Breaking News

BigTv News

ಬುದ್ಧಿವಾದ ಹೇಳಿದ್ದಕ್ಕೆ ಬಿತ್ತು ಹೆಣ

ಬೆಂಗಳೂರು : ‘ದುಶ್ಚಟ ಮಾಡಿ ಸ್ನೇಹಿತ ರನ್ನು ಹಾಳು ಮಾಡಬೇಡ’ ಎಂದು ಬುದ್ಧಿವಾದ ಹೇಳಿದ್ದಕ್ಕೆ ಅಜೀಂವುಲ್ಲಾ (43) ಎಂಬುವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದ್ದು, ಈ ಸಂಬಂಧ ರಾಜಗೋಪಾಲ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‘ಹೆಗ್ಗನಹಳ್ಳಿಯ ಮಾರುತಿನಗರ ನಿವಾಸಿ ಅಜೀಂವುಲ್ಲಾ, ಜಾತ್ರೆಗಳಲ್ಲಿ ರಾಟೆ ಚಕ್ರ (ಜೋಕಾಲಿ) ನಿರ್ವಹಣೆ ಕೆಲಸ ಮಾಡುತ್ತಿದ್ದರು. ಅವರನ್ನು ಬುಧವಾರ ರಾತ್ರಿ ಕೊಲೆ ಮಾಡಲಾಗಿದ್ದು, ಪರಿಚಯಸ್ಥ ಯುವಕನೇ ಕೃತ್ಯ ಎಸಗಿ ಪರಾರಿಯಾಗಿರುವ ಮಾಹಿತಿ ಇದೆ’ ಎಂದು ಪೊಲೀಸ್ …

Read More »

ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ

ಹುಣಸೂರು: ಕೊಡಗಿನಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ವಿರುದ್ದ ಬಿಜೆಪಿ ಯುವ ಘಟಕದ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶಿಸಿ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ಹುಣಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ದಿಢೀರ್ ಪ್ರತಿಭಟನೆ ನಡೆಸಿದರು. ಗುರುವಾರ ಸಂಜೆ ನಗರದ ಬೈಪಾಸ್ ರಸ್ತೆಯ ಮೈಸೂರು-ಮಂಗಳೂರು ಹೆದ್ದಾರಿಯ ಕಲ್ಕುಣಿಕೆ ವೃತ್ತದಲ್ಲಿ ಧರಣಿ ಕುಳಿತ ಕಾರ್ಯಕರ್ತರು ರಾಜ್ಯದ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹಮಂತ್ರಿ ಹಾಗೂ ಬಿಜೆಪಿ ಕಾರ್ಯಕರ್ತರ ವಿರುದ್ದ ಧಿಕ್ಕಾರ ಮೊಳಗಿಸಿ. ರಸ್ತೆಯಲ್ಲಿ …

Read More »

ರಾಯಚೂರು ಜಿಲ್ಲೆ ತೆಲಂಗಾಣಕ್ಕೆ ಸೇರಬೇಕು : ಸಿಎಂ ಕೆ. ಚಂದ್ರಶೇಖರ್ ರಾವ್

ಕರ್ನಾಟಕದ ಅವಿಭಾಜ್ಯ ಅಂಗ ಬೆಳಗಾವಿ ತನಗೆ ಸೇರಬೇಕೆಂದು ಪಕ್ಕದ ಮಹಾರಾಷ್ಟ್ರ ಪದೇ ಪದೇ ವಿವಾದ ಹೊತ್ತಿಸಿದ್ದು ಇನ್ನೂ ಮಾಸಿಲ್ಲ. ಈ ಮುನ್ನವೇ ರಾಯಚೂರು ಜಿಲ್ಲೆ ತೆಲಂಗಾಣಕ್ಕೆ ಸೇರಬೇಕೆಂದು ಹೇಳುವ ಮೂಲಕ ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ವಿವಾದದ ಕಿಡಿ ಹೊತ್ತಿಸಿದ್ದಾರೆ. ಟಿಆರ್‌ಎಸ್ ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆಕರ್ಷಿತರಾಗಿರುವ ಕರ್ನಾಟಕದ ರಾಯಚೂರು ಜಿಲ್ಲೆಯ ಜನರು ತಮ್ಮ ಪ್ರದೇಶವನ್ನು ತೆಲಂಗಾಣಕ್ಕೆ ವಿಲೀನಗೊಳಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ …

Read More »

ಹಾಸ್ಯನಟ ಮತ್ತು ನಟ ರಾಜು ಶ್ರೀವಾತ್ಸವ್ ನಿಧನ

ಹಾಸ್ಯನಟ ಮತ್ತು ನಟ ರಾಜು ಶ್ರೀವಾತ್ಸವ್ ಅವರು ಆಗಸ್ಟ್ 18 ರಂದು ತಮ್ಮ 58ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆಗಸ್ಟ್ 10ರಂದು ಜಿಮ್ ಮಾಡುವಾಗ ರಾಜು ಶ್ರೀವಾಸ್ತವ ಅವ್ರಿಗೆ ಹೃದಯಾಘಾತವಾಗಿದ್ದು, ಅಂದಿನಿಂದ ವೆಂಟಿಲೇಟರ್ ಬೆಂಬಲದಲ್ಲಿದ್ದರು. ಜನಪ್ರಿಯ ಹಾಸ್ಯನಟನನ್ನ ಅಂತಿಮವಾಗಿ ಇಂದು ಹೃದಯ ಮತ್ತು ಮೆದುಳಿಗೆ ಸಂಬಂಧಿಸಿದ ತೊಡಕುಗಳಿಂದ ನಿಧನರಾದರು. ಅವರ ಸಾವಿನ ಸುದ್ದಿಯನ್ನ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ವಿಶೇಷ ಕರ್ತವ್ಯ ಅಧಿಕಾರಿ (ಒಎಸ್ಡಿ) ಲೋಕೇಶ್ ಶರ್ಮಾ ಹಂಚಿಕೊಂಡಿದ್ದಾರೆ. ‘ಶಾಂತಿಯಿಂದ …

Read More »

ನಾಳೆ‌ ಲವ್ 360 ಸಿನಿಮಾ ಬಿಡುಗಡೆ

ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿದೆ. ಅದರಲ್ಲೂ ಸಿದ್ದ್ ಶ್ರೀರಾಮ್ ಹಾಡಿರುವ “ಜಗವೇ ನೀನು ಗೆಳತಿಯೇ” ಹಾಡಂತೂ ಭಾರಿ ಜನಪ್ರಿಯವಾಗಿದೆ. ಲವ್ 360 ಶೀರ್ಷಿಕೆಯಿಂದಲೇ ಸ್ಯಾಂಡಲ್​ವುಡ್​ನಲ್ಲಿ ಸೌಂಡ್ ಮಾಡುತ್ತಿರುವ ಸಿನಿಮಾ. ಮೊಗ್ಗಿನ ಮನಸ್ಸು, ಕೃಷ್ಣನ್ ಲವ್ ಸ್ಟೋರಿ ಸಿನಿಮಾಗಳ ನಿರ್ದೇಶಕ ಶಶಾಂಕ್ ನಿರ್ದೇಶನದ ಚಿತ್ರ ಲವ್ 360 ಸಿನಿಮಾ‌ ನಾಳೆ 150ಕ್ಕೂ ಚಿತ್ರಮಂದಿರಗಳಲ್ಲಿ ತೆರೆ ಕಾಣುತ್ತಿದೆ. ಈ ಚಿತ್ರದ ಥಿಯೇಟ್ರಿಕಲ್ ಟ್ರೇಲರ್ …

Read More »

ಯಡಿಯೂರಪ್ಪ ಅವರ ಬೆಂಗಾವಲು ವಾಹನ ಚಾಲಕ ನಿಧನ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬೆಂಗಾವಲು ವಾಹನ ಚಾಲಕ ಹೃದಯಾಘಾತಗೊಂಡು ತಿರುಮಲೇಶ್ ನಿಧನರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ತಿರುಮೇಶ್ ಅವರಿಗೆ ಗುರುವಾರ ರಾತ್ರಿ ಹೃದಯಾಘಾತವಾಗಿದ್ದು, 11 ಗಂಟೆ ಸುಮಾರಿಗೆ ನಿಧನರಾಗಿದ್ದಾರೆ. ಎಂದಿನಂತೆ ಸಂಜೆ ಕರ್ತವ್ಯ ಮುಗಿಸಿ ಮನೆಗೆ ತೆರಳಿದ್ದರು. ಆದರೆ ರಾತ್ರಿ ಇದ್ದಕ್ಕಿದ್ದ ಹಾಗೆ ಎದೆನೋವು ಕಾಣಿಸಿಕೊಂಡಿತ್ತು.  ಕಳೆದ 16 ವರ್ಷಗಳಿಂದ ಯಡಿಯೂರಪ್ಪ ಅವರ ಬಳಿಯೇ ಬೆಂಗಾವಲು ಸಿಬ್ಬಂದಿಯಾಗಿ ತಿರುಮಲೇಶ್ ಕರ್ತವ್ಯದಲ್ಲಿದ್ದರು. ತಿರುಮಲೇಶ್ ಅಕಾಲಿಕ‌ ಅಗಲಿಕೆಗೆ ‌ …

Read More »

ಮೊಟ್ಟೆ ಎಸೆತ ಪ್ರಕರಣ : ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ

ಮಡಿಕೇರಿ: ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ತಡರಾತ್ರಿ ನಿನ್ನೆ ತಡರಾತ್ರಿ ಬಿಜೆಪಿಯ 9 ಮಂದಿ ಬಂಧನ, ಬಿಡುಗಡೆ ಮಾಡಲಾಗಿದೆ. ಇದೇ ವೇಳೆ ಬಂಧಿತರ ಪರವಾಗಿ ಕೊಡಗು ಜಿಲ್ಲಾ ಶಾಸಕರುಗಳಾದ ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ ಠಾಣೆಗೆ ಆಗಮಿಸಿ ಬಿಡುಗಡೆಗೊಳಿಸುವಲ್ಲಿ ಮುಂದಾಳತ್ವ ವಹಿಸಿ ಠಾಣೆ ಮುಂದೆ ಧರಣಿಯನ್ನು ನಡೆಸಿದ ಬಳಿಕ ಪೋಲಿಸರು ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ. ಈ ನಡುವೆಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ವಿಚಾರವಾಗಿ ದೆಹಲಿಯಲ್ಲಿ ಗೃಹ ಸಚಿವ …

Read More »

ಮೊಟ್ಟೆ ಎಸೆತ ಪ್ರಕರಣ, ಸಿದ್ದರಾಮಯ್ಯ ಅವರಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು : ಯಡಿಯೂರಪ್ಪ

ಬೆಂಗಳೂರು: ಮಡಿಕೇರಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಮೊಟ್ಟೆ ಎಸೆದ ಬಗ್ಗೆ ಬಿ.ಎಸ್​ ಯಡಿಯೂರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಸರಿಯಲ್ಲ ಯಾವುದೇ ಕಾರಣಕ್ಕೂ ಈ ತರಹ ಘಟನೆ ನಡೆಯಬಾರದು. ಸಿದ್ದರಾಮಯ್ಯ ಇರಬಹುದು ಯಡಿಯೂರಪ್ಪ ಇರಬಹುದು ಈ ರೀತಿಯಲ್ಲಿ ಮೊಟ್ಟೆ ಎಸೆಯಬಾರದು. ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಇದ್ದಾರೆ ಅವರಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು. ಈ ರೀತಿಯಲ್ಲಿ ನಡವಳಿಕೆ ಯಾವುದೇ ಕಾರಣಕ್ಕೂ ಸಹಿಸಿಕೂಡದು. ಈ ರೀತಿಯಲ್ಲಿ ಯಾರು ಮಾಡಬಾರದು ಅಂತ ನಾನು ಕೇಳಿಕೊಳ್ಳುತ್ತೇನೆ …

Read More »

ಕಾರಿಗೆ ಮೊಟ್ಟೆಎಸೆದ ಘಟನೆಗೆ ಸಿದ್ದರಾಮಯ್ಯ ತೀವ್ರ ಆಕ್ರೋಶಮಡಿಕೇ

ಮಡಿಕೇರಿ: ಬಿಜೆಪಿ ಕಾರ್ಯಕರ್ತರು ತಮ್ಮ ಕಾರಿಗೆ ಮೊಟ್ಟೆಎಸೆದ ಘಟನೆಗೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೂ ಮೊಟ್ಟೆಎಸೆಯಲು ಬರಲ್ವಾ?, ನಾವು ಹೋರಾಟ ಶುರು ಮಾಡಿದರೆ ಮುಖ್ಯಮಂತ್ರಿ ಎಲ್ಲೂ ಓಡಾಡೋಕೆ ಆಗಲ್ಲ ಎಂದು ಬಿಜೆಪಿ ಮುಖಂಡರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಮಡಿಕೇರಿಯ ಸಕ್ರ್ಯೂಟ್‌ ಹೌಸ್‌ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇಲ್ಲಿ ನಡೆದಿರುವ ಕಳಪೆ ಕಾಮಗಾರಿಗಳನ್ನು ನಾನು ಬಂದು ನೋಡುತ್ತೇನೆಂದು ಕಾರ್ಯಕರ್ತರನ್ನು ಬಿಟ್ಟು ಪ್ರತಿಭಟನೆ ಮಾಡಿಸುತ್ತಿದ್ದಾರೆ. ಈ ಬಾರಿ ಕೊಡಗಿನಲ್ಲಿ …

Read More »

ಹುಬ್ಬಳ್ಳಿ ತಾರಿಹಾಳ ಬೈಪಾಸ್ ಬಳಿ ಭೀಕರ ರಸ್ತೆ ಅಪಘಾತ

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಾರಿಹಾಳ ಬೈಪಾಸ್ ಬಳಿ ಎರಡು ಲಾರಿಗಳ ನಡುವೆ ಮುಖ ಮುಖಿ ಡಿಕ್ಕಿಯಾಗಿದ್ದು, ಒಂದು ಲಾರಿ ರಸ್ತೆ ಬದಿ ಪಲ್ಟಿಯಾಗಿದೆ. ಇನ್ನೂ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಲಾರಿ ಚಾಲಕ ರಕ್ಷಣೆ ಮಾಡಿದ್ದು, ಅವರನ್ನು ಚಿಕಿತ್ಸೆಗಾಗಿ kmc ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಲಾರಿ ಚಾಲಕನ ಸ್ಥಿತಿ ಗಂಭೀರ ಆಗಿದೆ ಎಂದು ಹೇಳಲಾಗಿದೆ. ಹುಬ್ಬಳ್ಳಿ ಉತ್ತರ ಸಂಚಾರಿ ಠಾಣೆ …

Read More »