ಮೈಸೂರು: ಪಿಎಫ್ಐ ಸೇರಿದಂತೆ ಪಾಕ್ ಬೆಂಬಲಿಸುವ ಸಂಸ್ಥೆಗಳನ್ನು ನಿಷೇಧಿಸಬೇಕು ಎಂಬುವವರಲ್ಲಿ ನಾನು ಒಬ್ಬ, ಇಂತಹ ಸಂಘಟನೆಗಳನ್ನು ನಿಷೇಧಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಎಸ್ಡಿಪಿಐ, ಕೆಎಫ್ಡಿ ಮತ್ತು ಪಿಎಫ್ಐ ಸೇರಿದಂತೆ ಸಂಘಟನೆಗಳನ್ನು ನಿಷೇಧಿಸಲು ಸರ್ಕಾರ ಹಿಂಜರಿಯುವುದಿಲ್ಲ, ಕೇಂದ್ರ ಸರ್ಕಾರವೂ ಇದೇ ನಿಲುವು ಹೊಂದಿದೆ. ಆದರೆ ಒಂದು ಸಂಸ್ಥೆ ಬ್ಯಾನ್ ಮಾಡಿದರೇ ಮತ್ತೊಂದು ಹೆಸರಲ್ಲಿ ಬರುತ್ತಾರೆ. …
Read More »ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 19,406 ಸೋಂಕುಗಳು ಪತ್ತೆ
ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 19,406 ಹೊಸ ಸೋಂಕುಗಳು ಪತ್ತೆಯಾಗಿದೆ. ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,34,793 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ. ದೈನಂದಿನ ಪಾಸಿಟಿವಿಟಿ ದರವು 4.96% ರಷ್ಟಿದ್ದರೆ, ಸಾಪ್ತಾಹಿಕ ಪಾಸಿಟಿವಿಟಿ ದರವು 4.63% ರಷ್ಟಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು 19,928 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಆದರೆ ಒಟ್ಟು ಚೇತರಿಸಿಕೊಂಡವರ ಸಂಖ್ಯೆ 4,34,65,552 ಆಗಿದೆ. ಭಾರತದಲ್ಲಿ ಚೇತರಿಕೆ ದರ …
Read More »ಪಿಎಸ್ಐ ಅಕ್ರಮ : 8 ಜನ ಬಂಧನ
ಕಲಬುರಗಿ: ಪಿಎಸ್ಐ ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ಮತ್ತೆ ಎಂಟು ಅಭ್ಯರ್ಥಿಗಳನ್ನು ಬಂಧಿಸಿದ್ದಾರೆ. ನಗರದ ಶ್ರೀ ಶರಣ ಬಸವೇಶ್ವರ ಆರ್ಟ್ಸ್, ಕಾಮರ್ಸ್ ಮತ್ತು ಸೈನ್ಸ್ ಕಾಲೇಜು, ಗೋದುತಾಯಿ ಮಹಿಳಾ ಕಾಲೇಜು, ಎಮ್ಎಸ್ ಇರಾನಿ ಆರ್ಟ್ಸ್ & ಸೈನ್ಸ್ ಕಾಲೇಜುಗಳ ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್ಐ ಪರೀಕ್ಷೆ ಬರೆದಿದ್ದರು. ಇನ್ನೂ ಬಂಧಿತ ಎಂಟು ಜನ ಆರೋಪಿಗಳ ವಿರುದ್ಧ ನಗರದ ಅಶೋಕ ನಗರ, ಸ್ಟೇಷನ್ ಬಜಾರ್ ಮತ್ತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ದೂರುಗಳು …
Read More »ಬಸ್ ಹಾಗೂ ಲಾರಿ ಡಿಕ್ಕಿ : ವ್ಯಕ್ತಿ ಸ್ಥಳದಲೇ ಸಾವು
ದಾವಣಗೆರೆ: ಇಲ್ಲಿನ ರಾಷ್ಟ್ರೀಯ ಹೆದ್ದಾರಿಯ ಕುಂದವಾಡದ ಜಿನಿಸಿಸ್ ರೆಸಾರ್ಟ್ ಬಳಿ ಶುಕ್ರವಾರ ಮಿನಿ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಿನಿ ಬಸ್ನಲ್ಲಿದ್ದ ಧಾರವಾಡ ಜಿಲ್ಲೆಯ ನರೇಂದ್ರ ಗ್ರಾಮದ ಆನಂದಗೌಡ ಪಾಟೀಲ (38) ಮೃತಪಟ್ಟವರು. ಬಸ್ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಹಿಂದಿನಿಂದ ಬಂದ ಲಾರಿ ಮಿನಿ ಬಸ್ಗೆ ಡಿಕ್ಕಿ ಹೊಡೆದಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಕೆಲಸ ಸಿಗಲಿಲ್ಲ ಎಂದು ಮನನೊಂದು ಯುವಕ ಆತ್ಮಹತ್ಯೆ
ಚಿಕ್ಕಬಳ್ಳಾಪುರ : ಕೆಲಸ ಸಿಗಲಿಲ್ಲ ಎಂದು ಮನನೊಂದು ಯುವಕ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಯಗವದೇವಪಲ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಿವಾಸಿ ಶ್ರೀಕಾಂತ್ (30) ನೇಣಿಗೆ ಶರಣಾದ ಯುವಕ ಎಂದು ತಿಳಿದು ಬಂದಿದೆ. ಮೃತ ಶ್ರೀಕಾಂತ್ ಬಿ.ಕಾಂ ವ್ಯಾಸಂಗ ಮಾಡಿದ್ದು, ಕೋವಿಡ್ ನಂತರ ಉದ್ಯೋಗಕ್ಕಾಗಿ ಸಾಕಷ್ಟು ಪ್ರಯತ್ನ ನಡೆಸಿದ್ದಾನೆ. ಆದರೆ, ವಿದ್ಯಾಭ್ಯಾಸಕ್ಕೆ ತಕ್ಕಂತೆ ಉದ್ಯೋಗ ಸಿಗದ ಹಿನ್ನಲೆ ಖಿನ್ನತೆಗೆ ಒಳಗಾಗಿದ್ದ ಎಂದು ತಿಳಿದು …
Read More »ಕೇಂದ್ರ ಘಟಕ ವ್ಯವಸ್ಥಾಪಕ ಹೃದಯಾಘಾತದಿಂದ ನಿಧನ
ದಾವಣಗೆರೆ : ಕೆಎಸ್ಆರ್ಟಿಸಿ ಬೆಂಗಳೂರು ಕೇಂದ್ರ ಘಟಕ ವ್ಯವಸ್ಥಾಪಕ ಎಚ್.ಸಿ. ತುಷಾರ್ (33) ಬಸ್ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಸ್ಥೆಯ ಸಿಬ್ಬಂದಿಯ ಹಳೆ ಪ್ರಕರಣವೊಂದರ ವಿಚಾರಣೆ ಸಂಬಂಧ ಶಿರಸಿಗೆ ಬಂದಿದ್ದ ಅವರು, ಬೆಂಗಳೂರಿಗೆ ವಾಪಸಾಗುವಾಗ ಮಾರ್ಗ ಮಧ್ಯೆ ದಾವಣಗೆರೆಯ ಬಸ್ ನಿಲ್ದಾಣದಲ್ಲಿ ನಿಧನರಾಗಿದ್ದಾರೆ. ತಲೆ ಸುತ್ತು ಕಾಣಿಸಿಕೊಂಡು ಆಯಾಸಗೊಂಡಿದ್ದ ಅವರನ್ನು ಬಸ್ನ ನಿರ್ವಾಹಕರು ಆಸ್ಪತ್ರೆಗೆ ಕರೆದೊಯ್ಯಲು ಅಣಿಯಾಗುತ್ತಿದ್ದಂತೆಯೇ, ಕುಸಿದು ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಹಾಗೂ 4 ತಿಂಗಳ …
Read More »ಸಿಎಂಗೆ ಕೊರೊನಾ ದೃಢ
ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಬಗ್ಗೆ ಸ್ವತಃ ಸಿಎಂ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿ ಇದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ತಿಳಿಸಿದ್ದಾರೆ. ಅಲ್ಲದೇ ತಮಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ದೆಹಲಿಯ ಪ್ರವಾಸ ರದ್ದಾಗಿದೆ ಎಂದು ತಿಳಿಸಿದ್ದಾರೆ. ನನಗೆ …
Read More »ಗೂಡ್ಸ್ ರೈಲಿನ ಒಂದು ಬೋಗಿ ಹಳಿ ತಪ್ಪಿ ರೈಲುಗಳ ಸಂಚಾರದಲ್ಲಿ ವ್ಯತ್ಯಯ
ಹುಬ್ಬಳ್ಳಿ: ವಾಸ್ಕೋಡ್ ಗಾಮಾ – ಲೋಂಡಾ ವಿಭಾಗದ ದೂಧ್ಸಾಗರ್ – ಸೊನೌಲಿಂ ನಿಲ್ದಾಣದ ನಡುವೆ ಗುರುವಾರ ರಾತ್ರಿ 9.15ರ ಸುಮಾರಿಗೆ ಗೂಡ್ಸ್ ರೈಲಿನ ಒಂದು ಬೋಗಿ ಹಳಿ ತಪ್ಪಿದ ಘಟನೆ ಸಂಭವಿಸಿದೆ. ವಿಷಯ ತಿಳಿದು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯ ವಿಪತ್ತು ನಿರ್ವಹಣೆ ಕೊಠಡಿಯಿಂದ ಪರಿಸ್ಥಿತಿ ನಿಭಾಯಿಸುತ್ತಿದೆ. ಲೈನ್ ಮರುಜೋಡಣೆಗಾಗಿ ಕ್ಯಾಸಲ್ರಾಕ್ ಸ್ಟೇಷನ್ ಮತ್ತು ವಾಸ್ಕೋಡ್-ಗಾಮಾ ನಿಲ್ದಾಣದಿಂದ ಉಪಕರಣಗಳು ಮತ್ತು ಸಾಮಗ್ರಿಗಳೊಂದಿಗೆ ಇಂಜಿನಿಯರಿಂಗ್ ತಂಡ ಸ್ಥಳಕ್ಕೆ ತೆರಳಿದೆ.ಘಟನೆಯಿಂದಾಗಿ …
Read More »ರಾಯಣ್ಣ ಅಭಿಮಾನಿಗಳಿಂದ ಆಗಸ್ಟ್ 7 ರಂದು ಬೃಹತ್ ರಕ್ತದಾನ ಶಿಬಿರ
ಹುಬ್ಬಳ್ಳಿ : ಆಗಸ್ಟ್ 15 ರಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜಯಂತೋತ್ಸವ ಅಂಗವಾಗಿ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ವತಿಯಿಂದ, ರಾಷ್ಟ್ರೋತ್ಥಾನ ರಕ್ತ ಕೇಂದ್ರ ಹಾಗೂ ರೋಟರಿ ರಕ್ತ ಭಂಡಾರ ಇವರ ಸಹಯೋಗದೊಂದಿಗೆ ಅಗಷ್ಟ್ 7 ಭಾನುವಾರದಂದು ಮುಂಜಾನೆ 11 ಗಂಟೆಗೆ ನಗರದ ಮೂರು ಸಾವಿರ ಮಠದ ಸಭಾಭವನದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗದ ಸಂಸ್ಥಾಪಕ ಅಧ್ಯಕ್ಷರಾದ …
Read More »ಬೆಲೆ ಏರಿಕೆ ವಿರುದ್ಧ ಮತ್ತೆ ಪ್ರತಿಭಟನೆಗಿಳಿದ ಕಾಂಗ್ರೆಸ್
ಧಾರವಾಡ: ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಧಾರವಾಡ ಜಿಲ್ಲಾ ಕಾಂಗ್ರೆಸ್ ಮತ್ತೆ ಪ್ರತಿಭಟನೆಗಿಳಿದಿದೆ. ಧಾರವಾಡ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಎಲ್ಪಿಜಿ ಗ್ಯಾಸ್, ಪೆಟ್ರೋಲ್, ಡೀಸೆಲ್ ದರವಷ್ಟೇ ಅಲ್ಲ, ಮೊಸರು, ಹಾಲು ಸೇರಿದಂತೆ ಇತ್ಯಾದಿ ಅಗತ್ಯ ವಸ್ತುಗಳ ಬೆಲೆಯನ್ನು ಸರ್ಕಾರ ಹೆಚ್ಚಳ ಮಾಡಿರುವುದಲ್ಲದೇ ಅವುಗಳ ಮೇಲೆ ಜಿಎಸ್ಟಿಯನ್ನೂ ಹೇರಿಕೆ ಮಾಡಿದೆ. ಇದರಿಂದ ಬಡವರ ಬದುಕು ದುಸ್ತರವಾಗಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದರು. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news





