Breaking News

BigTv News

ಮಾಜಿ ಸಿಎಂ ಕುರಿತು ನಾಳೆ ಹಾಡು ಬಿಡುಗಡೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 75ನೇ ಹುಟ್ಟುಹಬ್ಬಕ್ಕಾಗಿ ‘ಮೈಸೂರು ಹುಲಿಯಾ…’ ಮತ್ತು ‘ಸೆಲ್ಫ್‌ ಮೇಡ್‌ ಸಿದ್ದಣ್ಣ..!’ ಎಂಬ ಸಿನಿಮಾ ಮಾದರಿಯ ಎರಡು ಹಾಡುಗಳು ಸಿದ್ಧಗೊಂಡಿದ್ದು, ಆ.3 ರಂದು ಬಿಡುಗಡೆಯಾಗುತ್ತಿವೆ. ಎರಡೂ ಹಾಡುಗಳಿಗೂ ಜೇಮ್ಸ್‌ ಚಿತ್ರದ ನಿರ್ದೇಶಕ ಚೇತನ್‌ ಕುಮಾರ್‌ ಸಾಹಿತ್ಯ ಬರೆದಿದ್ದು, ಒಂದು ಹಾಡು ಸಲಗ ಸಿನಿಮಾದ ‘ಟಿಣಿಂಗ ಮಿಣಿಂಗ ಟಿಶ್ಯಾ’ ಖ್ಯಾತಿಯ ಗಿರಿಜಾ ಸಿದ್ದಿ, ಮತ್ತೊಂದು ಹಾಡು ‘ಚುಟುಚುಟು ಅಂತೈತಿ’ ಖ್ಯಾತಿಯ ರವೀಂದ್ರ ಸೊರಗಾವಿ ದನಿಯಲ್ಲಿ ಮೂಡಿಬರುತ್ತಿರುವುದು …

Read More »

ಮಾಜಿ ಸಿಎಂ ಬೆಂಗಾವಲು ವಾಹನ ಅಪಘಾತ : 3 ಜನರಿಗೆ ಗಾಯ

ತುಮಕೂರು: ಮಾಜಿ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಮೂವರು ಪೊಲೀಸ್​ ಸಿಬ್ಬಂದಿ ಗಾಯಗೊಂಡಿದ್ದಾರೆ. ಕುಣಿಗಲ್ ತಾಲ್ಲೂಕಿನ ತಿಪ್ಪೂರು ಗೇಟ್ ಬಳಿ ತಡರಾತ್ರಿ ಒಂದು ಗಂಟೆ ಸುಮಾರಿಗೆ ಘಟನೆ ನಡೆದಿದೆ. ಮಂಗಳೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ಬೆಂಗಾವಲು ವಾಹನ ರಸ್ತೆಯ ತಡೆಗೋಡೆಗೆ ಗುದ್ದಿ ರಸ್ತೆಯಿಂದಾಚೆಗೆ ನುಗ್ಗಿದೆ. ಪರಿಣಾಮ ವಾಹನದಲ್ಲಿದ್ದ ಐವರಲ್ಲಿ ಮೂವರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪೋಲಿಸ್ ಸಿಬ್ಬಂದಿ ಮಹೇಶ್, ಮಂಜುನಾಥ್ ಹಾಗೂ …

Read More »

ಕೊಪ್ಪಳ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ‌ ರಜೆ ಘೋಷಣೆ

ಕೊಪ್ಪಳ : ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿರುವ ಕಾರಣ, ಮಕ್ಕಳ ಸುರಕ್ಷತಾ ದೃಷ್ಟಿಯಿಂದ, ಆ. 02 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಅವರು ತಿಳಿಸಿದ್ದಾರೆ. ಸೋಮವಾರದಿಂದಲೇ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

Read More »

ಸಿದ್ದರಾಮೋತ್ಸವ ಭರದಿಂದ ಸಿದ್ಧತೆ

ಬೆಂಗಳೂರು: ದಾವಣಗೆರೆಯಲ್ಲಿ ಗುರುವಾರ ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿರುವ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ನಡೆದಿದೆ. ರಾಹುಲ್‌ ಗಾಂಧಿ, ಮಲ್ಲಿ ಕಾರ್ಜುನ ಖರ್ಗೆ, ಡಿ.ಕೆ. ಶಿವಕುಮಾರ್‌ ಸೇರಿದಂತೆ ಕಾಂಗ್ರೆಸ್‌ನ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, 6 ರಿಂದ 8 ಲಕ್ಷ ಜನ ಸೇರುವ ನಿರೀಕ್ಷೆಯಿದೆ.ಸಮಾವೇಶಕ್ಕೆ ಬರುವವರಿಗಾಗಿ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ರಾಜ್ಯದ 224 ವಿಧಾನಸಭೆ ಕ್ಷೇತ್ರ ಗಳಿಂದ ಶಾಸಕರು, ಮಾಜಿ ಶಾಸಕರು, ಪಕ್ಷದ ಘಟಕಗಳ …

Read More »

ಆ. 4ರಂದು ಅಮಿತ್‌ಶಾ ರಾಜ್ಯಕ್ಕೆ ದಿಢೀರ್

‌ಬೆಂಗಳೂರು : ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಹತ್ಯೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಕ್ಷದ ವಿರುದ್ಧವೇ ಸಿಟ್ಟು ಹೊರ ಹಾಕುತ್ತಿರುವ ಬೆನ್ನಲ್ಲೇ ಈಗ ಗೃಹ ಸಚಿವ ಅಮಿತ್‌ ಶಾ ಶೀಘ್ರವೇ ಕರ್ನಾಟಕಕ್ಕೆ ಬರುವ ಸಾಧ್ಯತೆಯಿದೆ. ಆಗಸ್ಟ್ 4ರಂದು ರಾಜ್ಯಕ್ಕೆ ದಿಢೀರ್‌ ಭೇಟಿ ನೀಡಲು ಅಮಿತ್ ಶಾ ಪ್ಲ್ಯಾನ್ ಮಾಡಿದ್ದಾರೆ. ಮಂಗಳವಾರ ಸಂಜೆಯೊಳಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ಅಧಿಕೃತಗೊಳ್ಳುವ ಸಾಧ್ಯತೆಯಿದೆ. ಸಾಧಾರಣವಾಗಿ ಅಮಿತ್‌ ಶಾ ರಾಜ್ಯಕ್ಕೆ ಬರುವ …

Read More »

ಧಾರಾಕಾರ ಮಳೆ : ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧ

ಸುಬ್ರಹ್ಮಣ್ಯ (ದಕ್ಷಿಣ ಕನ್ನಡ): ಸೋಮವಾರ ಸುರಿದ ಧಾರಾಕಾರ ಮಳೆಯಿಂದಾಗಿ ದರ್ಪಣತೀರ್ಥ ನದಿಯು ತುಂಬಿ ಹರಿದಿದ್ದು, ಕುಕ್ಕೆಯ ಆದಿಸುಬ್ರಹ್ಮಣ್ಯ ದೇವಳದ ಒಳಗೆ ನೀರು ಪ್ರವೇಶಿಸಿದೆ. ಹೀಗಾಗಿ ಕುಕ್ಕೆ ದೇಗುಲಕ್ಕೆ ಎರಡು ದಿನ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿದ್ದು, ಭಕ್ತರು ಸಹಕರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕೋರಿದ್ದಾರೆ. ಕುಕ್ಕೆ ದೇವಳದ ಸಮೀಪ ಇರುವ ದರ್ಪಣತೀರ್ಥ ನದಿಯ ಸ್ನಾನ ಘಟ್ಟವು ಮುಳುಗಡೆಯಾಗಿದೆ. ಸಮೀಪದ ರುದ್ರಪಾದ ಸೇತುವೆಯು ಜಲಾವೃತಗೊಂಡಿದೆ. ಈ ಮಧ್ಯೆ ಸುಬ್ರಹ್ಮಣ್ಯ- ಪುತ್ತೂರು- …

Read More »

ಜೀವ ಹೋಗಿ ಜೀವನ ಹಾಳಾದರೂ ಬರುತ್ತಿಲ್ಲ ಪರಿಹಾರ:ಸಾರಿಗೆ ಸಂಸ್ಥೆಯ ಬಸ್ ಜಪ್ತಿಯೇ ಮಾರ್ಗ

ಹುಬ್ಬಳ್ಳಿ: ಸಾರ್ವಜನಿಕರಿಗೆ ಗುಣಮಟ್ಟದ ಸಾರಿಗೆ ಸೇವೆ ನೀಡುವ ಉದ್ದೇಶ ಹೊಂದಿರುವ ಸಾರಿಗೆ ಸಂಸ್ಥೆ ಸಾರ್ವಜನಿಕ ಜೊತೆಗೆ ಆಟ ಆಡುತ್ತಿದೆ. ಮಾಡಿದ ತಪ್ಪಿಗೆ ಪರಿಹಾರ ನೀಡದೆ ಇರುವ ಹಿನ್ನೆಲೆಯಲ್ಲಿ ಈಗ ಸಾರಿಗೆ ಸಂಸ್ಥೆಯ ಬಸ್ ಗಳನ್ನು ಜಪ್ತಿ ಮಾಡುವ ಮಟ್ಟಿಗೆ ಬಂದು ನಿಂತಿದೆ. ಕಳೆದ ಕೆಲವು ದಿನಗಳ ಹಿಂದೆಯಷ್ಟೆ ನಡೆದಿದ್ದ ಪ್ರಕರಣ ಮಾಸುವ ಮುನ್ನವೇ ಪರಿಹಾರ ನೀಡದಿರುವ ಬಸ್ ಜಪ್ತಿ ಮಾಡಲಾಗಿದೆ. 2017ರ ನವೆಂಬರ್ 08ರಂದು ಕಾರವಾರ ರಸ್ತೆಯಲ್ಲಿರುವ ಇಎಸ್ಐ ಆಸ್ಪತ್ರೆಯ …

Read More »

ಪ್ಲಾಸ್ಟಿಕ್ ಗೋಡೌನ್ಮೇಲೆ ಪಾಲಿಕೆ ಅಧಿಕಾರಿಗಳ ದಾಳಿ

ಹುಬ್ಬಳ್ಳಿ : ನಗರದ ಗೋಡೌನ್ ನಲ್ಲಿ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದಾಗ ಪಾಲಿಕೆ ಅಧಿಕಾರಿಗಳು ದಾಳಿ ಮಾಡಿ ಲಕ್ಷಾಂತರ ಮೌಲ್ಯದ ನಿಷೇಧಿತ ಪ್ಲಾಸ್ಟಿಕ್ ವಶಕ್ಕೆ ಪಡೆದ ಘಟನೆ ಸೋಮವಾರ ಹುಬ್ಬಳ್ಳಿಯಲ್ಲಿ ನಡೆದಿದೆ . ಕಾರವಾರ ರಸ್ತೆಯ ದಾಲ್ ಮಿಲ್ ಹತ್ತಿರ ಇರುವ ಗೋಡೌನ್ ನಲ್ಲಿ ಅಕ್ರಮವಾಗಿ ಲಾರಿಯಲ್ಲಿ ಬೇರೆ ಕಡೆಯಿಂದ ತಂದಿದ್ದ ನಿಷೇಧಿತ ಪ್ಲಾಸ್ಟಿಕ್ ಶೇಖರಣೆ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ , ಪಾಲಿಕೆಯ ಅಧಿಕಾರಿಗಳು ದಾಳಿಯನ್ನು ಮಾಡಿ ಪ್ಲಾಸ್ಟಿಕ್ …

Read More »

ನ್ಯಾಯಾಲಯದ ಆದೇಶದಿಂದ ನಿಟ್ಟುಸಿರು ಬಿಟ್ಟ ಯುವಕ: ಪ್ರಕರಣ ಖುಲಾಸೆಯಿಂದ ಯುವಕ ಖುಷ್

ಹುಬ್ಬಳ್ಳಿ: ಆತ ಸಣ್ಣಪುಟ್ಟ ಸಮಾಜ ಸೇವೆ ಮಾಡಿಕೊಂಡಿದ್ದ ಯುವಕ. ಆದರೆ ಆತನನ್ನು ಟಾರ್ಗೆಟ್ ಮಾಡಿಕೊಂಡು ಸುಳ್ಳು ಪ್ರಕರಣ ದಾಖಲಿಸಿ ಆತನ ಭವಿಷ್ಯವನ್ನು ಹಾಳು ಮಾಡಲು ರಾಜಕೀಯವಾಗಿ ಸಂಚು ರೂಪಿಸಿದ್ದರು. ಆದರೆ ಆತನ ತಪ್ಪಿಲ್ಲ ಎಂದು ನ್ಯಾಯಾಲಯ ಆದೇಶ ಹೊರಡಿಸಿ ಪ್ರಕರಣ ಖುಲಾಸೆ ಮಾಡಿದೆ. ಕುಂದಗೋಳ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇರಿಸಿರುವ ಚುನಾವಣಾ ಆಯೋಗ, ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಮತ್ತು ಎಫ್‌ …

Read More »

ಕುರಿ ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಅಟ್ಟಾಡಿಸಿ ಹಿಡಿದು ಕುರಿಯಂತೆ ಕೈಕಾಲು ಕಟ್ಟಿದ ಪೊಲೀಸರು

ಹುಬ್ಬಳ್ಳಿ: ನಿರಂತರವಾಗಿ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು, ಪೊಲೀಸರು ಅಟ್ಟಾಡಿಸಿ ಹಿಡಿದು, ಕೈಕಾಲು ಕಟ್ಟಿ ಎಳೆದುಕೊಂಡು ಹೋದ ಘಟನೆ ಹುಬ್ಬಳ್ಳಿಯ ದೇಶಪಾಂಡೆ ನಗದಲ್ಲಿ ನಡೆದಿದೆ. ಈ ಖದೀಮ ಧಾರವಾಡದ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದಲ್ಲಿ ನಿರಂತರವಾಗಿ ಕುರಿಗಳನ್ನು ಕಳ್ಳತನ ಮಾಡಿ ಮಾಡುತ್ತಿದ್ದನಂತೆ. ಅದೆಷ್ಟೋ ಬಾರಿ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದನಂತೆ. ಸಿಸಿ ಟಿವಿಯಲ್ಲಿ ಇವನ ಓಡಾಟ ತಿಳಿದುಕೊಂಡು ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ಇರುವುದನ್ನು ಖಚಿತ ಪಡೆದುಕೊಂಡ ಧಾರವಾಡ ಪೊಲೀಸರು, ಹುಬ್ಬಳ್ಳಿ ಪೊಲೀಸರ ಸಹಾಯದಿಂದ …

Read More »