂ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಇಂದು ರಾಣೆಬೆನ್ನೂರು ಬಂದ್
ಹಾವೇರಿ : ಕೊಡಗು ಜಿಲ್ಲೆ ಪ್ರವಾಸದ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆ ಖಂಡಿಸಿ ಇಂದು ರಾಣೆಬೆನ್ನೂರು ಬಂದ್ ಗೆ ಕರೆ ನೀಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಕುರುಬ ಸಮಾಜದ ಅಧ್ಯಕ್ಷ ಷಣ್ಮುಖಪ್ಪ ಕಂಬಳಿ, ನೆರೆಹಾನಿ ವೀಕ್ಷಣೆಗೆ ಕೊಡಗಿಗೆ ತೆರಳಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಕೃತ್ಯವನ್ನು ಖಂಡಿಸಿ ಸೋಮವಾರ ರಾಣೆಬೆನ್ನೂರು ಬಂದ್ ಗೆ ಕರೆ ನೀಡಲಾಗಿದೆ ಎಂದು …
Read More »ಅರಮನೆ ಮೈದಾನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟ ಕ್ರೇಜಿಸ್ಟಾರ್ ಪುತ್ರ
ನಟ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿದೆ. ರವಿಮಾಮಾನ ಹಿರಿಯ ಪುತ್ರ ವಿ. ಮನೋರಂಜನ್ ಇಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇಂದು ಬೆಳಿಗ್ಗೆ 8.30ರ ಶುಭ ಮುಹೂರ್ತದಲ್ಲಿ ಮಾಂಗಲ್ಯ ಧಾರಣೆ ಮಾಡುವ ಮೂಲಕ ಚನ್ನೈ ಮೂಲದ ವೈದ್ಯೆ ಸಂಗೀತ ಎಂಬುವರನ್ನು ಮನೋರಂಜನ್ ವರಿಸಿದ್ದಾರೆ. ಅರಮನೆಯ ಮೈದಾನದಲ್ಲಿ ವಿವಾಹ ಮಹೋತ್ಸವ ಬಳ ಅದ್ಧೂರಿಯಾಗಿ ನೆರವೇರಿದೆ. ನಿನ್ನೆ ನಡೆದ ಆರತಕ್ಷತೆಯಲ್ಲಿ ಚಿತ್ರರಂಗ ಮತ್ತು ರಾಜಕೀಯದ ಗಣ್ಯರು ಭಾಗವಹಿಸಿ, …
Read More »ಬಿಜೆಪಿ ಅಧಿಕಾರಕ್ಕೆ ಬರಲು ವಾಜಪೇಯಿ, ಅಡ್ವಾಣಿ ಕಾರಣ : ನಿತಿನ್ ಗಡ್ಕರಿ
ನಾಗ್ಪುರ: ಬಿಜೆಪಿ ಅಧಿಕಾರಕ್ಕೆ ಬರಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ, ಬಿಜೆಪಿ ನಾಯಕರಾದ ಎಲ್.ಕೆ. ಅಡ್ವಾಣಿ ಹಾಗೂ ದೀನದಯಾಳ್ ಉಪಾಧ್ಯಾಯ ಅವರ ಶ್ರಮವೇ ಕಾರಣ ಎಂದು ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. 11,000 ಶಿಕ್ಷಕರು ಮತ್ತು ಬುಡಕಟ್ಟು ಪ್ರದೇಶಗಳ ಶಾಲೆಗಳನ್ನೊಳಗೊಂಡ ‘ಲಕ್ಷ್ಮಣ ರಾವ್ ಮಕರ್ ಸ್ಮೃತಿ ಸಂಸ್ಥೆ’ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 1980ರಲ್ಲಿ ಮುಂಬೈಯಲ್ಲಿ ನಡೆದ ಸಮಾವೇಶವೊಂದರಲ್ಲಿ ವಾಜಪೇಯಿ ಮಾಡಿದ್ದ ಭಾಷಣವನ್ನು ನೆನಪಿಸಿಕೊಂಡಿದ್ದಾರೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





