Breaking News

BigTv News

ರಾಗಾಗೆ ಲಿಂಗ ಧಾರಣೆ

ದಾವಣಗೆರೆ: ನಗರದಲ್ಲಿ ನಡೆದಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮಕ್ಕಾಗಿ ಕರ್ನಾಟಕಕ್ಕೆ ಆಗಮಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದರ ಮಧ್ಯೆ ಚಿತ್ರದುರ್ಗದ ಮುರುಘಾ ಮಠಕ್ಕೆ ಭೇಟಿ ನೀಡಿದ್ದಾರೆ. ಮುರುಘಾ ಶ್ರೀಗಳ ದರ್ಶನದ ವೇಳೆ ಲಿಂಗಧಾರಣೆ ಕುರಿತು ರಾಹುಲ್ ಗಾಂಧಿ ಆಸಕ್ತಿಯಿಂದ ಮಾಹಿತಿ ಕೇಳಿದ್ದು, ಈ ವೇಳೆ ಶ್ರೀಗಳು, ರಾಹುಲ್ ಗಾಂಧಿಯವರಿಗೆ ಲಿಂಗ ಧಾರಣೆ ಮಾಡಿ ವಿಭೂತಿ ಹಚ್ಚಿ ಆಶೀರ್ವದಿಸಿದ್ದಾರೆ.

Read More »

ಪುತ್ರನೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಮಾಜಿ ಸಿಎಂ

ದಾವಣಗೆರೆ: ನಗರದಲ್ಲಿ ಅಭಿಮಾನಿಗಳು ಆಯೋಜಿಸಿರುವ ತಮ್ಮ ಎಪ್ಪತೈದನೇ ವರ್ಷದ ಹುಟ್ಟುಹಬ್ಬದ ಆಚರಣೆಗಾಗಿ ಸಿದ್ದರಾಮಯ್ಯನವರು ಪುತ್ರ ಡಾ. ಯತೀಂದ್ರ ಅವರೊಂದಿಗೆ ವೇದಿಕೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಅಭಿಮಾನಿಗಳ ಜಯ ಘೋಷ ಮುಗಿಲು ಮುಟ್ಟಿದೆ. ಇದಕ್ಕೂ ಮುನ್ನ ದಾವಣಗೆರೆ ನಗರ ದೇವತೆ ದುರ್ಗಾಂಬಾ ದೇವಿಯ ದೇಗುಲಕ್ಕೆ ಭೇಟಿ ನೀಡಿದ್ದ ಅವರು ದೇವಿಯ ಆಶೀರ್ವಾದ ಪಡೆದಿದ್ದು, ಬಳಿಕ ದರ್ಗಾಕ್ಕೂ ತೆರಳಿದ್ದರು.ಇದಾದ ಬಳಿಕ ನೇರವಾಗಿ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಆಗಮಿಸಿದ್ದಾರೆ. ಸಿದ್ದರಾಮಯ್ಯ ಆಗಮಿಸುತ್ತಿದ್ದಂತೆಯೇ ಅಭಿಮಾನಿಗಳ ಉತ್ಸಾಹ …

Read More »

ಧ್ವಜ ತಯಾರಿಕೆ ಪರಿಶೀಲನೆ ನಡೆಸಿದ ರಾಗಾ:ಕಾರ್ಮಿಕರ ಜೊತೆಗೆ ಸಮಾಲೋಚನೆ

ಹುಬ್ಬಳ್ಳಿ; ಕೇಂದ್ರ ಸರ್ಕಾರ ರಾಷ್ಟ್ರೀಯ ಧ್ವಜ ತಯಾರಿಕೆ ಹಾಗೂ ರಾಷ್ಟ್ರೀಯ ಧ್ವಜದಲ್ಲಿ ಹೊಸ ನೀತಿಯನ್ನು ಜಾರಿ ಮಾಡಿರುವ ಹಿನ್ನೆಲೆ ಖಾದಿ ಗ್ರಾಮೋದ್ಯೋಗ ಹಾಗೂ ಧ್ವಜ ತಯಾರಿಕೆ ಘಟಕ ಸಂಕಷ್ಟಕ್ಕೆ ಸಿಲುಕಿದ್ದು, ಎಐಸಿಸಿ ಮುಖ್ಯಸ್ಥ ರಾಹುಲ್ ಗಾಂಧಿ ಧ್ವಜ ತಯಾರಿಕೆ ಕಾರ್ಮಿಕರ ಜೊತೆಗೆ ಸಮಾಲೋಚನೆ ನಡೆಸಿದರು. ಹುಬ್ಬಳ್ಳಿಯ ಬೆಂಗೇರಿ ಖಾದಿ ಗ್ರಾಮೋದ್ಯೋಗಕ್ಕೆ ಭೇಟಿ ನೀಡಿ ಧ್ವಜ ತಯಾರಿಕೆಯನ್ನು ಪರಿಶೀಲಿಸಿದರು. ದೇಶದಲ್ಲಿಯೇ ಏಕೈಕವಾಗಿ ಐಎಸ್ಐ ಮಾನ್ಯತೆ ಪಡೆದಿರುವ ಧ್ವಜ ತಯಾರಿಕೆ ಘಟಕಕ್ಕೆ ಭೇಟಿ …

Read More »

ಮಾರಾಕಾಸ್ತ್ರದಿಂದ ಕೊಚ್ಚಿ ಯುವಕನ ಕೊಲೆ

ಶಿವಮೊಗ್ಗ : ನಗರದ ವಿನೋಬ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಗಾಡಿಕೊಪ್ಪದ ಬಾರ್ ವೊಂದರ ಸಮೀಪ ಯುವಕನೋರ್ವನ ಕೊಲೆ ಮಾಡಲಾಗಿದೆ . ಹೊಸಮನೆ ಬಡಾವಣೆ ನಿವಾಸಿ ಕಿರಣ್ ಕುಮಾರ್ ಯಾನೆ ಹುಚ್ಚಕಿರಣ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ . ಸ್ನೇಹಿತರ ಜೊತೆ ಮಧ್ಯ ಸೇವಿಸಲು ಆಗಮಿಸಿದ್ದವೇಳೆ ಮಾರಾಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ . ಸ್ಥಳಕ್ಕೆ ಪೊಲೀಸರು ಭೇಟಿಯಿತ್ತು ಪರಿಶೀಲನೆ ನಡೆಸಿದ್ದಾರೆ . ಹತ್ಯೆಗೆ ಕಾರಣವೇನೆಂಬುದು ಇನ್ನಷ್ಟೇ ತಿಳಿದು …

Read More »

ರಸ್ತೆ ಅಪಘಾತ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವು

ಕಲಘಟಗಿ : ತಾಲೂಕಿನ ಮುಂಡಗೋಡ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸಾವನಪ್ಪಿರುವ ಘಟನೆ ಜರುಗಿದೆ . ಈ ರಸ್ತೆ ಅಪಘಾತ ಜರುಗಿತ್ತು ಕಾರು ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಾಲೂಕಿನ ಬಮ್ಮಿಗಟ್ಟಿ ಗ್ರಾಮದ ಬೈಕ್ ಸವಾರ ಪ್ರಶಾಂತ ನೆನಕ್ಕಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿರು ಮಾಹಿತಿ …

Read More »

ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಸರ್ ವಾಹನ ಪಲ್ಟಿ : ಒಬ್ಬ ಸಾವು, 12 ಮಂದಿಗೆ ಗಾಯ

ಬಾಗಲಕೋಟೆ : ಸಿದ್ದರಾಮೋತ್ಸವಕ್ಕೆ ಹೊರಟಿದ್ದ ಕ್ರೂಸರ್ ವಾಹನ ಪಲ್ಟಿಯಾದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು, 12 ಮಂದಿ ಗಾಯಗೊಂಡ ಘಟನೆ ಹುಬ್ಬಳ್ಳಿ- ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿಯ ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದ ಸಮೀಪ ಸಂಭವಿಸಿದೆ. ಮುಧೋಳ ವಿಧಾನಸಭಾ ಕ್ಷೇತ್ರದ ಆಲಗುಂಡಿ ಗ್ರಾಮದಿಂದ ದಾವಣಗೆರೆಗೆ ಹೊರಟಿದ್ದ ವಾಹನ ಇದಾಗಿದ್ದು, ಸ್ಥಳದಲ್ಲೇ ಕ್ರೂಸರ್ ಚಾಲಕ ಪ್ರಕಾಶ್ ಬಡಿಗೇರ್ (34) ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡವರನ್ನು ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. …

Read More »

ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ ಮತ್ತೆ 17,135 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಳೆದ 24 ಗಂಟೆಗಳಲ್ಲಿ 47 ಮಂದಿ ಸಾವನ್ನಪ್ಪವುದರೊಂದಿಗೆ ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 5,26,477 ಕ್ಕೆ ಏರಿಕೆಯಾಗಿದೆ.ಇನ್ನು ದೇಶದಲ್ಲಿ 1,37,057 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.49ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 4,34,03,610 …

Read More »

ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ : ಡಾ.ಕೆ.ಸುಧಾಕರ್

ಬೆಂಗಳೂರು: ಮಂಕಿಪಾಕ್ಸ್ ಬಗ್ಗೆ ರಾಜ್ಯದ ಜನರು ಆತಂಕ ಪಡಬೇಕಿಲ್ಲ. ಕೇರಳ-ಕರ್ನಾಟಕ ಗಡಿ ಭಾಗದ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಗಾ ಇಡಲು ಸೂಚಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಮತ್ತು ತಾಂತ್ರಿಕ ಸಲಹಾ ಸಮಿತಿ ಜೊತೆ ವಿಶೇಷ ಸಭೆಯ ಬಳಿಕ ಮಾತನಾಡಿದ ಅವರು, ‘ವಿಶ್ವ ಆರೋಗ್ಯ ಸಂಸ್ಥೆ ಜುಲೈ 22ರಂದು ಮಂಕಿಪಾಕ್ಸ್‌ಅನ್ನು ‘ತುರ್ತು ಆರೋಗ್ಯ ಪರಿಸ್ಥಿತಿʼ ಎಂದು ಘೋಷಿಸಿದೆ. ಸುಮಾರು 80 …

Read More »

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆ

ಬೆಂಗಳೂರು : ಕರಾವಳಿ,ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಆಗಸ್ಟ್ 6 ರವರೆಗೆ ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಶನಿವಾರದವರೆಗೆ ರೆಡ್ ಅಲರ್ಟ್ ಇರಲಿದೆ. ಮಲೆನಾಡಿನ ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ಶುಕ್ರವಾರದವರೆಗೆ ರೆಡ್ ಅಲರ್ಟ್ ಇರಲಿದೆ.

Read More »

ಅಮೃತ ಮಹೋತ್ಸವ’ಕ್ಕೆ ಸಿಂಗಾರಗೊಂಡ ದೇವನಗರಿ

ದಾವಣಗೆರೆ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಅಂಗವಾಗಿ ಬುಧವಾರ ಇಲ್ಲಿ ನಡೆಯಲಿರುವ ‘ಅಮೃತ ಮಹೋತ್ಸವ’ಕ್ಕೆ ‘ದೇವನಗರಿ’ ಸಿಂಗಾರಗೊಂಡಿದೆ. ವೇದಿಕೆ ಕಾರ್ಯಕ್ರಮ ನಡೆಯಲಿರುವ ನಗರದ ಹೊರವಲಯದ ಕುಂದವಾಡ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಶಾಮನೂರು ಪ್ಯಾಲೆಸ್‌ ಮೈದಾನ ಸಜ್ಜುಗೊಂಡಿದೆ. ಸಿದ್ದರಾಮಯ್ಯ, ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿಯವರ ಬೃಹತ್‌ ಕಟೌಟ್‌ಗಳು, ಬ್ಯಾನರ್‌ಗಳು ಕಾರ್ಯಕ್ರಮ ನಡೆಯಲಿರುವ ವೇದಿಕೆ ಎದುರು ಸ್ವಾಗತ ಕೋರುತ್ತಿವೆ. ವಿವಿಧೆಡೆ ಯಿಂದ ಬರುವ ಪಕ್ಷದ …

Read More »