Breaking News

BigTv News

ರಾಷ್ಟ್ರಧ್ವಜ ಲೋಪ ಎಸಗಿದವರ ವಿರುದ್ಧ ಕ್ರಮಕ್ಕೆ ಪಾಲಿಕೆ ಆಯುಕ್ತರಿಗೆ ಸೂಚನೆ ಕೊಟ್ಟ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಹುಬ್ಬಳ್ಳಿ : ಹು-ಧಾ ಪಾಲಿಕೆಯಿಂದ ರಾಷ್ಟ್ರ ಧ್ವಜಗಳನ್ನು ಸ್ವೀಕಾರ ಮಾಡುವ ಮೊದಲು ಪರಿಶೀಲನೆ ಮಾಡಬೇಕು . ಲೋಪವಾದ ಧ್ವಜಗಳನ್ನ ಪರಿಶೀಲನೆ ಮಾಡದೇ ಸ್ವೀಕಾರ ಮಾಡಲಾಗಿದೆ.‌ ಲೋಪ ಎಸಗಿರುವವರ ವಿರುದ್ಧ ಕಟ್ಟು ನಿಟ್ಟಿನ‌ ಕ್ರಮ‌ಕೈಗೊಳ್ಳಬೇಕು ಎಂದು ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದ್ದೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಮಹಾನಗರ ಪಾಲಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಯಾವುದೇ ಪ್ರಶ್ನೆ ಇಲ್ಲ. ಅಧಿಕಾರ ವಲಯದಲ್ಲಿ ಅಸ್ತಿರತೆ ಕಾಪಾಡಬೇಕು. …

Read More »

ಟ್ರ್ಯಾಕ್ಟರ್ ಹಾಗೂ ಬೈಕ್ ಅಪಘಾತ , ಓರ್ವ ಸಾವು

ಧಾರವಾಡ : ತಾಲೂಕಿನ ನವಲಗುಂದ ಗುಡಿಸಾಗರ ಗ್ರಾಮದ ಬಳಿ ತಡ ರಾತ್ರಿ ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ . ಪರಿಣಾಮ ಬೈಕ್‌ನ ಹಿಂಬದಿ ಕುಳಿತಿದ್ದ ಓರ್ವ ಮೃತ ಪಟ್ಟಿದ್ದು , ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನವಲಗುಂದ ತಾಲೂಕಾ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ . ಗುಡಿಸಾಗರ ಗ್ರಾಮದ ಗುಂಡುಲಿಂಗೇಶ್ವರ ದೇವಸ್ಥಾನದ ಬಳಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದ ದುರ್ದೈವಿಯನ್ನು ಸುಮಾರು 37 ವರ್ಷ ವಯಸ್ಸಿನ ಬಸವರಾಜ್ ಮಲ್ಲಿಕಾರ್ಜುನ ಪಟ್ಟಿದ …

Read More »

ಎಬಿವಿಪಿಯಿಂದ ಉದ್ದದ ರಾಷ್ಟ್ರಧ್ವಜ ಪ್ರದರ್ಶನ

ಧಾರವಾಡ : 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಅಂಗವಾಗಿ ಧಾರವಾಡದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಸುಮಾರು 2 ಕಿಲೋ ಮೀಟರ್ ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶಿಸಿದ್ದಾರೆ . ಧಾರವಾಡದ ಕಡಪಾ ಮೈದಾನದಿಂದ ಮೆರವಣಿಗೆಗೆ ಚಾಲನೆ ನೀಡಲಾಯಿತು.ಈ ಮೆರವಣಿಗೆಯಲ್ಲಿ ವಿವಿಧ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡು ಉದ್ದದ ರಾಷ್ಟ್ರಧ್ವಜವನ್ನು ಪ್ರದರ್ಶನ ಮಾಡಿದರು.ಈ ಮೆರವಣಿಗೆಯು ವಿವಿಧ ರಸ್ತೆಗಳ ಮೂಲಕ ಸಂಚರಿಸಿ ಮರಳಿ ಕಡಪಾ ಮೈದಾನಕ್ಕೆ ಬಂದು ಮುಕ್ತಾಯಗೊಂಡಿತು .

Read More »

ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು ನಿಧನ

ಸ್ಯಾಂಡಲ್ ವುಡ್ ನ ಹಿರಿಯ ನಿರ್ಮಾಪಕರಾದ ನರ್ಗಿಸ್ ಬಾಬು ಅವರು ವಿಧಿವಶರಾಗಿದ್ದಾರೆ.. ಅವರಿಗೆ 76 ವರ್ಷ ವಯಸ್ಸಾಗಿತ್ತು.. ನರ್ಗಿಸ್ ಬಾಬು ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ನರ್ಗಿಸ್ ಬಾಬು ಅವರು ಹಲವು ದಿನಗಳಿಂದಲೂ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು.. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಶನಿವಾರ ಸಂಜೆ 7 ಗಂಟೆಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.. ನರ್ಗಿಸ್ ಬಾಬು ಹಲವು ಸ್ಟಾರ್ ನಟರ ಸಿನಿಮಾಗಳಿಗೆ ಬಂಡವಾಳ ಹೂಡಿದ್ದಾರೆ.. ನರ್ಗಿಸ್ ಆಂಡ್ …

Read More »

ಯಡಿಯೂರಪ್ಪ ಅವರನ್ನ ಭೇಟಿಯಾದರೇ ಏನು ವಿಶೇಷ : ಶೆಟ್ಟರ್

ಹುಬ್ಬಳ್ಳಿ; ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಹಾಗೂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರೇ ವಿಶೇಷ ಯಡಿಯೂರಪ್ಪ ಅವರನ್ನ ಭೇಟಿಯಾದರೇ ಏನು ವಿಶೇಷ ಅಂತಾ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯಾಕೆ ಇಷ್ಟೊಂದು ಮಹತ್ವ ಕೊಡುತ್ತಿರಿ ನಾನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಥವಾ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರನ್ನ ಅಥವಾ ಬೇರೆ ಪಕ್ಷದ ನಾಯಕರನ್ನ ಭೇಟಿಯಾದರೇ ವಿಶೇಷ ಎಂದರು. ಚುನಾವಣಾ ನಡೆಯುವ ಕುರಿತು …

Read More »

ರವಿ ಬೋಪಣ್ಣ ಸಿನಿಮಾ ಈ ವಾರ ಬಿಡುಗಡೆ

ಕ್ರೇಜಿಸ್ಟಾರ್‌ ವಿ. ರವಿಚಂದ್ರನ್‌ ನಟನೆ ಮತ್ತು ನಿರ್ದೇಶನದ “ರವಿ ಬೋಪಣ್ಣ’ ಸಿನಿಮಾ ಈ ವಾರ ಬಿಡುಗಡೆಯಾಗಿ ತೆರೆಗೆ ಬರುತ್ತಿದೆ. ಇತ್ತೀಚೆಗಷ್ಟೇ “ರವಿ ಬೋಪಣ್ಣ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿದ್ದು, ಬರೋಬ್ಬರಿ 7 ನಿಮಿಷ ಅವಧಿಯ ಟ್ರೇಲರ್‌ನಲ್ಲಿ, ರವಿಚಂದ್ರನ್‌ ಮೂರು ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕಿಯರಾಗಿ ರಾಧಿಕಾ ಕುಮಾರಸ್ವಾಮಿ, ಕಾವ್ಯಾ ಶೆಟ್ಟಿ ಗ್ಲಾಮರಸ್‌ ಆಗಿ ತೆರೆಮೇಲೆ ಮಿಂಚಿದ್ದು, ನಟ ಕಿಚ್ಚ ಸುದೀಪ್‌ ಕೂಡ ಚಿತ್ರದಲ್ಲಿ ಕರಿಕೋಟು ತೊಟ್ಟು ಲಾಯರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಒಂದಷ್ಟು …

Read More »

ಕಾಡಾನೆ ದಾಳಿಯಿಂದ ರೈತ ಸಾವು

ಮೈಸೂರು: ಕಾಡಾನೆ ದಾಳಿಯಿಂದ ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಸಗೂರಿನ ಎತ್ತಿಗೆ ಗ್ರಾಮದ ಹೊರವಲಯದ‌ ಜಮೀನಿನಲ್ಲಿ ನಡೆದಿದೆ. ಕೇರಳ ಮೂಲದ ರೈತ ಬಾಲನ್ (60) ಮೃತ ದುರ್ದೈವಿ. ಕೇರಳ ಮೂಲದ ಬಾಲನ್, ಎತ್ತಿಗೆ ಗ್ರಾಮದ ಜಮೀನು ಗುತ್ತಿಗೆ ಪಡೆದು ಕೃಷಿ ಚಟುವಟಿಕೆ ನಡೆಸುತ್ತಿದ್ದರು. ನಿನ್ನೆ ತಡರಾತ್ರಿ ಜಮೀನಿನತ್ತ ಬರುತ್ತಿದ್ದ ಆನೆಯನ್ನು ಗ್ರಾಮಸ್ಥರು ಹೆಮ್ಮೆಟ್ಟಿಸಿದ್ದರು. ಈ ವೇಳೆ ಆನೆ ಏಕಾಏಕಿ ದಾಳಿ ನಡೆಸಿದ್ದು, ಘಟನೆಯಲ್ಲಿ ಬಾಲನ್ ಸಾವನ್ನಪ್ಪಿದ್ದಾರೆ. ಕಾಡಾನೆಗಳ ಹಾವಳಿಗೆ …

Read More »

ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ : ಕುಮಾರಸ್ವಾಮಿ

ಬೆಂಗಳೂರು: ಎಸಿಬಿ ರದ್ದು ಮಾಡಿದಾಕ್ಷಣ ಲೋಕಾಯುಕ್ತ ಸಂಸ್ಥೆಯಿಂದಲೇ ಎಲ್ಲವೂ ಶುದ್ಧಿಯಾಗಬಹುದೆಂದು ನಾನು ಭಾವಿಸಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಎಸಿಬಿ ರದ್ದು ಮಾಡಿ ಲೋಕಾಯುಕ್ತದಲ್ಲಿ ಭ್ರಷ್ಟಾಚಾರ ನಿಲ್ಲಿಸುತ್ತಾರೆ ಎಂಬ ನಂಬಿಕೆ ನನಗೆ ಇಲ್ಲ ಎಂದು ಅವರು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ್ದಾರೆ. ನಾನು ಯಾವ ದಾಖಲೆಗಳನ್ನು ಬೇಕಾದರೂ ನೀಡಬಲ್ಲೆ. ಆದರೆ ಏನು ಪ್ರಯೋಜನ? ಎಸಿಬಿಯ ಭ್ರಷ್ಟಾಚಾರದ ಪವರ್ ಪಾಯಿಂಟ್ ಆಗಿತ್ತು. ಭ್ರಷ್ಟಾಚಾರದ ತಡೆಯುವುದು ಅದರಿಂದ …

Read More »

ಕಾಂಗ್ರೆಸ್‌ ನಾಯಕರು ರಾಜಕೀಯ ನಿರುದ್ಯೋಗಿಗಳಾಗಿದ್ದಾರೆ : ಸುಧಾಕರ್ ಕಿಡಿ

ಬೆಂಗಳೂರು: “ಕಾಂಗ್ರೆಸ್‌ ನಾಯಕರು ರಾಜಕೀಯ ನಿರುದ್ಯೋಗಿಗಳಾಗಿದ್ದಾರೆ. ಹೀಗಾಗಿಯೇ ಅವರೆಲ್ಲ ನಾಯಕತ್ವ ಬದಲಾವಣೆ ಕುರಿತು ಸುಳ್ಳು ಸುದ್ದಿ ಹರಡುವ ಮೂಲಕ ತಾವು ಸುದ್ದಿಯಲ್ಲಿರುವ ಪ್ರಯತ್ನಿಸುತ್ತಿದ್ದಾರೆ” ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕಿಡಿ ಕಾರಿದ್ದಾರೆ. ಗುರುವಾರ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನಾಯಕತ್ವ ಬದಲಾವಣೆ ಕುರಿತು ಸುಳ್ಳು ಸುದ್ದಿ ಹೇಳುವ ಮೂಲಕ ರಾಜಕೀಯ ನಿರುದ್ಯೋಗಿಗಳಾಗಿರುವ ಕಾಂಗ್ರೆಸ್‌ ನಾಯಕರು ತಾವು ಸುದ್ದಿಯಲ್ಲಿರಲು ಪ್ರಯತ್ನಿಸುತ್ತಿದ್ದಾರೆ. ರಾಜಕೀಯವಾಗಿ ಕ್ರಿಯಾಶೀಲರಾಗಿರಲು ಕಾಂಗ್ರೆಸ್‌ ನಾಯಕರು …

Read More »

ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ನಿಧನ

ಬೆಂಗಳೂರು : ಕಾಡು ಕುದುರೆ ಓಡಿ ಬಂದಿತ್ತ ಖ್ಯಾತಿಯ, ಕನ್ನಡದ ಖ್ಯಾತ ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ (83) ಹೃದಯಾಘಾತದಿಂದ ಗುರುವಾರ ರಾತ್ರಿ ನಿಧನರಾಗಿದ್ದಾರೆ. ಸುಬ್ಬಣ್ಣ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರನ್ನು ಜಯನಗರದ ಶಾಂತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರಿಗೆ ಹೃದಯಾಘಾತ ಆಗಿತ್ತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಲು ಆಯಂಬುಲೆನ್ಸ್ ನಲ್ಲಿ ಕರೆದೊಯ್ಯಲಾಗುತ್ತಿತ್ತು. ಆಗ ಮಾರ್ಗಮಧ್ಯೆ ಆಂಬುಲೆನ್ಸ್ ನಲ್ಲೇ ಅವರು ಕೊನೆಯುಸಿರೆಳೆದಿದ್ದಾರೆ.

Read More »